ಪುತ್ತೂರು

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು ಅಧಿಕಾರ ಸ್ವೀಕಾರ

ಪುತ್ತೂರು: ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುಂದರ ಪೂಜಾರಿ ಬಡಾವು ಇಂದು ಅಧಿಕಾರಿ ಸ್ವೀಕರಿಸಿದರು. ಬೆಳಿಗ್ಗೆ ನಗರಸಭೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಧಿಕಾರಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭಾ ಅಧ್ಯಕ್ಷೆ ಲೀಲಾವತಿ ಕೃಷ್ಣನಗರ, ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿoಜೆ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ.,  ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾ ಆರ್. ಗೌರಿ, ಜಿಲ್ಲಾ ಸಹಕಾರಿ ಪ್ರಕೋಷ್ಠದ ಸಂಚಾಲಕ […]

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು ಅಧಿಕಾರ ಸ್ವೀಕಾರ Read More »

ಎರಡು ಬೈಕ್‍ ಗಳ ನಡುವೆ ಡಿಕ್ಕಿ | ಓರ್ವರಿಗೆ ಗಂಭೀರ ಗಾಯ

ಪುತ್ತೂರು: ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ  ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಎಂಬವರ ಬೈಕ್ ಗಳು ಮಾಣಿ ಮೈಸೂರು ಹೈವೇಯ ಪುತ್ತೂರಿನ ಮುಕ್ರುಂಪಾಡಿಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರಿಗೂ ಗಾಯವಾಗಿದೆ. ಓರ್ವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಹಾವೀರ ಆಸ್ಪತ್ರೆಗೆ ತನ್ನ ಕಾರಿನಲ್ಲೇ ಸಾಗಿಸಿದ್ದಾರೆ ಎನ್ನಲಾಗಿದೆ.

ಎರಡು ಬೈಕ್‍ ಗಳ ನಡುವೆ ಡಿಕ್ಕಿ | ಓರ್ವರಿಗೆ ಗಂಭೀರ ಗಾಯ Read More »

ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ

ಪುತ್ತೂರು : ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಘಟನೆ ಕೋಡಿಂಬಾಡಿ ಸಿಂಗಾರ ಮಂಟಪದ ಬಳಿ ನಡೆದಿದೆ. ಬೆಳಿಗ್ಗೆ ದ್ವಿಚಕ್ರ ವಾಹನ  ಸವಾರ ರೌಶೀನ್ ಎಂಬವರು ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿದ ಪರಿಣಾಮ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ಹರಿಯಪ್ಪ ನಾಯ್ಕ ಎಂಬವರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಅಪಘಾತದಲ್ಲಿ ಹರಿಯಪ್ಪ ನಾಯ್ಕ ಮತ್ತು ದ್ವಿಚಕ್ರ ವಾಹನ ಸವಾರ ರೌಶೀನ್‌ ರಸ್ತೆಯಲ್ಲಿ ಬಿದ್ದು ಹರಿಯಪ್ಪ ನಾಯ್ಕ ರವರಿಗೆ ಗಾಯಗಳಾಗಿದ್ದು ಗಾಯಾಳು ಹರಿಯಪ್ಪ

ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ Read More »

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಪ್ರಫುಲ್‍ ಯು.ಎಸ್‍. ಆಯ್ಕೆ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು.ಎಸ್. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಅಂತಿಮ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಪ್ರಫುಲ್ ಸಿಐಟಿ ಗುಬ್ಬಿಯಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದೇ ಅ. ೩೦ ರಿಂದ ಚೆನ್ನೈನ ಎಸ್‌ಆರ್‌ ಎಮ್ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಪ್ರಫುಲ್‍ ಯು.ಎಸ್‍. ಆಯ್ಕೆ Read More »

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಚಿದಾನಂದ ಬೈಲಾಡಿ ಆಯ್ಕೆ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಭಾರತ ಸರಕಾರದ ನೋಟರಿ ಪಬ್ಲಿಕ್ ನ್ಯಾಯವಾದಿ ಚಿದಾನಂದ ಬೈಲಾಡಿ ಆಯ್ಕೆಯಾಗಿದ್ದಾರೆ. ಚಿದಾನಂದ ಬೈಲಾಡಿಯವರು ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮತ್ತು ನ್ಯೂಸ್ ಪುತ್ತೂರು ಇದರ ನಿರ್ದೇಶಕರೂ ಆಗಿದ್ದಾರೆ. ಬೈಲಾಡಿಯವರು ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ಕ್ರಿಯಾಶೀಲರಾಗಿದ್ದಾರೆ.

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಚಿದಾನಂದ ಬೈಲಾಡಿ ಆಯ್ಕೆ Read More »

ಡಿ.6-7 : ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ | ಸಮಾಲೋಚನಾ ಸಭೆ

ಕಾಣಿಯೂರು: ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಡಿ.6,7 ರಂದು ನಡೆಯಲಿರುವ ಷಷ್ಠಿ ಮಹೋತ್ಸವದ ಸಮಾಲೋಚನಾ ಸಭೆ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ವಹಿಸಿ ಮಾತನಾಡಿ, ದೇವಳದಲ್ಲಿ ಷಷ್ಠಿ ಮಹೋತ್ಸವವನ್ನು ಪ್ರತಿ ವರ್ಷದಂತೆ ಈ ವರ್ಷವೂ ಊರ ಪರವೂರ ಭಕ್ತರ ಸಹಕಾರದಿಂದ ಅತ್ಯಂತ ಸಂಭ್ರಮದಿಂದ ಆಚರಿಸಲಿದ್ದು, ಡಿ. 6ರ ಪಂಚಮಿ ದಿವಸ ಸುಬ್ರಹ್ಮಣ್ಯ ಶ್ರೀ ಅವರಿಂದ ಆಶೀರ್ವಚನ ನಡೆಯಲಿದೆ. ಡಿ. 7ರಂದು ಷಷ್ಠಿ

ಡಿ.6-7 : ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ | ಸಮಾಲೋಚನಾ ಸಭೆ Read More »

ಸವಣೂರು ಪರಿಸರದ ಬೇಡಿಕೆಯಾದ 63 ಕೆ.ವಿ. ವಿದ್ಯುತ್ ಪರಿವರ್ತಕಕ್ಕೆ ಚಾಲನೆ

ಸವಣೂರು: ಗ್ರಾಮದ ಬೇರಿಕೆ ಎಂಬಲ್ಲಿ ಅಲ್ಲಿನ ಪರಿಸರದ ಬಹುದಿನಗಳ ಬೇಡಿಕೆಯಾದ 63 K.V.(ಕೆ. ವಿ ) ವಿದ್ಯುತ್ ಪರಿವರ್ತಕವನ್ನು ಸವಣೂರು ಮೆಸ್ಕಾಂನ ಜೆ. ಇ. ರಾಜೇಶ್ ಅರವರ ಮುತುವರ್ಜಿಯಲ್ಲಿ  ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ವೆಂಕಪ್ಪ ಶೆಟ್ಟಿ ಸವಣೂರು ಗುತ್ತು, ಸವಣೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ವಸಂತ್ ಶೆಟ್ಟಿ ಸಿಬಂದಿ ಪ್ರಮೋದ್ ರೈ, ಪಂಚಾಯತ್ ಸದಸ್ಯೆ ಇಂದಿರಾ ಬೇರಿಕೆ, ಮಾಜಿ ಸದಸ್ಯ ಸತೀಶ್ ಬಲ್ಯಾಯ, ಮಾಜಿ ಸದಸ್ಯೆ ಗಾಯತ್ರಿ ಬರಮೇಲು ಸವಣೂರು ಸಿ. ಎ ಬ್ಯಾಂಕ್ ಉಪಾಧ್ಯಕ್ಷ

ಸವಣೂರು ಪರಿಸರದ ಬೇಡಿಕೆಯಾದ 63 ಕೆ.ವಿ. ವಿದ್ಯುತ್ ಪರಿವರ್ತಕಕ್ಕೆ ಚಾಲನೆ Read More »

ಹಲಾಲ್ ಮುಕ್ತ ದೀಪಾವಳಿ ಆಚರಿಸೋಣ | ಪುತ್ತೂರಿನಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಕರಪತ್ರ ಹಂಚುವ ಮೂಲಕ ಅಭಿಯಾನ

ಪುತ್ತೂರು: ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಹಲಾಲ್ ಮುಕ್ತ ದೀಪಾವಳಿ ಆಚರಿಸುವಂತೆ ಪುತ್ತೂರಿನಾದ್ಯಂತ ಅಭಿಯಾನ ಆರಂಭಿಸಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಕರಪತ್ರ ಹಂಚುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ದೀಪಾವಳಿಯನ್ನು ರಾಷ್ಟ್ರದ್ರೋಹಿ ಹಲಾಲ್ ಮುಕ್ತವಾಗಿ ಆಚರಿಸಿ ಎಂದು ಈ ಸಂದರ್ಭದಲ್ಲಿ ಕರೆ ನೀಡಿದದರು. ಭಾರತದಲ್ಲಿ ಇಸ್ಲಾಂ ಮೇಲಾಧಾರಿತ ಹಲಾಲ್ ಆರ್ಥಿಕ ವ್ಯವಸ್ಥೆ ನಿರ್ಮಿಸಲು ಪ್ರಯತ್ನಗಳಾಗುತ್ತಿವೆ. ಎಫ್ ಎಸ್ ಎಸ್ ಎ ಐ’ ನಂತಹ ಸರ್ಕಾರಿ ಸಂಸ್ಥೆಯ ಪ್ರಮಾಣಪತ್ರ ತೆಗೆದುಕೊಂಡ ನಂತರವೂ ಇಸ್ಲಾಮೀ ಸಂಸ್ಥೆಗಳು

ಹಲಾಲ್ ಮುಕ್ತ ದೀಪಾವಳಿ ಆಚರಿಸೋಣ | ಪುತ್ತೂರಿನಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಕರಪತ್ರ ಹಂಚುವ ಮೂಲಕ ಅಭಿಯಾನ Read More »

ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಪುತ್ತೂರು: ಪುತ್ತೂರಿನಲ್ಲಿ ಸುಸಜ್ಜಿತ ಕ್ರೀಡಾಂಗಣಕ್ಕಾಗಿ 20 ಎಕ್ರೆ ಜಾಗ ಗುರುತಿಸಲಾಗಿದ್ದು, ಜತೆಗೆ 8 ಕೋಟಿ ಅನುದಾನ ಬಿಡುಗಡೆಯಾಗಿದೆ. ಕ್ರೀಡಾಂಗಣ ನಿರ್ಮಾಣಕ್ಕಾಗಿ ಸಂಬಂಧ ಪಟ್ಟ ಇಲಾಖೆಯಲ್ಲಿ ಕಡತದ ಕೆಲಸ ಕಾರ್ಯಗಳು ಪ್ರೊಸೆಸ್ ಹಂತದಲ್ಲಿದೆ ಎಂದು ಶಾಸಕ ಅಶೋಕ್ ಕುಮಾರ್ ಹೇಳಿದರು. ಅವರು ಸೋಮವಾರ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯುವ 2024-25ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡಾಂಗಣದಲ್ಲಿ ಒಳಾಂಗಣ

ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ Read More »

ಕಾನೂನು ವಿದ್ಯಾರ್ಥಿಗಳಿಗೆ ಜವಾಬ್ದಾರಿ ಜಾಸ್ತಿಯಿದೆ : ಸಂಸದ ಕ್ಯಾ. ಬ್ರಿಜೇಶ್ ಚೌಟ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವತಿಯಿಂದ ಸಂಸದರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ಮಹಾವಿದ್ಯಾಲಯಕ್ಕೆ ಬಂದ ಸಂಸದರನ್ನು ಆಡಳಿತ ಮಂಡಳಿ ಸದಸ್ಯರು ಹಾಗೂ ಉಪನ್ಯಾಸಕ ವೃಂದದವರು ಸೇರಿ ಸ್ವಾಗತಿಸಿ,  ಗೌರವಿಸಲಾಯಿತು. ಬಳಿಕ ಮಹಾವಿದ್ಯಾಲಯದ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮ್ಮೆಲ್ಲರ ಸಹಕಾರದಿಂದ ಸಂಸದರಾಗಿ, ನಿಮ್ಮೆಲರ ಪ್ರತಿನಿಧಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತೇನೆ

ಕಾನೂನು ವಿದ್ಯಾರ್ಥಿಗಳಿಗೆ ಜವಾಬ್ದಾರಿ ಜಾಸ್ತಿಯಿದೆ : ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

error: Content is protected !!
Scroll to Top