ರಾಜಕೀಯ

ಪೊಲೀಸ್ ದೌರ್ಜನ್ಯದ ಫೊಟೋ, ವೀಡಿಯೋದ ಮಾಹಿತಿ ತಿಳಿದುಕೊಂಡು ಕ್ರಮ: ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಅವಹೇಳನಕಾರಿಯಾಗಿ ಬ್ಯಾನರ್ ಹಾಕಿ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ದೌರ್ಜನ್ಯದ ಬಗೆಗಿನ ಫೊಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಒಟ್ಟು ಪ್ರಕರಣದ ಮಾಹಿತಿ ಪಡೆದುಕೊಂಡು, ಘಟನೆಯ ಸತ್ಯಾಂಶದ ಬಗ್ಗೆ ತಿಳಿದುಕೊಳ್ಳಲಾಗುವುದು. ನಂತರ ಮುಂದಿನ ಕ್ರಮ ಕೈಗೊಳ‍್ಳಲಾಗುವುದು ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೊಟೋ, ವೀಡಿಯೋದ ಬಗ್ಗೆ ಶಾಸಕರನ್ನು ಕೇಳಿದಾಗ, ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದರು.

ಪೊಲೀಸ್ ದೌರ್ಜನ್ಯದ ಫೊಟೋ, ವೀಡಿಯೋದ ಮಾಹಿತಿ ತಿಳಿದುಕೊಂಡು ಕ್ರಮ: ಶಾಸಕ ಅಶೋಕ್ ಕುಮಾರ್ ರೈ Read More »

ಚಪ್ಪಲಿ ಹಾರ ಹಾಕಿದ ಆರೋಪಿಗಳಿಗೆ ಪೊಲೀಸ್ ದೌರ್ಜನ್ಯದ ಆರೋಪ | ಫೊಟೋಗಳ ಬಗ್ಗೆ ಹೇಳಿಕೆ ನೀಡಿದ ಪುತ್ತೂರು ಡಿವೈಎಸ್ಪಿ

ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರವಿರುವ ಬ್ಯಾನರಿಗೆ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾದ ಆರೋಪಿಗಳಿಗೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಭಾವಚಿತ್ರವನ್ನು ಹಾಕಿ, ಅದರಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಎಂಬ ಶೀರ್ಷಿಕೆ ನೀಡಿ, ಅದಕ್ಕೆ ಚಪ್ಪಲಿ ಹಾರ ಹಾಕಿದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 9 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ

ಚಪ್ಪಲಿ ಹಾರ ಹಾಕಿದ ಆರೋಪಿಗಳಿಗೆ ಪೊಲೀಸ್ ದೌರ್ಜನ್ಯದ ಆರೋಪ | ಫೊಟೋಗಳ ಬಗ್ಗೆ ಹೇಳಿಕೆ ನೀಡಿದ ಪುತ್ತೂರು ಡಿವೈಎಸ್ಪಿ Read More »

ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಪ್ರಮಾಣ ವಚನ

ಪುತ್ತೂರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ನಾಳೆ ಮಧ್ಯಾಹ್ನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ನಡೆಯಲಿದೆ. ಈ ಬಗ್ಗೆ ಇದೀಗ ಅಧಿಕೃತ ಪ್ರಕಟಣೆ ಹೊರ ಬಿದ್ದಿದೆ. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ಬೋಧಿಸಲಿದ್ದಾರೆ.

ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಪ್ರಮಾಣ ವಚನ Read More »

ಮುಖ್ಯಮಂತ್ರಿ ಹುದ್ದೆ ಕಗ್ಗಂಟು: ಇಂದು ಬೆಳಗ್ಗೆ 11ಕ್ಕೆ ನಿರ್ಣಾಯಕ ಸಭೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಬಿಗಿ ಪಟ್ಟುಗಳಿಂದಾಗಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಮುಖ್ಯಮಂತ್ರಿ ಆಯ್ಕೆಯನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ನಿನ್ನೆ ದಿಲ್ಲಿಗೆ ತೆರಳಿರುವ ಡಿಕೆಶಿ ಕೊಡುವುದಾದರೆ ಮುಖ್ಯಮಂತ್ರಿ ಹುದ್ದೆ ಕೊಡಿ, ಇಲ್ಲವಾದರೆ ಯಾವ ಹುದ್ದೆಯೂ ಬೇಡ, ಸಾಮಾನ್ಯ ಶಾಸಕನಾಗಿ ಇರುತ್ತೇನೆ ಎಂದು ಖಡಕ್‌ ಆಗಿ ಹೇಳಿದ ನಂತರ ಖರ್ಗೆ ಸೇರಿ ಹೈಕಮಾಂಡ್‌ ನಾಯಕರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.ಶಾಸಕರ ಒಲವು ಸಿದ್ದರಾಮಯ್ಯ ಕಡೆಗಿದೆ. ಆದರೆ ಪಕ್ಷವನ್ನು ಗೆಲ್ಲಿಸುವಲ್ಲಿ ಡಿಕೆಶಿ ಕೂಡ ಅಪಾರ ಶ್ರಮ ಹಾಕಿದ್ದಾರೆ. ಈ ಪೈಕಿ ಯಾರು ಮುನಿಸಿಕೊಂಡರೂ

ಮುಖ್ಯಮಂತ್ರಿ ಹುದ್ದೆ ಕಗ್ಗಂಟು: ಇಂದು ಬೆಳಗ್ಗೆ 11ಕ್ಕೆ ನಿರ್ಣಾಯಕ ಸಭೆ Read More »

ಕಡಬ ಕಾಂಗ್ರೇಸ್‌ನಲ್ಲಿ ಗರಿಗೆದರಿದ ಅಧಿಕಾರದ ಕನಸುಗಳು | ಕಾರ್ಯಕರ್ತರಲ್ಲಿ ಹೊಸ ಹುರುಪು

ಕಡಬ: ರಾಜ್ಯದಲ್ಲಿ ಬಿಜೆಪಿ ಸೋತು  ಕಾಂಗ್ರೇಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಕಡಬ ಕಾಂಗ್ರೇಸ್ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದ್ದು, ಹೊಸ ಹೊಸ ಕನಸುಗಳು ಚಿಗುರೊಡೆಯಲು ಪ್ರಾರಂಭವಾಗಿದೆ. ತಾಲೂಕು ಕೇಂದ್ರವಾಗಿರುವ ಕಡಬಕ್ಕೆ ನಿಗಮ ಮಂಡಳಿ ಅಥವಾ ಎಂ.ಎಲ್‌ಸಿ ಸ್ಥಾನಗಳನ್ನು ನೀಡಿ ಪಕ್ಷ ಬಲವರ್ಧನೆಗೆ ಅವಕಾಶ ನೀಡಬೇಕು ಎನ್ನುವ ಹಕ್ಕೊತ್ತಾಯಗಳು ಕೇಳಿ ಬರುತ್ತಿವೆ. ಒಂದು ಕಾಲದಲ್ಲಿ ಕಡಬ ಕಾಂಗ್ರೇಸ್‌ನ ಭದ್ರಕೋಟೆಯಾಗಿತ್ತು. ಆದರೆ ಕಳೆದ 30 ವರ್ಷಗಳಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ  ಕಾಂಗ್ರೇಸ್‌ನ ಶಾಸಕರನ್ನು ಕಾಣಲು ಸಾಧ್ಯವಾಗದೆ

ಕಡಬ ಕಾಂಗ್ರೇಸ್‌ನಲ್ಲಿ ಗರಿಗೆದರಿದ ಅಧಿಕಾರದ ಕನಸುಗಳು | ಕಾರ್ಯಕರ್ತರಲ್ಲಿ ಹೊಸ ಹುರುಪು Read More »

ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ಅವಿರತ ಶ್ರಮದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ | ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ಅವಿರತ ಶ್ರಮದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ, ಈ ಗೆಲುವು ನನ್ನದಲ್ಲ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಗೆಲುವಾಗಿದೆ. ಪಕ್ಷಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿ ದುಡಿಯಬೇಕಾಗಿದ್ದು, ನಾಳೆಯಿಂದಲೇ ತಳಮಟ್ಟದಲ್ಲಿ ಪಕ್ಷವನ್ನು ಕಟ್ಟುವ ಕೆಲಸ ಮತ್ತೆ ಆರಂಭವಾಗಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಹೇಳಿದರು. ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ,ಜನರ ಸಮಸ್ಯೆಗಳನ್ನು ಬೂತ್‌ಮಟ್ಟದಲ್ಲೇ ಅರಿಯುವ

ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ಅವಿರತ ಶ್ರಮದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ | ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ Read More »

ರಾಮಕುಂಜ ಮತಗಟ್ಟೆಯಲ್ಲಿ ಮತದಾನವಾದರೂ ಮತ ಎಣಿಕೆ ಯಿಲ್ಲ.

ರಾಮಕುಂಜ: ವಿಧಾನ ಸಭಾ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದು ಬಿಜೆಪಿ ಅಭ್ಯರ್ಥಿ ವಿಜಯಶಾಲಿಯಾದ ಮೇಲೆ ಸುಳ್ಯ ವಿಧಾನ ಸಭಾ ಕ್ಷೇತ್ರದ ರಾಮಕುಂಜ ಬೂತ್ ನಂ.6 ರಲ್ಲಿನ ಮತ ಎಣಿಕೆಯೇ ನಡೆಸಿಲ್ಲ ಎನ್ನುವ ಅಂಶ ಬೆಳಕಿಗೆ ಬಂದಿದೆ. ಮಾದರಿ ಮತ ಡಿಲೀಟ್ ಮಾಡದೇ ಅಧಿಕಾರಿಗಳು ಮಾಡಿರುವ ಎಡವಟ್ಟಿನ ಪರಿಣಾಮ ಬೂತ್‌ನಲ್ಲಿ 713 ಮತ ಚಲಾವಣೆಯಾದರೂ  ಇವಿಎಂನ ಮತ ಎಣಿಕೆಯಾಗದೆ ಬಾಕಿ ಉಳಿದಿರುವುದು  ಮತದಾರರ ಅಸಮಾಧಾನಕ್ಕೆ ಎಡೆಯಾಗಿದೆ.  ಅಧಿಕಾರಿಗಳ ಅಸಡ್ಡೆಯ ಪರಮಾವಧಿ ಇದಾಗಿದೆ ಎಂದು ಅಕ್ರೋಶ ವ್ಯಕ್ತವಾಗಿದೆ. ಬೂತ್‌ನಲ್ಲಿ ಮತದಾನ

ರಾಮಕುಂಜ ಮತಗಟ್ಟೆಯಲ್ಲಿ ಮತದಾನವಾದರೂ ಮತ ಎಣಿಕೆ ಯಿಲ್ಲ. Read More »

ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯ ನಿವೃತ್ತಿ

ಸೋತ ನೋವಿನಲ್ಲಿ ಸ್ಪರ್ಧೆಗೆ ಗುಡ್‌ ಬೈ ಹೇಳಿದ ಹಳೇ ಹುಲಿ ಮಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸತತ ಎರಡನೇ ಬಾರಿ ಸೋತಿರುವ ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ. ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ.‌ ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ರಮಾನಾಥ ರೈ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಕಾಂಗ್ರೆಸ್‌ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ.

ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯ ನಿವೃತ್ತಿ Read More »

ಪ್ರತಿಭಟನೆ ಎಂಬ ನಾಟಕದ ಮೂಲಕ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ : ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ

ಪುತ್ತೂರು: ಬ್ಯಾನರ್ ವಿಷಯದಲ್ಲಿ ಬಿಜೆಪಿಯವರು ಪ್ರತಿಭಟನೆ ಎಂಬ ನಾಟಕದ ಮೂಲಕ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂಬಿ.ವಿಶ್ವನಾಥ ರೈ ಆರೋಪಿಸಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಪರಿಸ್ಥಿತಿಯಿಂದ ಬಿಜೆಪಿ ವಿಲವಿಲ ಒದ್ದಾಡುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಬಿಜೆಪಿ ನಾಯಕರು ಹತಾಶರಾಗಿ ಏನೇನೋ ಹೇಳಲು ಹೊರಟಿದ್ದಾರೆ.ಯಾರಿಗೂ ಚಪ್ಪಲಿ ಹಾಕುವ ದುಸ್ಥಿತಿ ನಮಗೆ ಬಂದಿಲ್ಲ ಎಂದರು. ಆದರೂ ಚಪ್ಪಲಿ ಹಾಕಿರುವ ಸಂಗತಿ ಖಂಡನೀಯ ಎಂದ ಅವರು,

ಪ್ರತಿಭಟನೆ ಎಂಬ ನಾಟಕದ ಮೂಲಕ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ : ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ Read More »

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ!

ಬೆಂಗಳೂರು; ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಲಿ ಸಿಎಂ ಆಗೋದು ಬಹುತೇಕ ಖಚಿತ ಎನ್ನಲಾಗಿದೆ. ದೆಹಲಿಯಲ್ಲಿ ತಮ್ಮ ಆಪ್ತ ಶಾಸಕರ ಜೊತೆ ಸಿದ್ದು ಸಭೆ ನಡೆಸಿದ ಬೆನ್ನಲ್ಲೇ ಸಿದ್ದರಾಮಯ್ಯ ನೂತನ ಸಿಎಂ ಆಗೋದು ಖಚಿತ ಎನ್ನಲಾಗಿದೆ. ಇನ್ನು ಸಿದ್ದರಾಮಯ್ಯ ನೂತನ ಸಿಎಂ ಎಂಬುವುದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕೆಲವೇ ಹೊತ್ತಲ್ಲೇ ಉತ್ತರ ಸಿಗಲಿದೆ ಎಂದು ಹೇಳಲಾಗಿದೆ.

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ! Read More »

error: Content is protected !!
Scroll to Top