ಆ.31 : ವಿಎಚ್ ಪಿ ವತಿಯಿಂದ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ | ಆ.24 ಕಬಡ್ಡಿ ಪಂದ್ಯಾಟ, ಜಿಲ್ಲಾ ಮಟ್ಟದ ಕೃಷ್ಣವೇಷ ಸ್ಪರ್ಧೆ
ಪುತ್ತೂರು: ವಿಶ್ವ ಹಿಂದೂ ಪರಿಷದ್, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಆ. 31ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷೆ ಕೃಷ್ಣವೇಣಿ ಮುಳಿಯ ಹೇಳಿದರು. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿ, ವಿಶ್ವ ಹಿಂದೂ ಪರಿಷದ್ ಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆರಂಭಗೊಂಡ […]










