ರಾಜಕೀಯ

ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷ!?

ಬೆಂಗಳೂರು: ಪ್ರಖರ ಮಾತಿನಿಂದಲೇ ಖ್ಯಾತರಾದ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನಳಿನ್ ಕುಮಾರ್ ಕಟೀಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ತಕ್ಷಣದಲ್ಲೇ ಯತ್ನಾಳ್ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದರ ಬಗ್ಗೆ ಇನ್ನೂ ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲವಾದರೂ, ಬಿಜೆಪಿ ಮೂಲಗಳು ಯತ್ನಾಳ್ ಅವರನ್ನು ರಾಜ್ಯಾಧ್ಯಕ್ಷರಾಗಿ ನೋಡಲು ಉತ್ಸುಕರಾಗಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷ!? Read More »

ಸಾಮಾಜಿಕ ಜಾಲತಾಣದಲ್ಲಿ ನಳಿನ್ ಕುಮಾರ್ ಕಟೀಲ್ ರಾಜೀನಾಮೆಗೆ ಒತ್ತಾಯ!?

ಪುತ್ತೂರು: ರಾಜ್ಯ ಬಿಜೆಪಿಯ ಸೋಲಿನ ಹೊಣೆ ಹೊತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತನ್ನ ಹುದ್ದೆಗೆ ರಾಜೀನಾಮೆ ಕೊಡುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಇದರ ನಡುವೆ ನೈತಿಕ ಹೊಣೆ ಹೊತ್ತವರ ರಾಜೀನಾಮೆ ಯಾವಾಗ? ಎಂಬಿತ್ಯಾದಿ ಒಕ್ಕಣೆಯ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದಕ್ಕೆ ಪೂರಕವಾಗಿ ಕಾಮೆಂಟ್ ಗಳನ್ನು ನೀಡಲಾಗುತ್ತಿದೆ. ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಟ್ರೋಲ್ ಮಾಡಲು ನೆಟ್ಟಿಗರು ಶುರು ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನಳಿನ್ ಕುಮಾರ್ ಕಟೀಲ್ ರಾಜೀನಾಮೆಗೆ ಒತ್ತಾಯ!? Read More »

ಸಿಎಂ ಪಟ್ಟಕ್ಕಾಗಿ ಡಿಕೆ, ಸಿದ್ದರಾಮಯ್ಯ ಪೈಪೋಟಿ | ಡಿಕೆ ಪರವಾಗಿ ಒಕ್ಕಲಿಗ ಸ್ವಾಮೀಜಿಗಳ ಸಭೆ

ಬೆಂಗಳೂರು: ಚುನಾವಣೆಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿರುವ ಕಾಂಗ್ರೆಸ್, ಇದೀಗ ಸಿಎಂ ಪಟ್ಟಕ್ಕಾಗಿ ಪೈಪೋಟಿ ಶುರುವಾಗಿದೆ. ಬೆಳಿಗ್ಗೆಯಿಂದಲೇ ಟೆಂಪಲ್ ರನ್ ಶುರುವಿಟ್ಟುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಅವರ ಪರವಾಗಿ ಒಕ್ಕಲಿಗ ಸ್ವಾಮೀಜಿಗಳು ಬ್ಯಾಟಿಂಗ್ ಮಾಡುತ್ತಿದ್ದಾರೆ. ಒಕ್ಕಲಿಗ ಸಮುದಾಯ ಸ್ವಾಮೀಜಿಗಳು ಸಭೆ ಕರೆದು, ಡಿಕೆ ಅವರನ್ನೇ ಸಿಎಂ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ. ಇದರ ನಡುವೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಸಿದ್ಧತೆ ನಡೆಯುತ್ತಿದೆ. ಕಾಂಗ್ರೆಸ್ ವೀಕ್ಷಕರು ಸಭೆಯಲ್ಲಿ

ಸಿಎಂ ಪಟ್ಟಕ್ಕಾಗಿ ಡಿಕೆ, ಸಿದ್ದರಾಮಯ್ಯ ಪೈಪೋಟಿ | ಡಿಕೆ ಪರವಾಗಿ ಒಕ್ಕಲಿಗ ಸ್ವಾಮೀಜಿಗಳ ಸಭೆ Read More »

ಎಂಪಿ ಚುನಾವಣೆಗೆ ಸ್ಪರ್ಧೆ | ಕಾರ್ಯಕರ್ತರ ಜೊತೆ ಸಮಾಲೋಚಿಸಿ ನಿರ್ಧಾರವೆಂದ ಪುತ್ತಿಲ

ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಭಾವನೆ ಕಾರ್ಯಕರ್ತರದ್ದು. ಅವರ ಭಾವನೆ ಯಾವ ರೀತಿ ಇದೆ ಎನ್ನುವುದನ್ನು ಅವರ ಜೊತೆ ಚರ್ಚಿಸಿಯೇ ಮುಂದೆ ಹೋಗಲಾಗುವುದು ಎಂದು ಪಕ್ಷೇತರವಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಹೇಳಿದರು. ಚುನಾವಣೆಯ ಬಗ್ಗೆ ಹಾಗೂ ನಂತರದ ಬೆಳವಣಿಗೆಯಲ್ಲಿ ಎಂಪಿ ಫಾರ್ ಪುತ್ತಿಲ ಅಭಿಯಾನದ ಬಗೆಗಿನ ಪ್ರಶ್ನೆಗೆ ಉತ್ತರಿಸಿದರು. ಹಿಂದೂ ಸಮಾಜಕ್ಕೆ ಅನ್ಯಾಯವಾದಾಗ ಜೊತೆಗೆ ನಿಂತಿದ್ದೇವೆ, ಹೋರಾಟ ಮಾಡಿದ್ದೇವೆ. ಹಿಂದುತ್ವವನ್ನು ಪ್ರತಿಪಾದನೆ ಮಾಡಬೇಕು. ಸ್ವಜನಪಕ್ಷಪಾತ, ಸರ್ವಾಧಿಕಾರಿ ಧೋರಣೆಯ ನಾಯಕರ ವಿಚಾರಧಾರೆಯ ವಿರುದ್ಧ ಹೋರಾಟ

ಎಂಪಿ ಚುನಾವಣೆಗೆ ಸ್ಪರ್ಧೆ | ಕಾರ್ಯಕರ್ತರ ಜೊತೆ ಸಮಾಲೋಚಿಸಿ ನಿರ್ಧಾರವೆಂದ ಪುತ್ತಿಲ Read More »

ಬಿಜೆಪಿ ಅಧಿಕಾರಕ್ಕೆ ಬರುವವರೆಗೆ ವಿರಮಿಸಲ್ಲ : ನಿಕಟಪೂರ್ವ ಶಾಸಕ ಸಂಜೀವ ಮಠಂದೂರು

ಪುತ್ತೂರು: ಗೆಲುವಿಗಾಗಿ ಎಲ್ಲರೂ ಶ್ರಮಿಸಿದ್ದಾರೆ. ಆದರೂ ಸೋಲಾಗಿದೆ. ಈ ಸೋಲು ತಾತ್ಕಾಲಿಕ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವವರೆಗೆ ನಾನು ವಿರಮಿಸುವುದಿಲ್ಲ ಎಂದು ನಿಕಟಪೂರ್ವ ಶಾಸಕ ಸಂಜೀವ ಮಠಂದೂರು ಹೇಳಿದರು. ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ನ್ಯೂಸ್ ಪುತ್ತೂರು ತಮ್ಮ ಅನಿಸಿಕೆ ಹಂಚಿಕೊಂಡರು. ಮುಂದೆ ಲೋಕಸಭೆ, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳು ಇವೆ. ಈ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲಲೇಬೇಕು. ಪುತ್ತೂರಿನಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬರುವವರೆಗೆ ವಿರಮಿಸುವುದಿಲ್ಲ

ಬಿಜೆಪಿ ಅಧಿಕಾರಕ್ಕೆ ಬರುವವರೆಗೆ ವಿರಮಿಸಲ್ಲ : ನಿಕಟಪೂರ್ವ ಶಾಸಕ ಸಂಜೀವ ಮಠಂದೂರು Read More »

ಸೋಲನ್ನು ಒಪ್ಪಿಕೊಂಡಿದ್ದೇನೆ, ಕಾರ್ಯಕರ್ತರ ಮೇಲೆ ಹಾಕುವುದಿಲ್ಲ : ಆಶಾ ತಿಮ್ಮಪ್ಪ

ಪುತ್ತೂರು: ಸೋಲನ್ನು ನಾನು ಒಪ್ಪಿಕೊಂಡಿದ್ದೇನೆ. ಈ ಸೋಲನ್ನು ನಾನು ಕಾರ್ಯಕರ್ತರ ಮೇಲೆ ಹಾಕುವುದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಹೇಳಿದರು. ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದ ಬಳಿಕ ಅವರು ನ್ಯೂಸ್ ಪುತ್ತೂರು ಜೊತೆ ಮಾತನಾಡಿದರು. ಸಂಜೀವ ಮಠಂದೂರು ಅವರು ಶಾಸಕರಾಗಿ ಒಂದೂವರೆ ಸಾವಿರ ಕೋಟಿ ರೂ. ಅನುದಾನ ತಂದು, ಅಭಿವೃದ್ಧಿ ಕಾರ್ಯ ಮಾಡಿದರು. ಆದರೆ ಇದನ್ನು ಮತದಾರರು ಗುರುತಿಸದೇ ಇರುವುದು ವಿಪರ್ಯಾಸ. ಬಿಜೆಪಿ ಸರಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರು ಗುರುತಿಸಿಲ್ಲ ಎನ್ನುವುದನ್ನು ಚುನಾವಣೆ ತೋರಿಸಿಕೊಟ್ಟಿದೆ.

ಸೋಲನ್ನು ಒಪ್ಪಿಕೊಂಡಿದ್ದೇನೆ, ಕಾರ್ಯಕರ್ತರ ಮೇಲೆ ಹಾಕುವುದಿಲ್ಲ : ಆಶಾ ತಿಮ್ಮಪ್ಪ Read More »

ಕಾಂಗ್ರೆಸ್ ಗೆಲುವು: ದುಬೈನಲ್ಲಿ ಸಂಭ್ರಮ

ಪುತ್ತೂರು: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ದುಬೈನಲ್ಲಿ ಸಂಭ್ರಮಾಚರಿಸಲಾಯಿತು. ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರ ಪರ ಘೋಷಣೆಗಳನ್ನು ಕೂಗುತ್ತಾ, ಬಾವುಟಗಳನ್ನು ಹಿಡಿದು ಕಾಂಗ್ರೆಸ್ ಜಿಂದಾಬಾದ್ ಘೋಷಣೆ ಕೂಗಿದರು. ಇದೇ ಸಂದರ್ಭ ಅಲ್ಲಿ ಸೇರಿದ್ದ ಭಾರತೀಯರು ಸಿಹಿ ಹಂಚಿ ಸಂಭ್ರಮಿಸಿದರು.

ಕಾಂಗ್ರೆಸ್ ಗೆಲುವು: ದುಬೈನಲ್ಲಿ ಸಂಭ್ರಮ Read More »

ಶಾಸಕಾಂಗ ಪಕ್ಷದ ಸಭೆ : ಇಂದೇ ನಿರ್ಧಾರವಾಗುತ್ತೇ ಮುಂದಿನ ಸಿಎಂ !

ಬೆಂಗಳೂರು: 224 ಕ್ಷೇತ್ರಗಳಲ್ಲಿ 135 ಕ್ಷೇತ್ರಗಳನ್ನು ಗೆದ್ದುಕೊಂಡು ಕ್ಲೀನ್ ಸ್ವೀಪ್ ಮಾಡಿರುವ ಕಾಂಗ್ರೆಸ್, ಮುಂದಿನ ಸಿಎಂ ಆಯ್ಕೆಗೆ ಮುಹೂರ್ತ ಫಿಕ್ಸ್ ಮಾಡಿದೆ ಎಂದು ಹೇಳಲಾಗಿದೆ. ಭಾನುವಾರ ಸಂಜೆ 5.30ಕ್ಕೆ ನಡೆಯುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಹೈಕಮಾಂಡ್ ಮುಂದಿನ ಸಿಎಂ ಆಯ್ಕೆ ಆಗಲಿದೆ ಎಂಬ ಸುಳಿವು ಸಿಕ್ಕಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿ. ಅವರ ಹೆಸರು ಸಿಎಂ ರೇಸಿನಲ್ಲಿ ಮುಂಚೂಣಿಯಲ್ಲಿದೆ. ಶನಿವಾರ ಮತ ಎಣಿಕೆ ನಡೆಯುತ್ತಿದ್ದಂತೆ ಕಾಂಗ್ರೆಸಿಗೆ ಗೆಲುವಿನ ಸುಳಿವು ಸಿಕ್ಕಿತು. ತಕ್ಷಣದಲ್ಲೇ ಶಾಸಕಾಂಗ ಸಭೆ ಕರೆದಿತ್ತು. ಮತ

ಶಾಸಕಾಂಗ ಪಕ್ಷದ ಸಭೆ : ಇಂದೇ ನಿರ್ಧಾರವಾಗುತ್ತೇ ಮುಂದಿನ ಸಿಎಂ ! Read More »

6 ಬಾರಿ ಮತ ಎಣಿಕೆ : ಕೊನೆಗೂ ಜಯ ದಾಖಲಿಸಿದ ಬಿಜೆಪಿ

ಪುತ್ತೂರು: ಜಯನಗರ ಕ್ಷೇತ್ರದಲ್ಲಿಕೊನೆಗೂ ಬಿಜೆಪಿ ಅಭ್ಯರ್ಥಿ ಕೆ.ಸಿ. ರಾಮಮೂರ್ತಿ ಜಯ ಗಳಿಸಿದ್ದಾರೆ. ತಡರಾತ್ರಿವರೆಗೂ ಮರುಮತ ಎಣಿಕೆ ಕಾರ್ಯ ನಡೆಯಿತು. ಮೊದಲಿಗೆ 10 ಮತಗಳಿಂದ ಕಾಂಗ್ರೆಸಿನ ಸೌಮ್ಯ ರೆಡ್ಡಿ ಅವರು ಮುನ್ನಡೆ ಸಾಧಿಸಿದ್ದು, ಇದನ್ನು ಕೆ.ಸಿ. ರಾಮಮೂರ್ತಿ ಪ್ರಶ್ನಿಸಿ ಮರು ಮತ ಎಣಿಕೆಗೆ ಮನವಿ ಮಾಡಿದರು. ಸ್ಥಳಕ್ಕೆ ಆಗಮಿಸಿದ ಚುನಾವಣಾಧಿಕಾರಿ, ಇಬ್ಬರು ಅಭ್ಯರ್ಥಿಗಳನ್ನು ಕರೆಸಿ ಅವರ ಸಮ್ಮುಖದಲ್ಲೇ ಮರು ಮತ ಎಣಿಕೆ ನಡೆಸಿದರು. 5 ಬಾರಿಯ ಮತ ಎಣಿಕೆಯಲ್ಲೂ ಸೂಕ್ತ ಫಲಿತಾಂಶ ಪಡೆಯಲು ಸಾಧ‍್ಯವಾಗಲಿಲ್ಲ. 6ನೇ ಬಾರಿಯ ಮತ

6 ಬಾರಿ ಮತ ಎಣಿಕೆ : ಕೊನೆಗೂ ಜಯ ದಾಖಲಿಸಿದ ಬಿಜೆಪಿ Read More »

ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆ

ಬೆಂಗಳೂರು: ತೀವ್ರ ಆಘಾತಕಾರಿ ಸೋಲಿನ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ತನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶನಿವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು. ಸೋಲಿನ ಹೊಣೆ ಹೊತ್ತ ಅವರು, ಅಧಿಕಾರ ಇಲ್ಲದೇ ಇದ್ದರೂ ಜನಸೇವೆ ಮಾಡುವುದಾಗಿ ತಿಳಿಸಿದರು. ಜನಸೇವೆಗೆ ತಲೆಬಾಗುವುದಾಗಿ ತಿಳಿಸಿದರು.

ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆ Read More »

error: Content is protected !!
Scroll to Top