ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಗೋಕಳ್ಳತನ | ತನಿಖೆ ನಡೆಸಿ ಗೋ ಕಳ್ಳರನ್ನು ಬಂಧಿಸುವಂತೆ ನಗರ ಠಾಣೆಗೆ ದೂರು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮೇ ಒಂದರಂದು ರಾತ್ರಿ  ನಡೆದ ಗೋ ಕಳ್ಳತನವಾದ ಬಗ್ಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಪುತ್ತೂರು ನಗರ ಠಾಣೆಗೆ ದೂರು ನೀಡಲಾಯಿತು. ದೇವಸ್ಥಾನದ ವಠಾರದಿಂದ ಎರಡು ಗೋ ಕಳ್ಳತನವಾಗಿದ್ದು ಈ ಕುರಿತು ತನಿಖೆ ನಡೆಸಿ ಗೋಕಳ್ಳರನ್ನು ಬಂಧಿಸುವಂತೆ ದೂರು ನೀಡಲಾಯಿತು. ಈ ಸಂದರ್ಭ ಬಜರಂಗದಳ ನಗರ ಪ್ರಖಂಡ ಸಂಯೋಜಕ ಜಯಂತ್ ಕುಂಜೂರುಪಂಜ , ಸಹ ಸಂಯೋಜಕ ಪ್ರವೀಣ್ ಕಲ್ಲೇಗ, ಗ್ರಾಮಾಂತರ ಸಂಯೋಜಕ ವಿಶಾಖ್ ಸಸಿಹಿತ್ಲು, ಹರ್ಷಿತ್ ಬಲ್ನಾಡ್, […]

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಗೋಕಳ್ಳತನ | ತನಿಖೆ ನಡೆಸಿ ಗೋ ಕಳ್ಳರನ್ನು ಬಂಧಿಸುವಂತೆ ನಗರ ಠಾಣೆಗೆ ದೂರು Read More »

ಶಿಕ್ಷಕ ಕುಶಾಲಪ್ಪ ಗೌಡ ನಿಧನ

ಕುದ್ಮಾರು: ಬೆಳಂದೂರು ಗ್ರಾಮದ ಪಳ್ಳತ್ತಾರು ಶಾಲಾ ಶಿಕ್ಷಕ ಕುಶಾಲಪ್ಪ ಗೌಡ (58) ಇಂದು ನಿಧನರಾದರು. ಅವರು ಬೆಳಂದೂರು ಗ್ರಾಮದ ತುಂಬ್ಯ ನಿವಾಸಿಯಾಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಶಿಕ್ಷಕ ಕುಶಾಲಪ್ಪ ಗೌಡ ನಿಧನ Read More »

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ದ್ವಿಚಕ್ರ ವಾಹನ ಕಳವು ಪ್ರಕರಣ | ಸಾರ್ವಜನಿಕರಿಗೆ ಭಯದ ವಾತಾವರಣದಲ್ಲಿ ನಿಲುಗಡೆ ಮಾಡುವ ಪರಿಸ್ಥಿತಿ

ಪುತ್ತೂರು: ಪುತ್ತೂರು ನಗರದಲ್ಲಿ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದರಲ್ಲೂ ದ್ವಿಚಕ್ರ ವಾಹನ ಕಳ್ಳರ ಹಾವಳಿ ಜಾಸ್ತಿಯಾಗಿದೆ. ಪರಿಣಾಮ ನಗರದಲ್ಲಿ ಪಾರ್ಕ್ ಮಾಡಲು ವಾಹನ ಸವಾರರು ಹಿಂದೆ-ಮುಂದೆ ನೋಡುವಂತಾಗಿದೆ. ನಗರದಲ್ಲಿ ಅಂಗಡಿ ಮುಂಗಟ್ಟು, ರೈಲ್ವೇ ನಿಲ್ದಾಣ ಹೀಗೆ ಪ್ರಮುಖ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಕಾರ್ಯಾಚರಿಸುತ್ತಿದ್ದರೂ ಕ್ಯಾಮರಾ ಕಣ್ತಪ್ಪಿಸಿ ಕಳವು ಮಾಡುವ ಚಾಣಕ್ಯವನ್ನು ಕಳ್ಳರು ಹೊಂದಿದ್ದು, ಇದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಮತ್ತಷ್ಟು ಸಿಸಿ ಕ್ಯಾಮರಾ ಅಳವಡಿಸುವಂತೆ ಸಾರ್ವಜನಿಕರು ಮಾಹಿತಿ ಮನವಿ ಮಾಡಿದರೂ ಸಿಸಿ ಟಿವಿ ಅಳವಡಿಸದೇ

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ದ್ವಿಚಕ್ರ ವಾಹನ ಕಳವು ಪ್ರಕರಣ | ಸಾರ್ವಜನಿಕರಿಗೆ ಭಯದ ವಾತಾವರಣದಲ್ಲಿ ನಿಲುಗಡೆ ಮಾಡುವ ಪರಿಸ್ಥಿತಿ Read More »

ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ

ಪುತ್ತೂರು: ಪುತ್ತೂರಿನ ಜಿಡೆಕಲ್ಲಿನಲ್ಲಿ ಕಾರ್ಯಾಚರಿಸುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ ಲಭಿಸಿದೆ. ಮಂಗಳೂರು ವಿಶ್ವವಿದ್ಯಾನಿಲಯವು ನಡೆಸಿದ 5ನೆ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು ಕಾಲೇಜಿಗೆ ಬಿ.ಕಾಂ. ಮತ್ತು ಬಿ.ಎ. ವಿಭಾಗಗಳ ಪ್ರಕಟಿತ 26 ವಿದ್ಯಾರ್ಥಿಗಳ ಫಲಿತಾಂಶಗಳಲ್ಲಿ ಆರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ (Distinction ) ಪಡೆಯುವುದರೊಂದಿಗೆ ಉತ್ತಮ ಫಲಿತಾಂಶ ಲಭಿಸಿದೆ. ಅಂತಿಮ ಬಿ.ಕಾಂ.ನ 5ನೆ ಸೆಮಿಸ್ಟರ್ ಪರೀಕ್ಷೆಗಳಲ್ಲಿ  ಸಂದೇಶ್ ಮಾರುತಿ ಕದಂ ಇವರು ಫೈನಾನ್ಸಿಯಲ್ ಮ್ಯಾನೇಜ್ಮೆಂಟ್, ಇನ್ಕಮ್ ಟ್ಯಾಕ್ಸ್ ಮತ್ತು ಜಿ. ಎಸ್.

ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ Read More »

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಪ್ರಯಾಣಿಕರಿಗೆ ಗಾಯ

ಪುತ್ತೂರು: ತಾಲೂಕು ಸರ್ವೆ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಅಪರಾಹ್ನ ಸುಮಾರು 12.30 ಕ್ಕೆ ಸಂಭವಿಸಿದೆ. ಎರಡೂ ಕಾರುಗಳಲ್ಲಿ ಇದ್ದ ಪ್ರಯಾಣಿಕರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರು ಕಡೆಗೆ ವಸಂತ ಎಂಬವರು ಚಲಾಯಿಸುತ್ತಿದ್ದ ಟಾಟಾ ಪಂಚ್ ಕಾರು ಹಾಗೂ ಸವಣೂರು ಕಡೆಗೆ ಚಲಾಯಿಸುತ್ತಿದ್ದ ಚಿದಾನಂದ ಎಂಬವರ ಮಾರುತಿ ಸಿಲಿರಿಯೊ ಕಾರುಗಳು ಡಿಕ್ಕಿಯಾಗಿವೆ. ಸರ್ವೆ ಬಳಿಯ ಅಪಾಯಕಾರಿ ತಿರುವಿನಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸಿತ್ತಿರುವುದು ವಿಷಾದನೀಯವಾಗಿದೆ. ಈ ಕುರಿತು ಸಂಬಂಧಿಸಿದ ಇಲಾಖೆಯವರು ಸೂಕ್ತ ಎಚ್ಚರಿಕೆಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಪ್ರಯಾಣಿಕರಿಗೆ ಗಾಯ Read More »

ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನಾಗರಾಜ ಆರಿಗ ಆತ್ಮಹತ್ಯೆ

ಪುತ್ತೂರು: ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನಾಗರಾಜ ಆರಿಗ (78) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲ್ಯಾಡಿ ಸಮೀಪದ ಇಚ್ಲಂಪಾಡಿ ಗ್ರಾಮದ ಬೀಡುಬೈಲು ನಿವಾಸಿಯಾಗಿರುವ ನಾಗರಾಜ ಆರಿಗ ಬೀಡುಬೈಲು ಮನೆಯಲ್ಲಿ ಕಳೆದ ಎರಡು ವರ್ಷಗಳಿಂದ ಒಬ್ಬಂಟಿಯಾಗಿ ವಾಸವಾಗಿದ್ದರು. ಅವರ ಮನೆ ಕೆಲಸದವರಾದ ಸುಧಾಕರ ಅವರು ಮಂಗಳವಾರ ಹಗಲು ಕೆಲಸಕ್ಕೆ ಬಂದಿರಲಿಲ್ಲ. ಅದೇ ದಿನ ರಾತ್ರಿ 8.45 ಗಂಟೆಗೆ ಮನೆಗೆ ಮಲಗಲೆಂದು ಬಂದಾಗ ಮನೆಯಲ್ಲಿ ಲೈಟ್ ಉರಿಯದಿರುವುದನ್ನು ಕಂಡು ಮನೆಯ ಬಳಿ ಹೋಗಿ ನಾಗರಾಜ

ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನಾಗರಾಜ ಆರಿಗ ಆತ್ಮಹತ್ಯೆ Read More »

8 ಕುರಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪುತ್ತೂರು: ತೆಂಕಿಲ ವಿವೇಕಾನಂದ ಶಾಲಾ ಬಳಿ 8 ಕುರಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೂರ್ನಾಲ್ಕು ದಿನಗಳ ಹಿಂದೆ ಸತ್ತಿರಬಹುದು ಎಂದು ಶಂಕಿಸಲಾಗಿದ್ದು, ಯಾರೋ ತಂದು ಎಸೆದು ಹೋಗಿರಬಹುದು ಎನ್ನಲಾಗಿದೆ. ಈ ಪರಿಸರದಲ್ಲಿ ಇದೀಗ ಗಬ್ಬುನಾಥದಿಂದ ಮೂಗುಮುಚ್ಚಿ ಸಂಚರಿಸುವ ಪರಿಸ್ಥಿತಿ ಬಂದಿದೆ. ಈ ಕುರಿತು ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ನಗರಸಭೆ ಆಯುಕ್ತರಿಗೆ ಮಾಹಿತಿ ನೀಡಲಾಗಿದ್ದು, ಶೀಘ್ರ ತೆರವು ಮಾಡಬೇಕಾಗಿದೆ.

8 ಕುರಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಬಹುಮಾನ ವಿತರಣಾ ಸಮಾರಂಭ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ಬಿಕಾಮ್ ಹಾಗೂ ಬಿಬಿಎ ವಿಭಾಗಗಳ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೋ ಮಾತನಾಡಿ, ವಿದ್ಯಾರ್ಥಿಗಳ ನಡವಳಿಕೆ ಒಂದು ಕಾಲೇಜಿನ ಮುಖವಾಣಿ ಇದ್ದಂತೆ. ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು, ಬದ್ಧತೆ ಅಳವಡಿಸಿಕೊಂಡಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಉಪಪ್ರಾಂಶುಪಾಲ ಡಾ.ವಿಜಯ ಕುಮಾರ್ ಮೊಳೆಯಾರ್ ಮಾತನಾಡಿ, ವಿದ್ಯೆ ವಿನಯವನ್ನು ಕೊಡುತ್ತ್ತದೆ. ವಿದ್ಯಾರ್ಥಿ ಜೀವನದಲ್ಲಿ ಗುರಿ ಮುಖ್ಯ. ಗುರಿಯೆಡೆಗೆ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಬಹುಮಾನ ವಿತರಣಾ ಸಮಾರಂಭ Read More »

ಪುತ್ತೂರಿನಲ್ಲಿ ನಗರಸಭೆಯಿಂದ ರಾಜಕಾಲುವೆಗಳ ಸ್ವಚ್ಛತೆ ಕಾರ್ಯ ಪ್ರಾರಂಭ |ಸಹಾಯಕ ಆಯುಕ್ತರು, ತಹಶೀಲ್ದಾರ್, ಪೌರಾಯುಕ್ತರಿಂದ ವೀಕ್ಷಣೆ

ಪುತ್ತೂರು: ಮುಂಗಾರು ಮಳೆಗೆ ಪೂರ್ವಭಾವಿಯಾಗಿ ನಗರ ಸಭಾ ವ್ಯಾಪ್ತಿಯಲ್ಲಿರುವ ರಾಜಕಾಲುವೆಗಳ ಸ್ವಚ್ಚಗೊಳಿಸುವ ಕಾಮಕಾರಿಯು ಪ್ರಾರಂಭಗೊಂಡಿದ್ದು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮರ್ಪಕವಾಗಿ ನಡೆಸುವಂತೆ ನಗರ ಸಭಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಾರಂಭದಲ್ಲಿ ನೆಲ್ಲಿಕಟ್ಟೆ ಹಿಂದು ರುದ್ರಭೂಮಿ ಸಮಿಪದಲ್ಲಿ ಹಾದುಹೋಗುವ ರಾಜ ಕಾಲುವೆಯನ್ನು ವೀಕ್ಷಣೆ ಮಾಡಿದರು. ನಂತರ ಮುಖ್ಯರಸ್ತೆಯ ಗಣೇಶ್ ಪ್ರಸಾದ್ ಹೊಟೇಲ್ ಬಳಿ ನಂತರ ಎಪಿಎಂಸಿ ರಸ್ತೆಯಲ್ಲಿರುವ ರಾಜ ಕಾಲುವೆಗಳ ಬಳಿಗೆ ತೆರಳಿ ಕಾಮಗಾರಿಯ ಪರಿಶೀಲನೆ ನಡೆಸಿದರು. ರಾಜ ಕಾಲುವೆ ಸ್ವಚ್ಛಗೊಳಿಸುವ

ಪುತ್ತೂರಿನಲ್ಲಿ ನಗರಸಭೆಯಿಂದ ರಾಜಕಾಲುವೆಗಳ ಸ್ವಚ್ಛತೆ ಕಾರ್ಯ ಪ್ರಾರಂಭ |ಸಹಾಯಕ ಆಯುಕ್ತರು, ತಹಶೀಲ್ದಾರ್, ಪೌರಾಯುಕ್ತರಿಂದ ವೀಕ್ಷಣೆ Read More »

ಮನಸ್ಸಿನ ಆರೋಗ್ಯ ವೃದ್ಧಿಗೆ ರುದ್ರಾಕ್ಷಿ ಅಗತ್ಯ: ಕೇಶವ ಪ್ರಸಾದ್ ಮುಳಿಯ

ಪುತ್ತೂರು:  ಹಿಂದೂ ಧರ್ಮದಲ್ಲಿ, ರುದ್ರಾಕ್ಷ ಕಂಕಣವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ಶಿವನಿಗೆ ಸಂಬಂಧಿಸಿದ ರುದ್ರಾಕ್ಷ ಕಂಕಣವು ಜನಸಾಮಾನ್ಯರಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಇದು ಜೀವನಕ್ಕೆ ಸಂಬಂಧಿಸಿದ ಕಷ್ಟಗಳು ಮತ್ತು ಸಮಸ್ಯೆಗಳನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡುತ್ತದೆ.  ರುದ್ರಾಕ್ಷಿಗಳನ್ನು ಇತ್ತೀಚಿಗಿನ ದಿನದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ ರುದ್ರಾಕ್ಷಿ ಕಲೆಕ್ಷನ್ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಅನಾವರಣಗೊಂಡಿದೆ. ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್

ಮನಸ್ಸಿನ ಆರೋಗ್ಯ ವೃದ್ಧಿಗೆ ರುದ್ರಾಕ್ಷಿ ಅಗತ್ಯ: ಕೇಶವ ಪ್ರಸಾದ್ ಮುಳಿಯ Read More »

error: Content is protected !!
Scroll to Top