ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ವಾಲ್ಮೀಕಿ ರಾಮಾಯಣದ ಪಾತ್ರಗಳ ಅಂತರಂಗ ನಿರೂಪಣೆ ಕಾರ್ಯಕ್ರಮ

ಪುತ್ತೂರು: ಶಿಕ್ಷಣ ಎಂದರೆ ಕೇವಲ ಅಂಕಗಳಿಕೆ ಮಾತ್ರ ಸೀಮಿತವಲ್ಲ. ಅದು ವ್ಯವಹಾರ ಜ್ಞಾನಕ್ಕಿರುವ ಸಂಗತಿ. ನಮ್ಮ ಶೈಕ್ಷಣಿಕ ಹಂತದ ನಂತರ ಬದುಕು ಕಟ್ಟಿಕೊಳ್ಳಲು ಸಾಂಸ್ಕೃತಿಕ ಕಾರ್ಯಕ್ರಮ ಸಹಾಯ ಮಾಡುತ್ತದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ) ವಿವೇಕಾನಂದ ಸಂಶೋಧನಾ ಕೇಂದ್ರ, ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ,  ಯಕ್ಷ ರಂಜಿನಿ, ಕನ್ನಡ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಕೀರ್ತಿಶೇಷ ಪಾದೇಕಲ್ಲು ನಾರಾಯಣ […]

ವಿವೇಕಾನಂದ ಕಾಲೇಜಿನಲ್ಲಿ ವಾಲ್ಮೀಕಿ ರಾಮಾಯಣದ ಪಾತ್ರಗಳ ಅಂತರಂಗ ನಿರೂಪಣೆ ಕಾರ್ಯಕ್ರಮ Read More »

ಬನ್ನೂರಿನ ಮನೆಯೊಂದಕ್ಕೆ ಪೊಲೀಸರಿಂದ ದಾಳಿ | ಇಬ್ಬರು ಮಹಿಳೆಯರು ವಶಕ್ಕೆ !

ಪುತ್ತೂರು: ಬನ್ನೂರಿನ ಕರ್ಮಲದ ಮನೆಯೊಂದಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತರಲ್ಲಿ ಹೊರ ಊರಿನ ಓರ್ವ ಮುಸ್ಲಿಂ ಮಹಿಳೆ ಹಾಗೂ ಓರ್ವ ಕ್ರಿಶ್ಚಿಯನ್ ಮಹಿಳೆಯಾಗಿದ್ದು, ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಹಲವು ಸಂಶಯದ ಮೇಲೆ ದಾಳಿ ನಡೆಸಲಾಗಿತ್ತು. ಆದರೆ ದಾಳಿ ವೇಳೆ ಅನುಮಾನಾಸ್ಪದ ಇಬ್ಬರು ಮಹಿಳೆಯರನ್ನು ಹೊರತುಪಡಿಸಿ ಬೇರೆನು ಪತ್ತೆಯಾಗಿಲ್ಲ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಬನ್ನೂರಿನ ಮನೆಯೊಂದಕ್ಕೆ ಪೊಲೀಸರಿಂದ ದಾಳಿ | ಇಬ್ಬರು ಮಹಿಳೆಯರು ವಶಕ್ಕೆ ! Read More »

ಬಿಜೆಪಿ ನಗರ, ಗ್ರಾಮಾಂತರ ಮಂಡಲದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ

ಪುತ್ತೂರು : ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಇಂದು ನಡೆಯಿತು. ಮಂಡಲಗಳ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ಮತ್ತು ಪಿ.ಜಿ ಜಗನ್ನಿವಾಸ ರಾವ್ ನೂತನ ಅಧ್ಯಕ್ಷರುಗಳಾದ ದಯಾನಂದ ಶೆಟ್ಟಿ ಉಜಿರೆಮಾರ್, ಶಿವಕುಮಾರ್ ಕಲ್ಲಿಮಾರ್ ಅವರಿಗೆ ಬಿಜೆಪಿ ಶಲ್ಯ ಹಾಕಿ ಕಛೇರಿಯ ದಾಖಲಾತಿ ಪುಸ್ತಕ ಹಸ್ತಾಂತರಿಸಿ ನೂತನ ಸಮಿತಿಗೆ ಶುಭ ಹಾರೈಸಿದರು. ಗ್ರಾಮಾಂತರ ಮಂಡಲದ ನೂತನ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಪ್ರಶಾಂತ್ ನೆಕ್ಕಿಲಾಡಿ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್

ಬಿಜೆಪಿ ನಗರ, ಗ್ರಾಮಾಂತರ ಮಂಡಲದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಪುತ್ತೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ಮತ್ತು ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ “ಪ್ರತಿಭಾ ಶೋಧ” ಗುರುವಾರ ಲಿಟ್ಲ್‍ ಫ್ಲವರ್ ಶಾಲೆಯಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಪ್ರಧಾನ ಮಂತ್ರಿ ಪೋಷಣ್ ಅಭಿಯಾನದ ಸಹಾಯಕ ನಿರ್ದೇಶಕ ವಿಷ್ಣು ಪ್ರಸಾದ್, ಶಿಕ್ಷಣ

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ತೇಲಿ ಹೋದ ಅಪರಿಚಿತ ಶವ | ಪ್ರವಾಹ ರಕ್ಷಣಾ ತಂಡದಿಂದ ಕಾರ್ಯಾಚರಣೆ

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ನೇತ್ರಾವತಿ ನದಿಯಲ್ಲಿ ತೇಲಿ ಹೋದ ಕುರಿತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇರುವುದರಿಂದ ಪ್ರವಾಹ ರಕ್ಷಣಾ ತಂಡದವರಿಗೆ ದೋಣಿಗೆ ಒಬಿಎಂ ಸಿಕ್ಕಿಸಿ ದೋಣಿ ಚಲಾಯಿಸಲು ಸಾಧ್ಯವಾಗದಿರುವುದರಿಂದ ಅವರ ಕೈಗೂ ಮೃತದೇಹ ಸಿಗದೆ ನೀರಿನಲ್ಲಿ ತೇಲಿಕೊಂಡು ಹೋಗಿದೆ ಎಂದು ತಿಳಿದು ಬಂದಿದೆ. ನೀಲಿ ಬಣ್ಣದ ಒಳ ಉಡುಪನ್ನು ತೊಟ್ಟಿರುವ ಮೃತದೇಹವೊಂದು ನದಿಯಲ್ಲಿ ತೇಲಿ ಹೋಗುತ್ತಿರುವುದನ್ನು ಉಪ್ಪಿನಂಗಡಿ ಬಸ್ ನಿಲ್ದಾಣ ಬಳಿಯ ನೇತ್ರಾವತಿ ಸೇತುವೆಯ ಮೇಲಿನಿಂದ ಸಾರ್ವಜನಿಕರು ನೋಡಿದ್ದು, ಬಳಿಕ ಈ

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ತೇಲಿ ಹೋದ ಅಪರಿಚಿತ ಶವ | ಪ್ರವಾಹ ರಕ್ಷಣಾ ತಂಡದಿಂದ ಕಾರ್ಯಾಚರಣೆ Read More »

ವಿದ್ಯಾಭಾರತಿ ಶಟಲ್ ಬ್ಯಾಡ್‍ಮಿಂಟನ್ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಸಾಮೆತ್ತಡ್ಕ ಸುದಾನ ಸ್ಪೋಟ್ಸ್ ಕ್ಲಬ್ ನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್‍ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಾಲವರ್ಗದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಅಯ್ಕೆಯಾಗಿದೆ.  ಬಾಲವರ್ಗದ ಬಾಲಕರ ವಿಭಾಗದಲ್ಲಿ 7ನೇ ತರಗತಿಯ ಅದ್ಯಾನ್.ಆರ್.,  ಜಶ್.ಎಚ್.ಬಿ., ಪ್ರಣವ ಹೆಬ್ಬಾರ್, 8ನೇ ತರಗತಿಯ ಇಶಾನ್.ಕೆ., ನಿಧಿತ್ ಗೌಡ, ವಿಸ್ತಾರ್ ರೈ ಪ್ರಥಮ ಸ್ಥಾನ ಪಡೆದಿದ್ದಾರೆ. ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ

ವಿದ್ಯಾಭಾರತಿ ಶಟಲ್ ಬ್ಯಾಡ್‍ಮಿಂಟನ್ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎನ್‌ಡಿಎ ತರಗತಿಗಳಿಗೆ ಚಾಲನೆ

ಪುತ್ತೂರು: ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿ ನಡೆಸುವ ಪರೀಕ್ಷೆ ಸೈನ್ಯ ಸೇರುವವರಿಗೆ ಒಳ್ಳೆಯ ಅವಕಾಶ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಸೈನ್ಯದಲ್ಲಿ ಹುಡುಗರು ಮತ್ತು ಹುಡುಗಿಯರು ಇಬ್ಬರಿಗೂ  ಸಮಾನ ಅವಕಾಶವಿದೆ. ಆದರೆ ಪ್ರಸ್ತುತ ನಮ್ಮ ಪ್ರದೇಶಗಳಿಂದ ಯುವ ಸಮೂಹ ದೊಡ್ಡ ಉತ್ಸಾಹ ತೋರದಿರುವುದು, ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯಕ್ಕೆ ಸೇರದಿರುವುದು ವಿಷಾದಕರ ಎಂದು ರಾಷ್ಟ್ರೀಯ ಸೈನಿಕ ಸಂಸ್ಥೆಯ ರಾಜ್ಯ ಯುವ ಅಧ್ಯಕ್ಷ ಅರವಿಂದ ಹೇಳಿದರು. ಅವರು ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಎನ್‌.ಡಿ.ಎ. ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎನ್‌ಡಿಎ ತರಗತಿಗಳಿಗೆ ಚಾಲನೆ Read More »

ಸಂಘರ್ಷದಿಂದ ಹುಟ್ಟಿದ ಬಿಜೆಪಿಗೆ ಸಂಘರ್ಷದ ದಾರಿ ತೋರಿಸಬೇಡಿ : ಕಾಂಗ್ರೆಸ್‍ ಗೆ ಶಾಸಕ ಭರತ್ ಶೆಟ್ಟಿ ಎಚ್ಚರಿಕೆ

ಪುತ್ತೂರು: ಸಂಘರ್ಷದಿಂದ ಹುಟ್ಟಿದ ಬಿಜೆಪಿಯವರಿಗೆ ಸಂಘರ್ಷದ ಪಾಠ ಹೇಳಬೇಡಿ, ದಾರಿ ತೋರಿಸಬೇಡಿ. ಹೀಗೆಂದು ಗುಡುಗಿದರು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ. ಪುತ್ತೂರು ಬಿಜೆಪಿ ಯುವಮೋರ್ಚಾ, ನಗರದ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಕಾಂಗ್ರೆಸ್ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಎಂಎಲ್‍ ಸಿ ಐವನ್ ಡಿ’ಸೋಜಾ ಹೇಳಿಕೆಯನ್ನು ಖಂಡಿಸಿ ನಗರದ ದರ್ಬೆ ವೃತ್ತದಲ್ಲಿ ನಡೆದ ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್‍ ನ ದರ್ಪ, ಭ್ರಷ್ಟಾಚಾರ ಆಡಳಿತ ಜನರಿಗೆ ಮನದಟ್ಟು ಮಾಡುವ ನಿಟ್ಟಿನಲ್ಲಿ ಈ ಪ್ರತಿಭಟನೆ

ಸಂಘರ್ಷದಿಂದ ಹುಟ್ಟಿದ ಬಿಜೆಪಿಗೆ ಸಂಘರ್ಷದ ದಾರಿ ತೋರಿಸಬೇಡಿ : ಕಾಂಗ್ರೆಸ್‍ ಗೆ ಶಾಸಕ ಭರತ್ ಶೆಟ್ಟಿ ಎಚ್ಚರಿಕೆ Read More »

ತಾಲೂಕು ಮಟ್ಟದ ವಾಲಿಬಾಲ್ | ಬಾಲಕರ ವಿಭಾಗದಲ್ಲಿ ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಶಾಲೆ ಹಾಗೂ ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಸರಕಾರಿ ಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ನರಿಮೊಗರು ಗ್ರಾಮ ಪಂಚಾಯತ್ ಹಾಗೂ ಪಂಜಳ ಶಾಂತಿಗಿರಿ ವಿದ್ಯಾನಿಕೇತನ್ ಶಾಲೆಯ ಸಹಯೋಗದೊಂದಿಗೆ ಪಂಜಳ ಶಾಂತಿಗಿರಿ ವಿದ್ಯಾನಿಕೇತನ್ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಈ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ

ತಾಲೂಕು ಮಟ್ಟದ ವಾಲಿಬಾಲ್ | ಬಾಲಕರ ವಿಭಾಗದಲ್ಲಿ ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಶಾಲೆ ಹಾಗೂ ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಸರಕಾರಿ ಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಚೆಸ್ ಪಂದ್ಯಾಟ : ಅಂಬಿಕಾದ ತ್ರಿಶೂಲ್‌ ಎನ್. ಡಿ. ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಮಂಗಳೂರಿನ ಬಾಸ್ಕೊ ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯದಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ತ್ರಿಶೂಲ್‌ ಎನ್.ಡಿ. ನಾಲ್ಕನೇ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತ್ರಿಶೂಲ್ ಪುತ್ತೂರು ಹಾರಾಡಿ ನಿವಾಸಿ ದಾಮೋದರ ಎನ್. ಮತ್ತು ನವೀನ ಕುಮಾರಿಕೆ.ಎಸ್. ದಂಪತಿ ಪುತ್ರ. ವಿದ್ಯಾರ್ಥಿ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಚೆಸ್ ಪಂದ್ಯಾಟ : ಅಂಬಿಕಾದ ತ್ರಿಶೂಲ್‌ ಎನ್. ಡಿ. ರಾಜ್ಯ ಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top