ರಾಜಕೀಯ

ಅರಿಯಡ್ಕ: ದಲಿತ ಕಾಲನಿಗೆ ಅಶೋಕ್ ರೈ ಭೇಟಿ ಮತ ಯಾಚನೆ

ಪುತ್ತೂರು: ಅರಿಯಡ್ಕ ಗ್ರಾಮದ ಶೇಕಮಲೆ ದಲಿತ ಕಾಲನಿಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭೇಟಿ ನೀಡಿ ಮತ ಯಾಚನೆ ನಡೆಸಿದರು. ಕಾಲನಿಗೆ ತೆರಳುವ ರಸ್ತೆಯಲ್ಲಿ ಹೊಳೆ ಇದ್ದು ಅದಕ್ಕೆ ಸೇತುವೆ ಇಲ್ಲದೆ ಸಮಸ್ಯೆಯಾಗಿದ್ದು ಮಳೆಗಾಲದಲ್ಲಿ ಶಾಲೆಗೆ ಮಕ್ಕಳು ತೆರಳಲೂ ಸಾಧ್ಯವಾಗುತ್ತಿಲ್ಲ. ಸೇತುವೆ ನಿರ್ಮಾಣ ಮಾಡಿಕೊಡುವಂತೆ ಕಾಲನಿ ನಿವಾಸಿಗಳು ಮನವಿ ಮಾಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಅಶೋಕ್ ರೈಯವರು ಇಲ್ಲಿ ಇಷ್ಟೊಂದು ಅಪಾಯಕಾರಿಯಾದ ಸ್ಥಳವಿದ್ದರೂ ಸೂಕ್ತ ಸ್ಪಂದನೆ ಸಿಗದೇ ಇದ್ದದ್ದು ಅತ್ಯಂತ ಬೇಸರದ ಸಂಗತಿಯಾಗಿದೆ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ […]

ಅರಿಯಡ್ಕ: ದಲಿತ ಕಾಲನಿಗೆ ಅಶೋಕ್ ರೈ ಭೇಟಿ ಮತ ಯಾಚನೆ Read More »

ಇಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್‌ ಭೇಟಿ

ಚುನಾವಣಾ ಪ್ರಚಾರದಲ್ಲಿ ಕೇಂದ್ರದ ನಾಯಕರು ಭಾಗಿ ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕೇಂದ್ರ ಸಚಿವರು ಮತ್ತು ಬಿಜೆಪಿಯ ಪ್ರಮುಖ ನಾಯಕರ ದಂಡೇ ರಾಜ್ಯಕ್ಕೆ ಆಗಮಿಸುತ್ತಿದೆ. ವಿವಿಧ ರಾಜ್ಯಗಳ ಸಿಎಂ, ಡಿಸಿಎಂ ಮತ್ತು ಕೇಂದ್ರ ಸಚಿವರು ಆಗಮಿಸುತ್ತಿದ್ದಾರೆ. ಇಂದು ಮಂಡ್ಯ ಮತ್ತು ವಿಜಯಪುರ ಜಿಲ್ಲೆಗೆ ಹಿಂದೂ ಫಯರ್​ ಬ್ರ್ಯಾಂಡ್​ ಲೀಡರ್‌ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಆಗಮಿಸಲಿದ್ದಾರೆ.ಲಖನೌನಿಂದ ಮೈಸೂರಿಗೆ ಆಗಮಿಸುವ ಯೋಗಿ ಆದಿತ್ಯನಾಥ್​​ 11 ಗಂಟೆಗೆ ಮಂಡ್ಯದಲ್ಲಿ ನಡೆಯುವ ರೋಡ್​​ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ.

ಇಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್‌ ಭೇಟಿ Read More »

ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ನಿರ್ಧಾರ ಇಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು: ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಸ್ಲಿಮರ ಮೀಸಲಾತಿ ಕುರಿತು ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಪ್ರಕರಣದ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯವು ಮೇ 9ಕ್ಕೆ ದಿನಾಂಕ ಮುಂದೂಡಿದ್ದು, ಕೋರ್ಟ್‌ನಿಂದ ಯಾವುದೇ ತಡೆಯಾಜ್ಞೆ ಸಿಕ್ಕಿಲ್ಲ ಎಂದರು.ಮುಸ್ಲಿಮರಿಗೆ ವಿರುದ್ಧವಾಗಿ ಈ ಮೀಸಲಾತಿ ಹಂಚಿಕೆ ಇಲ್ಲ. ಈ ಬಗ್ಗೆ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಮುಸ್ಲಿಮರಲ್ಲಿ ಸುಮಾರು 17

ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ನಿರ್ಧಾರ ಇಲ್ಲ : ಸಿಎಂ ಬೊಮ್ಮಾಯಿ Read More »

ಪಂಜಾಬ್‌ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ

ಚಂಡೀಗಢ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ, ಶಿರೋಮಣಿ ಅಖಾಲಿದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ (95) ನಿನ್ನೆ ರಾತ್ರಿ ನಿಧನರಾಗಿದ್ದಾರೆ.ಮೊಹಾಲಿಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಪ್ರಕಾಶ್ ಸಿಂಗ್ ಬಾದಲ್ ಚಿಕಿತ್ಸೆಗೆ ದಾಖಲಾಗಿದ್ದರು. ಪ್ರಕಾಶ್ ಸಿಂಗ್ ಬಾದಲ್ ನಿಧನ ಸುದ್ದಿಯನ್ನು ಅವರ ಆಪ್ತ ಸಹಾಯಕರು ಹಾಗೂ ಪುತ್ರರು ದೃಢಪಡಿಸಿದ್ದಾರೆ. ಪ್ರಕಾಶ್ ಸಿಂಗ್ ಬಾದಲ್ 5 ಬಾರಿ ಪಂಜಾಬ್‌ ಮುಖ್ಯಮಂತ್ರಿಯಾಗಿದ್ದರು. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅವರ ಅಂತಿಮ ಸಂಸ್ಕಾರ ಭಟಿಂಡದ ಬಾದಲ್ ಗ್ರಾಮದಲ್ಲಿ ನಡೆಯಲಿದೆ. ಬುಧವಾರ ಬೆಳಗ್ಗೆ ಅವರ ಪಾರ್ಥಿವ

ಪಂಜಾಬ್‌ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ Read More »

ಮೇ 3 : ಮೂಲ್ಕಿಯಲ್ಲಿ ಮೋದಿ ಬೃಹತ್‌ ಸಾರ್ವಜನಿಕ ಸಭೆ

ಏ. 29 ರಂದು ಮಂಗಳೂರಿನಲ್ಲಿ ಅಮಿತ್‌ ಶಾ ರೋಡ್‌ ಶೋ ಉಡುಪಿ : ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಕರಾವಳಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. ಮೂಲ್ಕಿಯಲ್ಲಿ ಪ್ರಧಾನಿಯ ಬೃಹತ್‌ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೆಣವ ಹೇಳಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸೇರಿಸಿ ಒಂದೇ ಸಾರ್ವಜನಿಕ ಸಭೆ ನಡೆಯಲಿದೆ. ಹೀಗಾಗಿ ಮಧ್ಯದಲ್ಲಿರುವ ಮೂಲ್ಕಿಯನ್ನು ಆಯ್ಕೆ ಮಾಡಲಾಗಿದೆ. ಈ ಸಭೆಯಲ್ಲಿ ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆಯಿದೆ

ಮೇ 3 : ಮೂಲ್ಕಿಯಲ್ಲಿ ಮೋದಿ ಬೃಹತ್‌ ಸಾರ್ವಜನಿಕ ಸಭೆ Read More »

ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ

ಮಂಗಳೂರು : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಮಂಗಳೂರಿಗೆ ಆಗಮಿಸಿದ್ದು, ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಾವು 150 ಸೀಟ್ ಗೆಲ್ಲಬೇಕಾಗಿದೆ. ಕಡಿಮೆ ಸೀಟ್‌ ಗೆದ್ದಲ್ಲಿ ಶಾಸಕರನ್ನು ಬಿಜೆಪಿಯವರು ಆಪರೇಷನ್‌ ಕಮಲ ಮಾಡಿ ಕಳ್ಳ ಮಾರ್ಗದಲ್ಲಿ ಸರ್ಕಾರ ರಚಿಸುತ್ತಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯ ಸೀಟುಗಳನ್ನು ಕಾಂಗ್ರೆಸ್‌ ಪಡೆಯುವುದು ಅಗತ್ಯ ಎಂದರು. ಕರ್ನಾಟಕ, ಮಧ್ಯಪ್ರದೇಶ, ಗೋವಾ, ಮಣಿಪುರಾ, ಉತ್ತರಖಂಡದಲ್ಲಿ ಶಾಸಕರ ಕಳ್ಳತನದಿಂದ ಸರಕಾರ ರಚನೆಯಾಗಿದೆ. ಆಮದು ಮಾಡಿಕೊಂಡ ಶಾಸಕರನ್ನ ಬಿಜೆಪಿ ವಾಷಿಂಗ್ ಮೆಷೀನ್ ಗೆ ಹಾಕಿದ್ರೆ

ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ Read More »

ರಾಷ್ಟ್ರೀಯತೆ, ಹಿಂದುತ್ವ, ಅಭಿವೃದ್ಧಿಯೇ ಗೆಲುವಿಗೆ ಕಾರಣವಾಗಲಿದೆ | ಒಳಮೊಗ್ರು ಪರ್ಪುಂಜದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಆಶಾ ತಿಮ್ಮಪ್ಪ

ಪುತ್ತೂರು: ಹಿಂದುತ್ವ, ರಾಷ್ಟ್ರೀಯತೆ, ಅಭಿವೃದ್ಧಿಯನ್ನೇ ಗುರಿಯಾಗಿಟ್ಟುಕೊಂಡು ಬಿಜೆಪಿ ಸರಕಾರ ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ ಆಡಳಿತ ನಡೆಸಿದೆ. ಎಲ್ಲೂ ಒಂದು ವರ್ಗ, ಜಾತಿ ಎಂಬ ಬೇಧವನ್ನು ಮಾಡಿಲ್ಲ. ಆದ್ದರಿಂದ ಈ ಬಾರಿ ಮತ್ತೊಮ್ಮೆ ಬಿಜೆಪಿ ಸರಕಾರ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು. ಒಳಮೊಗ್ರು ಪರ್ಪುಂಜ ಬಾರಿಕೆ ನಿವಾಸಿ ನಾರಾಯಣ ಶೆಟ್ಟಿ ಅವರ ಮನೆಯಲ್ಲಿ ನಡೆದ ಒಳಮೊಗ್ರು ಶಕ್ತಿ ಕೇಂದ್ರ ಬಿಜೆಪಿ ಕಾರ್ಯಕರ್ತರ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಅತಿ

ರಾಷ್ಟ್ರೀಯತೆ, ಹಿಂದುತ್ವ, ಅಭಿವೃದ್ಧಿಯೇ ಗೆಲುವಿಗೆ ಕಾರಣವಾಗಲಿದೆ | ಒಳಮೊಗ್ರು ಪರ್ಪುಂಜದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಆಶಾ ತಿಮ್ಮಪ್ಪ Read More »

ಕೃಷ್ಣನಗರ ಗೇರು ಸಂಸ್ಕರಣಾ ಘಟಕಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ | ಮತಯಾಚನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪುತ್ತೂರಿನ ಕೃಷ್ಣನಗರದಲ್ಲಿರುವ ಗೇರು ಸಂಸ್ಕರಣಾ ಘಟಕಕ್ಕೆ ಮಂಗಳವಾರ ಭೇಟಿ ನೀಡಿದರು. ಭೇಟಿ ನೀಡಿದ ಅವರು ಸಭೆ ನಡೆಸಿ ಅಲ್ಲಿನ ಸಿಬ್ಬಂದಿಗಳೊಂದಿಗೆ ಮಾತನಾಡಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕೃಷ್ಣನಗರ ಗೇರು ಸಂಸ್ಕರಣಾ ಘಟಕಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ | ಮತಯಾಚನೆ Read More »

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳ್ಯಕ್ಕೆ ಭೇಟಿ

ಪುತ್ತೂರು : ಕಾಂಗ್ರೆಸ್ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಸುಳ್ಯಕ್ಕೆ ಆಗಮಿಸಿದ್ದಾರೆ. ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದಾರೆ. ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಸುಳ್ಯದ ಹೆಲಿಪ್ಯಾಡ್ ಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸಮಾವೇಶ ನಡೆಯಲಿರುವ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಸಭಾಂಗಣದ ಬಳಿ ಆಗಮಿಸಿ ಸಭೆಯಲ್ಲಿ ಭಾಗವಹಿಸಿ, ಪಾಲ್ಗೊಂಡಿದ್ದಾರೆ‌. ಸುಳ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳ್ಯಕ್ಕೆ ಭೇಟಿ Read More »

ಉ. ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಮತ್ತೆ ಜೀವ ಬೆದರಿಕೆ ಕರೆ

ಬೆದರಿಕೆಯೊಡ್ಡಿದವನನ್ನು ಗುರುತಿಸಿದ ಪೊಲೀಸರು ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದೆ. 112 ಟೋಲ್‌ಫ್ರೀ ನಂಬರ್‌ನಿಂದ ಕರೆ ಮಾಡಿ ಬೆದರಿಕೆವೊಡ್ಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಉತ್ತರ ಪ್ರದೇಶದ ಭಯೋತ್ಪಾದನೆ ನಿಗ್ರಹ ಪಡೆ ರಂಗಕ್ಕಿಳಿದಿದ್ದು, ಕರೆ ಮಾಡಿದ ವ್ಯಕ್ತಿಯನ್ನು ರಿಹಾನ್‌ ಎಂದು ಗುರುತಿಸಿದೆ. ಅವನಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈತ ಕರೆ ಮಾಡಿದ್ದಲ್ಲದೆ ಸೋಷಿಯಲ್‌ ಮೀಡಿಯಾದಲ್ಲಿ ಮೆಸೇಜ್‌ ಕೂಡ ಹಾಕಿದ್ದ. ಆತನ ಡಿಪಿಯಲ್ಲಿ ಅಲ್ಲಾವು ಎಂದು ಬರೆದಿರುವ ಫೊಟೊ ಇದೆ.

ಉ. ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಮತ್ತೆ ಜೀವ ಬೆದರಿಕೆ ಕರೆ Read More »

error: Content is protected !!
Scroll to Top