ಪುತ್ತೂರು

ಭಜನೆ ಇದ್ದಲ್ಲಿ ವಿಭಜನೆ ಇಲ್ಲ : ಸಂತೋಷ್ ಪಿ ಅಳಿಯೂರು | ಪುತ್ತೂರು ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ ನ 9ನೇ ವಾರ್ಷಿಕ ಮಹಾಸಭೆ

ಪುತ್ತೂರು: ಸಮರ್ಪಣಾಭಾವ, ಭಕ್ತಿ ಶ್ರದ್ಧೆಯಿಂದ ಮಾಡುವ ಭಗವಂತನ ಸ್ಮರಣೆ  ಭಗವಂತನಿಗೇ ತಲುಪುತ್ತದೆ. ಭಜನೆ, ನಾಮಾವಳಿಗಳಿಂದ ಮಾಡಿದ ಭಗವತ್ಸೇವೆ ನಾವು ಮಾಡಿದ ಕರ್ಮಗಳಿಂದ ಮುಕ್ತವಾಗಿಸುತ್ತದೆ ಎಂದು ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಂಚಾಲಕ ಸಂತೋಷ್ ಪಿ. ಅಳಿಯೂರು ಹೇಳಿದರು. ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ ನ 9ನೇ ವಾರ್ಷಿಕ ಮಹಾಸಭೆಯನ್ನು ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಎಲ್ಲಾ ಚಟುವಟಿಕೆಗಳಲ್ಲಿ ಪರಸ್ಪರ  ಕೈಜೋಡಿಸಿ ಮುಂದುವರಿದಾಗ ಸಂಘಟನೆ ಯಶಸ್ವಿಯಾಗಿ ಬೆಳೆಯುತ್ತದೆ.  ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಧರ್ಮಸ್ಥಳದ ಪರಮಪೂಜ್ಯ […]

ಭಜನೆ ಇದ್ದಲ್ಲಿ ವಿಭಜನೆ ಇಲ್ಲ : ಸಂತೋಷ್ ಪಿ ಅಳಿಯೂರು | ಪುತ್ತೂರು ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ ನ 9ನೇ ವಾರ್ಷಿಕ ಮಹಾಸಭೆ Read More »

ಕನ್ನಡ ಜಾನಪದ ಪರಿಷತ್ ಕೊಡಮಾಡುವ ಜಾನಪದ ರಾಜ್ಯ ಪ್ರಶಸ್ತಿಗೆ ಡೊಂಬಯ್ಯ ನಲಿಕೆ ಆಯ್ಕೆ

ಸವಣೂರು: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಕಾಪೆಜಾಲು ನಿವಾಸಿ ಡೊಂಬಯ್ಯ ನಲಿಕೆ ಅವರು ಕನ್ನಡ ಜಾನಪದ ಪರಿಷತ್ ಕೊಡಮಾಡುವ ಜಾನಪದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಎಸ್‍.ಬಾಜಾಲಿ ಪ್ರಶಸ್ತಿಯನ್ನು ಪ್ರಕಟಿಸಿದ್ದು, ದ..ಕ ದಿಂದ ಡೊಂಬಯ್ಯ ನಲಿಕೆ ಅವರನ್ನು ಸೇರಿಸಿ ರಾಜ್ಯದ 20 ಜನರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಸಂಘಟಕ, ಕಾರ್ಯಕ್ರಮ ಅಧಿಕಾರಿ ಆಗಿದ್ದ ದಿ.ಟಿ.ಕೆ. ಗೌಡ ಅವರು ಸ್ಥಾಪಿಸಿದ ದತ್ತಿಯಿಂದ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಶಸ್ತಿ 5 ಸಾವಿರ ನಗದು ಪುರಸ್ಕಾರದ ಜತೆಗೆ ರಾಜ್ಯಮಟ್ಟದ ಗೌರವ

ಕನ್ನಡ ಜಾನಪದ ಪರಿಷತ್ ಕೊಡಮಾಡುವ ಜಾನಪದ ರಾಜ್ಯ ಪ್ರಶಸ್ತಿಗೆ ಡೊಂಬಯ್ಯ ನಲಿಕೆ ಆಯ್ಕೆ Read More »

ಕಬಡ್ಡಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ  ಚಿಕ್ಕಮಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು ಹಾಗೂ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ, ಕಡೂರುನಲ್ಲಿ ನಡೆದ 17 ರ ವಯೋಮಾನದ ಬಾಲಕರ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ಶಾಲೆಯ ವಿದ್ಯಾರ್ಥಿಗಳಾದ ಪುನೀತ್, ಧನ್ವಿತ್, ಜಿ. ಶೇಖರ, ನರಸಪ್ಪ ತಳವಾರ್, ಚೈತನ್ ನಲವಾಡೆ, ಪ್ರೀತಮ್ ಮಳಿ, ಅಬೀಬ್ ವುಲ್ಲಾ ತಂಡವನ್ನು ಪ್ರತಿನಿಧಿಸಿದ್ದರು. ಅವರಿಗೆ ಶಾಲಾ ದೈಹಿಕ ಶಿಕ್ಷಣ

ಕಬಡ್ಡಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಶಾಸ್ತ್ರೀಯ ಸಂಗೀತ ಸ್ಪರ್ಧೆ : ಫಿಲೋಮಿನಾ ಪ ಪೂ ಕಾಲೇಜಿನ ಪ್ರಾರ್ಥನಾ ಬಿ. ಪ್ರಥಮ

ಪುತ್ತೂರು: ಮಂಗಳೂರು ಸಂಗೀತ ಪರಿಷತ್ತು ಆಶ್ರಯದಲ್ಲಿ ಭಾರತೀಯ ವಿದ್ಯಾಭವನದ ಸಹಯೋಗದೊಂದಿಗೆ  ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಸೀನಿಯರ್ ವಿಭಾಗದ ಹಾಡುಗಾರಿಕೆ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ. ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಾರಂಭದಲ್ಲಿ ವಿದುಷಿ ಡಾ. ಸುಚಿತ್ರಾ ಹೊಳ್ಳ ಅವರಲ್ಲಿ ಸಂಗೀತ ಅಭ್ಯಾಸವನ್ನು ಮಾಡಿದ್ದು, ಪ್ರಸ್ತುತ  ಚೆನ್ನೈ ನ ಕಲೈಮಾಮಣಿ ಡಾ. ಎಸ್ ಸುಂದರ್ ಹಾಗೂ ವಿದುಷಿ ಜೆ ಬಿ ಕೀರ್ತನಾ ಶ್ರೀರಾಮ್ ಅವರಲ್ಲಿ ಸಂಗೀತ ಅಭ್ಯಾಸವನ್ನು ಮಾಡುತ್ತಿದ್ದಾರೆ.

ಶಾಸ್ತ್ರೀಯ ಸಂಗೀತ ಸ್ಪರ್ಧೆ : ಫಿಲೋಮಿನಾ ಪ ಪೂ ಕಾಲೇಜಿನ ಪ್ರಾರ್ಥನಾ ಬಿ. ಪ್ರಥಮ Read More »

ರೈಲ್ವೇ ಹಳಿಯಲ್ಲಿ ಸೆಂಟ್ರಿಂಗ್‍ ಕಾರ್ಮಿಕ ರಾಧಾಕೃಷ್ಣ ನಾಯ್ಕರ ಮೃತದೇಹ ಪತ್ತೆ

ಪುತ್ತೂರು : ಸೆಂಟ್ರಿಂಗ್‍ ಕಾರ್ಮಿಕರೋರ್ವರ ಮೃತದೇಹ ಪುತ್ತೂರಿನ ಹಾರಾಡಿ ಸಮೀಪ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ ಪತ್ತೆಯಾಗಿದೆ. ಉಕ್ಕಿನಡ್ಕ ಸಮೀಪದ ಸರ್ಹಂಗಳ ನಿವಾಸಿ ತಿಮ್ಮ ನಾಯ್ಕ ಎಂಬವರ ಪುತ್ರ ಚನಿಯಪ್ಪ ಯಾನೆ ರಾಧಾಕೃಷ್ಣ ನಾಯ್ಕ (48) ಮೃತಪಟ್ಟವರು. ಸೆಂಟ್ರಿಂಗ್ ಕಾರ್ಮಿಕರಾದ ರಾಧಾಕೃಷ್ಣ ಪುತ್ತೂರು ಸಮೀಪದ ಕಬಕ ಪರಿಸರದಲ್ಲಿ ಕೆಲಸ ನಿರ್ವಹಿಸುತ್ತಿದ್ದು ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದರು. ಬುಧವಾರ ಬೆಳಗ್ಗೆ ಮನೆಯಿಂದ ತೆರಳಿದ್ದರು ಎನ್ನಲಾಗಿದೆ. ಕಬಕ ಸ್ಟೇಶನ್ ವ್ಯಾಪ್ತಿಯ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿದ್ದು ಬುಧವಾರ ರಾತ್ರಿ

ರೈಲ್ವೇ ಹಳಿಯಲ್ಲಿ ಸೆಂಟ್ರಿಂಗ್‍ ಕಾರ್ಮಿಕ ರಾಧಾಕೃಷ್ಣ ನಾಯ್ಕರ ಮೃತದೇಹ ಪತ್ತೆ Read More »

ಫಿಲೋಮಿನಾ ಪ.ಪೂ ಕಾಲೇಜಿನ ಅಹಿಜಿತ್ ಕೆ.ಎಂ. ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಮೂಡಬಿದ್ರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ  ದ್ವಿತೀಯ ಕಲಾ ವಿಭಾಗದ ಅಹಿಜಿತ್ ಕೆ.ಎಂ. ಜಾವೆಲಿನ್ ಥ್ರೋ ನಲ್ಲಿ (52.74) ಮೀ. ಎಸೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ತುಮಕೂರು ಮಹಾತ್ಮ ಗಾಂಧೀಜಿ ಕ್ರೀಡಾಂಗಣದಲ್ಲಿ ನ.7 ರಿಂದ 10 ರ ತನಕ ನಡೆಯಲಿರುವ ರಾಜಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ದ್ವಿತೀಯ ವಾಣಿಜ್ಯ ವಿಭಾಗದ ಆಶ್ರಯ್

ಫಿಲೋಮಿನಾ ಪ.ಪೂ ಕಾಲೇಜಿನ ಅಹಿಜಿತ್ ಕೆ.ಎಂ. ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಅ.26-27 : ಸದಾಶಯದೊಂದಿಗೆ ‘ಗಾಯತ್ರೀ ಸಂಗಮ’ ಸಾಂಘಿಕ ಕೋಟಿ ಗಾಯತ್ರಿ ಜಪ ಯಜ್ಞ

ಪುತ್ತೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಂಗಳೂರು ನೇತೃತ್ವದಲ್ಲಿ ಕುಳಾಯಿ ಚಿತ್ರಾಪುರ ಮನೆ ಸಹಯೋಗದೊಂದಿಗೆ ‘ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೋಟದ ಬೆಳಕಿ’ ಎಂಬ ಸದಾಶಯದೊಂದಿಗೆ ‘ಗಾಯತ್ರೀ ಸಂಗಮ’ ಸಾಂಘಿಕ ಕೋಟಿ ಗಾಯತ್ರಿ ಜಪ ಯಜ್ಞ ಅ.26 ಹಾಗೂ 27 ರಂದು ಮಂಗಳೂರು ಕುಳಾಯಿ ಚಿತ್ರಾಪುರ ಮಠದ ಆವರಣದಲ್ಲಿ ನಡೆಯಲಿದೆ ಎಂದು ಯಾಗ ಸಮಿತಿ ಉಪಾಧ್ಯಕ್ಷ, ನ್ಯಾಯವಾದಿ ಎನ್‍.ಕೆ.ಜಗನ್ಜಿವಾಸ ರಾವ್ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅ.26 ರಂದು

ಅ.26-27 : ಸದಾಶಯದೊಂದಿಗೆ ‘ಗಾಯತ್ರೀ ಸಂಗಮ’ ಸಾಂಘಿಕ ಕೋಟಿ ಗಾಯತ್ರಿ ಜಪ ಯಜ್ಞ Read More »

ವಿಧಾನ ಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾ‌ರ್ ಪುತ್ತೂರು ಅಭೂತ ಪೂರ್ವ ಗೆಲುವು

ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಜಯಗಳಿಸಿದ್ದಾರೆ. 1693 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.ಎಂ.ಎ. ಸ್ನಾತಕೋತ್ತರ ಪದವೀಧರ ಕಿಶೋರ್., ವಿದ್ಯಾರ್ಥಿ ದೆಸೆಯಿಂದ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ವಿದ್ಯಾರ್ಥಿ ಜೀವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ

ವಿಧಾನ ಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾ‌ರ್ ಪುತ್ತೂರು ಅಭೂತ ಪೂರ್ವ ಗೆಲುವು Read More »

ಮತ್ತೆ ವಿವಾದಕ್ಕೊಳಗಾದ ದಾರಂದಕುಕ್ಕು ಪ್ರಯಾಣಿಕರ ತಂಗುದಾಣ | ಸಹಾಯಕ ಆಯುಕ್ತರು, ಅಧಿಕಾರಗಳ ಜಂಟಿ ಪರಿಶೀಲನೆ

ಪುತ್ತೂರು: ಕಳೆದ ಹಲವು ವರ್ಷಗಳಿಂದ ವಿವಾದದಲ್ಲಿರುವ ಪುತ್ತೂರು-ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕು ಎಂಬಲ್ಲಿರುವ ಪ್ರಯಾಣಿಕರ ತಂಗುದಾಣ ಮತ್ತೆ ಮುನ್ನಲೆಗೆ ಬಂದಿದೆ. ತಂಗುದಾಣದ ಬಗ್ಗೆ ದೂರು ಬಂದಿರುವ ಬಗ್ಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ನೇತೃತ್ವದಲ್ಲಿ ಬುಧವಾರ ಭೇಟಿ ನೀಡಿ ವಿವಿಧ ಇಲಾಖೆಗಳೊಂದಿಗೆ ಜಂಟಿ ಪರಿಶೀಲನೆ ನಡೆಸಿದರು. ದಾರಂದಕುಕ್ಕು ಎಂಬಲ್ಲಿ ಮುಖ್ಯರಸ್ತೆ ಬದಿಯಲ್ಲಿರುವ ಪ್ರಯಾಣಿಕರ ತಂಗುದಾಣವು ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕ ದೂರಿನಲ್ಲಿ ಹಿನ್ನೆಲೆಯಲ್ಲಿ ಬೇಟಿ ನೀಡಿದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರವರು ಕಂದಾಯ ಇಲಾಖೆ, ಭೂ

ಮತ್ತೆ ವಿವಾದಕ್ಕೊಳಗಾದ ದಾರಂದಕುಕ್ಕು ಪ್ರಯಾಣಿಕರ ತಂಗುದಾಣ | ಸಹಾಯಕ ಆಯುಕ್ತರು, ಅಧಿಕಾರಗಳ ಜಂಟಿ ಪರಿಶೀಲನೆ Read More »

ಮಾನಸಿಕ ಅಸ್ವಸ್ಥ ವ್ಯಕ್ತಿಯ ರಕ್ಷಣೆ | ಜಿಲ್ಲಾಸ್ಪತ್ರೆಗೆ ದಾಖಲಾತಿ

ಪುತ್ತೂರು : ಕಳೆದ ಮೂರು ನಾಲ್ಕು ದಿನಗಳಿಂದ ಪುತ್ತೂರು ನಗರದ  ಆಸುಪಾಸಿನಲ್ಲಿ  ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ತಿರುಗುತ್ತ.. ಸಿಕ್ಕ ಸಿಕ್ಕ ಮನೆಗಳಿಗೆ ಹಾಗೂ ಅಂಗಡಿಗಳಿಗೆ ನುಗ್ಗಿ ವಿಚಿತ್ರ ವರ್ತನೆ ಮಾಡುತ್ತಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿ ಓರ್ವನನ್ನು ಪುತ್ತೂರು ನಗರ ಪೊಲೀಸ್ ಠಾಣೆ ಹಾಗೂ ಪುತ್ತೂರು ಉಮೇಶ್ ನಾಯಕ್ ಅವರ  ನೇತೃತ್ವದಲ್ಲಿ ರಕ್ಷಣೆ ಮಾಡಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೆಚ್ಚುವರಿ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಮೊಟ್ಟೆತಡ್ಕ ಪರಿಸರದಲ್ಲಿ ಸಂಚರಿಸುತ್ತಿದ್ದ ಈ ವ್ಯಕ್ತಿಯನ್ನು

ಮಾನಸಿಕ ಅಸ್ವಸ್ಥ ವ್ಯಕ್ತಿಯ ರಕ್ಷಣೆ | ಜಿಲ್ಲಾಸ್ಪತ್ರೆಗೆ ದಾಖಲಾತಿ Read More »

error: Content is protected !!
Scroll to Top