ಪುತ್ತೂರು

ನಾಳೆ (ನ.8) : ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ | ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗ

ಪುತ್ತೂರು: ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗದೊಂದಿಗೆ ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ ನಾಳೆ (ನ.8) ಶುಕ್ರವಾರ ಕೊಯಿಲ ಗ್ರಾಮದ ಕಲಾಯಿಗುತ್ತುನಲ್ಲಿ ನಡೆಯಲಿದೆ. ಸಂಜೆ 6 ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮೊಹಾಪಾತ್ರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ, ಸುಳ್ಯ ಗುತ್ತಿಗಾರು ಲಯನ್ಸ್ […]

ನಾಳೆ (ನ.8) : ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ | ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ 202425 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸುಭದ್ರದ ಟ್ರಸ್ಟ್‌ನ ಕಛೇರಿಯಲ್ಲಿ ನಡೆಯಿತು. ಟ್ರಸ್ಟ್‌ ಸಂಚಾಲಕ ಅರುಣ್ ಕುಮಾರ್ ಪುತ್ತಿಲರ ಉಪಸ್ಥಿತಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಟ್ರಸ್ಟ್ ಅಧ್ಯಕ್ಷರಾಗಿ ಮಹೇಂದ್ರ ವರ್ಮ ಬಜತ್ತೂರು ಅವರನ್ನು ಆಯ್ಕೆ ಮಾಡಲಾಯಿತು. ಪ್ರ.ಕಾರ್ಯದರ್ಶಿಯಾಗಿ ರವಿಕುಮಾ‌ರ್ ರೈ ಕೆದಂಬಾಡಿ ಮಠ, ಕೋಶಾಧಿಕಾರಿಯಾಗಿ ಗಣೇಶ್ ಭಟ್ ಮಕರಂದರ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ರಾಜು ಶೆಟ್ಟಿ ಕೆಮ್ಮಾಯಿ, ಮಾಧ್ಯಮ ಸಂಚಾಲಕರಾಗಿ ನವೀನ್ ರೈ.ಎಸ್. ಅವರುಗಳನ್ನು ಸರ್ವಾನುಮತದಿಂದ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ Read More »

ಡಿ.20, 21, 22 : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ | ನಾಳೆ (ನ. 8) ರಂದು ಕನ್ನಡ ಜ್ಯೋತಿ ರಥಯಾತ್ರೆ ಪುತ್ತೂರಿಗೆ  ಆಗಮನ

ಪುತ್ತೂರು: ಡಿ. 20, 21, 22, ರಂದು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕುರಿತಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಸಮ್ಮೇಳನದಲ್ಲಿ ಕನ್ನಡ ಪ್ರೇಮಿಗಳು ಭಾಗಿಯಾಗುವ ಹಿನ್ನಲೆಯಲ್ಲಿ ಕನ್ನಡ ಜ್ಯೋತಿ ಹೊತ್ತ ಕನ್ನಡ ಭುವನೇಶ್ವರಿಯ ರಥ ನ. 8 ರಂದು ಶುಕ್ರವಾರ ಪುತ್ತೂರಿಗೆ ಆಗಮಿಸಲಿದೆ. ಮಧ್ಯಾಹ್ನ 12 ಗಂಟೆಗೆ ಕಬಕ ವೃತ್ತದ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ರಥವನ್ನು ಸ್ವಾಗತಿಸಿ  ಅಲ್ಲಿಂದ ಮೆರವಣಿಗೆ ಮೂಲಕ  ಸಂಚರಿಸಿ ಮುಖ್ಯ ರಸ್ತೆಯಾಗಿ ಶ್ರೀಧರ್ ಭಟ್ ಅಂಗಡಿಯಿಂದ

ಡಿ.20, 21, 22 : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ | ನಾಳೆ (ನ. 8) ರಂದು ಕನ್ನಡ ಜ್ಯೋತಿ ರಥಯಾತ್ರೆ ಪುತ್ತೂರಿಗೆ  ಆಗಮನ Read More »

ನಾಳೆ (ನ.7) : ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’

ಸವಣೂರು: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’ ನಾಳೆ ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸವಣೂರು ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ನ.7) : ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’ Read More »

ಪುತ್ತೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ ಶೆಲ್ಟರ್‌ ಸಹಿತ ಮೂಲ ಸೌಕರ್ಯ ಅಭಿವೃದ್ದಿಗೆ ಸಂಸದ ಕ್ಯಾ. ಚೌಟ ನೈಋತ್ಯ ರೈಲ್ವೆಗೆ ಪತ್ರ

ಮಂಗಳೂರು: ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಶೆಲ್ಟರ್‌(ತಂಗುದಾಣ) ಸೇರಿದಂತೆ ಅಗತ್ಯ ಮೂಲಸೌಕರ್ಯ ಅಭಿವೃದ್ದಿಪಡಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರೈಲ್ವೆ ಇಲಾಖೆಗೆ ಮನವಿ ಮಾಡಿದ್ದಾರೆ.  ಎರಡು ದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ರೈಲ್ವೆ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯಲ್ಲಿಯೂ ಕಬಕ-ಪುತ್ತೂರು ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ ಶೆಲ್ಟರ್‌ ವಿಸ್ತರಿಸುವ ವಿಚಾರವನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದ ಸಂಸದ ಕ್ಯಾ. ಚೌಟ ಅವರು, ಇದೀಗ ಈ ಸಮಸ್ಯೆಗೆ ಆದ್ಯತೆ ಮೇರೆಗೆ ತುರ್ತಾಗಿ ಸ್ಪಂದಿಸುವಂತೆ ಕೋರಿ ನೈಋತ್ಯ

ಪುತ್ತೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ ಶೆಲ್ಟರ್‌ ಸಹಿತ ಮೂಲ ಸೌಕರ್ಯ ಅಭಿವೃದ್ದಿಗೆ ಸಂಸದ ಕ್ಯಾ. ಚೌಟ ನೈಋತ್ಯ ರೈಲ್ವೆಗೆ ಪತ್ರ Read More »

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ ನ ಶಾಲಾ ಮೈದಾನ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ, ಮನವಿ ಪತ್ರ ಬಿಡುಗಡೆ | | ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಬೆಳ್ಳಾರೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಸಂತ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ಶಾಲಾ ಮೈದಾನದ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ ಬಿಡುಗಡೆ ಹಾಗೂ ಮನವಿ ಪತ್ರ ಬಿಡುಗಡೆ ಇಂದು ನಡೆಯಿತು. ಕೆಪಿಎಸ್ ನ ಎಸ್.ಡಿ.ಎಂ.ಸಿ ಅಧ್ಯಕ್ಷೆ ಹಾಗೂ ಶಾಸಕಿ ಭಾಗೀರಥಿ ಮುರುಳ್ಯರವರು ಗುದ್ದಲಿ ಪೂಜೆ ನೆರವೇರಿಸಿ, ವಸಂತ ಸಂಭ್ರಮದ ಲೋಗೊ ಹಾಗು ಮನವಿ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಸಂತ ಸಂಭ್ರಮ ಸಮಿತಿ ಕಾರ್ಯಾಧ್ಯಕ್ಷೆ ರಾಜೀವಿ ಆರ್.ರೈ, ಸಂಚಾಲಕ ಎಸ್.ಎನ್. ಮನ್ಮಥ,

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ ನ ಶಾಲಾ ಮೈದಾನ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ, ಮನವಿ ಪತ್ರ ಬಿಡುಗಡೆ | | ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ Read More »

ಸಾಹಿತಿ ಡಾ. ತಾಳ್ತಜೆ ವಸಂತ ಕುಮಾರ ಅವರಿಗೆ ‘ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ’ ಕುರಿತು ಪಿಎಚ್‍ ಡಿ ಪದವಿ

ಪುತ್ತೂರು: ಮುಂಬೈ ವಿಶ್ವವಿದ್ಯಾನಿಲಯದ ಮುಖ್ಯಸ್ಥ, ನಿವೃತ್ತ ಉಪನ್ಯಾಸಕ, ಸಾಹಿತಿ ಡಾ.ತಾಳ್ತಜೆ ವಸಂತ ಕುಮಾರ್ ಅವರಿಗೆ ಪಿಎಚ್‍ ಡಿ ಪದವಿ ಲಭಿಸಿದೆ. ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ ಎಂಬ ವಿಷಯದಲ್ಲಿ  ಪಿಎಚ್ ಡಿ ಪದವಿ ಪಡೆದಿರುತ್ತಾರೆ. ದಿ. ಕೃಷ್ಣ ಭಟ್ಟ ಹಾಗೂ ಲಕ್ಷ್ಮಿ ಅವರ ಸುಪುತ್ರನಾದ ಡಾ. ತಾಳ್ತಜೆ ವಸಂತ ಕುಮಾರ ಸುದೀರ್ಘ 37 ವರ್ಷಗಳ  ಕಾಲ ಉಪನ್ಯಾಸಕ ವೃತ್ತಿಯನ್ನು ಮಾಡಿದ್ದು,  ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಹಾಗೂ ಮುಂಬೈ ವಿಶ್ವವಿದ್ಯಾನಿಲಯದ ಮುಖ್ಯಸ್ಥರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ಅವರ ಮಾರ್ಗದರ್ಶನದಲ್ಲಿ 17 ಮಂದಿ

ಸಾಹಿತಿ ಡಾ. ತಾಳ್ತಜೆ ವಸಂತ ಕುಮಾರ ಅವರಿಗೆ ‘ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ’ ಕುರಿತು ಪಿಎಚ್‍ ಡಿ ಪದವಿ Read More »

ನ.8 : ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಎನ್ವೋ-ಟೆಕ್‍-2024’ ಸಮಾರಂಭ | ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜಿನ ವತಿಯಿಂದ ಕಾಲೇಜಿನ ಸಂಶೋಧನಾ ಅಧ್ಯಯನ ಕೇಂದ್ರ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ ‘ಎನ್ವೋ-ಟೆಕ್‍-2024’ ನ.8 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್‍ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸ್ತುತ ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಾಸ್ಥ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಈ ಸಮಸ್ಯೆಗಳನ್ನು

ನ.8 : ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಎನ್ವೋ-ಟೆಕ್‍-2024’ ಸಮಾರಂಭ | ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ Read More »

ಸಹಪಠ್ಯ ಸ್ಪರ್ಧೆ : ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆಯಲ್ಲಿ ಶಾಂತಿನಗರ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಆಶು ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಮತ್ತು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ಪುತ್ತೂರು ಸಂತ ವಿಕ್ಟರ್ ವಿದ್ಯಾಸಂಸ್ಥೆಯಲ್ಲಿ ಸಹಪಠ್ಯ ಸ್ಪರ್ಧೆ ನಡೆಯಿತು. ಈ ಮೂಲಕ ಪ್ರದೀಪ್‍ ಬಾಕಿಲ ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಹಪಠ್ಯ ಸ್ಪರ್ಧೆ : ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ರಕ್ತದಾನದಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರಕುತ್ತದೆ: ಡಾ. ಸೀತಾರಾಮ ಭಟ್ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ, ರೋಟರಿ-ಕ್ಯಾಂಪ್ಕೋ ರಕ್ತನಿಧಿ ಕೇಂದ್ರ ಪುತ್ತೂರು ಹಾಗೂ ಎಚ್.ಡಿ.ಎಫ್.ಸಿ. ಬ್ಯಾಂಕ್ ನ ಪುತ್ತೂರು ಘಟಕದ ಸಹಯೋಗದಲ್ಲಿ ಮಹಾವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ “ಸ್ವಯಂಪ್ರೇರಿತ ರಕ್ತದಾನ ಶಿಬಿರ” ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗೀ ರೋಟರಿ-ಕ್ಯಾಂಪ್ಕೋ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಸೀತಾರಾಮ ಭಟ್, ರಕ್ತದಾನ ಶ್ರೇಷ್ಠ ದಾನವಾಗಿದೆ. ಆರೋಗ್ಯವಂತರೆಲ್ಲರೂ ರಕ್ತದಾನ ಮಾಡಬಹುದು. ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.

ರಕ್ತದಾನದಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರಕುತ್ತದೆ: ಡಾ. ಸೀತಾರಾಮ ಭಟ್ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ Read More »

error: Content is protected !!
Scroll to Top