ರಾಜಕೀಯ

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ!

ಬೆಂಗಳೂರು; ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಲಿ ಸಿಎಂ ಆಗೋದು ಬಹುತೇಕ ಖಚಿತ ಎನ್ನಲಾಗಿದೆ. ದೆಹಲಿಯಲ್ಲಿ ತಮ್ಮ ಆಪ್ತ ಶಾಸಕರ ಜೊತೆ ಸಿದ್ದು ಸಭೆ ನಡೆಸಿದ ಬೆನ್ನಲ್ಲೇ ಸಿದ್ದರಾಮಯ್ಯ ನೂತನ ಸಿಎಂ ಆಗೋದು ಖಚಿತ ಎನ್ನಲಾಗಿದೆ. ಇನ್ನು ಸಿದ್ದರಾಮಯ್ಯ ನೂತನ ಸಿಎಂ ಎಂಬುವುದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕೆಲವೇ ಹೊತ್ತಲ್ಲೇ ಉತ್ತರ ಸಿಗಲಿದೆ ಎಂದು ಹೇಳಲಾಗಿದೆ.

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ! Read More »

ನಳಿನ್, ಡಿವಿ ಅವಹೇಳನ ಮಾಡಿ ಬ್ಯಾನರ್ ಹಾಕಿದವರ ಬಂಧನ | ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹಾಗೂ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಅವಹೇಳನ ಮಾಡಿದ ಬ್ಯಾನರ್ ಹಾಕಿ, ಅದಕ್ಕೆ ಚಪ್ಪಲಿ ಹಾರ ಹಾಕಿದ್ದ ಇಬ್ಬರನ್ನು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನರಿಮೊಗರು ಗ್ರಾಮದ ಸಹೋದರರಾದ ವಿಶ್ವನಾಥ್ ಹಾಗೂ ಮಾಧವ ಎಂದು ಗುರುತಿಸಲಾಗಿದೆ. ಪುತ್ತೂರು ನಗರಸಭೆ ಆಯುಕ್ತ ಮಧು ಎಸ್. ಮನೋಹರ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು. ಬಿಜೆಪಿ ನಾಯಕರಾದ ನಳಿನ್ ಕುಮಾರ್  ಕಟೀಲ್ ಹಾಗೂ ಡಿವಿ ಸದಾನಂದ ಗೌಡ

ನಳಿನ್, ಡಿವಿ ಅವಹೇಳನ ಮಾಡಿ ಬ್ಯಾನರ್ ಹಾಕಿದವರ ಬಂಧನ | ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು Read More »

ಭಾವಚಿತ್ರಕ್ಕೆ ಅವಮಾನ ಬಿಜೆಪಿಯ ಹತಾಶಾ ಮನೋಭಾವ : ಅಶೋಕ್ ರೈ

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ‌‌ ಭಾವಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು  ರಾಜ್ಯದಲ್ಲಿ ಕಾಂಗ್ರೆಸ್ ಗೆ ಮತದಾರ ನೀಡಿದ ಜನ ಬೆಂಬಲವನ್ನು ಕಂಡು ಬಿಜೆಪಿಗೆ ಆಘಾತವಾಗಿದೆ. ಹತಾಶರಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದು ನೂತನ ಶಾಸಕ ಅಶೋಕ್ ರೈ ಪ್ರತಿಕ್ರಿಯೆ ನೀಡಿದ್ದಾರೆ.  ಪ್ರತಿಭಟನೆ ನಡೆಸುವುದು ಬಿಜೆಪಿಗರ ಕಾಯಕವಾಗಿದೆ. ಅವರದೇ ಸರಕಾರ ಇರುವಾಗಲೂ ಮಾಡಿದ್ದರೂ ಈಗಲೂ ಮಾಡುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ. ಇದು ಯಾರ ಕೃತ್ಯ ಎಂಬುದನ್ನು

ಭಾವಚಿತ್ರಕ್ಕೆ ಅವಮಾನ ಬಿಜೆಪಿಯ ಹತಾಶಾ ಮನೋಭಾವ : ಅಶೋಕ್ ರೈ Read More »

ಸಿದ್ದರಾಮಯ್ಯ, ಡಿಕೆಶಿ ವಿಶೇಷ ವಿಮಾನದಲ್ಲಿ ದಿಲ್ಲಿಗೆ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು 70ರ ಗಡಿಯತ್ತಲೂ ಬರದಂತೆ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್‌ಗೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರವೇ ದೊಡ್ಡ ಕಗ್ಗಂಟಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಗಾದಿಗಾಗಿ ಭಾರಿ ಪೈಪೋಟಿ ನಡೆಯುತ್ತಿದ್ದು, ಇಬ್ಬರು ನಾಯಕರು ಇಂದು ದಿಲ್ಲಿಯತ್ತ ಹೋಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಧ್ಯಾಹ್ನ 1 ಗಂಟೆ ಬಳಿಕ ದಿಲ್ಲಿಗೆ ತೆರಳಿದ್ದಾರೆ. ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಎಚ್ಎಎಲ್ ನಿಂದ ಸಿದ್ದರಾಮಯ್ಯ

ಸಿದ್ದರಾಮಯ್ಯ, ಡಿಕೆಶಿ ವಿಶೇಷ ವಿಮಾನದಲ್ಲಿ ದಿಲ್ಲಿಗೆ Read More »

ಬಜರಂಗ ದಳ ದೂಷಿಸಿದ ಖರ್ಗೆಗೆ ಕೋರ್ಟ್‌ ನೋಟಿಸ್‌ | ಖರ್ಗೆ ವಿರುದ್ಧ ದಾಖಲಾಗಿದೆ 100 ಕೋ. ರೂ. ಮಾನನಷ್ಟ ಮೊಕದ್ದಮೆ

ಹೊಸದಿಲ್ಲಿ : ಬಜರಂಗದಳವನ್ನು ಪಿಎಫ್​ಐ ಜತೆ ಹೋಲಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್​ ಸಮನ್ಸ್ ನೀಡಿದೆ. ​​ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ. ಖರ್ಗೆಯವರು ಈ ಹಿಂದೆ ಬಜರಂಗದಳ ಸಂಘಟನೆಯನ್ನು ಪಿಎಫ್‌ಐ ಜತೆ ಹೋಲಿಕೆ ಮಾಡಿದ್ದರು. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಶ್ವ ಹಿಂದೂ ಪರಿಷತ್‌ ಚಂಡೀಗಡ ಘಟಕ 100 ಕೋಟಿ ರೂ. ಮಾನಹಾನಿ ಪರಿಹಾರ ಕೋರಿ

ಬಜರಂಗ ದಳ ದೂಷಿಸಿದ ಖರ್ಗೆಗೆ ಕೋರ್ಟ್‌ ನೋಟಿಸ್‌ | ಖರ್ಗೆ ವಿರುದ್ಧ ದಾಖಲಾಗಿದೆ 100 ಕೋ. ರೂ. ಮಾನನಷ್ಟ ಮೊಕದ್ದಮೆ Read More »

ಡಿವಿ, ನಳಿನ್ ಭಾವಚಿತ್ರಕ್ಕೆ ಚಪ್ಪಲಿ‌ ಹಾರ: ಬಿಜೆಪಿ‌ ಪ್ರತಿಭಟನೆ | ಕಾಂಗ್ರೆಸ್ ಆಡಳಿತದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಿರಂತರ: ಮಠಂದೂರು

ಪುತ್ತೂರು: ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಹಿಂದುಗಳ ಮೇಲೆ ದೌರ್ಜನ್ಯ‌ ಹಾಗೂ ಅಶಾಂತಿಯ ವಾತಾವರಣಕ್ಕೆ ಎಡೆ ನೀಡುವ ಕಾರ್ಯ ನಿರಂತರವಾಗಿ ನಡೆಯಲಿದೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹೋರಾಟಕ್ಕೆ ಸದಾ ಸಿದ್ಧರಾಗಿ ಎಂದು ನಿಕಟಪೂರ್ವ ಶಾಸಕ ಸಂಜೀವ ಮಠಂದೂರು ಕರೆ ನೀಡಿದರು. ಡಿ.ವಿ. ಹಾಗೂ ನಳಿನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವ ಪ್ರಕರಣವನ್ನು ಖಂಡಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ತಾಲೂಕು ಆಡಳಿತ ಸೌಧದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಮಾಜಿ ಸಿಎಂ ಸದಾನಂದ ಗೌಡ ಅವರು ಪುತ್ತೂರಿನ

ಡಿವಿ, ನಳಿನ್ ಭಾವಚಿತ್ರಕ್ಕೆ ಚಪ್ಪಲಿ‌ ಹಾರ: ಬಿಜೆಪಿ‌ ಪ್ರತಿಭಟನೆ | ಕಾಂಗ್ರೆಸ್ ಆಡಳಿತದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಿರಂತರ: ಮಠಂದೂರು Read More »

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿ ಆಗಬೇಕು ಎನ್ನುವುದು ಸಂಪ್ರದಾಯ. ಇದನ್ನು ಮುರಿಯಬಾರದು. ಆದ್ದರಿಂದ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಆಗ್ರಹಿಸಿದ್ದಾರೆ. ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಭಾನುವಾರ ನಡೆದ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಸಭೆಯ ಬಳಿಕ ಅವರು ಮಾತನಾಡಿದರು. ಹಿಂದಿನಿಂದ ಬಂದ ಸಂಪ್ರದಾಯವನ್ನು ಪಾಲಿಸುವ ಪರಿಪಾಠ ಬೆಳೆಸಿಕೊಳ್ಳಬೇಕು. ಈ ಹಿಂದೆಯೂ ಕಾಂಗ್ರೆಸ್ ಚುನಾವಣೆಯಲ್ಲಿ ಬಹುಮತ ಪಡೆದುಕೊಂಡಾಗ, ಕೆಪಿಸಿಸಿ ಅಧ್ಯಕ್ಷರನ್ನೇ

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯ Read More »

ಬಿಜೆಪಿ ಹೀನಾಯ ಸೋಲು: ಪುತ್ತೂರಿನಲ್ಲಿ ನಳಿನ್, ಡಿವಿ ಶ್ರದ್ಧಾಂಜಲಿ ಬ್ಯಾನರಿಗೆ ಚಪ್ಪಲಿ ಹಾರ

ಪುತ್ತೂರು: ನಳಿನ್ ಕುಮಾರ್ ಕಟೀಲ್ ಹಾಗೂ ಡಿ.ವಿ. ಸದಾನಂದ ಗೌಡ ಅವರೇ ಬಿಜೆಪಿ ಸೋಲಿಗೆ ಕಾರಣ ಎಂಬ ಒಕ್ಕಣೆಯ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿದೆ. ಪುತ್ತೂರು ಸರ್ಕಾರಿ ಬಸ್ ನಿಲ್ದಾಣ ಮುಂಭಾಗ ಈ ಬ್ಯಾನರನ್ನು ಅಳವಡಿಸಿದ್ದು, ತವರು ಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂಗೆ ಸೋಲಿನ ಬಿಸಿ ತಟ್ಟುವಂತೆ ಮಾಡಲಾಗಿದೆ. ಭಾವಪೂರ್ಣ ಶ್ರದ್ಧಾಂಜಲಿ ಎಂದು ಬ್ಯಾನರ್ ಹಾಕಿ, ಅದರಲ್ಲಿ ಬಿಜೆಪಿ ಸೋಲಿಗೆ ನೀವೇ ಕಾರಣ ಎಂಬ ಬರಹವನ್ನು ಬರೆಯಲಾಗಿದೆ. ಬ್ಯಾನರಿನ ಎರಡು ಬದಿಗಳಲ್ಲಿ

ಬಿಜೆಪಿ ಹೀನಾಯ ಸೋಲು: ಪುತ್ತೂರಿನಲ್ಲಿ ನಳಿನ್, ಡಿವಿ ಶ್ರದ್ಧಾಂಜಲಿ ಬ್ಯಾನರಿಗೆ ಚಪ್ಪಲಿ ಹಾರ Read More »

ಸಿಎಂ ಆಯ್ಕೆ ವಿಚಾರ ಖರ್ಗೆ ಹೆಗಲಿಗೆ! ಶಾಸಕಾಂಗ ಪಕ್ಷದ ಸಭೆ ನಿರ್ಣಯ

ಬೆಂಗಳೂರು: ಸಿಎಂ ಆಯ್ಕೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲಿನಲ್ಲಿ ನಡೆದ ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನಷ್ಟೇ ತೆಗೆದುಕೊಳ್ಳಲು ಸಭೆ ಸಫಲವಾಯಿತು. ಎಐಸಿಸಿ ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧ ಎಂದು ಶಾಸಕರು ಏಕ ಸ್ವರದಲ್ಲಿ ಹೇಳುವ ಮೂಲಕ ಸಭೆ ಮುಕ್ತಾಯ ಕಂಡಿತು. ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಗಲಿಗೆ ಸಿಎಂ ಆಯ್ಕೆ ವಿಚಾರ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಖರ್ಗೆ ಅವರು ನಾಳೆ ಬೆಳಿಗ್ಗೆ ಸಿಸೋಡಿಯಾ ಅವರನ್ನು ಭೇಟಿಯಾಗಲಿದ್ದಾರೆ.

ಸಿಎಂ ಆಯ್ಕೆ ವಿಚಾರ ಖರ್ಗೆ ಹೆಗಲಿಗೆ! ಶಾಸಕಾಂಗ ಪಕ್ಷದ ಸಭೆ ನಿರ್ಣಯ Read More »

ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷ!?

ಬೆಂಗಳೂರು: ಪ್ರಖರ ಮಾತಿನಿಂದಲೇ ಖ್ಯಾತರಾದ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನಳಿನ್ ಕುಮಾರ್ ಕಟೀಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ತಕ್ಷಣದಲ್ಲೇ ಯತ್ನಾಳ್ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದರ ಬಗ್ಗೆ ಇನ್ನೂ ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲವಾದರೂ, ಬಿಜೆಪಿ ಮೂಲಗಳು ಯತ್ನಾಳ್ ಅವರನ್ನು ರಾಜ್ಯಾಧ್ಯಕ್ಷರಾಗಿ ನೋಡಲು ಉತ್ಸುಕರಾಗಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷ!? Read More »

error: Content is protected !!
Scroll to Top