ಪುತ್ತೂರು

ಪುತ್ತೂರು ವಿಶ್ವ ಹಿಂದೂ ಪರಿಷದ್‌ ನ ವಜ್ರತೇಜಸ್ ಸೇವಾ ತಂಡದಿಂದ ಆನಾರೋಗ್ಯ ಪೀಡಿತರಿಗೆ ಸಹಾಯಧನ ವಿತರಣೆ

ಪುತ್ತೂರು: ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮಾರ್ಚ್ ತಿಂಗಳ ಮೊತ್ತವನ್ನು ಆನಾರೋಗ್ಯ ಪೀಡಿತೆ ಮಹಿಳೆಗೆ ನೀಡಲಾಯಿತು. ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ತೀವ್ರ ಕಷ್ಟದಲ್ಲಿರುವ ಜಯಂತಿ ಎಂಬವರಿಗೆ ಆಸ್ಪತ್ರೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸಿ ನೀಡಲಾಯಿತು. ಈ ಸಂದರ್ಭದಲ್ಲಿ ವಜ್ರತೇಜಸ್ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ, ವಿಶ್ವ ಹಿಂದೂ ಪರಿಷದ್‌ ಪುತ್ತೂರು ನಗರ ಪ್ರಖಂಡ ಅಧ್ಯಕ್ಷ ದಾಮೋದರ ಪಾಟಾಳಿ, ವಜ್ರತೇಜಸ್ ಕಾರ್ಯದರ್ಶಿ ಸಚಿನ್ […]

ಪುತ್ತೂರು ವಿಶ್ವ ಹಿಂದೂ ಪರಿಷದ್‌ ನ ವಜ್ರತೇಜಸ್ ಸೇವಾ ತಂಡದಿಂದ ಆನಾರೋಗ್ಯ ಪೀಡಿತರಿಗೆ ಸಹಾಯಧನ ವಿತರಣೆ Read More »

7ನೇ ವಾರದಲ್ಲಿಯೂ ಅದ್ಭುತ ಪ್ರದರ್ಶನ ಕಂಡ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.10 ಗುರುವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. ಸರಕಾರಿ ರಜೆ ಇರುವುದರಿಂದ ಎಲ್ಲರೂ ಇದರ ಪ್ರಯೋಜನವನ್ನು ಪಡಕೊಳ್ಳುವಂತೆ ನಿರ್ಮಾಪಕರು ತಿಳಿಸಿದ್ದಾರೆ

7ನೇ ವಾರದಲ್ಲಿಯೂ ಅದ್ಭುತ ಪ್ರದರ್ಶನ ಕಂಡ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನ Read More »

ಪುತ್ತೂರು ಜಾತ್ರೆ : ಮುಳಿಯ ಜ್ಯುವೆಲ್ಲರ್ಸ್ ಕ್ಯಾಲೆಂಡರ್‌ನಲ್ಲಿ ಶ್ರೀ ಮಹಾಲಿಂಗೇಶ್ವರ ಪೇಟೆ ಸವಾರಿ ಮಾರ್ಗ

ಪುತ್ತೂರು: ಜಾತ್ರೆಯ ಅಂಗವಾಗಿ ನಡೆಯುವ ಪೇಟೆ ಸವಾರಿಯು ಭಕ್ತರು ಮತ್ತು ಸಾರ್ವಜನಿಕರನ್ನು ಒಂದುಗೂಡಿಸುವ ವಿಶಿಷ್ಟ ಆಚರಣೆ. ಈ ಬಾರಿಯ ಜಾತ್ರೋತ್ಸವದ ಪೇಟೆ ಸವಾರಿಯ ರೂಟ್ ಮ್ಯಾಪ್ ಅನ್ನು ಒಳಗೊಂಡ ವಿಶೇಷ ಕ್ಯಾಲೆಂಡರ್ ಅನ್ನು ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಲರ್ಸ್ ಸಂಸ್ಥೆಯು ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರವಾದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಈ ಭಾಗದ ಸಂಸ್ಕೃತಿ ಮತ್ತು ಸಂಪ್ರದಾಯಗಳ ಅನನ್ಯ ಸಂಗಮ. ಜಾತ್ರೆಯ ಅಂಗವಾಗಿ ನಡೆಯುವ ಪೇಟೆ ಸವಾರಿಯು ಭಕ್ತರು

ಪುತ್ತೂರು ಜಾತ್ರೆ : ಮುಳಿಯ ಜ್ಯುವೆಲ್ಲರ್ಸ್ ಕ್ಯಾಲೆಂಡರ್‌ನಲ್ಲಿ ಶ್ರೀ ಮಹಾಲಿಂಗೇಶ್ವರ ಪೇಟೆ ಸವಾರಿ ಮಾರ್ಗ Read More »

6 ಕೋಟಿ ವೆಚ್ಚದಲ್ಲಿ ದಕ್ಷಿಣ ಕನ್ನಡದ ಎರಡು ಪ್ರಮುಖ ರಸ್ತೆ ಅಭಿವೃದ್ದಿಗೆ ಗುದ್ದಲಿಪೂಜೆ | ಸಂಸದ ಕ್ಯಾ. ಬ್ರಿಜೇಶ್‍ ಚೌಟರಿಂದ ಗುದ್ದಲಿಪೂಜೆ

ಮಂಗಳೂರು: ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ ಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪ್ರಮುಖ ರಸ್ತೆಗಳನ್ನು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಇಂದು ಗುದ್ದಲಿಪೂಜೆ ನೆರವೇರಿಸಲಾಯಿತು. ಸಿಆರ್ ಎಫ್ ಅನುದಾನದಡಿ ಪುತ್ತೂರು ತಾಲೂಕಿನ ಪರ್ಲಡ್ಕ ಮಾರ್ಗವಾಗಿ ಹಾದು ಹೋಗುವ ಸುಬ್ರಹ್ಮಣ್ಯ-ಮಂಜೇಶ್ವರ ರಸ್ತೆಯನ್ನು ಸುಮಾರು 3.12 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 275ರಿಂದ ರಾಜ್ಯ ಹೆದ್ದಾರಿ 100ನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ

6 ಕೋಟಿ ವೆಚ್ಚದಲ್ಲಿ ದಕ್ಷಿಣ ಕನ್ನಡದ ಎರಡು ಪ್ರಮುಖ ರಸ್ತೆ ಅಭಿವೃದ್ದಿಗೆ ಗುದ್ದಲಿಪೂಜೆ | ಸಂಸದ ಕ್ಯಾ. ಬ್ರಿಜೇಶ್‍ ಚೌಟರಿಂದ ಗುದ್ದಲಿಪೂಜೆ Read More »

ಭಾರೀ ಗಾಳಿಮಳೆ : ಮನೆ ಮೇಲೆ ಬಿದ್ದ ತೆಂಗಿನಮರ

ಪುತ್ತೂರು: ಇಂದು ಸಂಜೆ ಸುರಿದ ಭಾರೀ ಗಾಳಿ ಮಳೆಗೆ ನಗರಸಭಾ ವ್ಯಾಪ್ತಿಯ ಗುಂಪಕಲ್ಲು ಎಂಬಲ್ಲಿ ಮನೆಯೊಂದರ ಮೇಲೆ ತೆಂಗಿನಮರ ಬಿದ್ದು ಮನೆಗೆ ಹಾನಿ ಉಂಟಾದ ಘಟನೆ ನಡೆದಿದೆ. ಅಕ್ಕಪಕ್ಕದಲ್ಲಿದ್ದ ಶ್ವೇತಾ ಹಾಗೂ ವಿಜಯ ಎಂಬವರ ಮನೆ ಮೇಲೆ ತೆಂಗಿ ಮರ ಬಿದ್ದು ಮನೆಗೆ ಹಾನಿಯಾಗಿದೆ. ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಪರಿಶೀಲನೆ ಮಾಡಿ ಮನೆ ಮೇಲೆ ಬಿದ್ದ ತೆಂಗಿನ ಮರವನ್ನು ತೆರವುಗೊಳಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಾರೀ ಗಾಳಿಮಳೆ : ಮನೆ ಮೇಲೆ ಬಿದ್ದ ತೆಂಗಿನಮರ Read More »

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.4 ಮೀಸಲಾತಿ | ವಿಶ್ವ ಹಿಂದೂ ಪರಿಷತ್‍ ನಿಂದ ಪ್ರತಿಭಟನೆ

ಪುತ್ತೂರು : ರಾಜ್ಯಸರಕಾರ ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.4 ಮೀಸಲಾತಿ ನೀಡಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಂಗಳವಾರ ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹಕಾರ್ಯದರ್ಶಿ ಶರಣ್‍ ಪಂಪ್‍ ವೆಲ್‍ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಂದೆಡೆ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ, ರಾಜ್ಯದ ಜನತೆಗೆ ಜಾತಿ-ಮತ ಬೇಧವಿಲ್ಲದೆ ಎಲ್ಲರಿಗೂ ಸಮಪಾಲು ಎಂದು ಹೇಳುತ್ತಿದ್ದು, ಇನ್ನೊಂದೆಡೆ ಮುಸಲ್ಮಾನರನ್ನು ಓಲೈಕೆ

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.4 ಮೀಸಲಾತಿ | ವಿಶ್ವ ಹಿಂದೂ ಪರಿಷತ್‍ ನಿಂದ ಪ್ರತಿಭಟನೆ Read More »

ಸಹಕಾರಿ ಚುನಾವಣೆಗಳಲ್ಲಿ ವಿಜೇತರಿಗೆ ಅಭಿನಂದನೆ ಹಾಗೂ ಸಹಕಾರಿ ಸಮಾವೇಶ | ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭ್ಯುದಯಕ್ಕೂ ಸಹಕಾರಿ ಕ್ಷೇತ್ರದ ಕೊಡುಗೆ ಸಿಗಲಿದೆ : ಕ್ಯಾ.ಬ್ರಿಜೇಶ್‍ ಚೌಟ

ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರು ಸಹಕಾರಿ ಕ್ಷೇತ್ರವನ್ನು ಸರಿಯಾಗಿ ಅರ್ಥ ಮಾಡಿಕೊಂಡಿದ್ದಾರೆ. ಈ ಕಾರಣದಿಂದ ಕೇಂದ್ರದಲ್ಲಿ ಇತ್ತೀಚೆಗೆ ಪ್ರತ್ಯೇಕ ಸಹಕಾರಿ ಸಚಿವಾಲಯವನ್ನೇ ಮಾಡಲಾಗಿದೆ. ಸಹಕಾರಿ ವಿಶ್ವವಿದ್ಯಾನಿಲಯ ಆರಂಭಿಸುವ ಬಿಲ್ ಕೂಡ ಸಂಸತ್ತಿನಲ್ಲಿ ಪಾಸ್ ಆಗಿದೆ. ಮುಂದಿನ ದಿನಗಳಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭ್ಯುದಯಕ್ಕೂ ಸಹಕಾರಿ ಕ್ಷೇತ್ರದ ಕೊಡುಗೆ ಸಿಗಲಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಮಂಗಳವಾರ ನಗರದ ಕೋಟೆಚಾ ಸಭಾಭವನದಲ್ಲಿ ಆಯೋಜಿಸಲಾದ ಸಹಕಾರಿ ಚುನಾವಣೆಗಳಲ್ಲಿ

ಸಹಕಾರಿ ಚುನಾವಣೆಗಳಲ್ಲಿ ವಿಜೇತರಿಗೆ ಅಭಿನಂದನೆ ಹಾಗೂ ಸಹಕಾರಿ ಸಮಾವೇಶ | ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭ್ಯುದಯಕ್ಕೂ ಸಹಕಾರಿ ಕ್ಷೇತ್ರದ ಕೊಡುಗೆ ಸಿಗಲಿದೆ : ಕ್ಯಾ.ಬ್ರಿಜೇಶ್‍ ಚೌಟ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ | ಶಾಲಾ ವಾರ್ಷಿಕ ಚಟುವಟಿಕೆಗಳ ದಾಖಲಿಸಿದ ಪತ್ರಿಕೆ “ವೀರಧಾರೆ” ಬಿಡುಗಡೆ

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ  ಶಾಲಾ ವಾರ್ಷಿಕ ಚಟುವಟಿಕೆಗಳ ವರದಿಯನ್ನು “ವೀರಧಾರೆ” ಪತ್ರಿಕೆಯ ಮೂಲಕ  ಬಿಡುಗಡೆ ಮಾಡಲಾಯಿತು. ಪತ್ರಿಕೆ ಬಿಡುಗಡೆ ಮಾಡಿದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಸಂತ ವೀರಮಂಗಲ ಮಾತನಾಡಿ, ಶಾಲೆಯಲ್ಲಿ ನಿಷ್ಕಂಲ್ಮಶವಾಗಿ ಸೇವೆ ಸಲ್ಲಿಸುವ ಮನಸ್ಸುಗಳಿದ್ದಾಗ ಪ್ರಶಸ್ತಿಗಳು ತಾನಾಗಿ ಒದಗಿ ಬರುತ್ತದೆ,ಈ ಪ್ರಶಸ್ತಿ ನಮ್ಮೂರಿಗೆ ಬಂದ ಸೌಭಾಗ್ಯ, ಅತ್ಯುತ್ತಮ ಎಸ್ ಡಿ ಎಂ ಸಿ  ರಾಜ್ಯ ಪ್ರಶಸ್ತಿಯು ಇನ್ನಷ್ಟು ಪುಷ್ಠಿ ನೀಡಲಿ ಎಂದು ಶುಭ ಹಾರೈಸಿದರು. ಅತ್ಯುತ್ತಮ ಎಸ್

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ | ಶಾಲಾ ವಾರ್ಷಿಕ ಚಟುವಟಿಕೆಗಳ ದಾಖಲಿಸಿದ ಪತ್ರಿಕೆ “ವೀರಧಾರೆ” ಬಿಡುಗಡೆ Read More »

7ನೇ ವಾರಕ್ಕೆ ದಾಪುಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.9 ಬುಧವಾರದಂದು ಸಂಜೆ 4:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

7ನೇ ವಾರಕ್ಕೆ ದಾಪುಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ Read More »

ಏ. 22-23 : ಶ್ರೀ ಅಶ್ವತ್ಥ ಉಪನಯನ ವಿವಾಹ ಸಮಿತಿ ಕಾಣಿಯೂರು ವತಿಯಿಂದ ಅಶ್ವತ್ಥ ಉಪನಯನ ಹಾಗೂ ವಿವಾಹ ಸಮಾರಂಭ

ಕಾಣಿಯೂರು : ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಉಡುಪಿ ಕಾಣಿಯೂರು ಮಠ ಇವರ ಆಶೀರ್ವಾದದೊಂದಿಗೆ ಏ.22 ಮಂಗಳವಾರದಿಂದ ಏ.23 ಬುಧವಾರದವರೆಗೆ ಬೆಳಗ್ಗೆ ವೃಷಭ ಲಗ್ನದಲ್ಲಿ ಅಶ್ವತ್ಥ ಉಪನಯನ ಹಾಗೂ ವಿವಾಹ ಸಮಾರಂಭ ನಡೆಯಲಿದೆ. ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಉಪಾಧ್ಯಾಯ ರವರ ಮಾರ್ಗದರ್ಶನದಲ್ಲಿ ಅಶ್ವತ್ಥ ಉಪನಯನ ಹಾಗೂ ವಿವಾಹ ಸಮಾರಂಭ ನೆರವೇರಲಿದೆ. ಈ ಸಮಾರಂಭಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಆಡಳಿತ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ. 22-23 : ಶ್ರೀ ಅಶ್ವತ್ಥ ಉಪನಯನ ವಿವಾಹ ಸಮಿತಿ ಕಾಣಿಯೂರು ವತಿಯಿಂದ ಅಶ್ವತ್ಥ ಉಪನಯನ ಹಾಗೂ ವಿವಾಹ ಸಮಾರಂಭ Read More »

error: Content is protected !!
Scroll to Top