ರಾಜಕೀಯ

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ

ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ ಪುಡಿ ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ವಾಪಾಸ್ ತೆರಳುತ್ತಿದ್ದಾಗ ರಕ್ಷಿತ್ ಶಿವರಾಂ ರೋಡ್ ಶೋ […]

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾ ಕಚೇರಿ ಉದ್ಘಾಟನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿ ಸೋಮವಾರ ದರ್ಬೆ ರೈ ಎಸ್ಟೇಟ್ ಬಿಲ್ಡಿಂಗ್ ನಲ್ಲಿ ಉದ್ಘಾಟನೆಗೊಂಡಿತು. ಗಣಹೋಮದೊಂದಿಗೆ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕಿ  ಶಕುಂತಳಾ ಶೆಟ್ಟಿ,  ಕಾಂಗ್ರೆಸ್ ಮುಖಂಡರಾದ ಎಂಎಸ್ ಮುಹಮ್ಮದ್, ಚಂದ್ರಹಾಸ ಶೆಟ್ಟಿ  ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಡಾ ರಾಜಾರಾಂ , ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಂಬಿ ವಿಶ್ವನಾಥ ರೈ,  ಈಶ್ವರ ಭಟ್ ಪಂಜಿಗುಡ್ಡೆ, ಮುರಳೀಧರ ರೈ ಮಠಂತಬೆಟ್ಟು

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾ ಕಚೇರಿ ಉದ್ಘಾಟನೆ Read More »

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ವಿಧಾನಸಭಾ ಕೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಪಕ್ಷೇತರನಾಗಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ನೀಡಿದರು. ಪುತ್ತೂರಿನ ದರ್ಬೆಯಿಂದ ಮಿನಿ ವಿಧಾನಸೌಧದ ವರೆಗೆ ಮೆರವಣಿಗೆಯ ಮೂಲಕ ತೆರಳಿದ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಕಿಕ್ಕಿರಿದ ಜನಸ್ತೋಮ

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ Read More »

ಆಮ್ ಆದ್ಮಿಯಿಂದ ಡಾ. ವಿಶು ಕುಮಾರ್ ನಾಮಪತ್ರ ಸಲ್ಲಿಕೆ

ಪುತ್ತೂರು: ಆಮ್ ಆದ್ಮಿ ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ| ವಿಶುಕುಮಾರ್ ಗೌಡ ಸೋಮವಾರ ನಾಮಪತ್ರ ಸಲ್ಲಿಸಿದರು. ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಸಹಾಯಕ ಆಯುಕ್ತ, ಚುನಾವಣಾಧಿಕಾರಿ ಗಿರೀಶ್ ನಂದನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಡಾ. ವಿಶುಕುಮಾರ್ ಗೌಡ ಅವರು ಕೃಷಿ ವಿಜ್ಞಾನಿಯಾಗಿ ಕಾರ್ಯನಿರ್ವಹಿಸಿದ್ದರು. ನಾಮಪತ್ರ ಸಲ್ಲಿಕೆ ಸಂದರ್ಭ ಡಾ. ವಿಶುಕುಮಾರ್ ಅವರ ಪತ್ನಿ ಡಾ. ವೀಣಾ ಟಿ.ಎಚ್., ದ.ಕ. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪುರುಷೋತ್ತಮ್ ಗೌಡ ಕೋಲ್ಪೆ, ಚುನಾವಣಾ ಉಸ್ತುವಾರಿ ಜನಾರ್ದನ್ ಬಂಗೇರ, ಮಾಜಿ

ಆಮ್ ಆದ್ಮಿಯಿಂದ ಡಾ. ವಿಶು ಕುಮಾರ್ ನಾಮಪತ್ರ ಸಲ್ಲಿಕೆ Read More »

ಪುತ್ತಿಲ ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ | ದರ್ಬೆಯಲ್ಲಿ ಸಾವಿರಾರು ಸಂಖ್ಯೆಯ ಜಮಾಯಿಸಿದ ಕಾರ್ಯಕರ್ತರು | ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಇನ್ನು ಕೆಲವೇ ಕ್ಷಣಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಮೊದಲು ದರ್ಬೆಯಿಂದ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಬೃಹತ್ ಮೆರವಣಿಗೆ ಸಾಗಿ ಬರಲಿದೆ. ದರ್ಬೆ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಮೆರವಣಿಗೆಗೆ ಮೊದಲು ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.

ಪುತ್ತಿಲ ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ | ದರ್ಬೆಯಲ್ಲಿ ಸಾವಿರಾರು ಸಂಖ್ಯೆಯ ಜಮಾಯಿಸಿದ ಕಾರ್ಯಕರ್ತರು | ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ Read More »

ದಶಕಗಳ ಬಿಜೆಪಿ ನಂಟನ್ನು ಕಡಿದುಕೊಂಡು ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್

ಬೆಂಗಳೂರು : ಬಿಜೆಪಿ ಟಿಕೆಟ್ ಸಿಗದೆ ಹತಾಶರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಇಂದು ವಿಧ್ಯುಕ್ತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ದಶಕಗಳ ಬಿಜೆಪಿ ನಂಟನ್ನು ಅಧಿಕೃತವಾಗಿ ಕಡಿದುಕೊಂಡಿದ್ದಾರೆ.ನಿನ್ನೆ ರಾತ್ರಿಯೇ ಬಿಜೆಪಿ ಕಚೇರಿಗೆ ಆಪ್ತ ಸಹಾಯಕರ ಮೂಲಕ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ರವಾನಿಸಿದ್ದ ಶೆಟ್ಟರ್ ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷ ಸೇರಿದರು. ಈ ಮೂಲಕ ತಮ್ಮ ಮೂರು ದಶಕಗಳ ಬಿಜೆಪಿಯೊಂದಿಗಿನ ಸಂಬಂಧಕ್ಕೆ ಜಗದೀಶ್ ಶೆಟ್ಟರ್ ವಿದಾಯ ಹಾಡಿದ್ದಾರೆ.

ದಶಕಗಳ ಬಿಜೆಪಿ ನಂಟನ್ನು ಕಡಿದುಕೊಂಡು ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್ Read More »

ಹೋಟೆಲ್‌ ಊಟ-ತಿಂಡಿ ಖರ್ಚು ಅಭ್ಯರ್ಥಿ ಲೆಕ್ಕದಲ್ಲಿ ದಾಖಲೆ

ಬೆಂಗಳೂರು : ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಅಕ್ರಮಗಳಿಗೆ ಸಹಕರಿಸದಂತೆ ಹೋಟೆಲ್ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಗುಂಪು ಗುಂಪಾಗಿ ಹೋಟೆಲ್‌ಗಳಿಗೆ ಭೇಟಿ ನೀಡಿದಾಗ ಮತ್ತು ಅಭ್ಯರ್ಥಿಗಳ ಪರವಾಗಿ ಯಾರೇ ಚೀಟಿ ಅಥವಾ ಟೋಕನ್ ನೀಡಿ ಊಟ, ಉಪಹಾರ ನೀಡುವಂತೆ ಕೋರಿದಲ್ಲಿ ಅಂತಹವರ ಮಾಹಿತಿಯನ್ನು ಹೋಟೆಲ್‌ ಮಾಲೀಕರು ಜಿಲ್ಲಾಡಳಿತಕ್ಕೆ ನೀಡಬೇಕಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪ್ರಚಾರಕ್ಕೆ ತಗಲುವ ಎಲ್ಲ ವೆಚ್ಚಗಳನ್ನು ಚುನಾವಣಾ ವೆಚ್ಚ ವೀಕ್ಷಕರು

ಹೋಟೆಲ್‌ ಊಟ-ತಿಂಡಿ ಖರ್ಚು ಅಭ್ಯರ್ಥಿ ಲೆಕ್ಕದಲ್ಲಿ ದಾಖಲೆ Read More »

ಜಗದೀಶ್‌ ಶೆಟ್ಟರ್‌ ಇಂದು ಕಾಂಗ್ರೆಸ್‌ ಸೇರುವ ಸಾಧ್ಯತೆ

ಟಿಕೆಟ್‌ ಸಿಗದೆ ಬಿಜೆಪಿಗೆ ಗುಡ್‌ಬೈ ಹೇಳಿದ ಮಾಜಿ ಮುಖ್ಯಮಂತ್ರಿ ಬೆಂಗಳೂರು : ಟಿಕೆಟ್ ಸಿಗದ ನಿರಾಶೆಯಲ್ಲಿ ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಹೊಣೆಯನ್ನು ಲಿಂಗಾಯಿತ ನಾಯಕರಾದ ಎಂ.ಬಿ. ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಅವರಿಗೆ ನೀಡಲಾಗಿದೆ. ಭಾನುವಾರ ತಡ ರಾತ್ರಿಯವರೆಗೂ ಶಾಮನೂರ ಶಿವಶಂಕರಪ್ಪ ಅವರ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್

ಜಗದೀಶ್‌ ಶೆಟ್ಟರ್‌ ಇಂದು ಕಾಂಗ್ರೆಸ್‌ ಸೇರುವ ಸಾಧ್ಯತೆ Read More »

ಅತೀಕ್, ಅಶ್ರಫ್ ಹತ್ಯೆ ಪ್ರಕರಣ : ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ ಸಿಎಂ ಯೋಗಿ

ಪ್ರಯಾಗರಾಜ್ : ಗುಂಡಿನ ದಾಳಿಯಲ್ಲಿ ಮಾಫಿಯಾ ಡಾನ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಸಾವನ್ನಪ್ಪಿದ ನಂತರ ಉತ್ತರ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಗಮವಾಗಿಡಲು ಯೋಗಿ ಸಂಪೂರ್ಣ ಗಮನ ಹರಿಸುತ್ತಿದ್ದಾರೆ. ಯುಪಿ ಡಿಜಿಪಿ ಸೇರಿದಂತೆ ಎಲ್ಲಾ ಉನ್ನತ ಅಧಿಕಾರಿಗಳಿಗೆ ಪ್ರಯಾಗ್‌ರಾಜ್‌ಗೆ ಹೋಗುವಂತೆ ಸೂಚಿಸಿದ್ದಾರೆ. ಅಲ್ಲದೆ ಪ್ರತಿ 2

ಅತೀಕ್, ಅಶ್ರಫ್ ಹತ್ಯೆ ಪ್ರಕರಣ : ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ ಸಿಎಂ ಯೋಗಿ Read More »

ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕೋಲಾರ : ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಷ್ಟೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯಲ್ಲಿ ರಾಜ್ಯ ಕಾಂಗ್ರೆಸ್ ಆಯೋಜಿಸಿದ ಜೈ ಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ. ಪಕ್ಷಕ್ಕೆ ಬಹುಮತ ಬಂದಾಗ ಸಿಎಂ ಬಗ್ಗೆ ಶಾಸಕರು ನಿರ್ಧರಿಸುತ್ತಾರೆ. ಡಬಲ್​ ಇಂಜಿನ್​ ಸರ್ಕಾರ

ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ Read More »

error: Content is protected !!
Scroll to Top