ರಾಜಕೀಯ

ಕಾಂಗ್ರೆಸ್‌ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ‘ಗ್ಯಾಂಗ್‌ಸ್ಟರ್‌’ ಸ್ನೇಹಿತ ಗಡಿಯಾ ಹೆಸರು : ಶೋಭಾ ಕರಂದ್ಲಾಜೆ

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ಉತ್ತರ ಪ್ರದೇಶದ ಇಮ್ರಾನ್‌ ಪ್ರತಾಪ್‌ ಗಡಿಯಾ ಹೆಸರಿದ್ದು, ಈತ ಇತ್ತೀಚೆಗೆ ಹತ್ಯೆಯಾದ ‘ಗ್ಯಾಂಗ್‌ಸ್ಟರ್‌’ ಅತೀಕ್ ಅಹ್ಮದ್‌ನ ಆತ್ಮೀಯ ಸ್ನೇಹಿತ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ದೂರಿದರು. ‘ಈ ಮೂಲಕ ಕಾಂಗ್ರೆಸ್‌ ಪಕ್ಷವು ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ದೇಶ ದ್ರೋಹಿಗಳು ಮತ್ತು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.‘ಅತೀಕ್ ಅಹ್ಮದ್‌ ತನ್ನ ಗುರುವೆಂದು ಹೇಳುತ್ತಿದ್ದುದು […]

ಕಾಂಗ್ರೆಸ್‌ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ‘ಗ್ಯಾಂಗ್‌ಸ್ಟರ್‌’ ಸ್ನೇಹಿತ ಗಡಿಯಾ ಹೆಸರು : ಶೋಭಾ ಕರಂದ್ಲಾಜೆ Read More »

ಪುತ್ತೂರು ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಬ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಗುರುವಾರ ನಾಮಪತ್ರ ಸಲ್ಲಿಸಿದರು. ಬುಧವಾರ ತನ್ನ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸುವ ಪ್ರಕಟಣೆ ನೀಡಿದ್ದರು. ಯಾವುದೋ ಕಾರಣಗಳಿಂದ ನಾಮಪತ್ರ ಸಲ್ಲಿಕೆಯಾಗಿಲ್ಲ.  ಗುರುವಾರ ಬೆಳಿಗ್ಗೆ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಐ.ಸಿ.ಕೈಲಾಸ್, ಮಹಿಳಾ ಪದಾಧಿಕಾರಿಗಳಾದ ಝೊಹರಾ ನಿಸಾರ್, ಪದ್ಮಾಮಣಿ ಉಪಸ್ಥಿತರಿದ್ದರು.

ಪುತ್ತೂರು ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ Read More »

ಬಿಜೆಪಿಯನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ | ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ತೇಜಸ್ವಿ ಸೂರ್ಯ ಕರೆ

ಪುತ್ತೂರು: ಈ ಬಾರಿ ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರನ್ನು 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಕರೆ ನೀಡಿದರು. ಅವರು ಗುರುವಾರ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದರು. ಪುತ್ತೂರು ವಿಧಾನಸಭಾ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಜಿ.ಪಂ. ಸದಸ್ಯರಾಗಿ, ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳುವ

ಬಿಜೆಪಿಯನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ | ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ತೇಜಸ್ವಿ ಸೂರ್ಯ ಕರೆ Read More »

ಮೋದಿ ಉಪನಾಮ ಅವಹೇಳನ : ತಡೆಯಾಜ್ಞೆ ನೀಡಲು ಕೋರ್ಟ್ ನಕಾರ

ಅರ್ಜಿ ವಜಾಗೊಳಿಸಿದ ನ್ಯಾಯಾಲಯ ಸೂರತ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮೋದಿ ಉಪನಾಮದ ಅವಹೇಳನಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂರತ್ ಕೋರ್ಟ್ ನಿರಾಕರಿಸಿದೆ.ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಈ ಹಿಂದೆ ರಾಹುಲ್ ಗಾಂಧಿಯವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದಕ್ಕೆ ನ್ಯಾಯಾಲಯ ನಿರಾಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ. ಏಪ್ರಿಲ್ 3 ರಂದು ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದ ರಾಹುಲ್ ಗಾಂಧಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತ್ತು. ಸೂರತ್‌

ಮೋದಿ ಉಪನಾಮ ಅವಹೇಳನ : ತಡೆಯಾಜ್ಞೆ ನೀಡಲು ಕೋರ್ಟ್ ನಕಾರ Read More »

ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಬೃಹತ್ ಮೆರವಣಿಗೆಯಲ್ಲಿ ಸಾಗಿ ಅಲ್ಲಿಂದ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಜಿಲ್ಲಾ ಸಹಪ್ರಭಾರಿಗೋಪಾಲಕೃಷ್ಣ ಹೇರಳೆ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಉಪಸ್ಥಿತರಿದ್ದರು.

ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ Read More »

ಬಿಜೆಪಿ ಮೆರವಣಿಗೆಯಲ್ಲಿ ಕೇಸರಿ ರಂಗು | ಸ್ಟಾರ್ ಪ್ರಚಾರಕರಾಗಿ ತೇಜಸ್ವಿ ಸೂರ್ಯ, ನಟಿ ಶೃತಿ ಭಾಗಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಗುರುವಾರ ಬೃಹತ್ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಬೃಹತ್ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರೊಂದಿಗೆ ದೇವಸ್ಥಾನದ ವಠಾರದಿಂದ ಹೊರಟು ಮುಖ್ಯರಸ್ತೆಯಾಗಿ ಬಸ್ ನಿಲ್ದಾಣದ ತನಕ ಸಾಗಿ ಅಲ್ಲಿಂದ ಕೋರ್ಟ್ ರಸ್ತೆಯಾಗಿ ಕಿಲ್ಲೇ ಮೈದಾನದಲ್ಲಿ ಸಮಾಪನಗೊಂಡಿತು. ಬಳಿಕ ಕಿಲ್ಲೇ ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆಯಿತು. ಕೇಸರಿ ರಂಗು : ಬೃಹತ್ ಮೆರವಣಿಗೆಯಲ್ಲಿ ಬಿಜೆಪಿ ಮುಖಂಡರಿಂದ ಹಿಡಿದು

ಬಿಜೆಪಿ ಮೆರವಣಿಗೆಯಲ್ಲಿ ಕೇಸರಿ ರಂಗು | ಸ್ಟಾರ್ ಪ್ರಚಾರಕರಾಗಿ ತೇಜಸ್ವಿ ಸೂರ್ಯ, ನಟಿ ಶೃತಿ ಭಾಗಿ Read More »

ಟಿಕೇಟ್ ಘೋಷಣೆಗೆ ಮೊದಲಿನ ಪುತ್ತಿಲ ಹೇಳಿಕೆ ವೈರಲ್ | ಹೇಳಿಕೆಯಂತೆ ನಡೆಯದ ಪುತ್ತಿಲ ಎಂದು ಕುಟುಕಿದ ನೆಟ್ಟಿಗರು

ಪುತ್ತೂರು: ಬಿಜೆಪಿ ಟಿಕೇಟ್ ಘೋಷಣೆಗೆ ಮೊದಲು ಅರುಣ್ ಕುಮಾರ್ ಪುತ್ತಿಲ ಅವರು ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. “ನಾನು ಸಂಘ ಪರಿವಾರದ ಕಾರ್ಯಕರ್ತ. ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡುವವರನ್ನು ಗೆಲ್ಲಿಸುವುದು ಜವಾಬ್ದಾರಿ…” ಎಂಬ ಹೇಳಿಕೆ ಇದೀಗ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಇದೇನು ಹೇಳುವುದೊಂದು, ಮಾಡುವುದೊಂದು” ಎಂಬಂತಾಗಿದೆಯಲ್ಲವೇ? ಬಿಜೆಪಿ ಹೈಕಮಾಂಡ್ ಟಿಕೇಟ್ ನೀಡಿರುವ ವ್ಯಕ್ತಿಗೆ ಬೆಂಬಲ ನೀಡದೇ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದು, ಸ್ವತಃ ಬಿಜೆಪಿ ಪಕ್ಷದ ಅಭ್ಯರ್ಥಿ ವಿರುದ್ಧವೇ ಯುದ್ಧಕ್ಕೆ

ಟಿಕೇಟ್ ಘೋಷಣೆಗೆ ಮೊದಲಿನ ಪುತ್ತಿಲ ಹೇಳಿಕೆ ವೈರಲ್ | ಹೇಳಿಕೆಯಂತೆ ನಡೆಯದ ಪುತ್ತಿಲ ಎಂದು ಕುಟುಕಿದ ನೆಟ್ಟಿಗರು Read More »

ಸಿದ್ದರಾಮಯ್ಯನವರಿಗಿಂತ ಅವರ ಪತ್ನಿ ಹೆಚ್ಚು ಶ್ರೀಮಂತೆ

ಮಾಜಿ ಮುಖ್ಯಮಂತ್ರಿ ಬಳಿ 9.58 ಕೋ.ರೂ. ಚರಾಸ್ತಿ, 9.43 ಕೋ.ರೂ. ಸ್ಥಿರಾಸ್ತಿ ಮೈಸೂರು : ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಿಂತ ಅವರ ಪತ್ನಿ ಪಾರ್ವತಿಯವರೇ ಹೆಚ್ಚು ಶ್ರೀಮಂತೆಯಾಗಿದ್ದಾರೆ.ನಾಮಪತ್ರದ ಜತೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಸಿದ್ದರಾಮಯ್ಯ ಅವರು ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆಸಿದ್ದರಾಮಯ್ಯ ಅವರು 9.58 ಕೋಟಿ ಚರಾಸ್ತಿ, 9.43 ಕೋಟಿ ಸ್ಥಿರಾಸ್ತಿ ಹೊಂದಿದ್ದರೆ, ಅವರ ಪತ್ನಿ 11.26 ಕೋಟಿ ರೂ. ಚರಾಸ್ತಿ, 19.56 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. 1.29 ಕೋಟಿ

ಸಿದ್ದರಾಮಯ್ಯನವರಿಗಿಂತ ಅವರ ಪತ್ನಿ ಹೆಚ್ಚು ಶ್ರೀಮಂತೆ Read More »

ಏ.27 ರಂದೇ ಮೋದಿ ರೋಡ್‌ ಶೋ ?..

ಆಡಳಿತ ವಿರೋಧಿ ಅಲೆ ಪ್ರಭಾವ ಕಡಿಮೆ ಮಾಡಲು ಬಿಜೆಪಿ ತಂತ್ರಗಾರಿಕೆ ರಾಜ್ಯಕ್ಕೆ ಬರಲಿದ್ದಾರೆ ಅಮಿತ್‌ ಶಾ, ಯೋಗಿ ಆದಿತ್ಯನಾಥ್‌, ಸ್ಮೃತಿ ಇರಾನಿ… ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಏ.27 ರಂದು ರಾಜ್ಯದ ಕೆಲವೆಡೆ ಚುನಾವಣಾ ಪ್ರಚಾರ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶುಕ್ರವಾರ ರಾಜ್ಯಕ್ಕೆ ಆಗಮಿಸಿ ಚುನಾವಣಾ ತಯಾರಿ ಬಗ್ಗೆ ಮಹತ್ವದ ಚರ್ಚೆಗಳನ್ನು ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಸಮಾವೇಶಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಬಿಜೆಪಿ

ಏ.27 ರಂದೇ ಮೋದಿ ರೋಡ್‌ ಶೋ ?.. Read More »

ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ

ಈಶ್ವರಪ್ಪ ಮಗನಿಗಿಲ್ಲ ಟಿಕೆಟ್‌ ಬೆಂಗಳೂರು : ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳ ನಾಲ್ಕನೇ ಮತ್ತು ಅಂತಿಮ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ.ಇತ್ತೀಚಿಗಷ್ಟೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಾವು ಪ್ರತಿನಿಧಿಸುತ್ತಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ತಮ್ಮ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಅವರ ನಿರೀಕ್ಷೆ ಹುಸಿಯಾಗಿದೆ.ಈ ಮುಂಚೆ ಮೂರು ಹಂತಗಳಲ್ಲಿ 222 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದ ಬಿಜೆಪಿ ಶಿವಮೊಗ್ಗ ಮತ್ತು ಮಾನ್ವಿ

ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ Read More »

error: Content is protected !!
Scroll to Top