ಪುತ್ತೂರು

ಆಟೋ ಚಾಲಕ ಕೃಷ್ಣ  ಆತ್ಮಹತ್ಯೆ

ಪುತ್ತೂರು : ಪರಿಯತ್ತೋಡಿ ನಿವಾಸಿಯಾದ ಆಟೋ ಚಾಲಕನೋರ್ವ ಮನೆಯ ಬಳಿಯಲ್ಲಿ  ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40)ರವರು ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ ವೇಳೆ ಸಾಲ ವಸೂಲಿಗಾರರ ಕರೆ ಬಂದಿತ್ತು. ಅದಾದ ಬಳಿಕ ಮೃತ ಕೃಷ್ಣ ಅವರು ಮನೆಯ ಬಳಿಯ ಮರವೊಂದರ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಸಹೋದರರಾದ ಕುಶಾಲಪ್ಪ, ರಿಕ್ಷಾ ಚಾಲಕ ಶಿವರಾಮ, […]

ಆಟೋ ಚಾಲಕ ಕೃಷ್ಣ  ಆತ್ಮಹತ್ಯೆ Read More »

ಪ್ರತಿಷ್ಠಿತ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ‘ಡೈಮಂಡ್ ಫೆಸ್ಟ್’ಗೆ ಚಾಲನೆ

ಪುತ್ತೂರು:  ಮುಳಿಯ ಎಂಬುದು ನಂಬಿಕೆಯ ಪ್ರತೀಕ. ಆಭರಣ ಕ್ಷೇತ್ರದಲ್ಲಿ ವಿಶೇಷ ತೋರಿರುವ ಜತೆಗೆ ಸಾಮಾಜಿಕ ಕಾರ್ಯಗಳಲ್ಲೂ ಮುಳಿಯ ಸಂಸ್ಥೆ ತೊಡಗಿರುವುದು ಶ್ಲಾಘನೀಯ ಎಂದು ಸಾಯ ಎಂಟರ್ಪೈಸಸ್ ಮಾಲಕಿ ಸಂಧ್ಯಾ ಸಾಯ ಹೇಳಿದರು. ಅವರು ಮಾ.3ರಿಂದ ಜುವೆಲ್ಲರ್ಸ್ ನಲ್ಲಿ ಆರಂಭೂಂಡಿರುವ ಡೈಮೆಂಡ್ ಫೆಸ್ಟ್ ಅನ್ನು ಉದ್ಘಾಟಿಸಿ ಮಾತನಾಡಿದರು. ಡೈಮಂಡ್ ರೆಸ್ಟ್ ಗ್ರಾಹಕರಿಗೆ ಹತ್ತಾರು ಅವಕಾಶಗಳನ್ನು ತೆರೆದಿಟ್ಟಿದೆ. ಇಲ್ಲಿ ವಜ್ರಗಳ ಖರೀದಿಗೂ ಸಾಕಷ್ಟು ಆಯ್ಕೆಗಳಿವೆ ಎಂದರು. ಗಾಯಕಿ ಚೈತ್ರಿಕಾ ಕೋಡಿಬೈಲು ಮಾತನಾಡಿ, ವಜ್ರ ಹೊಳಪು ಹಾಗೂ ಬಲಕ್ಕೆ ಹೆಸರುವಾಸಿ. ಇದು

ಪ್ರತಿಷ್ಠಿತ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ‘ಡೈಮಂಡ್ ಫೆಸ್ಟ್’ಗೆ ಚಾಲನೆ Read More »

ನೆಲ್ಲಿದಡಿ ಗುತ್ತು ಜುಮಾದಿ ಬಂಟ ದೈವಸ್ಥಾನಕ್ಕೆ ಪ್ರವೇಶ ನಿರಾಕರಣೆ ಖಂಡನೀಯ : ಸಂಜೀವ ಮಠಂದೂರು

ಪುತ್ತೂರು: ಇತಿಹಾಸ ಪ್ರಸಿದ್ಧ ನೆಲ್ಲಿದಡಿ ಗುತ್ತು ಜುಮಾದಿ ಬಂಟ ದೈವಸ್ಥಾನಕ್ಕೆ ಪ್ರವೇಶ ನಿರಾಕರಿಸುತ್ತಿರುವ ಎಮ್‍ಎಸ್‍ಇಝೆಡ್‍ ಅಧಿಕಾರಿಗಳ ಕೃತ್ಯ ಖಂಡನೀಯ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಷಜಂತು ಕಡಿತಕ್ಕೊಳಗಾದ ಸಾವಿರಾರು ಜನರ ಬಾಳಿಗೆ ಬೆಳಕಾದ ನೆಲ್ಲಿದಡಿ ಗುತ್ತುವಿಗೆ ಇಂತಹ ವಿಷಮ ಪರಿಸ್ಥಿತಿ ಬಂದಿರುವುದು ದುಃಖದ ಸಂಗತಿ. ತುಳುನಾಡಿಗೆ ಕಲಶ ಪ್ರಾಯದಂತಿರುವ ನೆಲ್ಲಿದಡಿಗುತ್ತಿನ ರಕ್ಷಣೆ ತುಳುವರಾದ ನಮ್ಮೆಲ್ಲರ ಕರ್ತವ್ಯ, ಈ ವಿಷಯದಲ್ಲಿ ರಾಜಕೀಯ ಹಾಗು ಜಾತಿ ಭೇದ ಮರೆತು ಒಂದಾಗಿ

ನೆಲ್ಲಿದಡಿ ಗುತ್ತು ಜುಮಾದಿ ಬಂಟ ದೈವಸ್ಥಾನಕ್ಕೆ ಪ್ರವೇಶ ನಿರಾಕರಣೆ ಖಂಡನೀಯ : ಸಂಜೀವ ಮಠಂದೂರು Read More »

ನೆಲ್ಲಿದಡಿ ಗುತ್ತು ಕಾಂತೇರಿ ಜುಮಾದಿ ದೈವಸ್ಥಾನಕ್ಕೆ ಪ್ರವೇಶ ನಿರ್ಬಂಧ | ಎಂಎಸ್‍ ಇಝೆಡ್‍ ಅಧಿಕಾರಿಗಳ ಕ್ರಮಕ್ಕೆ ಖಂಡನೆ : ಮುರಳೀಕೃಷ್ಣ ಹಸಂತಡ್ಕ

ಮಂಗಳೂರು: ಮಂಗಳೂರಿನ ಬಜ್ಪೆ ಸಮೀಪದ ನೆಲ್ಲಿದಡಿ ಗುತ್ತು ಕಾಂತೇರಿ ಜುಮಾದಿ ದೈವಸ್ಥಾನಕ್ಕೆ ನೆಲ್ಲಿದಡಿ ಗುತ್ತು ಕುಟುಂಬಸ್ಥರಿಗೆ ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿರುವ ಎಂಎಸ್ ಇಝೆಡ್ ಅಧಿಕಾರಿಗಳ ಈ ಕ್ರಮವನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತಿದ್ದೇವೆ ಎಂದು ಹಿಂದೂ ಮುಖಂಡ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತುಳುನಾಡಿನ ಇತಿಹಾಸದಲ್ಲಿ ಅತ್ಯಂತ ಮಹತ್ವ ಹೊಂದಿರುವ ನೆಲ್ಲಿದಡಿ ಗುತ್ತು ಕಾಂತೇರಿ ಜುಮಾದಿ ದೈವ, ವಿಷ ವೈದ್ಯಕೀಯಕ್ಕೆ ಅತ್ಯಂತ ಹೆಸರುವಾಸಿಯಾಗಿದೆ. ಈಗಾಗಲೇ ಲಕ್ಷಾಂತರ ಜನರು ಇಲ್ಲಿನ ದೈವದ

ನೆಲ್ಲಿದಡಿ ಗುತ್ತು ಕಾಂತೇರಿ ಜುಮಾದಿ ದೈವಸ್ಥಾನಕ್ಕೆ ಪ್ರವೇಶ ನಿರ್ಬಂಧ | ಎಂಎಸ್‍ ಇಝೆಡ್‍ ಅಧಿಕಾರಿಗಳ ಕ್ರಮಕ್ಕೆ ಖಂಡನೆ : ಮುರಳೀಕೃಷ್ಣ ಹಸಂತಡ್ಕ Read More »

ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಪಡಂಗಡಿ : ನವವಿವಾಹಿತೆ ನೇಣುಬಿಗಿದುಕೊಂಡಿರುವ ಘಟನೆ ಮಾ.1ರಂದು ಬೆಂಗಳೂರಿನಲ್ಲಿರುವ ಸಂಬಂದಿಕರ ಮನೆಯಲ್ಲಿ ನಡೆದಿದೆ. ನೇಣುಬಿಗಿದು ಆತ್ಮೆಹತ್ಯೆ ಮಾಡಿಕೊಂಡವರು ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ರವರ ಪತ್ನಿ ಪೂಜಾಶ್ರೀ ಎನ್ನಲಾಗಿದೆ. ಕೆಲಸ ಹುಡುಕುತ್ತಿದ್ದ ಪೂಜಾಶ್ರೀಯರನ್ನು ಪತಿ ಪ್ರಕಾಶ್ ರವರು ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿದ್ದರು. ಪ್ರಕಾಶ್‌ ಬದ್ಯಾರು ಗ್ರಾಮದ ಬರಾಯದ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು.  ಪೂಜಾ ಮೂಲತಃ ಕಣಿಯೂರು ಗ್ರಾಮದ ನೆಲ್ಲಿ ಬಾಕಿಮಾರು ಮನೆಯ ವಾರಿಜ ಹಾಗೂ ಸೇಸಪ್ಪ ಪೂಜಾರಿ

ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಮಾ.8 : ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದಿಂದ ‘ವಿವೇಕ ಚೇತನ್-2025’ ಅಂತರ್ ಕಾಲೇಜು ಪ್ರತಿಭಾ ಸ್ಪರ್ಧೆ

ಪುತ್ತೂರು: ಮಾರ್ಚ್ 8 ಶನಿವಾರ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದಲ್ಲಿ ಯುವ ಪ್ರತಿಭಾ ಸಂಗಮವಾಗಲಿದ್ದು, ಅಂದು ‘ವಿವೇಕ ಚೇತನ್- 2025’ ಶಿರೋನಾಮೆಯಲ್ಲಿ ಅಂತರ್ ಕಾಲೇಜು ಮಟ್ಟದ ವಿವಿಧ ಹನ್ನೆರಡು ಸ್ಪರ್ಧೆಗಳು ನಡೆಯಲಿವೆ. ಛಾಯಾಗ್ರಹಣ, ಕಿರುಚಿತ್ರ ತಯಾರಿ, ಚರ್ಚೆ, ಪೋಸ್ಟರ್ ವಿನ್ಯಾಸಗಳು ಸೇರಿದಂತೆ ವಿವಿಧ ಆಕರ್ಷಕ ಚಿಂತನಾಶೀಲ ಸ್ಪರ್ಧೆಗಳು ನಡೆಯಲಿದ್ದು, ನೂರಾರು ಪ್ರತಿಭೆಗಳು ಅನಾವರಣಗೊಳ್ಳಲಿವೆ. ಹೆಚ್ಚಿನ ಮಾಹಿತಿಗಾಗಿ ಅಸಿಸ್ಟೆಂಟ್ ಪ್ರೊಫೆಸರ್’ಗಳಾದ ಹವ್ಯಶ್ರೀ ಪಿ. ಕೆ. (9482306026) ಮತ್ತು ಸುತನ್ ಕೇವಳ (9141142201) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ

ಮಾ.8 : ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದಿಂದ ‘ವಿವೇಕ ಚೇತನ್-2025’ ಅಂತರ್ ಕಾಲೇಜು ಪ್ರತಿಭಾ ಸ್ಪರ್ಧೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜ್ (ಸ್ವಾಯತ್ತ) ವಿಜ್ಞಾನ ವೇದಿಕೆ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು. ಭಾರತೀಯ ಭೌತಶಾಸ್ತ್ರಜ್ಞ ಸರ್‍ ಸಿ.ವಿ.ರಾಮನ್‍ ಅವರ ಪರಿಣಾಮದ ಆವಿಷ್ಕಾರವನ್ನು ಸ್ಮರಿಸಲು ಕಾರ್ಯಕ್ರಮವನ್ನು ಆಯೋಜಿಸಿತು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಂಧರ್ಭದಲ್ಲಿ ಸರ್ಕಾರದ ಆದೇಶದಂತೆ ಪೂರ್ವಾಹ್ನ 10:30ಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಪ್ರತಿಜ್ಞಾವಿಧಿ ನೆರವೇರಿಸಿದರು. ಬಳಿಕ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಕೌತುಕ ಪ್ರವೃತ್ತಿಯ ಅಧ್ಯಯನ ಕ್ರಮವನ್ನು ಅನುಸರಿಸಿ, ಸೃಜನಶೀಲತೆಯೊಂದಿಗೆ ಆಲೋಚಿಸಬೇಕು ಎಂದು ಪ್ರೇರೇಪಿಸಿದರು.

ಸಂತ ಫಿಲೋಮಿನಾ ಕಾಲೇಜಿನಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ವಿಜ್ಞಾನ ದಿನಾಚರಣೆ Read More »

ಕೆಟ್ಟುನಿಂತ ರೈಲು | ಪ್ರಯಾಣಿಕರ ಪರದಾಟ

ಪುತ್ತೂರು: ಮಂಗಳೂರಿನಿಂದ ಹೊರಟಿದ್ದ ಕಣ್ಣೂರು ಎಕ್ಸ್‌’ಪ್ರೆಸ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಪುತ್ತೂರು ರೈಲ್ವೇ ನಿಲ್ದಾಣದಿಂದ ಒಂದು ಕಿ.ಮೀ. ದೂರದಲ್ಲಿ ಗಂಟೆಗೂ ಹೆಚ್ಚಿನ ಕಾಲ ನಿಂತ ಪರಿಣಾಮ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಯಿತು. ಭಾನುವಾರ ರಾತ್ರಿ 9.30ಕ್ಕೆ ಕಣ್ಣೂರು ಎಕ್ಸ್‌’ಪ್ರೆಸ್ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಆಗಮಿಸಿತ್ತು. ಈ ರೈಲು ಬೆಳಿಗ್ಗೆ 6ರ ಸುಮಾರಿಗೆ ಬೆಂಗಳೂರಿಗೆ ತಲುಪಬೇಕಿತ್ತು, ಆದರೆ ವಿಳಂಬವಾಗುವ ಸಾಧ್ಯತೆ ಇದೆ.ಪುತ್ತೂರಿನಿಂದ ಸುಮಾರು 1.ಕಿ.ಮೀ ಮುಂದೆ ಸಾಗಿದ ರೈಲು ಅಚನಕಾಗಿ ನಿಂತಿದೆ. ಸುಮಾರು ಒಂದು ಗಂಟೆಗಳ ಕಾಲ ಕೆಟ್ಟು

ಕೆಟ್ಟುನಿಂತ ರೈಲು | ಪ್ರಯಾಣಿಕರ ಪರದಾಟ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ತೆರೆ | ಜಯಗಳಿಸಿದ ಕೋಣಗಳ ಫಲಿತಾಂಶ ಈ ಕೆಳಗಿನಂತಿದೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಫೈನಲ್ ಹಣಾಹಣಿಯೊಂದಿಗೆ ಭಾನುವಾರ ಸಂಜೆ ಸಂಪನ್ನಗೊಂಡಿತು. ಕಂಬಳ ಕೂಟದಲ್ಲಿ ಸುಮಾರು 170 ಜೋಡಿ ಕೋಣಗಳು ಈ ಬಾರಿ ಭಾಗವಹಿಸಿದ್ದವು. ಕೋಟಿ-ಚೆನ್ನಯ ಜೋಡುಕರೆ ಕಂಬಳ ಫಲಿತಾಂಶ : ಹಗ್ಗ ಹಿರಿಯ : ಪ್ರಥಮ ಕೊಳಕ್ಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್  (ಕೋಣ ಓಡಿಸಿದವರು ಕಕ್ಕೆಪದವು ಪೆಂರ್ಗಾಲು ಕಾರ್ತಿಕ್ ಗೌಡ), ದ್ವಿತೀಯ  ನಂದಳಿಕೆ ಶ್ರೀಕಾಂತ್ ಭಟ್. ಹಗ್ಗ ಕಿರಿಯ: ಪ್ರಥಮ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ ಶೆಟ್ಟಿ (ಮಂಗಲ್ಪಾಡಿ

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ತೆರೆ | ಜಯಗಳಿಸಿದ ಕೋಣಗಳ ಫಲಿತಾಂಶ ಈ ಕೆಳಗಿನಂತಿದೆ Read More »

ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ | ಬಂಡಾಯ ಅಭ್ಯರ್ಥಿಗಳಿಗೇ ಗೆಲುವು | ಸಹಕಾರ ಭಾರತಿ ತಂಡಕ್ಕೆ ಮುಖಭಂಗ

ಕಡಬ: ಆಲಂಕಾರು ಕೃಷಿಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕೊನೆಗೂ ಸಹಕಾರ ಭಾರತಿ ವಿರುದ್ಧದ ಬಂಡಾಯ ಎದ್ದ ತಂಡ ಜಯಗಳಿಸುವ ಮೂಲಕ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಮುಖಭಂಗ ಉಂಟಾಗಿದೆ. ಇದೀಗ ನ್ಯಾಯಾಲಯದ ಆದೇಶದ ಅರ್ಹ ಮತದಾರರ ಮತದಾನದ ಹೊರತಾಗಿ ರಮೇಶ್ ಭಟ್ ಉಪ್ಪಂಗಳ ನೇತೃತ್ವದ ಸಹಕಾರಿ ಬಳಗ ಜಯಭೇರಿ ಭಾರಿಸಿದ್ದು ಹನ್ನೆರಡು ಸ್ನಾನಗಳ ಪೈಕಿ ಹತ್ತರಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ಆದರೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಕೇವಲ ಎರಡು

ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ | ಬಂಡಾಯ ಅಭ್ಯರ್ಥಿಗಳಿಗೇ ಗೆಲುವು | ಸಹಕಾರ ಭಾರತಿ ತಂಡಕ್ಕೆ ಮುಖಭಂಗ Read More »

error: Content is protected !!
Scroll to Top