ಪುತ್ತೂರು

ಮಹಿಳೆಗೆ ಲೈಂಗಿಕ ದೌರ್ಜನ್ಯ | ಅರುಣ್ ಕುಮಾರ್ ಪುತ್ತಿಲರ ವಿರುದ್ಧದ ಪ್ರಕರಣ ವಿಚಾರಣೆಗಾಗಿ ಬೆಂಗಳೂರು ನ್ಯಾಯಾಲಯಕ್ಕೆ ಹಸ್ತಾಂತರ

ಪುತ್ತೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾರ್ ಪುತ್ತಿಲರ ವಿರುದ್ಧ ದಾಖಲಾದ ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವಿಚಾರಣೆಗಾಗಿ ವರ್ಗಾವಣೆಗೊಳಿಸಿ ಪುತ್ತೂರು ನ್ಯಾಯಾಲಯ ಆದೇಶ ನೀಡಿದೆ. ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಕೊಲೆ ಬೆದರಿಕೆಯೊಡ್ಡಿರುವ ಆರೋಪ ಹೊರಿಸಿ ಮಹಿಳೆಯೋರ್ವರು ನೀಡಿದ ದೂರಿನ ಮೇರೆಗೆ ಆರಂಭದಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 417,354(ಎ), 506ರಡಿ ಪ್ರಕರಣ(ಅ.ಕ್ರ. 0045/2024) ದಾಖಲಿಸಿಕೊಂಡಿದ್ದರು. ಪ್ರಕರಣದ ಕುರಿತು ಸಂತ್ರಸ್ತೆಯು ನ್ಯಾಯಾಧೀಶರೆದುರು […]

ಮಹಿಳೆಗೆ ಲೈಂಗಿಕ ದೌರ್ಜನ್ಯ | ಅರುಣ್ ಕುಮಾರ್ ಪುತ್ತಿಲರ ವಿರುದ್ಧದ ಪ್ರಕರಣ ವಿಚಾರಣೆಗಾಗಿ ಬೆಂಗಳೂರು ನ್ಯಾಯಾಲಯಕ್ಕೆ ಹಸ್ತಾಂತರ Read More »

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಪುತ್ತೂರು: ಪ್ರತೀ ವ್ಯಕ್ತಿಯು ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಗುರವಿಗೆ ನೀಡುತ್ತಾರೆ. ಶಿಕ್ಷಣದ ಮೂಲ ಅರ್ಥವನ್ನು ತಿಳಿಸಿ ವ್ಯಕ್ತಿಯ ಬದುಕನ್ನು ಬೆಳಗುವವರು ಶಿಕ್ಷಕರಾಗಿರುವುದರಿಂದ ಇಡೀ ಪ್ರಪಂಚವೇ ಅವರನ್ನು ಅಗ್ರಸ್ಥಾನದಲ್ಲಿಟ್ಟು ಪೂಜಿಸುತ್ತದೆ ಎಂದು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಅವರು ಮಾತನಾಡಿದರು. ಮನೋಧರ್ಮದಿಂದ ತತ್ವಜ್ಞಾನಿ, ವೃತ್ತಿಯಿಂದ ಶಿಕ್ಷಕ, ಆಯ್ಕೆಯಿಂದ ರಾಜನೀತಿಜ್ಞ, ಶಿಸ್ತಿನಿಂದ ಆಡಳಿತಗಾರರಾಗಿದ್ದ ಭಾರತದ ಮೊದಲ ಉಪರಾಷ್ಟ್ರಪತಿ ಮತ್ತು ಎರಡನೇ

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ Read More »

ಅರುಣ್ ಕುಮಾರ್ ಪುತ್ತಿಲರ ಮೇಲೆ ಲೈಂಗಿಕ ದೌರ್ಜನ್ಯದ ಜತೆಗೆ ಇದೀಗ ಅತ್ಯಾಚಾರ ಪ್ರಕರಣ ದಾಖಲು | ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಪೊಲೀಸರಿಂದ ಪುತ್ತೂರು ನ್ಯಾಯಾಲಯಕ್ಕೆ, ಅರ್ಜಿ

ಪುತ್ತೂರು: ಮಹಿಳೆಯೋರ್ವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲಾಗಿದ್ದು ಜಾಮೀನು ಪಡೆದುಕೊಂಡಿದ್ದಾರೆ. ಇದೀಗ ಈ ಪ್ರಕರಣದೊಂದಿಗೆ  ಅತ್ಯಾಚಾರ ಪ್ರಕರಣವೂ ದಾಖಲಾಗಿದೆ. ಸಂತ್ರಸ್ತ ಮಹಿಳೆ ನ್ಯಾಯಾಧೀಶರೆದುರು 164ರಡಿ ಹೇಳಿಕೆ ನೀಡಿದ ಬಳಿಕದ ಬೆಳವಣಿಗೆಯಲ್ಲಿ ಅತ್ಯಾಚಾರ ಆರೋಪವನ್ನೂ ಸೇರಿಸಲಾಗಿದೆ ಮಾತ್ರವಲ್ಲದೆ, ಘಟನೆ ಬೆಂಗಳೂರುನಲ್ಲಿ ನಡೆದಿರುವುದರಿಂದ ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಪೊಲೀಸರು ಪುತ್ತೂರು ನ್ಯಾಯಾಲಯಕ್ಕೆ, ಅರ್ಜಿ ಸಲ್ಲಿಸಿದ್ದಾರೆ. ಪುತ್ತಿಲ ಅವರ ಹಿಂದುತ್ವದ ಪ್ರತಿಪಾದನೆ ಮತ್ತು ಪ್ರಖ್ಯಾತಿಯನ್ನು

ಅರುಣ್ ಕುಮಾರ್ ಪುತ್ತಿಲರ ಮೇಲೆ ಲೈಂಗಿಕ ದೌರ್ಜನ್ಯದ ಜತೆಗೆ ಇದೀಗ ಅತ್ಯಾಚಾರ ಪ್ರಕರಣ ದಾಖಲು | ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಪೊಲೀಸರಿಂದ ಪುತ್ತೂರು ನ್ಯಾಯಾಲಯಕ್ಕೆ, ಅರ್ಜಿ Read More »

ಕ್ಯಾಂಪ್ಕೋ ವತಿಯಿಂದ ಉನ್ನತ ಶಿಕ್ಷಣಕ್ಕಾಗಿ ದೀಕ್ಷಾ ಅವರಿಗೆ 50 ಸಾವಿರ ರೂ. ಹಸ್ತಾಂತರ

ಪುತ್ತೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಸಂಸ್ಥೆಯಿಂದ ಸದಸ್ಯ ಬೆಳೆಗಾರರಿಗಾಗಿ ರೂಪಿಸಲಾದ ವಿವಿಧ ಸಹಾಯಧನ ಯೋಜನೆಗಳಡಿಯಲ್ಲಿ ಸಂಸ್ಥೆಯ ಸಕ್ರಿಯ ಸದಸ್ಯರ  ಕುಟುಂಬದವರ ಕೃಷಿ ವಿಜ್ಞಾನಕ್ಕೆ ಸಂಬಂಧಿಸಿದ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ಒಂದು ಲಕ್ಷ ರೂಪಾಯಿ ಮೊತ್ತದ ಸಹಾಯಧನದ ಮೊದಲನೇ ಕಂತಾದ ಐವತ್ತು ಸಾವಿರ ರೂಪಾಯಿ ಯನ್ನು ಕ್ಯಾoಪ್ಕೋ ಸಂಸ್ಥೆಯ ಪುತ್ತೂರು ಶಾಖೆಯ ಸಕ್ರಿಯ ಸದಸ್ಯ ಮಹಾಬಲೇಶ್ವರ ಭಟ್ ಕೆ ಅವರ ಪುತ್ರಿ ಕು.ದೀಕ್ಷಾ ಅವರ Ph.D in Bioinformatics ಶಿಕ್ಷಣಕ್ಕಾಗಿ ದಿನಾಂಕ ಹಸ್ತಾಂತರಿಸಲಾಯಿತು. ಕ್ಯಾಂಪ್ಕೋ ಪುತ್ತೂರು ಶಾಖೆಯಲ್ಲಿ ಸಂಸ್ಥೆಯ

ಕ್ಯಾಂಪ್ಕೋ ವತಿಯಿಂದ ಉನ್ನತ ಶಿಕ್ಷಣಕ್ಕಾಗಿ ದೀಕ್ಷಾ ಅವರಿಗೆ 50 ಸಾವಿರ ರೂ. ಹಸ್ತಾಂತರ Read More »

ಬಿಜೆಪಿ ಸದಸ್ಯತನಾ ಅಭಿಯಾನ | ಮಂಗಳೂರು ವಿಭಾಗದ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯತಾ ಅಭಿಯಾನಕ್ಕೆ ಆರ್.ಸಿ.ನಾರಾಯಣ ನಿಯೋಜನೆ

ಪುತ್ತೂರು: ಬಿಜೆಪಿ ಸದಸ್ಯತನಾ ಅಭಿಯಾನದ ಮಂಗಳೂರು ವಿಭಾಗದ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯತಾ ಅಭಿಯಾನಕ್ಕೆ ರಾಜ್ಯ ಬಿಜೆಪಿ ಕಾರ್ಯದರ್ಶಿ ಆರ್ ಸಿ ನಾರಾಯಣ ಅವರನ್ನು ಮೋರ್ಚಾ ದ ವಿಭಾಗ ಉಸ್ತುವಾರಿಯಾಗಿ ನಿಯೋಜನೆ ಮಾಡಲಾಗಿದೆ. ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾರವರ ಸೂಚನೆಯಂತೆ ಆರ್.ಸಿ.ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ. ಮಡಿಕೇರಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಒಳಗೊಂಡ ಮಂಗಳೂರು ವಿಭಾಗದಲ್ಲಿ ಅತೀ ಹೆಚ್ಚು ಜನರನ್ನು ಸದಸ್ಯರಾಗಿ ಮಾಡಿ ಸಂಘಟನೆಗೆ ಬಲ ನೀಡುವಂತೆ ಕಾರ್ಯನಿರ್ವಾಹಿಸಲು ರಘು ಕೌಟಿಲ್ಯಾ ಸೂಚಿಸಿದ್ದಾರೆ

ಬಿಜೆಪಿ ಸದಸ್ಯತನಾ ಅಭಿಯಾನ | ಮಂಗಳೂರು ವಿಭಾಗದ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯತಾ ಅಭಿಯಾನಕ್ಕೆ ಆರ್.ಸಿ.ನಾರಾಯಣ ನಿಯೋಜನೆ Read More »

ಶಿಕ್ಷಣದೊಂದಿಗೆ ಜೀವನ ರೂಪಿಸಿಕೊಳ್ಳುತ್ತಿರುವ ದೀಕ್ಷಿತ್

’ವಿದ್ಯೆ ನೀಡದ ತಂದೆ, ಬುದ್ಧಿ ಹೇಳದ ಗುರುವು, ಬಿದ್ದಿರಲು ಬಂದು ನೋಡದ ತಾಯಿಯು ಶುದ್ಧ ವೈರಿಗಳು ಸರ್ವಜ್ಞ’ ಎಂದು ಹೇಳಿ ವೈಯಕ್ತಿಕ ಜವಾಬ್ದಾರಿಗಳಿಗೆ ಮೇಲ್ಪಂಕ್ತಿ ಹಾಕಿ ಕೊಟ್ಟ ಸರ್ವಜ್ಞನ ವಚನಗಳನ್ನು ನಾವೆಲ್ಲರೂ ಕೇಳಿಯೇ ಇದ್ದೇವೆ. ವಚನದ ಈ ಸಾಲಿನ ಮೊದಲನೆ ವಿಂಗಡನೆಯು ತಂದೆಯ ಜವಾಬ್ದಾರಿಯನ್ನು ಹೇಳುತ್ತದೆ. ಆದರೆ ತಂದೆಯಿಂದ ವಿದ್ಯೆಗೆ ಸಹಾಯ, ಪ್ರೋತ್ಸಾಹ ಪಡೆಯುವ ಅವಕಾಶದಿಂದ ವಂಚಿತನಾದರೂ ಧೃತಿಗೆಡದೆ ಹೆತ್ತಮ್ಮನ ಆಶೀರ್ವಾದದ ಬಲದೊಂದಿಗೆ ತನ್ನ ವಿದ್ಯಾಭ್ಯಾಸಕ್ಕೆ ತಾನೇ ಹಾದಿ ಮಾಡಿಕೊಂಡು ಮಹತ್ತರವಾದುದನ್ನು ಸಾಧಿಸಬೇಕೆಂಬ ಛಲದಲ್ಲಿ ಪದವಿ ವ್ಯಾಸಂಗದೊಂದಿಗೆ

ಶಿಕ್ಷಣದೊಂದಿಗೆ ಜೀವನ ರೂಪಿಸಿಕೊಳ್ಳುತ್ತಿರುವ ದೀಕ್ಷಿತ್ Read More »

ರಾಷ್ಟ್ರೀಯ ಸೇವಾ ಯೋಜನೆ ಪಠ್ಯ ವಿಷಯವಾಗಬೇಕು : ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆ ಇಂದು ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಠ್ಯೇತರ ಚಟುವಟಿಕೆಯಾಗಿ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ. ಆದರೆ ಅದು ಪಠ್ಯವಿಷಯವಾಗಿಯೇ ಎಲ್ಲ ವಿದ್ಯಾರ್ಥಿಗಳಿಗೆ ದೊರೆಯಬೇಕಾದ ಅವಶ್ಯಕತೆ ಇದೆ. ವ್ಯಕ್ತಿತ್ವವನ್ನು ರೂಪುಗೊಳಿಸುವ ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಮುಖ ಅಧ್ಯಯನ ವಿಷಯವನ್ನಾಗಿಸಿದಾಗ ಸೇವಾ ಮನೋಭಾವನೆಯ ಸಮಾಜ ನಿರ್ಮಾಣವಾಗುವುದಕ್ಕೆ ಹೆಚ್ಚಿನ ಅನುವು ದೊರಕುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆ ಪಠ್ಯ ವಿಷಯವಾಗಬೇಕು : ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ Read More »

ಸೆ.7 ರಿಂದ 10 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 58ನೇ ವರ್ಷದ ಶ್ರೀ ಗಣೇಶೋತ್ಸವ | ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 58ನೇ ವರ್ಷದ ಶ್ರೀ ಗಣೇಶೋತ್ಸವ ಸೆ.7, 8, 9  ಹಾಗೂ 10 ರಂದು ವಿವಿಧ ಧಾರ್ಮಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ನಾಲ್ಕು ದಿನಗಳ ಕಾಲ ನಡೆಯುವ ಶ್ರೀ ಗಣೇಶೋತ್ಸವದಲ್ಲಿ ಸೆ.7 ಶನಿವಾರ ಬೆಳಿಗ್ಗೆ 8 ಕ್ಕೆ ಭಜನೆ, 8.30 ಕ್ಕೆ ಶ್ರೀ ದೇವರ ಪ್ರತಿಷ್ಠೆ, 10 ಕ್ಕೆ ನಡೆಯುವ ಧ್ವಜಾರೋಹಣವನ್ನು ಉದ್ಯಮಿ ವಾಮನ್

ಸೆ.7 ರಿಂದ 10 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 58ನೇ ವರ್ಷದ ಶ್ರೀ ಗಣೇಶೋತ್ಸವ | ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ Read More »

ಕಡಬ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ | ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಧೀಶರು

ಕಡಬ: ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಕೇರಳ ಮಲ್ಲಾಪುರದ ಅಬಿನ್.ಪಿ.ಸಿ.ಬಿ. ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರು ವಜಾಗೊಳಿಸಿದ್ದಾರೆ. ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಸಮವಸ್ತ್ರವನ್ನು ಹೊಲಿಸಿ ಪಡೆದುಕೊಂಡು ಕೊಯಮುತ್ತೂರಿನಿಂದ ಆಸಿಡ್ ಖರೀದಿಸಿ ಸಮವಸ್ತ್ರ ಧರಿಸಿಕೊಂಡು ಮಾ. 4ರಂದು ಬೆಳಿಗ್ಗೆ ಕಾಲೇಜಿಗೆ ಬಂದು ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ

ಕಡಬ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ | ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಧೀಶರು Read More »

ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಿಕ್ಷಾ ಚಾಲಕ-ಮಾಲಕರ ಸಂಘ ಆಗ್ರಹ | ಜಿಲ್ಲಾಧಿಕಾರಿಗಳಿಗೆ ಮನವಿ

ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪುತ್ತೂರು ಕರ್ನಾಟಕ ರಿಕ್ಷಾ ಚಾಲಕ-ಮಾಲಕರ ಸಂಘ ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಈಗಾಗಲೇ ಬ್ಯಾಟರಿ ರಿಕ್ಷಾಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸಲು, ಯಾವುದೇ ರಿಕ್ಷಾ ನಿಲ್ದಾಣದಲ್ಲಿ ನಿಲುಗಡೆಗೆ, ಬಾಡಿಗೆ ಮಾಡಲು ಅವಕಾಶ ನೀಡಲಾಗಿದೆ. ಪರಿಣಾಮ ತಾಲೂಕು ಪರವಾನಿಗೆ ಪಡೆದು ಬಾಡಿಗೆ ಮಾಡುತ್ತಿರುವ ರಿಕ್ಷಾ ಚಾಲಕರಿಗೆ ಸಮಸ್ಯೆ ಉಂಟಾಗಿದೆ. ತಕ್ಷಣ ಈ ಪ್ರಕ್ರಿಯೆನ್ನು ರದ್ದುಗೊಳಿಸಿ ಪರವಾಣಿಗೆ ಆಧಾರದಲ್ಲಿ ಬಾಡಿಗೆ ಮಾಡಲು ಅವಕಾಶ ನೀಡಬೇಕು, ಬ್ಯಾಟರಿ ಆಟೋ ರಿಕ್ಷಾಗಳಿಗೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಿಕ್ಷಾ ಚಾಲಕ-ಮಾಲಕರ ಸಂಘ ಆಗ್ರಹ | ಜಿಲ್ಲಾಧಿಕಾರಿಗಳಿಗೆ ಮನವಿ Read More »

error: Content is protected !!
Scroll to Top