ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ | ಸರಕಾರಿ ನೇಮಕಾತಿಗಳಲ್ಲಿ ಹಂತ ಹಂತವಾದ ಯಶಸ್ಸು ಉನ್ನತ ಸ್ಥಾನಕ್ಕೇರಿಸುತ್ತದೆ ಎಂಬುದನ್ನು ಸಾಬೀತುಪಡಿಸಿದ ವಿ. ಅಕಾಡೆಮಿಯ ವಿದ್ಯಾರ್ಥಿ
ಪುತ್ತೂರು: ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು ಪಡೆದ ಬಸವರಾಜ್ ರವರು ಕರ್ನಾಟಕ ರಾಜ್ಯ ಪೊಲೀಸ್ ನ ಸಬ್ ಇನ್ಸ್ಪೆಕ್ಟರ್ 545 ಹುದ್ದೆಯ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ನೇಮಕಾತಿಗೊಂಡಿರುತ್ತಾರೆ. ಮೂಲತಃ ಬೆಳಗಾವಿ ಜಿಲ್ಲೆಯ ಕಾಗವಡ ತಾಲೂಕಿನ ಕಾತ್ರಾಳ್ ಗ್ರಾಮದ ನಿವಾಸಿಗಳಾದ ಶಂಕರ ಮತ್ತು ಯಮುನವ್ವ ದಂಪತಿ ಪುತ್ರ ಬಸವರಾಜ ಮುದವಿ ರವರು ಪ್ರಸ್ತುತ ಸುಳ್ಯ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುದವಿಯವರು ಈ ಹಿಂದೆ […]










