ಪುತ್ತೂರು

ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ | ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ

ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪುತ್ತೂರು ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ , ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು ಬ್ಲಾಕ್ ಸಮಿತಿಗಳಿಗೆ ಸೂಚಿಸಲಾಯಿತು. ಕೆಲವು ಪ್ರಮುಖ ನಿರ್ಣಯಗಳನ್ನು ಈ ಕೆಳಗಿನಂತೆ ಕೈಗೊಳ್ಳಲಾಯಿತು.  – ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯ ಕುರಿತು ಹಾಗೂ ಪಕ್ಷದ ಸ್ಪರ್ಧೆಯ ಕುರಿತು ಸಮಗ್ರವಾಗಿ ಚರ್ಚಿಸಿ ಕಾರ್ಯಯೋಜನೆ ರೂಪಿಸಲಾಯಿತು. […]

ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ | ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ Read More »

ಪುತ್ತೂರಿಗೆ ಸಹಾಯಕ ಆಯುಕ್ತರಾಗಿ ಆಗಮಿಸಲಿದ್ದಾರೆ ಸ್ಟೆಲ್ಲಾ ವರ್ಗೀಸ್

ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಸದ್ಯದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ನಿಯುಕ್ತಿ ಮಾಡಲಾಗಿದೆ.

ಪುತ್ತೂರಿಗೆ ಸಹಾಯಕ ಆಯುಕ್ತರಾಗಿ ಆಗಮಿಸಲಿದ್ದಾರೆ ಸ್ಟೆಲ್ಲಾ ವರ್ಗೀಸ್ Read More »

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ

ವೀರಮಂಗಲ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದಲ್ಲಿ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಯವರ ಹಿರಿತನದಲ್ಲಿ ವರ್ಷಾವದಿ ವಿಷ್ಣುಮೂರ್ತಿ ದೇವರ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಕಾರ್ಯಕ್ರಮ ಫೆ.15ರಂದು ನಡೆಯಲಿದೆ. ಬೆಳಗ್ಗೆ 6ರಿಂದ ಗಣಪತಿ ಹೋಮ, ಸಿಯಾಳಭಿಷೇಕ, ಪವಮಾನಾಭಿಷೇಕ, ನವಕ ಕಲಶಾಭಿಷೇಕ ನಡೆಯಲಿದೆ. ಬೆಳಗ್ಗೆ 11ರಿಂದ ಶ್ರೀ ಲಕ್ಷ್ಮೀ ಪ್ರಿಯ ಭಜನಾ ಮಂಡಳಿ ಬೆಳಂದೂರು ಇವರಿಂದ ಭಜನಾ ಕಾರ್ಯಕ್ರಮ ನೆರವೇರಲಿದೆ.  ಮದ್ಯಾಹ್ನ 12:30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ. ಸಂಜೆ 5 ಗಂಟೆಗೆ ದೈವಗಳ ಭಂಡಾರ

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ Read More »

ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಎಸ್‍ ಡಿಪಿಐ ಪ್ರತಿಭಟನೆ

ಪುತ್ತೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋದಿಸಿ ಪುತ್ತೂರು ಬಸ್ಸು ನಿಲ್ದಾಣದ ಬಳಿ ವಕ್ಫ್  ತಿದ್ದುಪಡಿ ಮಸೂದೆಯನ್ನು ವಿರೋಧಿಸಿ, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಘೋಷಣೆ ಕೂಗಿ, ಮಸೂದೆಯ ಪ್ರತಿಯನ್ನು ಸುಡುವ ಮೂಲಕ ಪ್ರತಿಭಟನೆ ನಡೆಯಿತು. ವಕ್ಫ್ ತಿದ್ದುಪಡಿ ಮಸೂದೆಯು ಕೇಂದ್ರ ಸರ್ಕಾರದ ಹಿಡನ್ ಅಜೆಂಡಾವಾಗಿದ್ದು ಈ ಮಸೂದೆಯನ್ನು ದೇಶದ ಜಾತ್ಯಾತೀತರು ಒಪ್ಪಲ್ಲ, ವಕ್ಫ್ ಆಸ್ತಿಯು

ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಎಸ್‍ ಡಿಪಿಐ ಪ್ರತಿಭಟನೆ Read More »

ಫೆ.17 : ಲೋಕಕಲ್ಯಾಣಾರ್ಥವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವರಿಗೆ ಶತರುದ್ರಾಭಿಷೇಕ ಸೇವೆ | ಸಂಸದ ಕ್ಯಾ. ಬ್ರಿಜೇಶ್‍ ಚೌಟ ಭಾಗಿ

ಉಪ್ಪಿನಂಗಡಿ: ಬಿಜೆಪಿ ಉಪ್ಪಿನಂಗಡಿ ಹಾಗೂ ಕಣಿಯೂರು ಮಹಾಶಕ್ತಿ ಕೇಂದ್ರದ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವರಿಗೆ ಶತರುದ್ರಾಭಿಷೇಕ ಸೇವೆ ಫೆ.17 ಸೋಮವಾರ ನಡೆಯಲಿದೆ. ಬೆಳಿಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಅಭಿವೃದ್ಧಿ ಕುರಿತು ಇತಿಹಾಸದಲ್ಲೇ ಮೊದಲ ಬಾರಿಗೆ ಸಂಸತ್ತಿನಲ್ಲಿ ಧ್ವನಿ ಎತ್ತಿ, ಸ್ವಯಂ ಪ್ರೇರಿತರಾಗಿ 50 ಕೋಟಿ ರೂ. ವೆಚ್ಚದ ಪ್ರಸ್ತಾವನೆ ಸಲ್ಲಿಸಿದ ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಪಾಲ್ಗೊಳ್ಳಲಿದ್ದಾರೆ. ಪಕ್ಷ ಹಾಗೂ ಸಂಘಟನೆಯ ದೇವದುರ್ಲಭ ಕಾರ್ಯಕರ್ತರ ಆಶಯದಂತೆ ನಡೆಯುವ

ಫೆ.17 : ಲೋಕಕಲ್ಯಾಣಾರ್ಥವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವರಿಗೆ ಶತರುದ್ರಾಭಿಷೇಕ ಸೇವೆ | ಸಂಸದ ಕ್ಯಾ. ಬ್ರಿಜೇಶ್‍ ಚೌಟ ಭಾಗಿ Read More »

ಫೆ.18 : ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ನರಿಮೊಗರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ಮಹತ್ತರವಾದ ಶೈಕ್ಷಣಿಕ ಕಾರ್ಯಕ್ರಮವಾದ ಎಫ್‍ ಎಲ್‍ ಎನ್‍ ಮಕ್ಕಳ ಕಲಿಕಾ ಹಬ್ಬ ರಾಜ್ಯಾದ್ಯಂತ ಕ್ಲಸ್ಟರ್ ಮಟ್ಟದಲ್ಲಿ ನಡೆಯುತ್ತಿದ್ದು, ಪುತ್ತೂರು ತಾಲೂಕಿನ ನರಿಮೊಗರು ಕ್ಲಸ್ಟರ್ ಮಟ್ಟದ ಎಫ್‍.ಎಲ್‍.ಎನ್‍. ಕಲಿಕಾ ಹಬ್ಬ ಫೆ. 18 ರಂದು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಏನಿದು ಎಫ್‍ ಎಲ್‍ ಎನ್‍ ಕಲಿಕಾ ಹಬ್ಬ? ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ Fundamental Literacy and numeracy ಎಲ್ಲಾ  ಮಕ್ಕಳು ಶಾಲೆಗೆ ದಾಖಲಾಗಬೇಕು. ದಾಖಲಾದ ಮಕ್ಕಳು

ಫೆ.18 : ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ನರಿಮೊಗರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ Read More »

ಕಾಣಿಯೂರು ಮಠದಲ್ಲಿ ವಾರ್ಷಿಕ ಉತ್ಸವಾದಿಗಳಿಗೆ ಗೊನೆ ಮುಹೂರ್ತ

ಕಾಣಿಯೂರು :  ಕಾಣಿಯೂರು ಮಠದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಗುರುವಾರ ಬೆಳಿಗ್ಗೆ ನಡೆಯಿತು. ಮೊದಲಿಗೆ ಕಾಣಿಯೂರು ಮಠದಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ 9 ಗಂಟೆಗೆ ಗೊನೆ ಮುಹೂರ್ತ ನೆರವೇರಿಸಲಾಯಿತು. ಜಾತ್ರೋತ್ಸವದ ಅಂಗವಾಗಿ ಫೆ.26 ರಂದು ಜಾತ್ರೋತ್ಸವ ಆರಂಭಗೊಳ್ಳಲಿದ್ದು, ಮಾ.4 ರ ವರೆಗೆ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಕಾಣಿಯೂರು ಮಠದಲ್ಲಿ ವಾರ್ಷಿಕ ಉತ್ಸವಾದಿಗಳಿಗೆ ಗೊನೆ ಮುಹೂರ್ತ Read More »

ಪುತ್ತೂರು (ಫೆ.೧೬): ಅಕ್ಷಯ ಕಾಲೇಜಿನಲ್ಲಿ ದಿಕ್ಸೂಚಿ ಕಾರ್ಯಕ್ರಮ

ಪುತ್ತೂರು : ಪುತ್ತೂರಿನಲ್ಲಿ ವಿನೂತನ ಪದವಿ ಕೋರ್ಸುಗಳನ್ನು ಪರಿಚಯಿಸಿ ಶೈಕ್ಷಣಿಕ ಕ್ಷೇತ್ರದೊಂದಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲೂ ಹಲವು ಸಾಧನೆ ಮಾಡುತ್ತಿರುವ ಸಂಪ್ಯದ ಅಕ್ಷಯ ಕಾಲೇಜಿನಲ್ಲಿ ಫೆ.೧೬ ಭಾನುವಾರ ಬೆಳಿಗ್ಗೆ ೧೦. ಗಂಟೆಯಿಂದ ೧೨.೩೦ ರ ವರೆಗೆ “ದಿಕ್ಸೂಚಿ-೪” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಏನಿದು “ದಿಕ್ಸೂಚಿ”? ಕಳೆದ ೩ ವರ್ಷಗಳಿಂದ ಸಂಸ್ಥೆಯು ಪುತ್ತೂರು ಹಾಗು ಪುತ್ತೂರಿನ ಆಸುಪಾಸಿನ ತಾಲೂಕುಗಳ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪಿ.ಯು.ಸಿ ಬಳಿಕ ಇರುವ ಆಯ್ಕೆ, ವೃತ್ತಿ ಶಿಕ್ಷಣ ಕ್ಷೇತ್ರದ ಪ್ರಾಮುಖ್ಯತೆ ವಿಷಯಗಳಲ್ಲಿ ಸಮಗ್ರ ರೂಪುರೇಷೆಯನ್ನು ನೀಡಿ

ಪುತ್ತೂರು (ಫೆ.೧೬): ಅಕ್ಷಯ ಕಾಲೇಜಿನಲ್ಲಿ ದಿಕ್ಸೂಚಿ ಕಾರ್ಯಕ್ರಮ Read More »

ಇತ್ತಂಡಗಳ ಮಧ್ಯೆ  ವಾಗ್ವಾದ | ಸೋಡಾಬಾಟಲಿಯಿಂದ ಹಲ್ಲೆ

ಪುತ್ತೂರು: ನಗರದ ಬೊಳ್ಳಾರ್ ನಲ್ಲಿ ಇತ್ತಂಡಗಳ ಮಧ್ಯೆ  ವಾದಗಳು ನಡೆದಿದ್ದು,ಕೋಪಕ್ಕೆ ತುತ್ತಾಗಿ ವ್ಯಕ್ತಿಯೊರ್ವರಿಗೆ  ಸೋಡಾ ಬಾಟಲಿಯಿಂದ ಚುಚ್ಚಿದ್ದ ಘಟನೆ ಬುಧವಾರ ತಡ ರಾತ್ರಿ ನಡೆದಿದೆ. ಘಟನೆಯ ಕುರಿತು ಉಮೇಶ್ ಬಾಳುಗೋಡು ದೂರು ನೀಡಿದ್ದು,  ಪುತ್ತೂರು ನಗರ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ತಿಂಗಳಾಡಿ ನೀವಾಸಿ ನರ್ಮೇಶ್ ರೈ, ಪ್ರಸಾದ್ ಪ್ರಕರಣದ ಆರೋಪಿತರು.  ನರ್ಮೇಶ್ ರೈ ಎಂಬುವರು ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಇತ್ತಂಡದವರು ಕುಡಿತದ ಮತ್ತಿನಲ್ಲಿ ಜಗಳವಾಡಿದ್ದು, ಈ ವೇಳೆ ಇದು ತಾರಕಕ್ಕೆ ಹೋಗಿ

ಇತ್ತಂಡಗಳ ಮಧ್ಯೆ  ವಾಗ್ವಾದ | ಸೋಡಾಬಾಟಲಿಯಿಂದ ಹಲ್ಲೆ Read More »

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗೆ ಆಗ್ರಹ: ಬಿಜೆಪಿ ನಿಯೋಗ ಭೇಟಿ

ಪುತ್ತೂರು : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆದಿದೆ. ಮುಷ್ಕರಕ್ಕೆ ಇಂದು ಪುತ್ತೂರು ಬಿಜೆಪಿ ನಿಯೋಗ ಭೇಟಿ ನೀಡಿ ಬೆಂಬಲವಿತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಪ್ರದಾನ ಕಾರ್ಯದರ್ಶಿ ಗಳಾದ ಉಮೇಶ್, ಪ್ರಶಾಂತ್ ನೆಕ್ಕಿಲಾಡಿ. ಅನಿಲ್ ತೆಂಕಿಲ. ಟೌನ್ ಬ್ಯಾಂಕ್ ನಿರ್ದೇಶಕರು ರಾಜು ಶೆಟ್ಟಿ, ಶಕ್ತಿ ಕೇಂದ್ರ ದ ಅಧ್ಯಕ್ಷ ಪ್ರಜ್ವಲ್ ಘಾಟೆ, ಹರೀಶ್ ಆಚಾರ್, ರೂಪೇಶ್, ಪ್ರದೀಪ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗೆ ಆಗ್ರಹ: ಬಿಜೆಪಿ ನಿಯೋಗ ಭೇಟಿ Read More »

error: Content is protected !!
Scroll to Top