ಪುತ್ತೂರು

ನಾಳೆ (ಏ.5) ವಿವಿಧೆಡೆ ಕರೆಂಟಿಲ್ಲ | ಎಲ್ಲೆಲ್ಲಿ ? ಇಲ್ಲಿದೆ ಡಿಟೈಲ್ಸ್

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಾಂಚನ, ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಮತ್ತು ವಾಟರ್ ಸಪ್ಲೈ ಫೀಡರ್ ನಲ್ಲಿ ಏ.5ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಉಪ್ಪಿನಂಗಡಿ, ಬಜತ್ತೂರು, ಕೊಲ, ದಾರಂದಕುಕ್ಕು, ಸೇಡಿಯಾಪು ಮತ್ತು ಕೋಡಿಂಬಾಡಿ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಅದರಂತೆ 110/33/11 […]

ನಾಳೆ (ಏ.5) ವಿವಿಧೆಡೆ ಕರೆಂಟಿಲ್ಲ | ಎಲ್ಲೆಲ್ಲಿ ? ಇಲ್ಲಿದೆ ಡಿಟೈಲ್ಸ್ Read More »

ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್

ಪುತ್ತೂರು: ಬನ್ನೂರಿನ ಅಲಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್ ಪಟ್ಟೆ ಅಧಿಕಾರ ಸ್ವೀಕರಿಸಿದರು. ಇಂದು ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಾಲಾ ಅಧ್ಯಕ್ಷ ಕಳುವಾಜೆ ವೆಂಕಟ್ರಮಣ ಗೌಡರು ನೂತನ ಮುಖ್ಯೋಪಾಧ್ಯಾಯರಿಗೆ ನೇಮಕಾತಿ ಆದೇಶ ಪತ್ರ ಮತ್ತು ಶಾಲಾ ಕಡತಗಳನ್ನು ನೀಡಿ ಶಾಲು ಹೊದಿಸಿ ಶುಭ ಹಾರೈಸಿದರು. ಸಂಚಾಲಕರಾದ ಎ.ವಿ. ನಾರಾಯಣ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, ನೂತನ ಪ್ರಾಂಶುಪಾಲರನ್ನು ಪರಿಚಯಿಸಿದರು. ನಿರ್ದೇಶಕರಾದ ಸೀತಾರಾಮ ಕೇವಳ ಮಾತನಾಡಿ ನೂತನ ಪ್ರಾಂಶುಪಾಲರಿಗೆ ಶುಭ ಹಾರೈಸಿದರು. ಆಡಳಿತಾಧಿಕಾರಿ ಗುಡ್ಡಪ್ಪ

ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್ Read More »

ಬಸ್ ಪಲ್ಟಿ : ಓರ್ವ ಮೃತ್ಯು, 12 ಮಂದಿಗೆ ಗಾಯ

ನೆಲ್ಯಾಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಪ್ರಯಾಣಿಕನೋರ್ವ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಬೆಂಗಳೂರು, ಯಡಿಯೂರು ನಿವಾಸಿ ಹರ್ಷ (24) ಮೃತಪಟ್ಟವರು. ಅವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮುಲ್ಕಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡ 12 ಮಂದಿಯಲ್ಲಿ 11 ಜನರು ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಟ್ರಾಫಿಕ್

ಬಸ್ ಪಲ್ಟಿ : ಓರ್ವ ಮೃತ್ಯು, 12 ಮಂದಿಗೆ ಗಾಯ Read More »

ನೀರಕಟ್ಟೆಯಲ್ಲಿ ಬಸ್‌ ಪಲ್ಟಿ : ಓರ್ವ ಪ್ರಯಾಣಿಕ ಸಾವು

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಎಂಬಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟ ಘಟನೆ ಏ.4ರಂದು ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬಜತ್ತೂರು ಸಮೀಪ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ.ಮೃತಪಟ್ಟ ಪ್ರಯಾಣಿಕನ ಗುರುತು ಇನ್ನೂ ಪತ್ತಡೆಯಾಗಿಲ್ಲ. ಅಪಘಾತದಲ್ಲಿ ಕೆಲವು ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸನ್ನು ಕ್ರೇನ್‌ ಸಹಾಯದಿಂದ ಮೇಲೆತ್ತಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ನೀರಕಟ್ಟೆಯಲ್ಲಿ ಬಸ್‌ ಪಲ್ಟಿ : ಓರ್ವ ಪ್ರಯಾಣಿಕ ಸಾವು Read More »

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಭಕ್ತಿ ರಥಯಾತ್ರೆ

ಪುತ್ತೂರು : ಉಡುಪಿ ಪೇಜಾವರ ಅಧೋಕ್ಷಜ ಮಠ ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಪೆರಣಂಕಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿರುವ ಭಕ್ತಿ ಸಿದ್ದಾಂತೋತ್ಸವ- ರಾಮೋತ್ಸವದ ಪ್ರಯುಕ್ತ ಏ.2 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಭಕ್ತಿ ರಥಯಾತ್ರೆಯನ್ನು ದೇವಳದ ವ್ಯವಸ್ಥಾಪನಾ ಸಮಿತಿಯಿಂದ ಸ್ವಾಗತಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರು ಹಾಗು ವಿ.ಹಿಂ.ಪ. ಪ್ರಮುಖರು ಭಕ್ತಿ ರಥಯಾತ್ರೆಯನ್ನು ಸ್ವಾಗತಿಸಿದರು. ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯರು ಭಕ್ತಿ ರಥಕ್ಕೆ ಪೂಜೆಯನ್ನು

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಭಕ್ತಿ ರಥಯಾತ್ರೆ Read More »

ಸಂತ ಫಿಲೋಮಿನಾದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಯಕ್ಷ ಕಲಾಕೇಂದ್ರ ಹಾಗೂ ಲಲಿತಕಲಾ ಸಂಘದ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನವನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಐಕ್ಯೂಎಸಿ ಸಂಯೋಜಕಿ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಮಾಲಿನಿ ಕೆ.  ‘ರಂಗಭೂಮಿಯಲ್ಲಿ ಸೃಜನಶೀಲತೆ’ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿ,  ರಂಗಭೂಮಿಯು ನಿರಂತರತೆಯನ್ನು ಹೊಂದಿ ಹೊಸ ಸ್ವರೂಪಗಳಿಗೆ ತೆರೆದಿರಬೇಕಾದ ಅಗತ್ಯತೆಯ ಬಗ್ಗೆ ತಿಳಿಸುತ್ತಾ, ರಂಗಭೂಮಿಯ ಪ್ರಸ್ತುತಿಯನ್ನು ಅನುಭವಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಡಾ. ಆ್ಯಂಟನಿ ಪ್ರಕಾಶ್‍ ಮೊಂತೆರೊ ಅಧ್ಯಕ್ಷತೆ ವಹಿಸಿ ಮಾತನಾಡಿ,

ಸಂತ ಫಿಲೋಮಿನಾದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ Read More »

44ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ (ಏ.3) ರಂದು ಸಂಜೆ 4-30 ಕ್ಕೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನೆಮಾ 44ನೇ ದಿನಕ್ಕೆ ಕಾಲಿರಿಸಿದ್ದು, ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.3 ಗುರುವಾರ ಸಂಜೆ 4.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

44ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ (ಏ.3) ರಂದು ಸಂಜೆ 4-30 ಕ್ಕೆ ಶೋ Read More »

ದಿನಸಿ ಅಂಗಡಿಯಲ್ಲಿ ಬೆಂಕಿ ಅವಘಡ | ಸ್ಥಳೀಯರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ

ವಿಟ್ಲ: ಅಂಗಡಿಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿ ಹೆಚ್ಚಿನ ಅನಾಹುತತಪ್ಪಿದ ಘಟನೆ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿರುವ ಅಂಗಡಿಯಲ್ಲಿ ಸಂಭವಿಸಿದೆ. ವಿಟ್ಲ-ಮಂಗಳೂರು ರಸ್ತೆಯಲ್ಲಿರುವ ನೆತ್ರಕೆರೆ ನಿವಾಸಿ ಮಹೇಶ್ ಭಟ್ ಅವರಿಗೆ ಸೇರಿದ ನೆತ್ರಕೆರೆ ಜನರಲ್ ಸ್ಟೋರ್ ನಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ ವೇಳೆ ಅಂಗಡಿ ಮಾಲಕ ಬಂದ್ ಮಾಡಿ ತೆರಳಿದ್ದರು. ಅಂಗಡಿ ಒಳಗಡೆಯಿಂದ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣವೇ ಬಾಗಿಲು ತೆರೆದಾಗ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯ ಕಿಟ್ ಕ್ಯಾಟ್ ಪೆಟ್

ದಿನಸಿ ಅಂಗಡಿಯಲ್ಲಿ ಬೆಂಕಿ ಅವಘಡ | ಸ್ಥಳೀಯರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ Read More »

ಯಶಸ್ವಿಯಾಗಿ ಸಾಗುತ್ತಿದೆ  “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.2  ಬುಧವಾರದಂದು ಸಂಜೆ 4:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಯಶಸ್ವಿಯಾಗಿ ಸಾಗುತ್ತಿದೆ  “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ Read More »

ಪುತ್ತೂರು ಅಕ್ಷಯ ಕಾಲೇಜಿನಲ್ಲಿ “WORKPLACE ETHIQUETTE”  ಕಾರ್ಯಾಗಾರ

ಪುತ್ತೂರು : ಅಕ್ಷಯ ಕಾಲೇಜಿನಲ್ಲಿ  ವಾಣಿಜ್ಯ ವಿಭಾಗ ದ ಇನ್ವಿಕ್ತಾ  ಕಾಮರ್ಸ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ  ಸಹಭಾಗಿತ್ವದಲ್ಲಿ “WORKPLACE ETHIQUETTE”  ಕಾರ್ಯಾಗಾರ ನಡೆಯಿತು. ಈ ಸಂದರ್ಭದಲ್ಲಿ ಕೆಲಸ   ಸ್ಥಳದ  ಶಿಷ್ಟಾಚಾರ ಎಂಬ ವಿಷಯದಲ್ಲಿ ಕಾರ್ಯಾಗಾರದ   ಸಂಪನ್ಮೂಲ ವ್ಯಕ್ತಿಯಾಗಿ  ಕುಮಾರಿ  ಅಕ್ಷತ ಕೆ  ಹಣಕಾಸು ವಿಶ್ಲೇಷಕರು ನೋವಿಗೋ  ಐ. ಟಿ  ಸಂಸ್ಥೆ ಮಂಗಳೂರು  ಇವರು  ಭಾಗವಹಿಸಿದರು.   ಕೆಲಸ   ಸ್ಥಳದ  ಶಿಷ್ಟಾಚಾರವು ಒಂದು ನಿರ್ದಿಷ್ಟ ವ್ಯವಹಾರದಲ್ಲಿ ಉದ್ಯೋಗಿಗಳಿಂದ ನಿರೀಕ್ಷಿಸಲಾಗುವ ಮಾತು ಮತ್ತು ನಡವಳಿಕೆಯಾಗಿದೆ.  ಉದ್ಯೋಗಿಗಳು ,ಮಾಲೀಕರು 

ಪುತ್ತೂರು ಅಕ್ಷಯ ಕಾಲೇಜಿನಲ್ಲಿ “WORKPLACE ETHIQUETTE”  ಕಾರ್ಯಾಗಾರ Read More »

error: Content is protected !!
Scroll to Top