ಪುತ್ತೂರು

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ನೂತನ ಬ್ರಹ್ಮರಥ ಭೂಸ್ಪರ್ಶ | ಧಾರ್ಮಿಕ ಸಭಾ ಕಾರ್ಯಕ್ರಮ

ಸುಳ್ಯ: ಶ್ರೀ ಚೆನ್ನಕೇಶವ ದೇವಸ್ಥಾನದ ನೂತನ ಬ್ರಹ್ಮರಥದ ಭೂ ಸ್ಪರ್ಶ ಕಾರ್ಯಕ್ರಮ ಇಂದು ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಉದ್ಘಾಟಿಸಿದರು. ವೇದಿಕೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಕುರುಂಜಿ ಚಿದಾನಂದ ಗೌಡ, ರಥಶಿಲ್ಪಿ ರಾಜಗೋಪಾಲ ಅಚಾರ್ಯ, ಲಯನ್ಸ್ ರಾಜ್ಯಪಾಲ ಎಂ.ಬಿ. ಸದಾಶಿವ, ಬ್ರಹ್ಮಶ್ರೀ ವೇದಮೂರ್ತಿ […]

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ನೂತನ ಬ್ರಹ್ಮರಥ ಭೂಸ್ಪರ್ಶ | ಧಾರ್ಮಿಕ ಸಭಾ ಕಾರ್ಯಕ್ರಮ Read More »

ವಿಟ್ಲದ ಲಾರಿ ಚಾಲಕ ಲಿಯೋ ಡಿ’ಸೋಜಾ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ : ಲಾರಿ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಮುಳಿಯ ತಾಳಿಪಡ್ಡು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45) ಆತ್ಮಹತ್ಯೆ ಮಾಡಿಕೊಂಡವರು. ಅವಿವಾಹಿತರಾಗಿದ್ದ ಲಿಯೋ ಅವರು ಅಣ್ಣನ ಜೊತೆ ವಾಸವಿದ್ದರು. ರಾತ್ರಿ  ಊಟದ ಬಳಿಕ ಕೋಣೆಗೆ ತೆರಳಿದ್ದ ಲಿಯೋ ಅವರು ಬಾಗಿಲು ತೆರೆಯದ ಹಿನ್ನಲೆ ಒಳಗೆ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣಗಳು ತಿಳಿದು

ವಿಟ್ಲದ ಲಾರಿ ಚಾಲಕ ಲಿಯೋ ಡಿ’ಸೋಜಾ ನೇಣು ಬಿಗಿದು ಆತ್ಮಹತ್ಯೆ Read More »

ಪುತ್ತೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

ಮಂಗಳೂರು : ಆಧುನಿಕ ವಿದ್ಯೆಗೆ ಕೊರತೆ ಇಲ್ಲಾ, ನೂರು ವರ್ಷಗಳ ಹಿಂದೆ ದೇಶದಲ್ಲಿ ಸಾಕ್ಷರತೆ ಪ್ರಮಾಣ ಶೇ.5 ಇದ್ದು, ಇದೀಗ ಪ್ರಸ್ತುತ ದಿನಗಳಲ್ಲಿ ಶೇ.80 ಕ್ಕಿಂತಲೂ ಸಾಕ್ಷರತೆ ಸಿಗುತ್ತಿದೆ. ಆಧುನಿಕ ವಿದ್ಯೆಯ ಭರದಲ್ಲಿ ಸಿಲುಕಿ, ಆಧ್ಯಾತ್ಮಿಕ ವಿದ್ಯೆಯನ್ನು ಮರೆಯುತ್ತಿದ್ದೇವೆ ಎಂಬ ಭಯದ ಕಾಲಘಟ್ಟದಲ್ಲಿದ್ದೇವೆ ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು. ಅವರು ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ ಮಂಗಳೂರಿನ

ಪುತ್ತೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ Read More »

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ | ಸ್ಥಳದಲ್ಲೇ ಸಾವನ್ನಪ್ಪಿದ ಸವಾರ

ಉಳ್ಳಾಲ : ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ  ಹಿನ್ನಲೆ ದ್ವಿಚಕ್ರ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಂಕೋಲಿಗೆ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ದೇರಳಕಟ್ಟೆ ಸಮೀಪದ ಪನೀರ್ ನಿವಾಸಿ ಅಝರ್ ಎಂದು ಗುರುತಿಸಲಾಗಿದೆ. ಮೃತ ಅಝರ್‍ ಸ್ಕೂಟರ್‍ನಲ್ಲಿ ಬರುತ್ತಿದ್ದ ವೇಳೆ ಕೇರಳ ಕಡೆಗೆ ಚಲಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದರಿಂದ ರಸ್ತೆಗೆ ಎಸೆದು ಬಿದ್ದಿದರಿಂದ ದ್ವಿಚಕ್ರ ವಾಹನ ಸವಾರನ ಮೇಲೆ ಲಾರಿ ಚಲಿಸಿದೆ ಎಂದು ತಿಳಿದು ಬಂದಿದೆ.  ಅಝರ್‍ ಮೃತ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ | ಸ್ಥಳದಲ್ಲೇ ಸಾವನ್ನಪ್ಪಿದ ಸವಾರ Read More »

ಡಾ.ಶಿವರಾಮ ಕಾರಂತ ಬಾಲವನದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

ಪುತ್ತೂರು : ಸಾಯಿಕಲಾ ಯಕ್ಷ ಬಳಗ ಹಾಗೂ  ಡಾ.ಶಿವರಾಮ ಕಾರಂತ ಬಾಲವನ ಜಂಟಿ ಆಶ್ರಯದಲ್ಲಿ ನಡೆಯುವ ಯಕ್ಷಗಾನ  ನಾಟ್ಯ ತರಬೇತಿ ಇತ್ತೀಚೆಗೆ  ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನದಲ್ಲಿ ನಡೆಯಿತು. ಯಕ್ಷಗಾನ ಕಲಾವಿದ ಬಾಲಸುಬ್ರಹ್ಮಣ್ಯ ಭಟ್ ಗುತ್ತಿಗಾರು ತರಬೇತಿ ಉದ್ಘಾಟಿಸಿದರು. ಮರಾಟಿ ಸಂಘದ ಅಧ್ಯಕ್ಷ ಅಶೋಕ್ ನಾಯಕ್ ಕೆದಿಲ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಕೃಷ್ಣಪ್ಪ ಪೂಜಾರಿ ಕಿನ್ಯ ಭಾಗವಹಿಸಿದರು. ಪ್ರಸಕ್ತ ಪ್ರಾರ್ಥನೆ ಹಾಡಿದರು. ಶ್ರೀ ಸಾಯಿ ಕಲಾ ಯಕ್ಷ

ಡಾ.ಶಿವರಾಮ ಕಾರಂತ ಬಾಲವನದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಜೇನು ಕೃಷಿ ಮತ್ತು ನಾವು” ವಿಶೇಷ  ಉಪನ್ಯಾಸ

ಪುತ್ತೂರು : ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಇಕೋ ಕ್ಲಬ್ ಘಟಕ ವತಿಯಿಂದ “ಜೇನು ಕೃಷಿ ಮತ್ತು ನಾವು” ಎಂಬ ವಿಶೇಷ ಉಪನ್ಯಾಸಕಾರ್ಯಕ್ರಮ ಕಾಲೇಜಿನ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಜೇನು ಕೃಷಿಕರ ತರಬೇತುದಾರ ಮತ್ತು ಬೆಟ್ಟಂಪಾಡಿ ನವೋದಯ ಪ್ರೌಢ ಶಾಲಾ  ಶಿಕ್ಷಕ ರಾಧಾಕೃಷ್ಣ ಆರ್. ಕೋಡಿಯವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿ, ವಿಶಿಷ್ಟ ಕೃಷಿ ವಿಧಾನವಾಗಿರುವ ಜೇನು ಕೃಷಿಯಿಂದ ಪ್ರಕೃತಿ ಮತ್ತು ಮಾನವರಿಗೆ ಆಗುವ ವಿವಿಧ ಬಗೆಯ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಜೇನು ಕೃಷಿ ಮತ್ತು ನಾವು” ವಿಶೇಷ  ಉಪನ್ಯಾಸ Read More »

ಶ್ರೀನಿವಾಸ ಕಲ್ಯಾಣೋತ್ಸವ ಯಶಸ್ವಿ- ಅರುಣ್ ಕುಮಾರ್ ಪುತ್ತಿಲ | ಸಮಿತಿಯಿಂದ ಕೃತಜ್ಞತಾ ಸಭೆ

ಪುತ್ತೂರು : ಉಡುಪಿಯ ಪೇಜಾವರ ಶ್ರೀಗಳು ಉಲ್ಲೇಖಿಸಿದಂತೆ ಪುತ್ತೂರಿನಲ್ಲಿ ದೊಡ್ಡ ಮಟ್ಟದ ಗೋ ಶಾಲೆ ನಿರ್ಮಾಣ ಮಾಡಲು ಸರಕಾರಕ್ಕೆ ಪತ್ರ ಬರೆಯಲಾಗುವುದು. ಜಾಗ ಕೊಟ್ಟರೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಗೋ ಶಾಲೆ ನಿರ್ಮಾಣ ಮಾಡಲಾಗುವುದು ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ. ಮುಕ್ರಂಪಾಡಿಯ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮದ ಜೊತೆ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು. ಶ್ರೀನಿವಾಸ ಕಲ್ಯಾಣೋತ್ಸವ ಸಂದರ್ಭ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ

ಶ್ರೀನಿವಾಸ ಕಲ್ಯಾಣೋತ್ಸವ ಯಶಸ್ವಿ- ಅರುಣ್ ಕುಮಾರ್ ಪುತ್ತಿಲ | ಸಮಿತಿಯಿಂದ ಕೃತಜ್ಞತಾ ಸಭೆ Read More »

ಜ.4 : ಮನಜನ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಗನ್ ಹಾಗೂ ಸುಫಿ ಹಾಡುಗಳ ಮನಜನ ಸಂಗೀತ ಹಬ್ಬ ‘ಅಸೀಮ’

ಪುತ್ತೂರು : ಮನಜನ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಗನ್ ಹಾಗೂ ಸುಫಿ ಹಾಡುಗಳ ಮನಜನ ಸಂಗೀತ ಹಬ್ಬ ‘ಅಸೀಮ’ ಜ.4 ರಂದು ಮಂಜಲ್ಪಡ್ಪು ಸುದಾನ ಶಾಲಾ ಗ್ರೌಂಡ್‍ನಲ್ಲಿ ನಡೆಯಲಿದೆ ಎಂದು ಮನಜನ ಟ್ರಸ್ಟ್ ನ ಮೆನೆಜಿಂಗ್ ಟ್ರಸ್ಟಿ ಸೌಮ್ಯ ಭಟ್‍ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮನಸ್ಸಿನ ಆರೋಗ್ಯ, ನಾವು ಎದುರಿಸುವ ಮಾನಸಿಕ ಖಾಯಿಲೆ, ತೊಂದರೆ, ಸವಾಲುಗಳನ್ನು ಪರಿಹರಿಸುವ ಹಾಗೂ ನಿಭಾಯಿಸುವ ರೀತಿಗಳು ಮುಂತಾದ ವಿಚಾರಗಳ ಕುರಿತು ಅರಿವು ಮೂಡಿಸುವುದು ನಮ್ಮ ಆಶಯವಾಗಿದ್ದು, ಈಗಾಗಲೇ ಟ್ರಸ್ಟ್

ಜ.4 : ಮನಜನ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಗನ್ ಹಾಗೂ ಸುಫಿ ಹಾಡುಗಳ ಮನಜನ ಸಂಗೀತ ಹಬ್ಬ ‘ಅಸೀಮ’ Read More »

ಕಾರ್ಯಕರ್ತನಿಗೆ ಜೀವ ಬೆದರಿಕೆ | ಪ್ರಕರಣ ದಾಖಲಿಸಲು ಕೋರ್ಟ್ ಅನುಮತಿ

ಪುತ್ತೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಹಕೀಂ ಕೂರ್ನಡ್ಕ ಎಂಬವರಿಗೆ ವಾಯ್ಸ್ ಮೆಸೇಜ್ ಮೂಲಕ ಜೀವ ಬೆದರಿಕೆ ಒಡ್ಡಿದ ಇಬ್ಬರು ವ್ಯಕ್ತಿಗಳ ವಿರುದ್ಧ ಕೇಸು ದಾಖಲಿಸಲು ಪುತ್ತೂರು ನ್ಯಾಯಾಲಯ ಅನುಮತಿ ನೀಡಿದೆ. ಇತ್ತೀಚೆಗೆ ಹಕೀಂ ಕೂರ್ನಡ್ಕ ಅವರು ಶಾಸಕ ಅಶೋಕ್ ರೈ ಅವರ ಕಾರ್ಯ ವೈಖರಿ ಖಂಡಿಸಿ ಮಾಧ್ಯಮ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ವಾಟ್ಸಾಪ್ ನಲ್ಲಿ ವಾಯ್ಸ್ ಮೆಸೇಜ್ ಮೂಲಕ ವ್ಯಕ್ತಿಗಳಿಬ್ಬರು ಹಕೀಂ ಅವರಿಗೆ ಜೀವ ಬೆದರಿಕೆ ಒಡ್ಡಿದ್ದರು. ಇದರ ವಿರುದ್ಧ ಹಕೀಂ ಅವರು ಪುತ್ತೂರು ಪೊಲೀಸ್

ಕಾರ್ಯಕರ್ತನಿಗೆ ಜೀವ ಬೆದರಿಕೆ | ಪ್ರಕರಣ ದಾಖಲಿಸಲು ಕೋರ್ಟ್ ಅನುಮತಿ Read More »

ಕಡಬ ತಾಲೂಕು ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ರಾಕೇಶ್ ರೈ ಕೆಡಂಜಿ, ಉಪಾಧ್ಯಕ್ಷರಾಗಿ ಸುಕುಮಾರ್ ಶಿರಾಡಿ,  ಪ್ರಧಾನ ಕಾರ್ಯದರ್ಶಿಯಾಗಿ ಸುದರ್ಶನ್, ಕೋಶಾಧಿಕಾರಿಯಾಗಿ ಜಯರಾಮ್ ಭಟ್

ಕಡಬ : ನೂತನ ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾಗಿ ರಾಕೇಶ್ ರೈ ಕೆಡಂಜಿ, ಉಪಾಧ್ಯಕ್ಷರಾಗಿ ಸುಕುಮಾರ್ ಶಿರಾಡಿ,  ಪ್ರಧಾನ ಕಾರ್ಯದರ್ಶಿಯಾಗಿ ಸುದರ್ಶನ್, ಕೋಶಾಧಿಕಾರಿಯಾಗಿ ಜಯರಾಮ್ ಭಟ್ ಆಯ್ಕೆಯಾಗಿದ್ದಾರೆ. ರಾಜ್ಯ ಸರ್ಕಾರದ ಕೃಷಿ ಇಲಾಖೆಯ ಅಧೀನಕ್ಕೆ ಒಳಪಟ್ಟಿರುವ, ಕಡಬ ತಾಲೂಕು  ಕೃಷಿಕ ಸಮಾಜದ ನೂತನ ಪದಾಧಿಕಾರಿಗಳ  ಆಯ್ಕೆ ಕಡಬ ರೈತರ ಸಂಪರ್ಕ ಕೇಂದ್ರದಲ್ಲಿ ಇಂದು ಡಾ. ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಕೃಷಿ ಅಧಿಕಾರಿ  ಭರಮಣ್ಣ ಅವರು ಆಯ್ಕೆ ಪ್ರಕ್ರಿಯೆಯನ್ನು ನಡೆಸಿದರು. ಜಿಲ್ಲಾ ಪ್ರತಿನಿಧಿಯಾಗಿ ಮಹೇಶ್

ಕಡಬ ತಾಲೂಕು ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ರಾಕೇಶ್ ರೈ ಕೆಡಂಜಿ, ಉಪಾಧ್ಯಕ್ಷರಾಗಿ ಸುಕುಮಾರ್ ಶಿರಾಡಿ,  ಪ್ರಧಾನ ಕಾರ್ಯದರ್ಶಿಯಾಗಿ ಸುದರ್ಶನ್, ಕೋಶಾಧಿಕಾರಿಯಾಗಿ ಜಯರಾಮ್ ಭಟ್ Read More »

error: Content is protected !!
Scroll to Top