ಪುತ್ತೂರು

ಸಿಡಿಲಾಘಾತಕ್ಕೆ ಒಳಗಾದ ಪಿಡಿಒ ಆರೋಗ್ಯ ವಿಚಾರಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ಗುರುವಾರ ಸಂಜೆ ಕಂಪ್ಯೂಟರ್ ಆಫ್‍ ಮಾಡುವ ಸಂದರ್ಭ ಸಿಡಿಲು ಬಡಿದು ಆಸ್ಪತ್ರೆಗೆ ದಾಖಲಾಗಿದ್ದ ಬನ್ನೂರು ಗ್ರಾಮ ಪಂಚಾಯಿತಿ ಪಿಡಿಒ ಚಿತ್ರಾವತಿ ಅವರ ಆರೋಗ್ಯ ವಿಚಾರಿಸಲು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮಹಾವೀರ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರಕಾರಿ ಕೆಲಸವನ್ನು ತನ್ನ ಕೆಲಸ ಎಂದು ತಿಳಿದು ಸಂಜೆ ಹೊತ್ತು ಕೆಲಸ ಮಾಡುವ ಸಂದರ್ಭ ಪಿಡಿಒ ಚಿತ್ರಾವತಿ ಅವರು ಸಿಡಿಲಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ […]

ಸಿಡಿಲಾಘಾತಕ್ಕೆ ಒಳಗಾದ ಪಿಡಿಒ ಆರೋಗ್ಯ ವಿಚಾರಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು Read More »

ಮಂಗಳೂರಿನ ವೇದಂ ಆರೋಗ್ಯ ಆಯುರ್ವೇದ ಆಸ್ಪತೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಚಿನ್ ನಡ್ಕ ಅವರಿಗೆ ‘ಅಶ್ವಿನಿ’ ಪ್ರಶಸ್ತಿ

ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಹಾಸನ ವತಿಯಿಂದ ಕಾಲೇಜಿನ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ‘ಅಶ್ವಿನಿ’ ಪ್ರಶಸ್ತಿಯನ್ನು ಮಂಗಳೂರಿನ ವೇದಂ ಆರೋಗ್ಯ ಆಯುರ್ವೇದ ಆಸ್ಪತೆಯ ಮುಖ್ಯ ವೈದ್ಯಾಧಿಕಾರಿ ಹಾಗೂ ಆಡಳಿತ ನಿರ್ದೇಶಕ ಡಾ.ಸಚಿನ್ ನಡ್ಕ ಅವರಿಗೆ ನೀಡಿ ಗೌರವಿಸಲಾಯಿತು. ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಸಭಾಂಗಣದಲ್ಲಿ ನಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ‘ಸಮನ್ವಯ’ದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಮಂಗಳೂರಿನ ವೇದಂ ಆರೋಗ್ಯ ಆಯುರ್ವೇದ ಆಸ್ಪತೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಚಿನ್ ನಡ್ಕ ಅವರಿಗೆ ‘ಅಶ್ವಿನಿ’ ಪ್ರಶಸ್ತಿ Read More »

ಡಿ.13 : ‘ದಸ್ಕತ್’ ತುಳು ಚಲನಚಿತ್ರ ಬಿಡುಗಡೆ

ಪುತ್ತೂರು: ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವ ಸೆವೆಂಟಿ ಸೆವೆನ್ ಸ್ಪೂಡಿಯೋಸ್ ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರ ಡಿ.13ರಂದು ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಕೃತಿಯ ಸೊಬಗನ್ನು, ಗ್ರಾಮೀಣ ಪ್ರದೇಶದ ಬದುಕುಗಳನ್ನು ಇದ್ದಂತೆ ಪ್ರಕೃತಿದತ್ತವಾಗಿ ತೋರಿಸುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದೇವೆ. ಚಿತ್ರದಲ್ಲಿ ನಿರ್ಮಾಪಕರಾಗಿ ಪ್ರಜೇಶ್ ಶೆಟ್ಟಿ, ಕಾರ್ಯ ನಿರ್ವಹಿಸಿದ್ದಾರೆ. ಸಂತೋಷ್ ಆಚಾರ್ಯ ಗುಂಪಲಾಜೆಯವರ ಛಾಯಾಗ್ರಹಣವಿರುವ ದಸ್ಕತ್ ಚಿತ್ರಕ್ಕೆ

ಡಿ.13 : ‘ದಸ್ಕತ್’ ತುಳು ಚಲನಚಿತ್ರ ಬಿಡುಗಡೆ Read More »

ದತ್ತಜಂಯತಿ 2024ರ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

ಪುತ್ತೂರು  : ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತಜಯಂತಿ 2024 ಅಂಗವಾಗಿ ಇಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ಇಂದು  ದತ್ತಮಾಲಧಾರಾಣೆ ಅಭಿಯಾನವನ್ನು ಬಜರಂಗದಳ ಪುತ್ತೂರು ನಗರ ಸಂಯೋಜಕರಾದ ಜಯಂತ್ ಕುಂಜೂರುಪಂಜ ಅವರ ನೇತೃತ್ವದಲ್ಲಿ ಪ್ರಾರಂಭಿಸಲಾಯಿತು. ಈ ಸಂದರ್ಭ ವಿಶ್ವ ಹಿಂದೂ ಪರಿಷದ್ ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಾಳಿ ಅವರು ಕಾರ್ಯಕರ್ತರಿಗೆ ಮಾರ್ಗದರ್ಶನ

ದತ್ತಜಂಯತಿ 2024ರ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ Read More »

ಸಾಮೆತಡ್ಕ ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪುತ್ತೂರು:  ರೋಟರಿಪುರ ಸಾಮೆತ್ತಡ್ಕ ನಡುವೆ ಇರುವ ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ತೋಡಿನ ಸಮೀಪ ಸ್ಥಳೀಯ ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯ ಮೃತದೇಹ ಕಾಣಿಸಿದ್ದು ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಾಮೆತಡ್ಕ ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »

ಶೀಘ್ರದಲ್ಲೇ ಪುತ್ತೂರಿನಲ್ಲಿ ತಲೆ ಎತ್ತಲಿದೆ ಆಯುಷ್ ಆಸ್ಪತ್ರೆ | ಕಬಕದಲ್ಲಿ ಒಂದೂವರೆ ಎಕ್ರೆ ಜಾಗ ಮಂಜೂರು : ಸರಕಾರಕ್ಕೆ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನಲ್ಲಿ ಆಯುಷ್ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂದಿಸಿದಂತೆ ಶಾಸಕ ಅಶೋಕ್ ರೈಯವರ ಮೂಲಕ ಈಗಾಗಲೇ ಜಾಗವನ್ನು ಮೀಸಲಿರಿಸಲಾಗಿದ್ದು , ಈ ಜಾಗದಲ್ಲಿ ಶೀಘ್ರ ಆಸ್ಪತ್ರೆ ಮಂಜೂರು ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈಯವರು ಮನವಿ ಸಲ್ಲಿಸಿದರು. ಗುರುವಾರ ಬೆಂಗಳೂರಿನಲ್ಲಿ ಹರ್ಷಗುಪ್ತ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಈಗಾಗಲೇ 1.27 ಎಕ್ರೆ ಜಾಗವನ್ನು ಕಬಕದಲ್ಲಿ ಕಾಯ್ದಿರಿಸಲಾಗಿದೆ. ಅದೇ ಸ್ಥಳದಲ್ಲಿ ಆಸ್ಪತ್ರೆ ನಿರ್ಮಾಣ ಮಾಡುವ ವಿಚಾರಕ್ಕೆ

ಶೀಘ್ರದಲ್ಲೇ ಪುತ್ತೂರಿನಲ್ಲಿ ತಲೆ ಎತ್ತಲಿದೆ ಆಯುಷ್ ಆಸ್ಪತ್ರೆ | ಕಬಕದಲ್ಲಿ ಒಂದೂವರೆ ಎಕ್ರೆ ಜಾಗ ಮಂಜೂರು : ಸರಕಾರಕ್ಕೆ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ Read More »

ಸಿಡಿಲು ಬಡಿದು ಬನ್ನೂರು ಗ್ರಾಪಂ ಪಿಡಿಒ ಚಿತ್ರಾವತಿ ಆಸ್ಪತ್ರೆಗೆ ದಾಖಲು

ಪುತ್ತೂರು: ಕಂಪ್ಯೂಟರ್ ಸ್ವಿಚ್ ಆಫ್ ಮಾಡಲು ಹೋದ ವೇಳೆ ಸಿಡಿಲು ಬಡಿದ ಪರಿಣಾಮ ಬನ್ನೂರು ಗ್ರಾಪಂ ಪಿಡಿಒ ಕುಸಿದು ಬಿದ್ದ ಘಟನೆ ಬನ್ನೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು ನಡೆದಿದೆ ಬನ್ನೂರು ಗ್ರಾಮ ಪಂಚಾಯತ್ ಪಿಡಿಓ ಚಿತ್ರಾವತಿ ಯವರು ಕಂಪ್ಯೂಟರ್ ಸ್ವಿಚ್ ಆಫ್ ಮಾಡುವ ಸಂದರ್ಭ ಸಿಡಿಲು ಬಡಿದು ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸ್ಥಳದಲ್ಲಿದ್ದ ಸದಸ್ಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು

ಸಿಡಿಲು ಬಡಿದು ಬನ್ನೂರು ಗ್ರಾಪಂ ಪಿಡಿಒ ಚಿತ್ರಾವತಿ ಆಸ್ಪತ್ರೆಗೆ ದಾಖಲು Read More »

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಹೆತ್ತವರ ಸಭೆ | ವಿದ್ಯಾರ್ಥಿಗಳು ದೇಶದ ಸಾಂಸ್ಕೃತಿಕ ರಾಯಭಾರಿಗಳಾಗಬೇಕು : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯದಲ್ಲಿ ಭಾನುವಾರ ರಕ್ಷಕ ಶಿಕ್ಷಕ ಸಂಘದ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ವಸತಿ ನಿಲಯದಲ್ಲಿರುವ ಮಕ್ಕಳು ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರ ಮುಂಚೂಣಿಯಲ್ಲಿರದೆ ದೇಶದ ಸಂಸ್ಕೃತಿಯನ್ನು ಬಿಂಬಿಸುವ ರಾಯಬಾರಿಗಳಾಗಬೇಕು. ಮುಂದಿನ ದಿನಗಳಲ್ಲಿ ಪಠ್ಯ ವಿ?ಯಗಳು ಮಾತ್ರವಲ್ಲದೆ ಧಾರ್ಮಿಕ ವಿಷಯಗಳನ್ನು ಬೋಧಿಸುವ, ನಮ್ಮ ಸಂಸ್ಕೃತಿ ಸಂಸ್ಕಾರಗಳನ್ನು ಮಕ್ಕಳಿಗೆ ತಿಳಿಸುವ ತರಗತಿಗಳನ್ನು ಅಂಬಿಕಾ ಸಂಸ್ಥೆಯಲ್ಲಿ ನಡೆಸಲಾಗುತ್ತದೆ ಎಂದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಹೆತ್ತವರ ಸಭೆ | ವಿದ್ಯಾರ್ಥಿಗಳು ದೇಶದ ಸಾಂಸ್ಕೃತಿಕ ರಾಯಭಾರಿಗಳಾಗಬೇಕು : ಸುಬ್ರಹ್ಮಣ್ಯ ನಟ್ಟೋಜ Read More »

ವಿದ್ಯಾರ್ಥಿನಿಗೆ ಕಿರುಕುಳ, ಜಾತಿ ನಿಂದನೆ | ಆರೋಪಿ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಶಾಂತಿಗೋಡು ಗ್ರಾಮದ ಯುವಕೋರ್ವ ವಿದ್ಯಾರ್ಥಿನಿಯೊರ್ವಳಿಗೆ ಕಿರುಕುಳ ನೀಡಿ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಶಾಂತಿಗೋಡು ಗ್ರಾಮದ ರೋಶನ್ ಎಂಬಾತ ಕಿರುಕುಳ ನೀಡಿದ ಆರೋಪಿ. ವಿದ್ಯಾರ್ಥಿನಿ ನೀಡಿದ ದೂರಿನಂತೆ ಆತನ ವಿರುದ್ಧ ಪೋಕ್ಸೋ ಪ್ರಕರಣ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿದ್ಯಾರ್ಥಿನಿಗೆ ಕಿರುಕುಳ, ಜಾತಿ ನಿಂದನೆ | ಆರೋಪಿ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು Read More »

ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಅನ್ಯಮತೀಯ ವ್ಯಕ್ತಿಯಿಂದ  ಹಾನಿ | ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಖಂಡನೆ

ಪುತ್ತೂರು: ತುಳುವರು ಭಕ್ತಿಯಿಂದ ಪೂಜಿಸುವ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಅನ್ಯಮತೀಯ ವ್ಯಕ್ತಿ ಹಾನಿಗೊಳಿಸಿದ್ದನ್ನು ವಿಶ್ವ ಹಿಂದೂ ಪರಿಷತ್, ಬಜರಂಗದಳ ತೀವ್ರವಾಗಿ ಖಂಡಿಸಿದೆ. ಅನ್ಯಮತೀಯ ವ್ಯಕ್ತಿ ಸಲಾಂ ಎಂಬಾತ ಹಾನಿಯುಂಟುಮಾಡಲು ಯತ್ನಿಸಿರುವುದನ್ನು ತೀವ್ರವಾಗಿ ಖಂಡಿಸುತ್ತಿದ್ದೇವೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ. ಹಿಂದೂ ವಿರೋಧಿ ಶಕ್ತಿಗಳು ವಿನಾಕಾರಣ ಹಿಂದುಗಳ ಆರಾಧನ ಸ್ಥಳಗಳಿಗೆ ಹಾನಿಯುಂಟು ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿದ್ದು.ಇಂತಹ ಮನಸ್ಥಿತಿಯ ವ್ಯಕ್ತಿಗಳ ಬಗ್ಗೆ ಸರಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ

ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಅನ್ಯಮತೀಯ ವ್ಯಕ್ತಿಯಿಂದ  ಹಾನಿ | ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಖಂಡನೆ Read More »

error: Content is protected !!
Scroll to Top