ರಾಜಕೀಯ

ಕೇಂದ್ರ ಸಚಿವೆ ಡಾ. ಭಾರತಿ ಪವಾರ್ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ

ಪುತ್ತೂರು: ಕೇಂದ್ರದ ಆರೋಗ್ಯ ಖಾತೆಯ ರಾಜ್ಯ ಸಚಿವೆ ಡಾ. ಭಾರತಿ ಪವಾರ್ ಅವರು ಮಂಗಳವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಡಾ. ಭಾರತಿ ಪವಾರ್ ಅವರಿಗೆ ಬಿಜೆಪಿ ಕಚೇರಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಹೂ ನೀಡಿ ಸ್ವಾಗತಿಸಿದರು. ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯರು ಸೀರೆ, ಬಳೆ, ಕುಂಕುಮ ನೀಡಿ ಆದರಿಸಿದರು. ಇದೇ ಸಂದರ್ಭ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ನಗರಸಭೆ ಉಪಾಧ್ಯಕ್ಷೆ ಗೌರಿ ಬನ್ನೂರು, […]

ಕೇಂದ್ರ ಸಚಿವೆ ಡಾ. ಭಾರತಿ ಪವಾರ್ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ Read More »

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ಚಿಹ್ನೆ ಬ್ಯಾಟ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ  ಅರುಣ್ ಕುಮಾರ್ ಪುತ್ತಿಲ ತಮ್ಮ ಚುನಾವಣಾ ಚಿಹ್ನೆಯನ್ನು ಸೋಮವಾರ ಪ್ರಕಟಿಸಿದ್ದು, ಬ್ಯಾಟ್ ಚಿಹ್ನೆಯೆಂದು ಘೋಷಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲೇ ಉಳಿದಿದ್ದ ಅರುಣ್ ಕುಮಾರ್ ಪುತ್ತಿಲ ಯಾವ ಚಿಹ್ನೆ ಆಯ್ಕೆ ಮಾಡಲಿದ್ದಾರೆ ಎಂದು ಕುತೂಹಲವಿತ್ತು.  ಇದೀಗ ಬ್ಯಾಟ್‍ ಚಿಹ್ನೆ ಆಯ್ಕೆ ಮಾಡುವ ಮೂಲಕ ಬ್ಯಾಟ್ ಬೀಸಿ ಎದುರಾಳಿಯನ್ನು ಸೋಲಿಸುತ್ತಾರೋ ಎಂದು ಕಾದು ನೋಡಬೇಕಾಗಿದೆ.

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ಚಿಹ್ನೆ ಬ್ಯಾಟ್ Read More »

ಕಾವು ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ | ಹಿಂದು ಧರ್ಮದ ರಕ್ಷಣೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ – ಆಶಾ ತಿಮ್ಮಪ್ಪ ಗೌಡ

ಪುತ್ತೂರು: ಬಿಜೆಪಿ ಹಿಂದುತ್ವದ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದು ಹಿಂದೂ ಧರ್ಮದ ರಕ್ಷಣೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡುವಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ವಿನಂತಿಸಿದರು.  ಅವರು ಕಾವು ನನ್ಯ ವಾಸುದೇವ ಮುಡಿತ್ತಾಯರ ಮನೆಯಲ್ಲಿ ನಡೆದ ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಹಾಗೂ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸಬೇಕು – ಸಂಜೀವ ಮಟಂದೂರು ಪ್ರಧಾನಿ ನರೇಂದ್ರ ಮೋದಿ

ಕಾವು ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ | ಹಿಂದು ಧರ್ಮದ ರಕ್ಷಣೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ – ಆಶಾ ತಿಮ್ಮಪ್ಪ ಗೌಡ Read More »

ಬಲವಂತವಾಗಿ ಜೆಡಿಎಸ್​ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್

ಮಂಗಳೂರು : ಕಾಂಗ್ರೆಸ್​​ನವರು ಧಮ್ಕಿ ಹಾಕಿ ನಾಮಪತ್ರ ವಾಪಸ್​ ಪಡೆಸಿದರು ಎಂದು ಉಳ್ಳಾಲದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. ನಾನು ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೆ. ಶುಕ್ರವಾರ ನಾನು ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ವಾಪಸ್ ಬರುತ್ತಿದ್ದೆ. ಆ ಸಂದರ್ಭ ಕಾಂಗ್ರೆಸ್​ನ ಉಸ್ಮಾನ್ ಕಲ್ಲಾಪು ಸೇರಿದಂತೆ ಹಲವರು ನನ್ನನ್ನು ಕರೆದುಕೊಂಡು ಹೋದರು. ಬೆದರಿಕೆ ಹಾಗೂ ಧಮ್ಕಿ ಹಾಕಿ ನಾಮಪತ್ರ ವಾಪಸ್ ತೆಗೆಯುವಂತೆ ಸಹಿ ಹಾಕಿಸಿಕೊಂಡಿದ್ದರು. ನಾನು ಯಾವುದೇ ಆಮಿಷಗಳಿಗೆ ಒಳಗಾಗಿಲ್ಲ, ಕೇವಲ ಒತ್ತಡದಿಂದ ನಾಮಪತ್ರ

ಬಲವಂತವಾಗಿ ಜೆಡಿಎಸ್​ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್ Read More »

ಜೆಡಿಎಸ್ ಬಂಡಾಯ ಅಭ್ಯರ್ಥಿ, ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಾಸ್

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜೆಡಿಎಸ್ ನ ಮಹಮ್ಮದ್ ಅಶ್ರಫ್ ಕಲ್ಲೇಗ ಹಾಗೂ ಎಸ್‍ಡಿಪಿಐಯಿಂದ ನಾಮಪತ್ರ ಸಲ್ಲಿಸಿದ ಪಿ.ಇಬ್ರಾಹಿಂ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಮೇ 10ರಂದು ನಡೆಯುವ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಒಟ್ಟು 10 ಮಂದಿ ನಾಮಪತ್ರ ಸಲ್ಲಿಸಿದ್ದರು. ಇದರಲ್ಲಿ ಇಬ್ಬರು ಚುನಾವಣೆಯಿಂದ ಹಿಂದೆ ಸರಿದಂತಾಗಿದೆ. ಏ. 24ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದ್ದು, ಇಬ್ಬರು ಅಭ್ಯರ್ಥಿಗಳು ಸೋಮವಾರ ಖುದ್ದು ಚುನಾವಣಾಧಿಕಾರಿ ಕಚೇರಿಗೆ ಹಾಜರಾಗಿ ಉಮೇದುವಾರಿಕೆ ವಾಪಾಸು ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜೆಡಿಎಸ್ ಬಂಡಾಯ ಅಭ್ಯರ್ಥಿ, ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಾಸ್ Read More »

ಏ. 25 -26 : ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ

ಕೇಂದ್ರದ 98, ರಾಜ್ಯದ 150ಕ್ಕೂ ಹೆಚ್ಚು ನಾಯಕರು ಭಾಗಿ ಬೆಂಗಳೂರು : ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಇದೀಗ ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ಬಿಜೆಪಿಯಿಂದ ರಾಜ್ಯದ 224 ವಿಧಾನಸಭೆ ಕ್ಷೇತ್ರದಲ್ಲಿ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದ್ದು, 98

ಏ. 25 -26 : ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ Read More »

ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ

ಪ್ರಸ್ತುತ ಕಣದಲ್ಲಿ ಒಟ್ಟು 3130 ಸ್ಪರ್ಧಿಗಳು ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಮೇ.10 ರಂದು ಮತದಾನ ನಡೆಯಲಿದ್ದು, 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಈಗಾಗಲೇ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, ಉಮೇದುವಾರಿಕೆ ವಾಪಸ್​ ಪಡೆಯಲು ಇಂದೇ (ಏ.24) ಕೊನೆಯ ದಿನವಾಗಿದೆ. ಅಧಿಕೃತವಾಗಿ ಕಣದಲ್ಲಿ ಉಳಿಯುವವರು ಯಾರು ಎಂಬುದು ಇಂದು ಸ್ಪಷ್ಟವಾಗಲಿದೆ. ಪ್ರಸ್ತುತ ಕಣದಲ್ಲಿ ಒಟ್ಟು 3130 ಅಭ್ಯರ್ಥಿಗಳಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಎಎಪಿ ಹಾಗೂ ಪ್ರಾದೇಶಿಕ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರವಾಗಿ ಸರ್ಧಿಸಿರುವ ಅಭ್ಯರ್ಥಿಗಳ

ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ Read More »

ಲೋಕಾಯುಕ್ತ ದಾಳಿ : ಬೆಳ್ತಂಗಡಿಯ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆ

ಬೆಂಗಳೂರು : ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ದಾಳಿ ನಡೆದಿದ್ದು ಹಲವು ಅಧಿಕಾರಿಗಳ ಮನೆಯಲ್ಲಿ ಚಿನ್ನ, ನಗದು, ಕಡತ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಐಟಿ ದಾಳಿ ನಡೆದಿದ್ದು ಬೆಳ್ತಂಗಡಿಯ ಮಾಜಿ ಸಚಿವ, ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿರುವ ಗಂಗಾಧರ ಗೌಡ

ಲೋಕಾಯುಕ್ತ ದಾಳಿ : ಬೆಳ್ತಂಗಡಿಯ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆ Read More »

ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪರ ರಮ್ಯಾ ಪ್ರಚಾರ ಶುರು

ಕೊಂಚ ಸಮಯದ ಬಿಡುವಿನ ಬಳಿಕ ಸಕ್ರಿಯ ರಾಜಕಾರಣಕ್ಕೆ ಬಂದ ಕನ್ನಡ ನಟಿ ಬೆಂಗಳೂರು : ಕನ್ನಡ ನಟಿ, ಮಾಜಿ ಸಂಸದೆ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಮತ್ತೆ ಸಕ್ರಿಯ ರಾಜಕೀಯಕ್ಕೆ ಬಂದಿದ್ದಾರೆ. ಇಂದು ಅವರು ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಇತ್ತೀಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದ ರಮ್ಯಾ ಮುಂದಿನ ಕೆಲ ದಿನಗಳ ಕಾಲ ಮಂಡ್ಯದಲ್ಲಿ ಬಿರುಸಿನಿಂದ ಕೈ ಅಭ್ಯರ್ಥಿಗಳ ಪರವಾಗಿ ಪುಚಾರ ನಡೆಸಲಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್

ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪರ ರಮ್ಯಾ ಪ್ರಚಾರ ಶುರು Read More »

ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಸಂಪತ್ತಿನ ದಾಖಲೆ ಶೋಧ ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿ ಅಕ್ರಮ ಆಸ್ತಿ ಗಳಿಸಿರುವ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ.ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಯುತ್ತಿದೆ. ಯಲಹಂಕದಲ್ಲಿರುವ ಗಂಗಧರಯ್ಯ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಿವೃತ್ತ ಡಿಸಿಎಫ್ ನಾಗರಾಜ್ ಅವರ ಶಿವಮೊಗ್ಗದ ಮನೆ ಹಾಗೂ‌

ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ Read More »

error: Content is protected !!
Scroll to Top