ಪುತ್ತೂರು

ಬೆಟ್ಟಂಪಾಡಿಯ ಕಕ್ಕೂರಿನಲ್ಲಿ ನೂತನ ಸುಸಜ್ಜಿತ ಬಸ್ ತಂಗುದಾಣ ಲೋಕಾರ್ಪಣೆ | ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍, ಕೌಶಲ್‍ ಮೀಡಿಯಾ ಸಂಸ್ಥೆಯಿಂದ ಕೊಡುಗೆ

ಪುತ್ತೂರು: ಪ್ರತಿಷ್ಠಿತ ಜಿ.ಎಲ್‍. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಕೌಶಲ್ ಮೀಡಿಯಾ ವತಿಯಿಂದ ಕೊಡುಗೆಯಾಗಿ ನೀಡಿದ ಸುಸಜ್ಜಿತ ಬಸ್‍ ತಂಗುದಾಣದ ಲೋಕಾರ್ಪಣೆ ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಎಂಬಲ್ಲಿ ಗುರುವಾರ ನಡೆಯಿತು. ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನ ಮುಖ್ಯಸ್ಥ ಜಿ..ಎಲ್‍.ಬಲರಾಮ ಆಚಾರ್ಯ ತಂಗುದಾಣವನ್ನು ದೀಪ ಬೆಳಗಿಸಿ ಲೋಕಾರ್ಪಣೆಗೊಳಿಸಿ ಮಾತನಾಡಿ, ಕಕ್ಕೂರು ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಇದೀಗ ಬಸ್‍ ತಂಗುದಾಣವನ್ನು ಕೌಶಲ್‍ ಮೀಡಯಾ ಜತೆಗೂಡಿ ನಿರ್ಮಿಸಲಾಗಿದೆ. ಇದು ಆ ಭಾಗದ ಜನತೆಯ ಹಲವು ವರ್ಷಗಳ ಬೇಡಿಕೆಯಾಗಿತ್ತು. ಇದೀಗ ಉದ್ಘಾಟನೆಗೊಂಡ ತಂಗುದಾಣ ಉತ್ತಮ […]

ಬೆಟ್ಟಂಪಾಡಿಯ ಕಕ್ಕೂರಿನಲ್ಲಿ ನೂತನ ಸುಸಜ್ಜಿತ ಬಸ್ ತಂಗುದಾಣ ಲೋಕಾರ್ಪಣೆ | ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍, ಕೌಶಲ್‍ ಮೀಡಿಯಾ ಸಂಸ್ಥೆಯಿಂದ ಕೊಡುಗೆ Read More »

ಡಿ.6,7,8 : ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ | ಕರಾಟೆ ಬುಡೋಕಾನ್‍ ಇಂಟರ್ ನ್ಯಾಷನಲ್ ಸಂಸ್ಥೆ ಆತಿಥ್ಯ

ಪುತ್ತೂರು: ಕರಾಟೆ ಬುಡೋಕಾನ್‍ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ ಡಿ.6,7 ಹಾಗೂ 8 ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವಶ್ರೀ ಸಭಾಂಗಣದಲ್ಲಿ ನಡೆಯಲಿದೆ ಎಂದು ಇನ್‍ ಸ್ಟಿಟ್ಯೂಟ್ ಆಫ್‍ ಕರಾಟೆ ಆಂಡ್ ಅಲೈಡ್ ಆರ್ಟ್ಸ್ ನ ಮುಖ್ಯ ಶಿಕ್ಷಕ ಎಂ.ಸುರೇಶ್‍ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕರಾಟೆ ಬುಡೋಕಾನ್‍ ಇಂಟರ್ ನ್ಯಾಷನಲ್ ಸಂಸ್ಥೆ ಕಳೆದ 46 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕರಾಟೆ ಪಟುಗಳಾಗಿ ಹೊರಹೊಮ್ಮಿದ್ದಾರೆ. ಪುತ್ತೂರಿನಲ್ಲಿ

ಡಿ.6,7,8 : ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ | ಕರಾಟೆ ಬುಡೋಕಾನ್‍ ಇಂಟರ್ ನ್ಯಾಷನಲ್ ಸಂಸ್ಥೆ ಆತಿಥ್ಯ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಲಾಭಾಂಶ ವಿತರಣೆ

ಪೆರ್ನೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಪೆರ್ನೆ ವಲಯದ ವತಿಯಿಂದ ಲಾಭಾಂಶ ವಿತರಿಸಲಾಯಿತು. ಕೆದಿಲ ಕಾರ್ಯಕ್ಷೇತ್ರದ  “B” ಒಕ್ಕೂಟದ  ಮುಕಾಂಬಿಕಾ  ಪ್ರಗತಿ ಬಂದು  ಸಂಘ ಮತ್ತು  ಗಡಿಯಾರ ಮುಬಾರಕ್ ಪ್ರಗತಿ ಬಂದು ಸ್ವ ಸಹಾಯ ಸಂಘ ಒಕ್ಕೂಟಕ್ಕೆ ಲಾಭಾಂಶ ವಿತರಿಸಲಾಯಿತು. ಪೆರ್ನೆ ವಲಯ ಮೇಲ್ವಿಚಾರಕಿ ಶಾರದಾ, ಸೇವಾಪ್ರತಿನಿಧಿ ಜಯಂತಿ ಲಾಭಾಂಶ ವಿತರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಲಾಭಾಂಶ ವಿತರಣೆ Read More »

ಖಾಸಗಿ ಬಸ್‍ ನಿಲ್ದಾಣದ ಬಳಿ ಇರುವ ನಾಗನಕಟ್ಟೆಗೆ ಹಾನಿ : ಆರೋಪಿ ಬಂಧನ

ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಸಮೀಪದ ನಾಗನ ಕಟ್ಟೆಯ ಬೀಗ ಗೇಟ್ ಗಳನ್ನು ಮುರಿದು ಹಾನಿ ಮಾಡಿದ ಘಟನೆ ನಡೆದಿದೆ. ಹಾನಿ ಮಾಡುವ ಸಂದರ್ಭ ಸ್ಥಳದಲ್ಲಿದ್ದ ಸ್ಥಳೀಯರು ಹಾನಿ ಮಾಡಿದಾತ ಜಿಡೆಕಲ್ಲು ನಿವಾಸಿ ಸಲಾಂ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳೀಯ ನಗರಸಭಾ ಸದಸ್ಯ ಹಾಗೂ ನಾಗನ ಕಟ್ಟೆ ಸಮಿತಿಯ ಪದಾಧಿಕಾರಿಗಳು ಭಕ್ತರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ಖಾಸಗಿ ಬಸ್‍ ನಿಲ್ದಾಣದ ಬಳಿ ಇರುವ ನಾಗನಕಟ್ಟೆಗೆ ಹಾನಿ : ಆರೋಪಿ ಬಂಧನ Read More »

ಡಿ.7 : ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಡಿ.7 ಶನಿವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಡಿ.6 ಶುಕ್ರವಾರ ಬೆಳಿಗ್ಗೆ 10 ರಿಂದ ಪಂಚಾಮೃತಾಭಿಷೇಕ, ಕಲಶಾಭಿಷೇಕ, ಮಧ್ಯಾಹ್ನ 12 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 3 ಕ್ಕೆ ಶ್ರೀಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು. ಸಂಜೆ 6 ರಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಹಾಗೂ

ಡಿ.7 : ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ Read More »

ಜೆಸಿಐ ತರಬೇತುದಾರ ಪ್ರದೀಪ್‍ ಬಾಕಿಲ ನಿಧನ

ಪುತ್ತೂರು: ಜೆಸಿಐ ನ ತರಬೇತುದಾರ ಶಾಂತಿನಗರ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ (41) ನಿಧನರಾಗಿದ್ದಾರೆ. ಆಲಂಕಾರು ನಿವಾಸಿಯಾಗಿದ್ದ ಪ್ರದೀಪ್ ರವರ ಮೃತದೇಹ ಮನೆಯ ಅಂಗಳದಲ್ಲಿರುವ ಶೆಡ್ ನಲ್ಲಿ ಪತ್ತೆಯಾಗಿದೆ. ಹೃದಯಾಘಾತ ಸಂಭವಿಸಿರಬಹುದು ಎಂದು ಹೇಳಲಾಗಿತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಜೆಸಿಐ ತರಬೇತುದಾರ ಪ್ರದೀಪ್‍ ಬಾಕಿಲ ನಿಧನ Read More »

ಸಂಪ್ಯದಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ

ಪುತ್ತೂರು : ಪುತ್ತೂರು ಬಿರುಮಲೆ ಬೆಟ್ಟವನ್ನು ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಈಗಾಗಲೇ 2 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಮಂಗಳವಾರ ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಸಂಪ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಶಿಕ್ಷಣ, ಉದ್ಯೋಗ ನೀಡುವ ದೃಷ್ಟಿಕೋನವನ್ನಿಟ್ಟುಕೊಂಡು ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇನೆ. ಒಟ್ಟಾರೆಯಾಗಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ ಎಂದ ಅವರು, ಈಗಾಗಲೇ

ಸಂಪ್ಯದಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ Read More »

ಕೋಡಿಂಬಾಡಿ ಗ್ರಾಪಂ ಸಾಮಾನ್ಯ ಸಭೆ ರದ್ದು : ಕೋರಂ ಕೊರತೆ

ಪುತ್ತೂರು: ಡಿ.4 ರಂದು ನಡೆಯಬೇಕಿದ್ದ ಕೋಡಿಂಬಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಸದಸ್ಯರ ಕೋರಂ ಕೊರತೆಯ ಹಿನ್ನೆಲೆಯಲ್ಲಿ ರದ್ದುಗೊಂಡಿದೆ. 11 ಮಂದಿ ಸದಸ್ಯರನ್ನು ಗ್ರಾಮ ಪಂಚಾಯಿತಿ ಹೊಂದಿದೆ. ಈ ಪೈಕಿ ಅಧ್ಯಕ್ಷೆ ಮಲ್ಲಿಕಾ, ಉಪಾಧ್ಯಕ್ಷ ಜಯಪ್ರಕಾಶ್‍ ಬದಿನಾರು, ಸದಸ್ಯರಾದ ಉಷಾ ಲಕ್ಷ್ಮಣ ಪೂಜಾರಿ, ಪುಷ್ಪಾ  ಅವರುಗಳು ಮಾತ್ರ ಸಭೆಗೆ ಹಾಜರಾಗಿದ್ದರು. ಉಳಿದಂತೆ ಜಗನ್ನಾಥ ಶೆಟ್ಟಿ ನಡುಮನೆ, ಗೀತಾ, ಪೂರ್ಣಿಮಾ, ರಾಮಣ್ಣ ಗೌಡ ಗುಂಡೋಳೆ, ರಾಮಚಂದ್ರ ಪೂಜಾರಿ ಶಾಂತಿನಗರ, ವಿಶ್ವನಾಥ ಹಾಗೂ ಮೋಹಿನಿಯವರು ಸಭೆಗೆ ಗೈರಾಗಿದ್ದರು. ಈ ಹಿನ್ನಲೆಯಲ್ಲಿ

ಕೋಡಿಂಬಾಡಿ ಗ್ರಾಪಂ ಸಾಮಾನ್ಯ ಸಭೆ ರದ್ದು : ಕೋರಂ ಕೊರತೆ Read More »

ಪುತ್ತೂರು ಭಾರತೀಯ ಜನತಾ ಪಾರ್ಟಿ 145ನೇ ಬೂತ್‍ ನ ನೂತನ ಅಧ್ಯಕ್ಷರಾಗಿ ರಾಜಶೇಖರ್,  ಕಾರ್ಯದರ್ಶಿಯಾಗಿ ನವೀನ್ ರೈ ಪಂಜಳ ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 145ನೇ ಬೂತ್‍ ನ ನೂತನ ಅಧ್ಯಕ್ಷರಾಗಿ ರಾಜಶೇಖರ್, ಕಾರ್ಯದರ್ಶಿಯಾಗಿ ನವೀನ್ ರೈ ಪಂಜಳ ಆಯ್ಕೆಯಾಗಿದ್ದಾರೆ. ಸಂಕಪ್ಪ ಪಂಜಳ ಅವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ಪರಮೇಶ್, ಗುರುಪ್ರಸಾದ್, ಪ್ರವೀಣ್ ಶುಭರಾತ್ರಿ ಶಿಬರ, ನವೀನ್ ರೈ ಶಿಬರ, ಉಷಾ, ಹರಿಣಿ , ಸನತ್, ಉಮಾವತಿ,

ಪುತ್ತೂರು ಭಾರತೀಯ ಜನತಾ ಪಾರ್ಟಿ 145ನೇ ಬೂತ್‍ ನ ನೂತನ ಅಧ್ಯಕ್ಷರಾಗಿ ರಾಜಶೇಖರ್,  ಕಾರ್ಯದರ್ಶಿಯಾಗಿ ನವೀನ್ ರೈ ಪಂಜಳ ಆಯ್ಕೆ Read More »

ಡಿ.28-29 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವೈಭವದ ‘ಶ್ರೀನಿವಾಸ ಕಲ್ಯಾಣೋತ್ಸವ’, ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಜಂಟಿ ಆಶ್ರಯದಲ್ಲಿ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಧರ್ಮ ಸಂಗಮ, ಧಾರ್ಮಿಕ ಸಭೆ ಡಿ.28 ಹಾಗೂ 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಅವರು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್

ಡಿ.28-29 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವೈಭವದ ‘ಶ್ರೀನಿವಾಸ ಕಲ್ಯಾಣೋತ್ಸವ’, ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ Read More »

error: Content is protected !!
Scroll to Top