ಪುತ್ತೂರು

ಕುರಿಯ ಏಳ್ನಾಡುಗುತ್ತು ಶ್ರೀ ಮಹಾಲಿಂಗೇಶ್ವರ ದೇವರ ಆರಾಧನ ಸಮಿತಿ ರಚನೆ

ಅಧ್ಯಕ್ಷರಾಗಿ ಮೋಹನ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ಕೆ. ರಾಜೇಂದ್ರ ಪ್ರಸಾದ್ ಶೆಟ್ಟಿ ನೇಮಕ ಪುತ್ತೂರು: ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನ ಸಮಿತಿಯ ಕುರಿಯ ಏಳ್ನಾಡುಗುತ್ತಿನ ವಾರ್ಷಿಕ ಮಹಾಸೇವೆ ಅಧ್ಯಕ್ಷ ಚೆನ್ನಪ್ಪ ರೈ ಬಳಜ್ಜ ಇವರ ನೇತೃತ್ವದಲ್ಲಿ ಸಾಂಗವಾಗಿ ಜರುಗಿತು. ಇದೇ ಸಂದರ್ಭದಲ್ಲಿ 2025ನೇ ಸಾಲಿನ ವರದಿ ಮಂಡನೆ, ಅನುಮೋದನೆಗಳು ನಡೆದವು. ಸಮಿತಿಯ ಪುನಾರಚನೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಮೋಹನ್ ರೈ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್’ನ ಅಧ್ಯಕ್ಷ ಮತ್ತು G5 Nexus […]

ಕುರಿಯ ಏಳ್ನಾಡುಗುತ್ತು ಶ್ರೀ ಮಹಾಲಿಂಗೇಶ್ವರ ದೇವರ ಆರಾಧನ ಸಮಿತಿ ರಚನೆ Read More »

ಮಯೂರ ಜಂಕ್ಷನ್ ರಾಜಕಾಲುವೆ ‌ನಿರ್ಮಾಣದಲ್ಲಿ ಲೋಪ: ಬಿಲ್ ಸ್ಥಗಿತಕ್ಕೆ ಪುಡಾ ಅಧ್ಯಕ್ಷರಿಂದ ‌ಸೂಚನೆ

ಪುತ್ತೂರು: ಮಯೂರ ಜಂಕ್ಷನ್ ಸಮೀಪದಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿರುವ ರಾಜಕಾಲುವೆ ‌ಡ್ರೈನೇಜ್ ಮತ್ತು ಸ್ಲಾಬ್ ‌ಕಾಮಗಾರಿಯಲ್ಲಿ ಅಕ್ರಮದ ವಾಸನೆ ಬಡಿದಿದ್ದು, ಪುಡಾ ಅಧ್ಯಕ್ಷ ಅಮಳ ರಾಮಚಂದ್ರ ಭಟ್ ಅವರಿಗೆ ತಕ್ಷಣವೇ ಈ ಕೆಲಸದ ಬಿಲ್ ಸ್ಥಗಿತ ಮಾಡುವಂತೆ ನಗರಸಭೆಗೆ ಸೂಚಿಸಲಾಗಿದೆ. ಆರಂಭದಿಂದಲೂ ಈ ಕಾಮಗಾರಿಯ ಗುಣಮಟ್ಟದ ಬಗ್ಗೆ ರಾಮಚಂದ್ರ ಅವರು ನಿರಂತರ ಪರಿಶೀಲನೆ ನಡೆಸುತ್ತಿದ್ದರು. ಕಾಮಗಾರಿ ಒಂದು ನಡೆಸುವ ವಾರದ ಮೊದಲು, ಕಬ್ಬಿಣದ ಸರಳುಗಳನ್ನು ಸರಿಯಾಗಿ ಕಟ್ಟಿರುವುದು ಮತ್ತು ಹಲಿಗೆಗಳ ನಡುವಿನ ಸೀಳುಗಳನ್ನು

ಮಯೂರ ಜಂಕ್ಷನ್ ರಾಜಕಾಲುವೆ ‌ನಿರ್ಮಾಣದಲ್ಲಿ ಲೋಪ: ಬಿಲ್ ಸ್ಥಗಿತಕ್ಕೆ ಪುಡಾ ಅಧ್ಯಕ್ಷರಿಂದ ‌ಸೂಚನೆ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಚಾಲನೆ

ಸವಣೂರು: ಎಸ್ ಎಸ್ ಎಲ್ ಸಿ 2026 ಪರೀಕ್ಷಾ ಕೇಂದ್ರವಾದ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಕೆ. ಅವರು ದೀಪ ಪ್ರಜ್ವಲನೆಯ ಮೂಲಕ ಪರೀಕ್ಷೆಗೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪರೀಕ್ಷಾ ಅಧೀಕ್ಷರ ಶಿವಕುಮಾರ್, ಉಪಧೀಕ್ಷಕಿ ಲಕ್ಷ್ಮೀ, ಪ್ರಶ್ನೆಪತ್ರಿಕೆ ಅಧೀಕ್ಷಕ ಸತೀಶ್ ಮತ್ತು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ಉಪಸ್ಥಿತರಿದ್ದರು.

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಚಾಲನೆ Read More »

ಅಕ್ಷಯ ಕಾಲೇಜಿನಲ್ಲಿ ವಾಣಿಜ್ಯ ವ್ಯೂಹ ಭಿತ್ತಿಪತ್ರ ಅನಾವರಣ

ಸಂಪ್ಯ:ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ‘ವಾಣಿಜ್ಯ ವ್ಯೂಹ’ ಎಂಬ ಶಿರೋನಾಮೆಯಲ್ಲಿ ಭಿತ್ತಿಪತ್ರದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಕೇಶವ್ ಅಮೈ (ಆಡಳಿತ ನಿರ್ದೇಶಕರು ಎಸ್.ಆರ್.ಕೆ. ಲ್ಯಾಡರ್ಸ್ ಪುತ್ತೂರು) ಇವರು ಉದ್ಘಾಟಿಸಿ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಎಲ್ಲಿದ್ದರು ತಮ್ಮ ಬದುಕನ್ನು ರೂಪಿಸುವಲ್ಲಿ ಯಶಸ್ವಿಯಾಗುತ್ತಾರೆ. ಸಿಕ್ಕ ಅವಕಾಶಗಳನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಂಡು ಜೀವನದಲ್ಲಿ ಯಶಸ್ವಿಯನ್ನು ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಮುಖ್ಯ ಅತಿಥಿ ಡಾ. ಅಕ್ಷಯ್ (ಕಾರ್ಯದರ್ಶಿ ಅಕ್ಷಯ ಸಮೂಹ

ಅಕ್ಷಯ ಕಾಲೇಜಿನಲ್ಲಿ ವಾಣಿಜ್ಯ ವ್ಯೂಹ ಭಿತ್ತಿಪತ್ರ ಅನಾವರಣ Read More »

ಯುಗಾದಿ ಪ್ರಯುಕ್ತ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ‌ವಿಶೇಷ ಆಫರ್

ಪುತ್ತೂರು: ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದೆ. ಹಳದಿ ಟ್ಯಾಗ್ ಹೊಂದಿರುವ ವಿಶೇಷ ಆಭರಣಗಳ ಮೇಕಿಂಗ್ ಶುಲ್ಕಗಳ ಮೇಲೆ 50%ವರೆಗೆ ರಿಯಾಯಿತಿಯೊಂದಿಗೆ ಖರೀದಿ ಮಾಡುವ ಅವಕಾಶವನ್ನು ಪಡೆಯಬಹುದಾಗಿದೆ. ಪುತ್ತೂರು, ಸುಳ್ಯ, ಹಾಸನ, ಕುಶಾಲನಗರ ಹಾಗೂ ಮೂಡಬಿದ್ರೆಯ ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದ್ದು, ಗ್ರಾಹಕರು ಹಬ್ಬದ ಸಂಭ್ರಮವನ್ನು ಹೊಸ ಆಭರಣಗಳೊಂದಿಗೆ ಆಚರಿಸಲು ಉತ್ತಮ ಅವಕಾಶ ಕಲ್ಪಿಸಲಾಗಿದೆ. ಈ ಕೊಡುಗೆ ಮಾರ್ಚ್ 18ರಿಂದ 23ರವರೆಗೆ ಮಾತ್ರ

ಯುಗಾದಿ ಪ್ರಯುಕ್ತ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ‌ವಿಶೇಷ ಆಫರ್ Read More »

ಭಾರಿ ಗಾಳೆಮಳೆಗೆ ಧರಾಶಾಯಿಯಾದ ನೆಲ್ಲಿಕಟ್ಟೆಯ ಅತಿ ಎತ್ತರದಲ್ಲಿದ್ದ ರಾಷ್ಟ್ರಧ್ವಜ

ರಾಜ್ಯದ ಮೂರನೇ ಅತಿ ಎತ್ತರದ ಧ್ವಜಸ್ತಂಭದಲ್ಲಿ ಹಾರಾಡುತ್ತಿದ್ದ ರಾಷ್ಟ್ರಧ್ವಜ ಪುತ್ತೂರು: ನೆಲ್ಲಿಕಟ್ಟೆ ಉದ್ಯಾನದಲ್ಲಿ ಸ್ಥಾಪಿಸಲಾಗಿದ್ದ ರಾಜ್ಯದ ಮೂರನೇ ಅತಿ ಎತ್ತರದ ಧ್ವಜಸ್ತಂಭದಲ್ಲಿ ಹಾರಾಡುತ್ತಿದ್ದ ದೊಡ್ಡ ಗಾತ್ರದ ರಾಷ್ಟ್ರಧ್ವಜ ಸೋಮವಾರ ರಾತ್ರಿ ಬೀಸಿದ ಭಾರಿ ಗಾಳಿಮಳೆಗೆ ಧರಾಶಾಯಿಯಾಗಿದೆ. ಭಾರಿ ಗಾಳಿಮಳೆಗೆ ಧ್ವಜದ ದಾರ ಕಡಿದು ಧ್ವಜ ಸಮೀಪ ವಿದ್ಯುತ್‌ ತಂತಿಯ ಮೇಲೆ ಬಿದ್ದಾಗ ಶಾರ್ಟ್‌ ಸರ್ಕ್ಯೂಟ್‌ ಆಗಿದ್ದು, ಇದರ ಪರಿಣಾಮ ತುಸು ಹೊತ್ತು ವಿದ್ಯುತ್‌ ಕೈಕೊಟ್ಟಿತ್ತು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ಧ್ವಜವನ್ನು

ಭಾರಿ ಗಾಳೆಮಳೆಗೆ ಧರಾಶಾಯಿಯಾದ ನೆಲ್ಲಿಕಟ್ಟೆಯ ಅತಿ ಎತ್ತರದಲ್ಲಿದ್ದ ರಾಷ್ಟ್ರಧ್ವಜ Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಉಪ್ಪಿನಂಗಡಿ: ಪಾರದರ್ಶಕತೆಯಿಂದ ಸಮಾಜ ಸೇವಾ ಕಾರ್ಯಗಳನ್ನು ಮಾಡುವ ಸಂಸ್ಥೆಗಳಿಗೆ ಜನರ ಬೆಂಬಲವಿದ್ದು ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಸೇವಾ ಕಾರ್ಯಗಳನ್ನು ನಡೆಸಲು ಕರ್ನಾಟಕ ಸೇವಾ ಭಾರತೀ ಸಂಸ್ಥೆಯು ಮಾರ್ಗದರ್ಶನ ನೀಡಲು ಬದ್ಧವಾಗಿದೆ ಎಂದು ಸೇವಾ ಭಾರತಿ ಸಂಸ್ಥೆಯ ದಕ್ಷಿಣ ಪ್ರಾಂತ್ಯದ ಸಂಚಾಲಕ ಕೆ. ಚೆನ್ನಯ್ಯ ಸ್ವಾಮಿ ದೇರೆಬೈಲು ತಿಳಿಸಿದರು. ಉಪ್ಪಿನಂಗಡಿಯ ಪಾತಾಳ ನಿವಾಸದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರು ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಪ್ರಸಿದ್ಧ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »

ಐರ್ಲೆಂಡಿನಲ್ಲಿ ಕಡಬದ ಯುವಕನ ಸಾವು: ಸಮಗ್ರ ತನಿಖೆಗೆ ಆಗ್ರಹಿಸಿ ಹುಟ್ಟೂರಿನಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆ

ಕಡಬ: ತಾಲೂಕಿನ ಕುಟ್ರುಪ್ಪಾಡಿಯ ಯುವಕ ಸ್ಯಾಂಜೋ ಸುನಿಲ್ ಕೆಲ ದಿನಗಳ ಹಿಂದಷ್ಟೇ ಐರ್ಲೆಂಡಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಅವರ ಸಾವಿಗೆ ಸಂಬಂಧಿಸಿದ ಹಾಗೆ ಸಮಗ್ರ ರೀತಿಯಲ್ಲಿ ತನಿಖೆ ನಡೆಯಬೇಕು ಎಂದು ಕಡಬದಲ್ಲಿ ‌ನಿನ್ನೆ ನೂರಾರು ಮಂದಿ ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಿದರು. ಕಡಬದ ‌ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್ ಮತ್ತು ಮಲಯಾಳಿ ಸಂಘಟನೆಗಳ ನೇತೃತ್ವದಲ್ಲಿ ಅನುಗ್ರಹ ಸಭಾಭವನದಿಂದ ‌ಸೈಂಟ್ ಜೋಕಿಮ್ಸ್ ವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾ ನಿರತರು, ಈ ಸಾವಿನ ಹಿಂದಿನ ಸತ್ಯಗಳು ಅನಾವರಣವಾಗಬೇಕು ಎಂದು ಆಗ್ರಹಿಸಿದರು. ಸಾಂಜೋ

ಐರ್ಲೆಂಡಿನಲ್ಲಿ ಕಡಬದ ಯುವಕನ ಸಾವು: ಸಮಗ್ರ ತನಿಖೆಗೆ ಆಗ್ರಹಿಸಿ ಹುಟ್ಟೂರಿನಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆ Read More »

ಮಾ.15: ಕಂಪ್ರೆಸ್ಡ್ ಬಯೋ ಗ್ಯಾಸ್(ಸಿ. ಬಿ. ಜಿ.) ಘಟಕ ಲೋಕಾರ್ಪಣೆ ಸಮಾರಂಭ

ಪುತ್ತೂರು: ಕೃಷ್ಣಮುಳಿಯ ಗ್ರೀನ್ ಎನರ್ಜಿ ಎಲ್.ಎಲ್. ಪಿ ಮತ್ತು ರೋಟರಿ ಕ್ಲಬ್ ಪುತ್ತೂರು ಈಸ್ಟ್, ಸ್ವಚ್ಛಭಾರತ್ ಚಾರಿಟೇಬಲ್ ಟ್ರಸ್ಟ್ ಮತ್ತು ರಿಟ್ಯಾಪ್ ಸೊಲ್ಯೂಷನ್ಸ್ ಇವರ ಸಾರಥ್ಯದಲ್ಲಿ ಹಾಗೂ ನಗರಸಭಾ ಪುತ್ತೂರು ಇದರ ಸಹಯೋಗದೊಂದಿಗೆ ಸ್ವಚ್ಛ ಪುತ್ತೂರು ಅಭಿಯಾನದ ಪ್ರಮುಖ ಯೋಜನೆಯಾಗಿರುವ ಭಾರತದ ನಗರಸಭಾ ವ್ಯಾಪ್ತಿಯಲ್ಲಿ ಪ್ರಪ್ರಥಮವಾಗಿ ನಿರ್ಮಾಣಗೊಂಡಿರುವ ಕಂಪ್ರೆಸ್ಡ್ ಬಯೋ ಗ್ಯಾಸ್(ಸಿ. ಬಿ. ಜಿ.) ಘಟಕ ಇದರ ಲೋಕಾರ್ಪಣೆ ಮಾ. 15 ರಂದು ಬೆಳಗ್ಗೆ 10.30 ಕ್ಕೆ ಬನ್ನೂರು ಡಂಪಿಂಗ್ ಯಾರ್ಡ್‌ನಲ್ಲಿ ‌ನಡೆಯಲಿದೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು

ಮಾ.15: ಕಂಪ್ರೆಸ್ಡ್ ಬಯೋ ಗ್ಯಾಸ್(ಸಿ. ಬಿ. ಜಿ.) ಘಟಕ ಲೋಕಾರ್ಪಣೆ ಸಮಾರಂಭ Read More »

ಮಂಗಳೂರು, ಅಂಬೇಡ್ಕರ್ ಭವನ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ

ಉರ್ವ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಆಶ್ರಯದಲ್ಲಿ 2025ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಮತ್ತು ವಾದ್ಯ ಪರಿಕರಗಳ ವಿತರಣೆ ಕಾರ್ಯಕ್ರಮ ನಡೆಯಿತು. ಆರಂಭದಲ್ಲಿ ಅಭಿನಂದನಾ ನುಡಿಗಳನ್ನಾಡಿದ ಮಾಜಿ ಲಯನ್ಸ್ ಜಿಲ್ಲಾ ಗವರ್ನರ್ ಎಂ. ಬಿ. ಸದಾಶಿವ ಅವರು ಸಾಧಕರನ್ನು ಸನ್ಮಾನಿಸುವುದು ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಪ್ರತಿಪಾದಿಸಿ ಸನ್ಮಾನಿತರ ಸಾಧನೆಗಳನ್ನು ವಿಷದಪಡಿಸಿದರು. ವಿವಿಧತೆಯಲ್ಲಿ ಏಕತೆಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಸರಕಾರದ

ಮಂಗಳೂರು, ಅಂಬೇಡ್ಕರ್ ಭವನ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ Read More »

error: Content is protected !!
Scroll to Top