ಪುತ್ತೂರು

ಕಾರ್ಮಿಕ ಶಿವಪ್ಪ ಮೃತದೇಹ ಇಳಿಸಿ ಹೋದ ಘಟನೆ | ಹೆನ್ರಿ ತಾವ್ರೋರನ್ನು ಶೀಘ್ರ ಬಂಧಿಸುವಂತೆ ಆದಿ ದ್ರಾವಿಡ ಸಮಾಜ ಸೇವಾ ಸಂಘದಿಂದ ಪ್ರತಿಭಟನೆ | ಪ್ರತಿಭಟನೆಗೆ ಎಸ್ಡಿ ಪಿಐ ಸಾಥ್

ಪುತ್ತೂರು: ಕಾರ್ಮಿಕ ಶಿವಪ್ಪ ಮೃತಪಟ್ಟು ಅವರ ಮೃತ ದೇಹವನ್ನು ತಂದಿಟ್ಟ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಶಿವಪ್ಪರವರು ಕೆಲಸ ಮಾಡುತ್ತಿದ್ದ ಮಾಲೀಕ ಹೆನ್ರಿ ತಾರ್ವೋ ರನ್ನು ಶೀಘ್ರ ಬಂಧಿಸಬೇಕು ಎಂದು ಒತ್ತಾಯಿಸಿ ಆದಿ ದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಎಸ್ಡಿರಪಿಐ ಬೆಂಬಲದೊಂದಿಗೆ ಶುಕ್ರವಾರ ಅಮರ್ ಜವಾನ್‍ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ದಲಿತ ಮುಖಂಡ ಸೇಸಪ್ಪ ಬೆದ್ರಕಾಡು ಮಾತನಾಡಿ, ಶಿವಪ್ಪರ ಮೃತದೇಹವನ್ನು ತಂದು ಇರಿಸಿದ ರೀತಿ ಅಮಾನವೀಯವಾಗಿದ್ದು, ಇಂತಹಾ ನೀಚ ಕೃತ್ಯವನ್ನು […]

ಕಾರ್ಮಿಕ ಶಿವಪ್ಪ ಮೃತದೇಹ ಇಳಿಸಿ ಹೋದ ಘಟನೆ | ಹೆನ್ರಿ ತಾವ್ರೋರನ್ನು ಶೀಘ್ರ ಬಂಧಿಸುವಂತೆ ಆದಿ ದ್ರಾವಿಡ ಸಮಾಜ ಸೇವಾ ಸಂಘದಿಂದ ಪ್ರತಿಭಟನೆ | ಪ್ರತಿಭಟನೆಗೆ ಎಸ್ಡಿ ಪಿಐ ಸಾಥ್ Read More »

ಅಂಬಿಕಾದಲ್ಲಿ ದ.ಕ. ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ |ದೇಸೀಯ ಕಲೆಗಳ ಅರಿವು ವಿದ್ಯಾರ್ಥಿಗಳಿಗಿರಬೇಕು : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಶಿಕ್ಷಣ ಕೇವಲ ಪಠ್ಯ ಸಂಗತಿಗಳನ್ನು ತಿಳಿಸಿದರೆ ಸಾಲದು. ಭಾರತೀಯತೆ, ದೇಸೀಯ ಕಲೆಗಳನ್ನೂ ಮಕ್ಕಳಿಗೆ ಅರ್ಥ ಮಾಡಿಸಿಕೊಡಬೇಕು. ಆ ನೆಲೆಯಲ್ಲಿ ಯೋಚಿಸುವಾಗ ನಾನಾ ಬಗೆಯ ಸ್ಪರ್ಧೆಗಳ ಅನಿವಾರ್ಯತೆ ಇದೆ. ಮನರಂಜನೆಯ ಮೂಲಕ ನಮ್ಮತನವೆಂಬುದು ವಿದ್ಯಾರ್ಥಿಗಳಲ್ಲಿ ಹಂಚಿಕೆಯಾಗುವುದಕ್ಕೆ ಸ್ಪರ್ಧೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ದ.ಕ. ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಹಾಗೂ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಸಹಯೋಗದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ

ಅಂಬಿಕಾದಲ್ಲಿ ದ.ಕ. ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ |ದೇಸೀಯ ಕಲೆಗಳ ಅರಿವು ವಿದ್ಯಾರ್ಥಿಗಳಿಗಿರಬೇಕು : ಸುಬ್ರಹ್ಮಣ್ಯ ನಟ್ಟೋಜ Read More »

ನ.30 : ಕುಂತೂರು ಪದವುನಲ್ಲಿ ಕಡಬ ತಾಲೂಕು ಸಾಹಿತ್ಯ ಸಮ್ಮೇಳನ

ಕಡಬ: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕಡಬ ತಾಲೂಕು ಘಟಕದ ವತಿಯಿಂದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನ ನ.30 ಶನಿವಾರ ಕುಂತೂರು ಪದವು ಸೈಂಟ್ ಜಾರ್ಜ್ ಕನ್ನಡ ಮಾಧ್ಯಮ ಪ್ರೌಢ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಕಡಬ ತಾಲೂಕು ಘಟಕದ ಅಧ್ಯಕ್ಷ ಸೇಸಪ್ಪ ರೈ ರಾಮಕುಂಜ ಹೇಳಿದರು. ಅವರು ಕಡಬದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನದ  ಸರ್ವಾಧ್ಯಕ್ಷ ಕರುಣಾಕರ ಗೋಗಟೆ ಅವರ ಅಧ್ಯಕ್ಷತೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸ್ವಾಗತ ಸಮಿತಿಯ ನೇತೃತ್ವದಲ್ಲಿ ಎಲ್ಲಾ ಕಾರ್ಯಗಳು ನಡೆಯಲಿದೆ

ನ.30 : ಕುಂತೂರು ಪದವುನಲ್ಲಿ ಕಡಬ ತಾಲೂಕು ಸಾಹಿತ್ಯ ಸಮ್ಮೇಳನ Read More »

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ | 50 ವರ್ಷ ದಾಂಪತ್ಯ ಜೀವನ ಪೂರೈಸಿದ ಸವಣೂರು ಗ್ರಾಮದ ನಾಲ್ಕು ಮಂದಿ ದಂಪತಿಗಳಿಗೆ ಸನ್ಮಾನ

ಸವಣೂರು :ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮದ ಅಂಗವಾಗಿ ತಾಲೂಕಿನ ಪ್ರತೀ ಗ್ರಾಮ ಪಂಚಾಯತ್‍ ವ್ಯಾಪ್ತಿಯಲ್ಲಿರುವ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಸಮುದಾಯದವರಿಗೆ ಸನ್ಮಾನ ಕಾರ್ಯಕ್ರಮ ನಡೆಸುತ್ತಾ ಬಂದಿದೆ. ಇಂದು  ಸವಣೂರು ಗ್ರಾಮ ಒಕ್ಕೂಟದ ನಾಲ್ಕು ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಸವಣೂರು ಯುವ ಸಭಾಭವನದಲ್ಲಿ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ದಶಮಾನೋತ್ಸವ ಸಮಿತಿ ಅಧ್ಯಕ್ಷ ಪಟೇಲ್‍ ಗೋಪಾಲಕೃಷ್ಣ ಗೌಡ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ ಗೌಡ, ಉಪಾಧ್ಯಕ್ಷ ಪ್ರವೀಣ್ ಕುಂಟ್ಯಾನ, ಸವಣೂರು ಪ್ರಾಥಮಿಕ ಕೃಷಿಪತ್ತಿನ

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ | 50 ವರ್ಷ ದಾಂಪತ್ಯ ಜೀವನ ಪೂರೈಸಿದ ಸವಣೂರು ಗ್ರಾಮದ ನಾಲ್ಕು ಮಂದಿ ದಂಪತಿಗಳಿಗೆ ಸನ್ಮಾನ Read More »

ಮೃತ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಸಾವು ಪ್ರಕರಣ | ಪ್ರಮುಖ ಆರೋಪಿಯನ್ನು ಬಂಧಿಸದಿದ್ದಲ್ಲಿ ನಾಳೆ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ಆದಿ ದ್ರಾವಿಡ ಸಮಾಜ ಸೇವಾ ಸಂಘ

ಪುತ್ತೂರು: ಮೃತಪಟ್ಟ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಎಂಬವರನ್ನ ರಸ್ತೆ ಬದಿ ಮಲಗಿಸಿ ಅವಮಾನಕಾರಿ ರೀತಿಯಲ್ಲಿ ಬಿಟ್ಟು ಹೋದ ಮಾಲಿಕ, ಪ್ರಮುಖ ಆರೋಪಿ ಹೆನ್ರಿ ತಾವ್ರೋರನ್ನು ಪುತ್ತೂರು ನಗರ ಠಾಣಾ ಪೊಲೀಸರು ಇನ್ನೂ ಬಂಧಿಸದೇ ಇರುವ ನಿಟ್ಟಿನಲ್ಲಿ ನ.22 ನಾಳೆ ಪುತ್ತೂರು ನಗರ ಠಾಣೆ ಎದುರು ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಬಾಬು

ಮೃತ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಸಾವು ಪ್ರಕರಣ | ಪ್ರಮುಖ ಆರೋಪಿಯನ್ನು ಬಂಧಿಸದಿದ್ದಲ್ಲಿ ನಾಳೆ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ಆದಿ ದ್ರಾವಿಡ ಸಮಾಜ ಸೇವಾ ಸಂಘ Read More »

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ “INFOTSAV 2K24”

ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ “INFOTSAV 2K24” ವಿವಿಧ ಸ್ಪರ್ಧೆಗಳು ನಡೆಯಿತು. ಈ ಸ್ಪರ್ದೆಯಲ್ಲಿ  ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರಶ್ಮಿ  ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಶುಭ ಹಾರೈಸಿದರು.  MIT ಮೂಡಬಿದ್ರೆಯ ಎಂಸಿಎ ವಿಭಾಗದ ಅಸಿಸ್ಟೆಂಟ್  ಪ್ರೊಸೆಸರ್  ರಾಜೇಶ್ ರಾಜು ಅತಿಥಿಯಾಗಿ ಮಾತನಾಡಿ, ಈ ರೀತಿಯ ಫೆಸ್ಟ್ ನಲ್ಲಿ

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ “INFOTSAV 2K24” Read More »

ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆಗೆ ಮಂಜೂರಾದ ಜಮೀನು ರದ್ದುಪಡಿಸಿ ಪ್ರಿಯದರ್ಶಿನಿ ಚಾರಿಟೇಬಲ್‍ ಟ್ರಸ್ಟ್ ಗೆ ಮಂಜೂರು ಹುನ್ನಾರ | ಸರಕಾರಿ ಜಾಗ ಕಬಳಿಕೆಗೆ ಯತ್ನ : ಶಾಸಕ ಸಂಜೀವ ಮಠಂದೂರು

ಪುತ್ತೂರು :  ಪುತ್ತೂರು ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆಗೆ ಮಂಜೂರಾದ ಜಮೀನನ್ನು ರದ್ದು ಪಡಿಸಿ ಪುತ್ತೂರು ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ಗೆ ಮಂಜೂರು ಮಾಡುವ ಹುನ್ನಾರ ನಡೆಯುತ್ತಿದ್ದು, ಇದರ ವಿರುದ್ಧ ಬಿಜೆಪಿಯಿಂದ ಬೃಹತ್ ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,  ವಕ್ಫ್ ನಂತೆ ಸರಕಾರಿ ಜಮೀನನ್ನು ನುಂಗುವ ಕೆಲಸ ನಡೆಯುತ್ತಿದೆ. ಇದೇ ರೀತಿ ಮುಂದುವರಿದರೆ ವಿಧಾನಸೌಧದ ಜಾಗವನ್ನು ಕಬಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಪುತ್ತೂರು ಸರಕಾರಿ

ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆಗೆ ಮಂಜೂರಾದ ಜಮೀನು ರದ್ದುಪಡಿಸಿ ಪ್ರಿಯದರ್ಶಿನಿ ಚಾರಿಟೇಬಲ್‍ ಟ್ರಸ್ಟ್ ಗೆ ಮಂಜೂರು ಹುನ್ನಾರ | ಸರಕಾರಿ ಜಾಗ ಕಬಳಿಕೆಗೆ ಯತ್ನ : ಶಾಸಕ ಸಂಜೀವ ಮಠಂದೂರು Read More »

ಹಾರಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡೋತ್ಸವ

ಪುತ್ತೂರು : ಹಾರಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 2024ರ ಸಾಲಿನ ವಾರ್ಷಿಕ ಕ್ರೀಡೋತ್ಸವ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ  ನಡೆಯಿತು. ಪುತ್ತೂರು ಅರಣ್ಯ ಇಲಾಖೆಯ ಬಿಟ್ ಅಧಿಕಾರಿ ರಾಜುಚಂದ್ರ ಧ್ವಜಾರೋಹಣ ನೆರವೇರಿಸಿದರು. ಮಹಾಲಿಂಗೇಶ್ವರ ದೇವಸ್ಥಾನದಿಂದ ಶಾಲಾ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯನ್ನು ತಂದರು.  ಪುತ್ತೂರು ಸಂಚಾರ ಠಾಣೆಯ ಸಬ್ ಇನ್ಸ್ಪೆಕ್ಟರ್ ಕುಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,  ಹಾರಾಡಿ ಸರಕಾರಿ ಶಾಲೆಯಲ್ಲಿ ಸುಮಾರು 850 ವಿಧ್ಯಾರ್ಥಿಗಳು ಇರುವುದನ್ನು ತಿಳಿದು ಹರ್ಷ ವ್ಯಕ್ತಪಡಿಸಿದ್ದಲ್ಲದೆ, ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಾಗಿ ಭಾರತ ದೇಶವನ್ನು

ಹಾರಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡೋತ್ಸವ Read More »

ನ.24 : ಭಜಕರ ಬೃಹತ್ ಸಮಾವೇಶ | ಭಜನೆ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ನಡೆಯಲಿದೆ ಸಮಾವೇಶ

ಪುತ್ತೂರು: ಭಜನಾ ಸೇವೆ ಹಾಗೂ ಭಜನಾ ಸೇವೆಯಲ್ಲಿ ಪಾಲ್ಗೊಳ್ಳುವ ಮಹಿಳೆಯರ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೃಹತ್ ಭಜಕರ ಸಮಾವೇಶವನ್ನು  ನ.24 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಭಜನಾ ಪರಿಷತ್ ಪುತ್ತೂರು ತಾಲೂಕು ಅಧ್ಯಕ್ಷ ಲೋಕೇಶ್‍ ಬೆತ್ತೋಡಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಭಜನಾ ಪರಿಷತ್ ಪುತ್ತೂರು ತಾಲೂಕು, ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಭಜಕರ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು,

ನ.24 : ಭಜಕರ ಬೃಹತ್ ಸಮಾವೇಶ | ಭಜನೆ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ನಡೆಯಲಿದೆ ಸಮಾವೇಶ Read More »

ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ  ಹೊಡೆದ ಬಸ್

ಪುತ್ತೂರು: ಮದುವೆಗೆ ತೆರಳುತ್ತಿದ್ದ ಬಸ್ದೊಂದು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುದನ್ನು ತಪ್ಪಿಸಲು ಹೋಗಿ ಮನೆಯೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಆಮ್ಮಿನಡ್ಕ ಎಂಬಲ್ಲಿ ಇಂದು ನಡೆದಿದೆ. ಘಟನೆಯ ಪರಿಣಾಮ ಬಸ್ಸಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ. ಮನೆ ಗೋಡೆ ಸಂಪೂರ್ಣ ಕುಸಿದಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ  ಹೊಡೆದ ಬಸ್ Read More »

error: Content is protected !!
Scroll to Top