ರಾಜಕೀಯ

ಇಂದು ಸಂಜೆ ಎಸ್‌.ಎಂ ಕೃಷ್ಣ ಅಂತ್ಯಕ್ರಿಯೆ

ಸಿದ್ದರಾಮಯ್ಯ, ಪ್ರಹ್ಲಾದ್‌ ಜೋಶಿ ಸಹಿತ ಗಣ್ಯರಿಂದ ಅಂತಿಮ ನಮನ ಬೆಂಗಳೂರು : ನಿನ್ನೆ ನಿಧನರಾಗಿರುವ ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಹುಟ್ಟೂರು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ನಡೆಯಲಿದೆ. ಬೆಳಗ್ಗೆ ಕೃಷ್ಣ ಅವರ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತದೆ. ಮಾರ್ಗ ಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಸಂಜೆ 3 ಗಂಟೆ ಸುಮಾರಿಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, […]

ಇಂದು ಸಂಜೆ ಎಸ್‌.ಎಂ ಕೃಷ್ಣ ಅಂತ್ಯಕ್ರಿಯೆ Read More »

ಬಲ್ನಾಡು ಗ್ರಾಮ ಅರಣ್ಯ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆ

ಪುತ್ತೂರು: ಬಲ್ನಾಡು ಗ್ರಾಮ ಅರಣ್ಯ ಸಮಿತಿ  ಕಾರ್ಯಕಾರಿಣಿಯ ಮುಂದಿನ 5 ವರ್ಷಕ್ಕೆ  ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆಯಾಗಿದ್ದಾರೆ. ಬಲ್ನಾಡು ಗ್ರಾಮದ ಸಾಜ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ  ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಮಿತಿಯಲ್ಲಿ 172 ಮಂದಿ ಸದಸ್ಯರ ಪೈಕಿ ಚಂದಪ್ಪ ಪೂಜಾರಿ  ಕೆ, ಸುಂದರ ಎಂ, ಕುಟ್ಟಿ ನಲಿಕೆ, ಕೆ, ಪ್ರವೀಣಚಂದ್ರ ಆಳ್ವ, ಅಣ್ಣಿ ಪೂಜಾರಿ ಸಾರ್ಯ, ಉಷಾ ಸಾಜ, ಕಮಲಾಕ್ಷಿ ಸಾಜ, ವಸಂತಿ ಸಾಜ, ನಳಿನಿ ಕೆ, ಕುಸುಮ ಎಂ.

ಬಲ್ನಾಡು ಗ್ರಾಮ ಅರಣ್ಯ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆ Read More »

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಇನ್ನಿಲ್ಲ

ರಾಜ್ಯಪಾಲರಾಗಿ, ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದ ಮುತ್ಸದ್ದಿ ರಾಜಕಾರಣಿ ಬೆಂಗಳೂರು : ಕರ್ನಾಟಕ ರಾಜಕಾರಣ ಕಂಡ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್​.ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​.ಎಂ ಕೃಷ್ಣರನ್ನು ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಇನ್ನಿಲ್ಲ Read More »

ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾದ ಸೋನಿಯಾ – ಸೊರೊಸ್‌ ಕಂಪನಿ ನಂಟಿನ ಆರೋಪ

ಭಾರತದ ವಿರುದ್ಧ ಪಿತೂರಿ ಮಾಡುತ್ತಿರುವ ವಿಚಾರದ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ಪಟ್ಟು ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ ಗೌತಮ್‌ ಅದಾನಿ ನಂಟಿನ ಆರೋಪ ಮಾಡುತ್ತಿರುವ ಕಾಂಗ್ರೆಸ್‌ಗೆ ಬಿಜೆಪಿ ಸೋನಿಯಾ ಗಾಂಧಿ ಮತ್ತು ಅಮೆರಿಕದ ವಿವಾದಾತ್ಮಕ ಉದ್ಯಮಿ ಜಾರ್ಜ್ ಸೊರೊಸ್ ಒಡೆತನದ ಸಂಸ್ಥೆಗಳ ಜೊತೆಗಿರುವ ನಂಟನ್ನು ಬಹಿರಂಗಗೊಳಿಸಿ ತಿರುಗೇಟು ನೀಡಿದ್ದು, ಈ ವಿಚಾರ ಈಗ ರಾಷ್ಟ್ರ ರಾಜಕಾರಣದಲ್ಲಿ ಬಹಳ ಚರ್ಚೆಗೀಡಾಗುತ್ತಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಂಟು ಬಹಳ ಗಂಭೀರ ವಿಚಾರ ಎಂದು

ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾದ ಸೋನಿಯಾ – ಸೊರೊಸ್‌ ಕಂಪನಿ ನಂಟಿನ ಆರೋಪ Read More »

ಇಂದಿನಿಂದ ಚಳಿಗಾಲದ ಅಧಿವೇಶನ : ವಿಪಕ್ಷದ ಬತ್ತಳಿಕೆಯಲ್ಲಿದೆ ಹಲವು ಅಸ್ತ್ರ

ಮೊದಲ ದಿನವೇ ಕೋಲಾಹಲದ ನಿರೀಕ್ಷೆ ಬೆಳಗಾವಿ: ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಹುಮ್ಮಸ್ಸಿನಲ್ಲಿರುವ ರಾಜ್ಯ ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಸಿದ್ದಗೊಂಡಿವೆ. ಮುಡಾ, ವಾಲ್ಮೀಕಿ ನಿಗಮ, ವಕ್ಫ್‌ನಿಂದ ರೈತರ ಭೂ ಕಬಳಿಕೆ ವಿವಾದ, ಬಾಣಂತಿಯರ ಸಾವು ಪ್ರಕರಣ ಹೀಗೆ ಹಲವು ಅಸ್ತ್ರಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಮೇಲೆ ಮುಗಿಬೀಳಲು ವಿರೋಧ ಪಕ್ಷದವರು ಸಜ್ಜಾಗಿದ್ದಾರೆ. ಬಿಜೆಪಿ ಅಸ್ತ್ರಗಳಿಗೆ ಕಾಂಗ್ರೆಸ್ ಕೊರೊನ ಅಸ್ತ್ರ ಜೊತೆಗೆ ಯತ್ನಾಳ್ ಬಣ ಬಡಿದಾಟವನ್ನು ತಿರುಗುಬಾಣವಾಗಿ ಬಿಡಲು ಸಜ್ಜಾಗಿದೆ. ಬಿಜೆಪಿ ವಕ್ಫ್

ಇಂದಿನಿಂದ ಚಳಿಗಾಲದ ಅಧಿವೇಶನ : ವಿಪಕ್ಷದ ಬತ್ತಳಿಕೆಯಲ್ಲಿದೆ ಹಲವು ಅಸ್ತ್ರ Read More »

ದ.ಕ. ಜಿಲ್ಲೆಯಲ್ಲಿ ಸಂಪೂರ್ಣ ಗಾಂಜಾ ನಿಷೇಧಿಸಲು ಇಲಾಖೆಗಳು ಕಾರ್ಯನಿರ್ವಹಿಸಬೇಕು | ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಗಾಂಜಾ ದಂಧೆಯನ್ನು ನಿಷೇಧಿಸಲು ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರಿಗಳಿಗೆ ಸೂಚನೆ  ನೀಡಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಸಂಪೂರ್ಣವಾಗಿ ಡ್ರಗ್ಸ್ ಜಾಲವನ್ನು ನಿಷೇಧಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ಸ್ ಚಟದಲ್ಲಿ ಭಾಗಿಯಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳ ಚಲನವಲನಗಳನ್ನು ಆಪ್ತ ಸಮಾಲೋಚಕರನ್ನಿಟ್ಟುಕೊಂಡು ಗಮನಿಸಿ, ವಿದ್ಯಾರ್ಥಿಗಳ ಮನಃಪರಿವರ್ತನೆ

ದ.ಕ. ಜಿಲ್ಲೆಯಲ್ಲಿ ಸಂಪೂರ್ಣ ಗಾಂಜಾ ನಿಷೇಧಿಸಲು ಇಲಾಖೆಗಳು ಕಾರ್ಯನಿರ್ವಹಿಸಬೇಕು | ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ Read More »

ಪ್ರಧಾನಿ ಅಂಗಳ ತಲುಪಿದ ಮುಡಾ ಹಗರಣ

ಸಿಬಿಐ ತನಿಖೆಗೆ ಆಗ್ರಹಿಸಿ ನರೇಂದ್ರ ಮೋದಿಯವರಿಗೆ ಪತ್ರ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಉರುಳಾಗಿ ಪರಣಮಿಸಿರುವ ಮುಡಾ ಹಗರಣ ಈಗ ಪ್ರಧಾನಿ ಅಂಗಳ ತಲುಪಿದೆ. ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸದಿರುವುದು ಜಾರಿ ನಿರ್ದೇಶನಾಲಯದ ತನಿಖೆಯಿಂದ ಬಯಲಾದ ಬೆನ್ನಿಗೆ ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಕೀಲರೊಬ್ಬರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. ವಕೀಲ ರವಿಕುಮಾರ್ ಎಂಬವರು ಪ್ರಧಾನ ಮಂತ್ರಿಗೆ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ. 296 ಪುಟಗಳ ದಾಖಲೆ ಸಮೇತ ಪತ್ರ ರವಾನಿಸಲಾಗಿದೆ. ಈಗಾಗಲೇ ಪ್ರಧಾನಿಗಳ ಕಚೇರಿಗೆ ಪತ್ರ

ಪ್ರಧಾನಿ ಅಂಗಳ ತಲುಪಿದ ಮುಡಾ ಹಗರಣ Read More »

ಮುಡಾದಲ್ಲಿ ನಡೆದಿರುವುದು ಬರೋಬ್ಬರಿ 2800 ಕೋ. ರೂ. ಭ್ರಷ್ಟಾಚಾರ

4921 ನಿವೇಶನಗಳನ್ನು ಅಕ್ರಮವಾಗಿ ಹಂಚಿರುವ ಮಾಹಿತಿ ಇ.ಡಿ.ಗೆ ಲಭ್ಯ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾದಿಂದ ಅಕ್ರಮವಾಗಿ 14 ಸೈಟ್‌ಗಳನ್ನು ಪಡೆದುಕೊಂಡ ಪ್ರಕರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಈಗ ಮುಡಾದ ಬ್ರಹ್ಮಾಂಡ ಭ್ರಷ್ಟಾಚಾರವನ್ನೆಲ್ಲ ಬಯಲಿಗೆಳೆದಿದೆ. ಮುಡಾದಲ್ಲಿ ಆಗಿರುವುದು ಬರೀ 14 ಸೈಟ್‌ಗಳ ಅಕ್ರಮವಲ್ಲ, ಬರೋಬ್ಬರಿ 2800 ಕೋ. ರೂ. ಬೃಹತ್‌ ಅಕ್ರಮ ಎಂಬ ಅಂಶ ಇ.ಡಿ. ತನಿಖೆಯಿಂದ ಬಯಲಿಗೆ ಬಂದಿದೆ. ಕೆಲ ದಿನಗಳ ಹಿಂದೆ 1,095 ಸೈಟ್‌ಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿತ್ತು. ಆದರೆ ತನಿಖೆ ಮುಂದುವರಿದಂತೆ

ಮುಡಾದಲ್ಲಿ ನಡೆದಿರುವುದು ಬರೋಬ್ಬರಿ 2800 ಕೋ. ರೂ. ಭ್ರಷ್ಟಾಚಾರ Read More »

ಹೋಟೆಲ್‌ಗಳಲ್ಲಿ ಗೋಮಾಂಸ ಖಾದ್ಯ ಮಾರಿದರೆ 8 ವರ್ಷ ಜೈಲು

ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ, ಸೇವನೆ ನಿಷೇಧ ಗುವಾಹಟಿ: ಅಸ್ಸಾಂನ ಹೋಟೆಲ್‌ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ.ಗೋಮಾಂಸ ಸೇವನೆಯ ಬಗ್ಗೆ ಕಾನೂನಿಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕಾನೂನು ಉಲ್ಲಂಘಿಸಿದರೆ 3ರಿಂದ 8 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 3ರಿಂದ 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದು.ಸರ್ಕಾರದ ನಿರ್ಣಯಕ್ಕೆ ವಿಪಕ್ಷಗಳು ಪ್ರಬಲ ವಿರೋಧ ವ್ಯಕ್ತಪಡಿಸಿವೆ.ಅಸ್ಸಾಂನಲ್ಲಿ ಗೋಮಾಂಸ

ಹೋಟೆಲ್‌ಗಳಲ್ಲಿ ಗೋಮಾಂಸ ಖಾದ್ಯ ಮಾರಿದರೆ 8 ವರ್ಷ ಜೈಲು Read More »

ಯತ್ನಾಳ್‌ಗೆ ಹೈಕಮಾಂಡ್‌ ಶಿಸ್ತಿನ ಪಾಠ : ಪಕ್ಷದ ಚೌಕಟ್ಟಿನೊಳಗಿರಲು ಖಡಕ್‌ ಸೂಚನೆ

ಬಿಜೆಪಿಯ ಒಳಜಗಳ ಸದ್ಯಕ್ಕೆ ಶಮನ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ದಿಲ್ಲಿಯಲ್ಲಿ ಬಿಜೆಪಿ ಹೈಕಮಾಂಡ್ ಶಿಸ್ತಿನ ಪಾಠ ಮಾಡಿದೆ. ಕೇಂದ್ರ ಶಿಸ್ತು ಸಮಿತಿ ಕೊಟ್ಟ ನೋಟಿಸ್​ಗೆ 6 ಪುಟಗಳ ಉತ್ತರ ನೀಡಿರುವ ಯತ್ನಾಳ್, ಖುದ್ದು ಹಾಜರಾಗಿ ಲಿಖಿತ ಮಾತ್ರವಲ್ಲದೆ ಮೌಖಿಕವಾಗಿಯೂ ಸ್ಪಷ್ಟನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಚೌಕಟ್ಟು ಮೀರಿ ಹೋಗದಂತೆ

ಯತ್ನಾಳ್‌ಗೆ ಹೈಕಮಾಂಡ್‌ ಶಿಸ್ತಿನ ಪಾಠ : ಪಕ್ಷದ ಚೌಕಟ್ಟಿನೊಳಗಿರಲು ಖಡಕ್‌ ಸೂಚನೆ Read More »

error: Content is protected !!
Scroll to Top