ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ
ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಅವಕಾಶವಿರುವ ಸರ್ಕಾರಿ ಅಧಿಕಾರಿ ಹುದ್ದೆಗಳನ್ನು ಪಡೆಯಲು ಕೆಎಎಸ್,ಐಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಿ ಯಶಸ್ಸನ್ನು ಪಡೆಯಲು ಪಿಯುಸಿಯ ವಿದ್ಯಾರ್ಥಿಗಳು ಈ ಹಂತದಲ್ಲಿಯೇ ಸಿದ್ಧತೆ ಮಾಡಿಕೊಳ್ಳಬೇಕೆಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ದಿವಾಕರ ಆಚಾರ್ಯ ಗೇರುಕಟ್ಟೆ ತಿಳಿಸಿದರು. ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಜ್ಞಾನಾರ್ಜನೆಗಾಗಿ ಶಿಕ್ಷಣದ ಜೊತೆಗೆ ಸಾಮಾಜಿಕ ಋಣವನ್ನು ತೀರಿಸುವುದು ಪ್ರತಿಯೊಬ್ಬರ ಕರ್ತವ್ಯವೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಹಿರಿಯ ಉಪನ್ಯಾಸಕಿಯಾದ ಭಾಗ್ಯಲಕ್ಷ್ಮಿ […]
ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ Read More »










