ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ | ಪ್ರಿಯಾಂಕ ಖರ್ಗೆಯನ್ನು ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿಯಿಂದ ಪ್ರತಿಭಟನೆ
ಪುತ್ತೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಕೈವಾಡವಿರುವುದನ್ನು ಆರೋಪಿಸಿ ಆರೋಪಿಸಿ ಪುತ್ತೂರು ಬಿಜೆಪಿಯಿಂದ ಬಿಜೆಪಿ ಕಚೇರಿ ಬಳಿ ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದಿಂದ ತುಂಬಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖಗೆ ಅವರ ಕೈವಾಡ ಇರುವ ಬಗ್ಗೆ, ಡೆತ್ ನೋಟ್ ನಲ್ಲಿ ಉಲ್ಲೇಖವಿರುವುದರಿಂದ ಕೂಡಲೇ ಸಚಿವ ಪ್ರಿಯಾಂಕ ಖರ್ಗೆಯವರನ್ನು ಸಂಪುಟದಿಂದ ವಜಾಗೊಳಿಸಿ ಅವರ […]