ಪುತ್ತೂರು

ಪಾಪೆಮಜಲು ನಿವಾಸಿ ಯೋಗೀಶ್‍ ಭಂಡಾರಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಡಗನ್ನೂರು ಗ್ರಾಮದ ತಲೆಂಜಿ ಸಾಮಾಜಿಕ ಗೇರು ನೆಡುತೋಪು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅರಿಯಡ್ಕ ಗ್ರಾಮದ ಪಾಪೆಮಜಲು ನಿವಾಸಿ ಯೋಗೀಶ್ ಭಂಡಾರಿ ಆತ್ಮಹತ್ಯೆ ಮಾಡಿಕೊಂಡವರು. ಬೆಳಗಿನ ಜಾವ ವ್ಯಕ್ತಿಯೊಬ್ಬರು ಹಾಲು ಕೊಂಡೊಯ್ಯುವ ಸಂದರ್ಭದಲ್ಲಿ ಪಕ್ಕದ ಕಾಡಿನಿಂದ ಮೊಬೈಲ್ ರಿಂಗಣಿಸುವ ಶಬ್ದ ಕೇಳಿಸಿ ಅದನ್ನು ಆಲಿಸಿಕೊಂಡು ಆ ಸ್ಥಳಕ್ಕೆ ತೆರಳಿದಾಗ ಯೋಗೀಶ್ ಭಂಡಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ

ಪಾಪೆಮಜಲು ನಿವಾಸಿ ಯೋಗೀಶ್‍ ಭಂಡಾರಿ ನೇಣು ಬಿಗಿದು ಆತ್ಮಹತ್ಯೆ Read More »

ಕ್ಯಾಂಪ್ಕೋ ಪುತ್ತೂರು ಶಾಖೆಯ ನವೀಕೃತ ಕಚೇರಿ ಉದ್ಘಾಟನೆ, ಸದಸ್ಯ ಬೆಳೆಗಾರರ ಸಭೆ

ಪುತ್ತೂರು: ಕ್ಯಾಂಪ್ಕೋ ಪುತ್ತೂರು ಶಾಖೆಯ ನವೀಕೃತ ಕಚೇರಿ ಉದ್ಘಾಟನೆ ಶ್ರೀ ಮಹಾಮಾಯಿ ದೇವಸ್ಥಾನದ ಬಳಿಯ ಕಟ್ಟಡದಲ್ಲಿ ನಡೆಯಿತು. ಶಾಖೆಯನ್ನು ಹಿರಿಯ ಸದಸ್ಯ ಬೆಳೆಗಾರರಾದ ಎನ್. ಎಸ್. ಹರಿಹರ್ ರಾವ್ ಕೊಡಿಪ್ಪಾಡಿ, ಸುರೇಶ್ ಬಲ್ನಾಡು, ಬಿ. ಟಿ. ನಾರಾಯಣ ಭಟ್, ಕೆ. ಟಿ. ಭಟ್ ಉದ್ಘಾಟಿಸಿದರು. ಸದಸ್ಯರ ಬೇಡಿಕೆಯಂತೆ ಸಣ್ಣ ಮಟ್ಟದ ಮಣ್ಣು ತಪಾಸಣೆ ಯಂತ್ರವನ್ನು ಕ್ಯಾಂಪ್ಕೊ ಖರೀದಿಸಿದ್ದು, ಈ ಮೊಬೈಲ್ ಸಾಯಿಲ್ ಟೆಸ್ಟ್ ಯಂತ್ರವನ್ನು ಪುತ್ತೂರಿನಲ್ಲಿ ಇರಿಸಿ ಬೆಳೆಗಾರರ ಬಳಕೆಗೆ ಲಭ್ಯವಾಗುವಂತೆ ಮಾಡಲಾಗುವುದು. 1.45 ಲಕ್ಷ ಸದಸ್ಯರಿದ್ದು,

ಕ್ಯಾಂಪ್ಕೋ ಪುತ್ತೂರು ಶಾಖೆಯ ನವೀಕೃತ ಕಚೇರಿ ಉದ್ಘಾಟನೆ, ಸದಸ್ಯ ಬೆಳೆಗಾರರ ಸಭೆ Read More »

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜು ತಂಡಕ್ಕೆ ದ್ವಿತೀಯ ಸ್ಥಾನ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿಕೊಂಡಿದೆ. ಬೆಂಗಳೂರಿನ ರಾಜರಾಜೇಶ್ವರಿ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎಂಟು ವಿಭಾಗದ ಒಟ್ಟು ೧೬ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ತಂಡವನ್ನು ಸಮರ್ಥವಾಗಿ ಮುನ್ನಡೆಸಿದ ನಾಯಕಿ, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜು ತಂಡಕ್ಕೆ ದ್ವಿತೀಯ ಸ್ಥಾನ Read More »

ಇಂದು (ನ.23) : ಕನಕ ಸಂಭ್ರಮ

ಪುತ್ತೂರು : ಇನ್ನೆರ್‍  ವ್ಹೀಲ್‍ ಕ್ಲಬ್‍ 50 ವರ್ಷ ಪೂರೈಸಿದ ಸಲುವಾಗಿ ಕನಕ ಸಂಭ್ರಮ ನ.23 ರಂದು ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಸಂಜೆ 4:30 ಗಂಟೆಗೆ ಉಧ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಯಾಗಿ  ಇನ್ನೆರ್ ವ್ಹೀಲ್‍ ಕ್ಲಬ್ ಜಿಲ್ಲಾಧ್ಯಕ್ಷ ವೈಶಾಲಿ ಕುಡುವ,   ಪರಿಸರವಾದಿ, ಬೆಂಗಳೂರು ಪಿಲಾಂತ್ರೊಪಿಸ್ಟ್,  ರೇವತಿ ಕಾಮತ್‍, ಪಾಲ್ಗೊಳ್ಳರಿದ್ದಾರೆ ಎಂದು ಇನ್ನೆರ್‍ ವ್ಹೀಲ್‍ ಕ್ಲಬ್ ಅಧ್ಯಕ್ಷೆ ರಾಜೇಶ್ವರಿ, ಕಾರ್ಯದರ್ಶಿ ವಚನ ಜಯರಾಮ್‍ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು (ನ.23) : ಕನಕ ಸಂಭ್ರಮ Read More »

ಗುಂಡ್ಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 20 ಕ್ಕೂ ಅಧಿಕ ಮಂದಿಗೆ ಗಾಯ

ಪುತ್ತೂರು: ಸರಕಾರಿ ಬಸ್, ಖಾಸಗಿ ಬಸ್ ಹಾಗೂ ಕಾರಿನ ನಡುವೆ ನಡೆದ ಸರಣಿ ಅಪಘಾತದಲ್ಲಿ 20 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಈ ಸಂದರ್ಭ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದು

ಗುಂಡ್ಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 20 ಕ್ಕೂ ಅಧಿಕ ಮಂದಿಗೆ ಗಾಯ Read More »

ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಸಾಕ್ಷರತೆ, ನಾಯಕತ್ವ ಕುರಿತು ತರಬೇತಿ

ಪುತ್ತೂರು: ಶಿಕ್ಷಣ ಪೌಂಡೇಶನ್ ಸಂಸ್ಥೆಯ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿ ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರಿಗೆ  ಒಂದು ದಿನದ ಡಿಜಿಟಲ್ ಸಾಕ್ಷರತೆ ಹಾಗೂ ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಗಳನ್ನೊಳಗೊಂಡ  ತರಬೇತಿಯನ್ನು ಪುತ್ತೂರು ತಾಲೂಕು ಪಂಚಾಯತ್  ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಭಾರತಮಾತೆ ಹಾಗೂ ಗ್ರಂಥಾಲಯ ಪಿತಾಮಹ ಎಸ್. ಆರ್. ರಂಗನಾಥನ್ ರವರ ಭಾವಚಿತ್ರಕ್ಕೆ  ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಡಿಜಿಟಲ್ ಸಾಕ್ಷರತೆಯ

ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಸಾಕ್ಷರತೆ, ನಾಯಕತ್ವ ಕುರಿತು ತರಬೇತಿ Read More »

ಜಿಲ್ಲೆಯ ರೈತರ 14 ಕೋಟಿ ಸಾಲದ ಬಡ್ಡಿ, ಚಕ್ರಬಡ್ಡಿ ಮನ್ನಾಕ್ಕೆ ಆಗ್ರಹ | ಪತ್ರಿಕಾಗೋಷ್ಠಿಯಲ್ಲಿ ವಿಕ್ಟರ್ ಮಾರ್ಟಿನ್

ಪುತ್ತೂರು: ಸುಸ್ತಿಯಾದ ಬೆಳೆಸಾಲದ ಬಡ್ಡಿಯನ್ನು ಮನ್ನಾ ಮಾಡದಿರುವುದರಿಂದ ದ.ಕ.ಜಿಲ್ಲೆಯ 731 ಮಂದಿ ರೈತರು ಅವಕಾಶ ವಂಚಿತರಾಗಿದ್ದು, ಈ ರೈತರ ರೂ. 14 ಕೋಟಿಯಷ್ಟು ಬಡ್ಡಿ ಮತ್ತು ಚಕ್ರಬಡ್ಡಿಯನ್ನು ಮನ್ನಾ ಮಾಡಲು ಸರ್ಕಾರ ಗಮನ ಹರಿಸಬೇಕು. ಜಿಲ್ಲೆಯ ಶಾಸಕರುಗಳು ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ರೈತರ ಧ್ವನಿಯಾಗಬೇಕು ಎಂದು ಎಸ್‍ಡಿಪಿಐ ಪಕ್ಷದ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿನ್ ಅವರು ಆಗ್ರಹಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ಮಾತನಾಡಿ, ರಾಜ್ಯದ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಫೆಬ್ರವರಿ ತಿಂಗಳಲ್ಲಿ

ಜಿಲ್ಲೆಯ ರೈತರ 14 ಕೋಟಿ ಸಾಲದ ಬಡ್ಡಿ, ಚಕ್ರಬಡ್ಡಿ ಮನ್ನಾಕ್ಕೆ ಆಗ್ರಹ | ಪತ್ರಿಕಾಗೋಷ್ಠಿಯಲ್ಲಿ ವಿಕ್ಟರ್ ಮಾರ್ಟಿನ್ Read More »

ಕಾರ್ಮಿಕ ಶಿವಪ್ಪ ಮೃತದೇಹ ಇಳಿಸಿ ಹೋದ ಘಟನೆ | ಹೆನ್ರಿ ತಾವ್ರೋರನ್ನು ಶೀಘ್ರ ಬಂಧಿಸುವಂತೆ ಆದಿ ದ್ರಾವಿಡ ಸಮಾಜ ಸೇವಾ ಸಂಘದಿಂದ ಪ್ರತಿಭಟನೆ | ಪ್ರತಿಭಟನೆಗೆ ಎಸ್ಡಿ ಪಿಐ ಸಾಥ್

ಪುತ್ತೂರು: ಕಾರ್ಮಿಕ ಶಿವಪ್ಪ ಮೃತಪಟ್ಟು ಅವರ ಮೃತ ದೇಹವನ್ನು ತಂದಿಟ್ಟ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಶಿವಪ್ಪರವರು ಕೆಲಸ ಮಾಡುತ್ತಿದ್ದ ಮಾಲೀಕ ಹೆನ್ರಿ ತಾರ್ವೋ ರನ್ನು ಶೀಘ್ರ ಬಂಧಿಸಬೇಕು ಎಂದು ಒತ್ತಾಯಿಸಿ ಆದಿ ದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಎಸ್ಡಿರಪಿಐ ಬೆಂಬಲದೊಂದಿಗೆ ಶುಕ್ರವಾರ ಅಮರ್ ಜವಾನ್‍ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ದಲಿತ ಮುಖಂಡ ಸೇಸಪ್ಪ ಬೆದ್ರಕಾಡು ಮಾತನಾಡಿ, ಶಿವಪ್ಪರ ಮೃತದೇಹವನ್ನು ತಂದು ಇರಿಸಿದ ರೀತಿ ಅಮಾನವೀಯವಾಗಿದ್ದು, ಇಂತಹಾ ನೀಚ ಕೃತ್ಯವನ್ನು

ಕಾರ್ಮಿಕ ಶಿವಪ್ಪ ಮೃತದೇಹ ಇಳಿಸಿ ಹೋದ ಘಟನೆ | ಹೆನ್ರಿ ತಾವ್ರೋರನ್ನು ಶೀಘ್ರ ಬಂಧಿಸುವಂತೆ ಆದಿ ದ್ರಾವಿಡ ಸಮಾಜ ಸೇವಾ ಸಂಘದಿಂದ ಪ್ರತಿಭಟನೆ | ಪ್ರತಿಭಟನೆಗೆ ಎಸ್ಡಿ ಪಿಐ ಸಾಥ್ Read More »

ಅಂಬಿಕಾದಲ್ಲಿ ದ.ಕ. ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ |ದೇಸೀಯ ಕಲೆಗಳ ಅರಿವು ವಿದ್ಯಾರ್ಥಿಗಳಿಗಿರಬೇಕು : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಶಿಕ್ಷಣ ಕೇವಲ ಪಠ್ಯ ಸಂಗತಿಗಳನ್ನು ತಿಳಿಸಿದರೆ ಸಾಲದು. ಭಾರತೀಯತೆ, ದೇಸೀಯ ಕಲೆಗಳನ್ನೂ ಮಕ್ಕಳಿಗೆ ಅರ್ಥ ಮಾಡಿಸಿಕೊಡಬೇಕು. ಆ ನೆಲೆಯಲ್ಲಿ ಯೋಚಿಸುವಾಗ ನಾನಾ ಬಗೆಯ ಸ್ಪರ್ಧೆಗಳ ಅನಿವಾರ್ಯತೆ ಇದೆ. ಮನರಂಜನೆಯ ಮೂಲಕ ನಮ್ಮತನವೆಂಬುದು ವಿದ್ಯಾರ್ಥಿಗಳಲ್ಲಿ ಹಂಚಿಕೆಯಾಗುವುದಕ್ಕೆ ಸ್ಪರ್ಧೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ದ.ಕ. ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಹಾಗೂ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಸಹಯೋಗದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ

ಅಂಬಿಕಾದಲ್ಲಿ ದ.ಕ. ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ |ದೇಸೀಯ ಕಲೆಗಳ ಅರಿವು ವಿದ್ಯಾರ್ಥಿಗಳಿಗಿರಬೇಕು : ಸುಬ್ರಹ್ಮಣ್ಯ ನಟ್ಟೋಜ Read More »

ನ.30 : ಕುಂತೂರು ಪದವುನಲ್ಲಿ ಕಡಬ ತಾಲೂಕು ಸಾಹಿತ್ಯ ಸಮ್ಮೇಳನ

ಕಡಬ: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕಡಬ ತಾಲೂಕು ಘಟಕದ ವತಿಯಿಂದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನ ನ.30 ಶನಿವಾರ ಕುಂತೂರು ಪದವು ಸೈಂಟ್ ಜಾರ್ಜ್ ಕನ್ನಡ ಮಾಧ್ಯಮ ಪ್ರೌಢ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಕಡಬ ತಾಲೂಕು ಘಟಕದ ಅಧ್ಯಕ್ಷ ಸೇಸಪ್ಪ ರೈ ರಾಮಕುಂಜ ಹೇಳಿದರು. ಅವರು ಕಡಬದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನದ  ಸರ್ವಾಧ್ಯಕ್ಷ ಕರುಣಾಕರ ಗೋಗಟೆ ಅವರ ಅಧ್ಯಕ್ಷತೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸ್ವಾಗತ ಸಮಿತಿಯ ನೇತೃತ್ವದಲ್ಲಿ ಎಲ್ಲಾ ಕಾರ್ಯಗಳು ನಡೆಯಲಿದೆ

ನ.30 : ಕುಂತೂರು ಪದವುನಲ್ಲಿ ಕಡಬ ತಾಲೂಕು ಸಾಹಿತ್ಯ ಸಮ್ಮೇಳನ Read More »

error: Content is protected !!
Scroll to Top