ಕಿಶೋರ್ ಕುಮಾರ್ ಅವರಿಗೆ ಸಾರ್ವಜನಿಕ ಅಭಿನಂದನೆ | ತೆರೆದ ವಾಹನದಲ್ಲಿ ವಿಜಯೋತ್ಸವ
ಪುತ್ತೂರು: ವಿಧಾನಪರಿಷತ್ ಉಪಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಿಶೋರ್ ಕುಮಾರ್ ಅವರಿಗೆ ಸಾರ್ವಜನಿಕ ಅಭಿನಂದನೆ ಹಿನ್ನಲೆಯಲ್ಲಿ ವಿಜಯೋತ್ಸವ ಮೆರವಣಿಗೆ ಪುತ್ತೂರಿನಲ್ಲಿ ಶನಿವಾರ ನಡೆಯಿತು. ದರ್ಬೆ ವೃತ್ತದಿಂದ ತೆರೆದ ವಾಹನದಲ್ಲಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಕರೆದೊಯ್ಯುವ ಮೂಲಕ ವಾಹನ ಮೆರವಣಿಗೆ ಮುಖ್ಯ ರಸ್ತೆಯಿಂದ ಸಾಗಿ ಬಳಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿತು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಬಿಜೆಪಿ ಪ್ರಮುಖರು ಪಾಲ್ಗೊಂಡಿದ್ದರು.
ಕಿಶೋರ್ ಕುಮಾರ್ ಅವರಿಗೆ ಸಾರ್ವಜನಿಕ ಅಭಿನಂದನೆ | ತೆರೆದ ವಾಹನದಲ್ಲಿ ವಿಜಯೋತ್ಸವ Read More »









