ಪುತ್ತೂರು

ತಾಲೂಕು ಮಟ್ಟದ ತ್ರೋಬಾಲ್ : ಅಂಬಿಕಾದ ವಿದ್ಯಾರ್ಥಿನಿಯರು ಪ್ರಥಮ

ಪುತ್ತೂರು: ಶಾಲಾ ಶಿಕ್ಷಣ (ಪದವಿ ಪೂರ್ವ) ಹಾಗೂ ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡವನ್ನು ದ್ವಿತೀಯ ಪಿಯುಸಿಯ ಅವನಿ ರೈ, ಮೇಘನಾ ವಿ ಎಚ್., ಪ್ರಥಮ ಪಿಯುಸಿಯ ವೈಶಾಲಿ ಕೆ, ರಿಯಾ ಜೆ ರೈ, ಯುಕ್ತ ವರ್ಷಿಣಿ, ಶ್ರೇಯಾ ವೈ, ಸಿಂಚನ ಎಂ, ಸಾನ್ವಿ ಆರ್, ಚರಿಷ್ಮ ಕೆ, […]

ತಾಲೂಕು ಮಟ್ಟದ ತ್ರೋಬಾಲ್ : ಅಂಬಿಕಾದ ವಿದ್ಯಾರ್ಥಿನಿಯರು ಪ್ರಥಮ Read More »

ಸೆ.18-24 : ಮನೆ ನಾಯಿಗಳಿಗೆ ಉಚಿತ ಸಂತಾನಹರಣ ಚಿಕಿತ್ಸೆ | ಮಲ್ಪೆ ಮಧ್ವರಾಜ್ ಎನಿಮಲ್ ಕೇರ್, ಡಬ್ಲ್ಯೂವಿಎಸ್ ಇಂಡಿಯಾ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಸಾಥ್‍

ಪುತ್ತೂರು: ಮಲ್ಪೆ ಮಧ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ಹಾಗೂ ಡಬ್ಲ್ಯೂವಿಎಸ್ ಜಂಟಿ ಆಶ್ರಯದಲ್ಲಿ ಪುತ್ತೂರು ಯುವ ರೋಟರಿ ಕ್ಲಬ್‍ ಸಹಕಾರದೊಂದಿಗೆ ಮನೆ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಸೆ.18 ರಿಂದ 23 ರ ವರೆಗೆ ಮುರ ಸಮೀಪದ ಪೋಳ್ಯ ಖುಷಿ ಕಂಪೌಂಡ್ ನಲ್ಲಿ ನಡೆಯಲಿದೆ ಎಂದು ಮಧ್ವರಾಜ್ ಎನಿಮಲ್ ಕೇರ್‍ ನ ಟ್ರಸ್ಟಿ ಮಮತಾ ರಾವ್ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆರು ದಿನಗಳ ಕಾಲ ನಡೆಯುವ ಈ ಸಂತಾನಹರಣ ಚಿಕಿತ್ಸೆಯಲ್ಲಿ ದೇಶೀಯ ಹಾಗೂ ಮನೆ ನಾಯಿಗಳಿಗೆ

ಸೆ.18-24 : ಮನೆ ನಾಯಿಗಳಿಗೆ ಉಚಿತ ಸಂತಾನಹರಣ ಚಿಕಿತ್ಸೆ | ಮಲ್ಪೆ ಮಧ್ವರಾಜ್ ಎನಿಮಲ್ ಕೇರ್, ಡಬ್ಲ್ಯೂವಿಎಸ್ ಇಂಡಿಯಾ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಸಾಥ್‍ Read More »

ನಾಳೆ (ಸೆ.15) : ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು: ತಾಲೂಕಿನ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.15 ಭಾನುವಾರ ಸಂಘದ ರೈತ ಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ನವೀನ್ ಡಿ. ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ನಡೆಯಲಿದೆ. ಸಭೆಯಲ್ಲಿ ಸದಸ್ಯರೆಲ್ಲರೂ ಸರಿಯಾದ ಸಮಯಕ್ಕೆ ಪಾಲ್ಗೊಂಡು ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿ ಬಗ್ಗೆ ಉತ್ತಮ ಸಲಹೆ-ಸೂಚನೆಗಳನ್ನು ನೀಡಬೇಕಾಗಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಸೆ.15) : ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ Read More »

ಸಂತ ಫಿಲೋಮಿನ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಓರಿಯೆಂಟೇಶನ್ ಕಾರ್ಯಕ್ರಮ

ಪುತ್ತೂರು: ಯೂತ್ ರೆಡ್ ಕ್ರಾಸ್, ಸೇಂಟ್ ಫಿಲೋಮಿನಾ ಕಾಲೇಜು ಜಂಟಿ ಆಶ್ರಯದಲ್ಲಿ ಯುವ ರೆಡ್ ಕ್ರಾಸ್ ಸ್ವಯಂ ಸೇವಕರಿಗೆ ಓರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಯಿತು. ರೆಡ್‌ಕ್ರಾಸ್‌ ಸಂಸ್ಥಾಪಕ ಮತ್ತು ಮೊದಲ ಉದಾತ್ತ ಶಾಂತಿ ಪ್ರಶಸ್ತಿಯನ್ನು ಪಡೆದ ಜೀನ್ ಹೆನ್ರಿ ಡ್ಯುನಾಂಟ್‌ಗೆ ಮಾಲಾರ್ಪಣೆ ಮಾಡುವ ಮೂಲಕ  ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ವಂ.ಡಾ.ಆಂಟೋನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಉತ್ಕೃಷ್ಟತೆಯತ್ತ ಗಮನಹರಿಸದೆ ಜೀವನದುದ್ದಕ್ಕೂ ಮಾರ್ಗದರ್ಶನ ನೀಡುವ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಸಹಾಯಕ ಉಪನ್ಯಾಸಕಿ

ಸಂತ ಫಿಲೋಮಿನ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಓರಿಯೆಂಟೇಶನ್ ಕಾರ್ಯಕ್ರಮ Read More »

ಮುಂದಿನ ಸಪ್ಟೆಂಬರ್‌ ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ | ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು: 2025ರ ಸಪ್ಟೆಂಬರ್ ತಿಂಗಳಿನಲ್ಲಿ ಉಪ್ಪಿನಂಗಡಿ ಸಮೀಪದ ಕೊಯಿಲಾದಲ್ಲಿ ಪಶು ವೈಧ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಪಶು ಸಂಗೋಪನಾ ಇಲಾಖೆಯ ಪ್ರಮುಖರನ್ನು ಭೇಟಿಯಾದ ಶಾಸಕರು ಕೊಯಿಲಾ ಪಶು ವೈದ್ಯಕೀಯ ಕಾಲೇಜಿನ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಈಗಾಗಲೇ ಅಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಖಾಲಿ ಬಿದ್ದಿದೆ. ಇದೇ ಕಟ್ಟಡವನ್ನು ನವೀಕರಣ ಮಾಡಿ ಮೂಲ ಭೂತ ಸೌಕರ್ಯಗಳಿಗಾಗಿ ಸರಕಾರ ತಕ್ಷಣ ಅನುದಾನವನ್ನು ಬಿಡುಗಡೆ ಮಾಡಬೇಕು ಮತ್ತು ಒಂದು

ಮುಂದಿನ ಸಪ್ಟೆಂಬರ್‌ ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ | ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ Read More »

ಇಂದು ಕಿಲ್ಲೆ ಗಣಪನ ವೈಭವದ ಶೋಭಾಯಾತ್ರೆ | ಮಧ್ಯಾಹ್ನ ನಡೆಯಿತು ಶ್ರೀ ದೇವರ ವೈಭವದ ಬಲಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ಸಹಸ್ರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ

ಪುತ್ತೂರು: ಜಿಲ್ಲೆಯ 2ನೇ ಅತೀ ಹಿರಿಯ ಗಣಪ ಎಂದೇ ಖ್ಯಾತಿ ಪಡೆದಿರುವ ಪುತ್ತೂರಿನ ಶ್ರೀ ದೇವತಾ ಸಮಿತಿ ವತಿಯಿಂದ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿರುವ 68ನೇ ವರ್ಷದ ಶ್ರೀ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಇಂದು ರಾತ್ರಿ ಸಂಪನ್ನಗೊಳ್ಳಲಿದೆ. ತುಳುನಾಡ ದೈವಾರಾಧನೆಯ ನಂಟು ಹೊಂದಿರುವ ಕಿಲ್ಲೆ ಗಣಪನಿಗೆ ಶುಕ್ರವಾರ ಮಧ್ಯಾಹ್ನ 108 ಕಾಯಿ ಗಣಪತಿ ಹೋಮ ನಡೆಯಿತು. ಬಳಿಕ ಶ್ರೀ ಗಣೇಶನ ಮೂರ್ತಿಯೊಂದಿಗೆ ವೈಭವದ ಬಲಿ ಉತ್ಸವ ಚೆಂಡೆ, ಸ್ಕ್ಯಾಕ್ಸೊಫೋನ್ ನೊಂದಿಗೆ ವಿಜೃಂಭಣೆಯಿಂದ ಜರಗಿತು. ಬಳಿಕ ಮಹಾಪೂಜೆ ನಡೆದು ಸಹಸ್ರಾರು

ಇಂದು ಕಿಲ್ಲೆ ಗಣಪನ ವೈಭವದ ಶೋಭಾಯಾತ್ರೆ | ಮಧ್ಯಾಹ್ನ ನಡೆಯಿತು ಶ್ರೀ ದೇವರ ವೈಭವದ ಬಲಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ಸಹಸ್ರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ Read More »

ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕರಾಗಿ ಎಸ್‍.ಮಾಧವ ರೈ ಆಯ್ಕೆ

ಪುತ್ತೂರು: ಬಿಜೆಪಿ ಒಳಮೊಗ್ರು ಶಕ್ತಿ ಕೇಂದ್ರದ ಸಂಚಾಲಕರಾಗಿ ಹಿರಿಯ ಕಾರ್ಯಕರ್ತ ಎಸ್. ಮಾಧವ ರೈ ಕುಂಬ್ರ ಆಯ್ಕೆಯಾಗಿದ್ದಾರೆ. ಮಾಧವ ರೈ ಅವರು ಬೂತ್ ಸಮಿತಿ ಅಧ್ಯಕ್ಷರಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯಾಧ್ಯಕ್ಷರಾಗಿ, ಕುಂಬ್ರ ವರ್ತಕ ಸಂಘದ ಅಧ್ಯಕ್ಷರಾಗಿ, ಹಾಗೂ ಕುಂಬ್ರ KPS ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾಗಿ, ಕುಂಬ್ರ ಅಂಗನವಾಡಿ ಬಾಲವಿಕಾಸ ಸಮಿತಿ ಸದಸ್ಯರಾಗಿದ್ದರು. ಕುಂಬ್ರ ಶ್ರೀರಾಮ ಭಜನಾ ಮಂದಿರದ ಕಾರ್ಯಕಾರಿ ಸಹಿತಿ ವಿವಿಧ ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು.

ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕರಾಗಿ ಎಸ್‍.ಮಾಧವ ರೈ ಆಯ್ಕೆ Read More »

ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ | ಆರೋಪಿ ಸತೀಶ್‍ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಉಪ್ಪಿನಂಗಡಿ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಾಗಿದೆ. ನೆಲ್ಯಾಡಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಸತೀಶ್ ದೂರವಾಣಿ ಮೂಲಕ ಸಂಪರ್ಕಿಸಿ ಆತ್ಮೀಯತೆ ಬೆಳೆಸಿದ್ದ. ಜು.21ರಂದು ಆಕೆಯನ್ನು ನೆಲ್ಯಾಡಿಗೆ ಕರೆಸಿಕೊಂಡು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿರುತ್ತಾನೆ ಹಾಗೂ ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡಲಾಗುವುದು ಎಂದು ಬೆದರಿಕೆ ಒಡ್ಡಿರುತ್ತಾನೆಂದು ಯುವತಿ

ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ | ಆರೋಪಿ ಸತೀಶ್‍ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಚಾಲಕನ ನಿಯಂತ್ರಣ ತಪ್ಪಿ ಚರುಂಬುರಿ ಸ್ಟಾಲ್‍ ಗೆ ನುಗ್ಗಿದ ಕಾರು | ಇಬ್ಬರಿಗೆ ಗಾಯ

ಪುತ್ತೂರು : ಚಾಲಕ ತನ್ನ ಕಾರನ್ನು ರಿವರ್ಸ್ ತೆಗೆಯುವಾಗ ಸಂದರ್ಭ ನಿಯಂತ್ರಣ ತಪ್ಪಿ ಸ್ಟಾಲ್‍ ಒಂದಕ್ಕೆ ನುಗ್ಗಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಕಿಲ್ಲೆ ಮೈದಾನದಲ್ಲಿ ನಡೆದಿದೆ. ಚುರುಮುರಿ ಅಂಗಡಿಯಲ್ಲಿದ್ದ ವ್ಯಕ್ತಿ ಹಾಗೂ ಇನ್ನೊಬ್ಬರು ಗಾಯಗೊಂಡವರು ಅವರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಣೇಶ ಉತ್ಸವದ ಪ್ರಯುಕ್ತ ತಾತ್ಕಲಿಕ ನೆಲೆಯಲ್ಲಿ ತೆರೆದಿದ್ದ ಅಂಗಡಿಗೆ  ಕಾರು ಢಿಕ್ಕಿ ಹೊಡೆದಿದ್ದು,  ಅಂಗಂಡಿ ಜಖಂ ಆಗಿದೆ. ಗಾಯಾಳುಗಳಿಬ್ಬರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು ಮೂಲದ ವೆಂಕಟರಮಣ ಭಟ್ ಎಂಬವರಿಗೆ ಸೇರಿದ ಕೇರಳ

ಚಾಲಕನ ನಿಯಂತ್ರಣ ತಪ್ಪಿ ಚರುಂಬುರಿ ಸ್ಟಾಲ್‍ ಗೆ ನುಗ್ಗಿದ ಕಾರು | ಇಬ್ಬರಿಗೆ ಗಾಯ Read More »

ಸ್ಕೂಟರ್ ಅಪಘಾತ | ಆಸ್ಪತ್ರೆಗೆ ದಾಖಲಾಗಿದ್ದ ಕೀರ್ತನ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೆಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರವರ ಪುತ್ರ, ವಿಶ್ವ ಹಿಂದೂ ಪರಿಷದ್ ಬಜರಂಗದಳದ ವೀರಾಂಜನೇಯ ಘಟಕ ತಿಂಗಳಾಡಿಯ ಸಹ ಗೋ ರಕ್ಷಕ ಪ್ರಮುಖ್ ಕೀರ್ತನ್ ಗೌಡ (22) ಮೃತಪಟ್ಟವರು. ಸೆ.10 ರಂದು ಮಧ್ಯರಾತ್ರಿ ಕೆದಂಬಾಡಿ ಗ್ರಾಮದ ತ್ಯಾಗರಾಜನಗರದಲ್ಲಿ ಸ್ಕೂಟರ್ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಕೀರ್ತನ್ ರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ

ಸ್ಕೂಟರ್ ಅಪಘಾತ | ಆಸ್ಪತ್ರೆಗೆ ದಾಖಲಾಗಿದ್ದ ಕೀರ್ತನ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

error: Content is protected !!
Scroll to Top