ಪುತ್ತೂರು

 ಕೃಷಿಕ ಸಮಾಜದ  ಜಿಲ್ಲಾ ಪ್ರತಿನಿಧಿಯಾಗಿ  ಸಂಜೀವ ಮಠಂದೂರು  ಆಯ್ಕೆ

ಪುತ್ತೂರು : ಕೃಷಿಕ ಸಮಾಜದ  ಜಿಲ್ಲಾ ಪ್ರತಿನಿಧಿಯಾಗಿ  ಸಂಜೀವ ಮಠಂದೂರು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಪುತ್ತೂರು ತಾಲೂಕು, ಇದರ ಕೃಷಿಕ ಸಮಾಜ ನಿರ್ದೇಶಕರ  ಚುನಾವಣೆಯಲ್ಲಿ ಅವಿರೋಧ ಸದಸ್ಯರಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ವಿಜಯ್ ಕುಮಾರ್ ರೈ ಕೋರಂಗ, ವಿನೋದ್ ಕುಮಾರ್ ರೈ, ಮೂಲಚಂದ್ರ, ಎಪಿ ಸದಾಶಿವ,  ಬಿ ಗೋವಿಂದ ಬೋರ್ಕರ್, ಎಂ ವೈ ರಾಮ ಪ್ರಸಾದ್, ಬಾಲಕೃಷ್ಣ ಕೆ, ದಯಾನಂದ ಕೆ, ಎಂ ದೇವಣ್ಣರೈ, ಡಿ. […]

 ಕೃಷಿಕ ಸಮಾಜದ  ಜಿಲ್ಲಾ ಪ್ರತಿನಿಧಿಯಾಗಿ  ಸಂಜೀವ ಮಠಂದೂರು  ಆಯ್ಕೆ Read More »

ಕಾರಿಗೆ ಟಿಪ್ಪರ್ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ

ಬೆಳ್ತಂಗಡಿ : ಉಜಿರೆ ಹಳೆಪೇಟೆಯಲ್ಲಿ ಕಾರಿಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ  ಹೊಡೆದ ಘಟನೆ ಇಂದು(ಡಿ.31) ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಚಾಲಕ ಬೆಳ್ತಂಗಡಿ ಕಕ್ಕೇನ ನಿವಾಸಿ ಮುನೀರ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡು ಸ್ಥಳೀಯ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿದ್ದಾರೆ. ಅಪಘಾತದ ಸಂದರ್ಭದಲ್ಲಿ  ಕಾರಿನಲ್ಲಿದ್ದ  ಏರ್ ಬ್ಯಾಗ್ ಓಪನ್ ಆಗಿದೆ ಎಂದು ತಿಳಿದು ಬಂದಿದೆ.

ಕಾರಿಗೆ ಟಿಪ್ಪರ್ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ Read More »

ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಪುತ್ತೂರು : ಪುತ್ತೂರಿನ ಹೈಸ್ಕೂಲ್ ನಲ್ಲಿ ವ್ಯಾಸಂಗ ಪಡೆಯುತ್ತಿದ್ದ ವಿದ್ಯಾರ್ಥಿನಿ ನೋವಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.  ವಿದ್ಯಾರ್ಥಿನಿ  ಗಂಭೀರವಾಗಿ ಅಸ್ವಸ್ಥಗೊಂಡಿದ್ದಾಳೆಂದು ತಿಳಿದು ಬಂದಿದೆ. ಶಾಲಾ ಶಿಕ್ಷಕರ ಕಿರುಕುಳದಿಂದ ವಿದ್ಯಾರ್ಥಿನಿ ಮನನೊಂದು ಈ ದುಡುಕಿನ ನಿರ್ಧಾರ ತೆಗೆದುಕೊಂಡಿರುವುದಾಗಿ ಸಂತ್ರಸ್ತೆಯ  ತಂದೆ ಆರೋಪಿಸಿದ್ದಾರೆ. ಮಗಳು ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಕಲ್ಲೇರಿ ಮೂಲದ ಸದ್ಯ ಪಡೀಲುನಲ್ಲಿದ್ದು ಪುತ್ತೂರು ನಗರದಲ್ಲಿರುವ ಸರಕಾರಿ ಪ್ರೌಢ ಶಾಲೆಯೊಂದರಲ್ಲಿ ಓದುತ್ತಿರುವ

ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ Read More »

ಜ.4 : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶ ಸಂಭ್ರಮ | ಟ್ರಸ್ಟ್ ನ ನೂತನ ಸಭಾ ಭವನ ಉದ್ಘಾಟನೆ | ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ

ಪುತ್ತೂರು : ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು , ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಸಹ ಸಂಸ್ಥೆಗಳ ಸಹಯೋಗದೊಂದಿಗೆ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕಲಿಗ ಸ್ವ- ಸಹಾಯ ಟ್ರಸ್ಟ್ ನ ಸಭಾಭವನ ಉದ್ಘಾಟನೆ ಹಾಗೂ ದಶಸಂಭ್ರಮ ಜ.4 ರಂದು ಒಕ್ಕಲಿಗ ಗೌಡ ಸಮುದಾಯ ಭವನ ಒಕ್ಕಲಿಗನಗರ ತೆಂಕಿಲದಲ್ಲಿ ನಡೆಯಲಿದೆ ಎಂದು ದಶಮಾನೋತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್‍ ಹೇಳಿದರು. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ  ಆದಿಚುಂಚನಗಿರಿ

ಜ.4 : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶ ಸಂಭ್ರಮ | ಟ್ರಸ್ಟ್ ನ ನೂತನ ಸಭಾ ಭವನ ಉದ್ಘಾಟನೆ | ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ | ಮುಂದಿನ ಕಲ್ಯಾಣೋತ್ಸವದೊಳಗೆ ಬೃಹತ್ ಗೋ ಶಾಲೆ ನಿರ್ಮಾಣಕ್ಕೆ ಸಂಕಲ್ಪ – ಪೇಜಾವರ ಶ್ರೀ

ಪುತ್ತೂರು1: ಶೂರರಾಜ ಪೌತ್ರನಾದ ವಸುದೇವನ ಪುತ್ರ ಶ್ರೀ ವಶಿಷ್ಠ ಗೋತ್ರೋತ್ಪನ್ನನಾದ ಸಾಕ್ಷತ್ ಮನ್ಮಥನಾದ ರಮಾವಲ್ಲಭಾನಾದ, ಭೂವೈಕುಂಠಾಧಿಪತಿ ಶ್ರೀನಿವಾಸ ಹಾಗೂ ಸುಧರ್ಮರಾಜನ ಪೌತ್ರಿಯಾದ ಆಕಾಶರಾಜನ ಪುತ್ರಿಯಾದ ಶ್ರೀ ಅತ್ರಿಗೋತ್ತೋತ್ಪನ್ನಳಾದ ಪದ್ಮಾವತಿಯ ಕಲ್ಯಾಣೋತ್ಸವ ಡಿ.29ರಂದು ಸಂಜೆ ಗೊಧೋಳಿ ಲಗ್ನದಲ್ಲಿ ವಿಜೃಂಭಣೆಯಿಂದ ಮತ್ತು ಭಕ್ತಿ ಪ್ರಧಾನವಾಗಿ ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ಭವ್ಯವಾದ ವೇದಿಕೆಯಲ್ಲಿ ನಿರ್ಮಿಸಿದ ತಿರುಪತಿ ಮಾದರಿಯ ಮಂಟಪದಲ್ಲಿ ನಡೆಯಿತು. ಸಂಕಲ್ಪ ಪುಣ್ಯಾಹ, ದೇವನಾಂದಿ, ವರಪೂಜೆ, ವರೋಪಚಾರ ಸಹಿತ ಕಂಕಣಧಾರಣೆ ನಡೆಯಿತು. ಶುಭಗಳಿಗೆಯಲ್ಲಿ ಸಹಸ್ರಾರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ | ಮುಂದಿನ ಕಲ್ಯಾಣೋತ್ಸವದೊಳಗೆ ಬೃಹತ್ ಗೋ ಶಾಲೆ ನಿರ್ಮಾಣಕ್ಕೆ ಸಂಕಲ್ಪ – ಪೇಜಾವರ ಶ್ರೀ Read More »

ಪುತ್ತೂರು ಮುಖ್ಯ ರಸ್ತೆಯಲ್ಲಿ ತುಂಡಾಗಿ ಬಿದ್ದ ಪೈಪ್‍ ಲೈನ್‍ |ಪೈಪ್‍ಗೆ ಕಾಲು ಸಿಲುಕಿ ಮಹಿಳೆ ಒದ್ದಾಟ

ಪುತ್ತೂರು : ಪುತ್ತೂರಿನ ಮುಖ್ಯರಸ್ತೆ ಬದಿಯಲ್ಲೇ ಇದ್ದಂತಹ ಪೈಪ್ ಒಳಗಡೆ ಬುರ್ಖಾಧಾರಿ ಮಹಿಳೆಯ ಕಾಲು ಸಿಲುಕಿ ಪೈಪ್‍ ನಿಂದ ಕಾಲು ತೆಗೆಯಲು ಒದ್ದಾಡಿದ್ದ ಘಟನೆ ಸೋಮವಾರ ಸಂಜೆ ನಡೆಯಿತು. ಪುತ್ತೂರು ಪೇಟೆಯ ಹೂವಿನ ಮಾರ್ಕೆಟ್ ಪಕ್ಕದಲ್ಲೇ ಕಾಲನಿಗೆ ಹೋಗುವ ರಸ್ತೆಯಲ್ಲಿ ಈ ಘಟನೆಯಾಗಿದೆ. ಮುಖ್ಯ ರಸ್ತೆಯಿಂದ ಕಾಲನಿ ರಸ್ತೆಗೆ ತಿರುಗುವ ಪ್ರದೇಶದಲ್ಲಿ ಚರಂಡಿಗೆ ಪೈಪ್ ಲೈನ್ ಹಾಕಲಾಗಿದ್ದು, ಅಲ್ಲಿದ್ದ ಪೈಪ್ ಲೈನ್ ಕಳೆವು ದಿನಗಳಿಂದ ತುಂಡಾಗಿ ಅಲ್ಲೆ ಬಿದ್ದಿತ್ತು ಎನ್ನಲಾಗಿತ್ತು. ತುಂಡಾಗಿ ಬಿದ್ದಿರುವ ಪೈಪ್‍ ಲೈನ್‍ಗಳನ್ನು ಗಮನಿಸದ

ಪುತ್ತೂರು ಮುಖ್ಯ ರಸ್ತೆಯಲ್ಲಿ ತುಂಡಾಗಿ ಬಿದ್ದ ಪೈಪ್‍ ಲೈನ್‍ |ಪೈಪ್‍ಗೆ ಕಾಲು ಸಿಲುಕಿ ಮಹಿಳೆ ಒದ್ದಾಟ Read More »

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಪಂಜ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಗಾಯಗೊಂಡ ಘಟನೆ ಡಿ.29 ರಂದು ರಾತ್ರಿ ಪಂಜದ ಕೃಷ್ಣನಗರದಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿ ಜೀವನ್ ಎಂದು ಗುರುತಿಸಲಾಗಿದೆ. ಪಂಜ ಕಡೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಜೀವನ್ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾಣಿಸಲಾಗಿದೆ. ಕಾರಿನಲ್ಲಿದ್ದ ದೇವಣ್ಣ ಎಂಬವರು ಅಪಾಯದಿಂದ ಪಾರಾಗಿದ್ದಾರೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ Read More »

ರಂಗಭೂಮಿ ಕಲಾವಿದ ವಿಠಲ ಪೂಜಾರಿ ಅತಿಕಾರಬೈಲು ಆತ್ಮಹತ್ಯೆಗೆ ಶರಣು

ವಿಟ್ಲ : ನಾಟಕ ಕಲಾವಿದರಾದ  ವಿಠಲ ಪೂಜಾರಿ (49) ಅತಿಕಾರಬೈಲು ಮನೆಯ ಹಟ್ಟಿಯ ಪಕ್ಕಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಯುವಕೇಸರಿ ಅತಿಕಾರಬೈಲು ಅಧ್ಯಕ್ಷರಾಗಿ, ನಾಟಕ ಕಲಾವಿದರು ಮತ್ತು ಬಿಲ್ಲವ ಸಂಗದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಚಂದಳಿಕೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ, ಊರಿನ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯದಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ರಂಗಭೂಮಿ ಕಲಾವಿದ ವಿಠಲ ಪೂಜಾರಿ ಅತಿಕಾರಬೈಲು ಆತ್ಮಹತ್ಯೆಗೆ ಶರಣು Read More »

ವಿದ್ಯುತ್ ಶಾಕ್‍ ನಿಂದ ಮಗು ಮೃತ್ಯು

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗುವೊಂದು ಮೃತಪಟ್ಟ ಘಟನೆ ನೆ.ಮುಡೂರು ಗ್ರಾಮದ ಗಾಳಿಮುಖ ಗೋಳಿತ್ತಡಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರೂವರೆ ವರ್ಷದ ಪುತ್ರ ಝನು ಮೃತಪಟ್ಟ ಮಗು. ಅಟವಾಡುತ್ತಾ ಮನೆಯ ಅರ್ಥ್ ಗೆ ಸಂಬಂಧಿಸಿದ ತಂತಿಯನ್ನು ಮಗು ಮುಟ್ಟಿದೆ. ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದ್ದು, ಮಗುವನ್ನು ರಕ್ಷಿಸಲು ಬಂದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರ ಸ್ಥಿತಿಯಲ್ಲಿ ಚೆರ್ಕಳದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ವಿದ್ಯುತ್ ಶಾಕ್‍ ನಿಂದ ಮಗು ಮೃತ್ಯು Read More »

ಸ್ನೇಹ ಸಂಗಮ ಅಟೋರಿಕ್ಷಾ ಚಾಲಕ-ಮಾಲಕರ ಸಂಘದ ಮಹಾಸಭೆ

ಪುತ್ತೂರು: ಪುತ್ತೂರು ಸ್ನೇಹಸಂಗಮ ಅಟೋರಿಕ್ಷಾ ಚಾಲಕ-ಮಾಲಕರ ಸಂಘದ 27ನೇ ವರ್ಷದ ವಾರ್ಷಿಕ ಮಹಾಸ ನಗರದ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಅಟೋರಿಕ್ಷಾ ಚಾಲಕರು ಪುತ್ತೂರಿನ ನರನಾಡಿಗಳು. ರಿಕ್ಷಾ ಚಾಲಕರು ಪ್ರತೀ ದಿನ ಕಷ್ಟಪಟ್ಟು ದುಡಿದು ಜೀವನ ನಿರ್ವಹಿಸಬೇಕಾಗುತ್ತದೆ. ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ನನ್ನ ಅನುದಾನದಲ್ಲಿ ರಿಕ್ಷಾ ತಂಗುದಾಣ ನಿರ್ಮಿಸಿಕೊಟ್ಟಿದ್ದೇನೆ ಎಂದರು. ರಿಕ್ಷಾ ಚಾಲಕ ಮಾಲಕರು ತಮ್ಮ ಮಕ್ಕಳಿಗೆ ಒಳ್ಳೆಯ ವಿಧ್ಯಾಭ್ಯಾಸ ನೀಡಬೇಕು ಎಂದು ಹೇಳಿದ

ಸ್ನೇಹ ಸಂಗಮ ಅಟೋರಿಕ್ಷಾ ಚಾಲಕ-ಮಾಲಕರ ಸಂಘದ ಮಹಾಸಭೆ Read More »

error: Content is protected !!
Scroll to Top