ಪುತ್ತೂರು

ಅಕ್ಷಯ ಕಾಲೇಜಿನಲ್ಲಿ ಪ್ರಥಮ ಬಿಸಿಎ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ

ಪುತ್ತೂರು: ವಿದ್ಯಾರ್ಥಿಗಳಿಗೆ ಐಒಟಿ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ ಸಂಬಂಧಿತ ಮೂಲಭೂತ ವಿಷಯಗಳ ಬಗ್ಗೆ ಮಾಹಿತಿ ನೀಡುವುದಕ್ಕಾಗಿ ಅಕ್ಷಯ ಕಾಲೇಜಿನ ಬಿ.ಸಿ.ಎ. ವಿಭಾಗ, ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ ಪ್ರಥಮ ಬಿ.ಸಿ.ಎ. ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರವು ನಡೆಯಿತು. ವ್ಯಾಪಕವಾದ ಡೇಟಾ ಯುಗದಲ್ಲಿ, ಐಒಟಿ (ಇಂಟರ್ನೆಟ್ ಆಫ್ ಥಿಂಗ್ಸ್) ಜ್ಞಾನ ಅತ್ಯಮೂಲ್ಯವಾದ ಮತ್ತು ಅನಿವಾರ್ಯವಾದ ಒಂದು ಅಂಶವಾಗಿದೆ. ಈಗಿನ ಪೈಪೋಟಿಯ ಯುಗದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಅದನ್ನು ಅನುಸರಿಸುವ ಜ್ಞಾನ ಅತ್ಯವಶ್ಯವಾಗಿದೆ. ಐಒಟಿ ಮತ್ತು ಡಿಜಿಟಲ್ […]

ಅಕ್ಷಯ ಕಾಲೇಜಿನಲ್ಲಿ ಪ್ರಥಮ ಬಿಸಿಎ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ Read More »

ಪುತ್ತೂರು ಗೇರು ಸಂಶೋಧನಾ ಕೇಂದ್ರದಲ್ಲಿ ರೈತ ವಿಜ್ಞಾನಿ ಸಂವಾದ ಕಾರ್ಯಕ್ರಮ

ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಅವರು ೧೦೯ ಹೊಸ ಕೃಷಿ ಮತ್ತು ತೋಟಗಾರಿಕೆ ತಳಿಗಳನ್ನು ಇಂದು ನವದೆಹಲಿ ಭಾರತೀಯ ಕೃಷಿ ಸಂಶೋಧನಾ ಪರಿಷತ್ತುನಲ್ಲಿ ಬಿಡುಗಡೆ ಮಾಡಿದ್ದು, ಈ ನಿಟ್ಟಿನಲ್ಲಿ ಪುತ್ತೂರು ಗೇರು ನಿರ್ದೇಶನಾಲಯದಲ್ಲಿ ವಿಜ್ಞಾನಿ ರೈತ ಸಂವಾದವನ್ನು ಭಾನುವಾರ ಏರ್ಪಡಿಸಲಾಗಿತ್ತು. ನವದೆಹಲಿಯಲ್ಲಿ ಎರಡು ಗೇರಿನ ಹೈಬ್ರಿಡ್ ಪ್ರಭೇದಗಳು- ನೇತ್ರ ಜಂಬೋ-೧ ಮತ್ತು ನೇತ್ರ ಗಂಗಾವನ್ನು ಐಸಿಎಆರ್- ಗೇರು ಸಂಶೋಧನಾ ನಿರ್ದೇಶನಾಲಯ ಅಭಿವೃದ್ಧಿಪಡಿಸಿದೆ. ಸಂಶೋಧನಾ ಕೇಂದ್ರದ ನಿರ್ದೇಶಕ ಡಾ ಜೆ.ದಿನಕರ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿ, ಇದು ಸಂಸ್ಥೆಗೆ ಹೆಮ್ಮೆಯ

ಪುತ್ತೂರು ಗೇರು ಸಂಶೋಧನಾ ಕೇಂದ್ರದಲ್ಲಿ ರೈತ ವಿಜ್ಞಾನಿ ಸಂವಾದ ಕಾರ್ಯಕ್ರಮ Read More »

ಬಿಲ್ಲವ ಮಹಿಳಾ ಸಂಘದಿಂದ ‘ಆಟಿದ ನೆಂಪುದ ಕೂಟ’

ಪುತ್ತೂರು: ತುಳು ಸಂಸ್ಕೃತಿ ಹಾಗೂ ಕೃಷಿ ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದೆ. ಸಂಸ್ಕೃತಿ ನಶಿಸಿದರೆ ಕೃಷಿ ಇಲ್ಲ, ಕೃಷಿ ನಶಿಸಿದರೆ ಸಂಸ್ಕೃತಿ ಇಲ್ಲ. ಈ ನಿಟ್ಟಿನಲ್ಲಿ ಎರಡನ್ನೂ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದು ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ತುಕರಾಮ ಪೂಜಾರಿ ಹೇಳಿದರು. ಅವರು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಮಂದಿರದಲ್ಲಿ ಮಹಿಳಾ ಬಿಲ್ಲವ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವರ ಸಂಘದ ಸಹಕಾರದೊಂದಿಗೆ ನಡೆದ ‘ಆಟಿದ ನೆಂಪುದ ಕೂಟ’

ಬಿಲ್ಲವ ಮಹಿಳಾ ಸಂಘದಿಂದ ‘ಆಟಿದ ನೆಂಪುದ ಕೂಟ’ Read More »

ಕರಾಟೆಯಲ್ಲಿ ಪ್ರಾಪ್ತಿ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಬೆಂಗಳೂರಿನಲ್ಲಿ‌ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್ ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನಗಳಿಸಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಆಶಾ ಮತ್ತು ಗಿರೀಶ್ ಶೆಟ್ಟಿ ದಂಪತಿ ಪುತ್ರಿಯಾಗಿರುವ ಅವರಿಗೆ ಸೆನ್ಸಾಯಿ ಮಾಧವ ಅಳಿಕೆ ಇವರ ಮಾರ್ಗದರ್ಶನ ನೀಡಿದ್ದಾರೆ. ಸುರೇಶ್, ದಿಲೀಪ್, ರೋಹಿತ್ ಎಸ್‍.ಎನ್‍., ನಿಖಿಲ್ ಕೆ.ಟಿ., ನಿವೇದಿತಾ, ರೋಶಿನಿ ತರಬೇತಿ ನೀಡಿದ್ದಾರೆ.

ಕರಾಟೆಯಲ್ಲಿ ಪ್ರಾಪ್ತಿ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನೂತನ ಸಭಾಂಗಣದ ಉದ್ಘಾಟನೆ, 36ನೇ ವಾರ್ಷಿಕೋತ್ಸವ | ಭಾರತೀಯ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆಯಿರಲಿ: ಡಾ. ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

ಪುತ್ತೂರು: ಭಾರತೀಯ ಸಂಸ್ಕೃತಿಗೆ ಜಗತ್ತಿನಲ್ಲೇ ಅತ್ಯಂತ ವಿಶಿಷ್ಟ ಸ್ಥಾನಮಾನವಿದೆ. ಅರ್ಥಪೂರ್ಣವಾಗಿ ಹಾಗೂ ಮೌಲ್ಯಯುತವಾಗಿ ಯಾವ ರೀತಿ ಬದುಕಬೇಕೆನ್ನುವ ಆದರ್ಶ ಜೀವನಶೈಲಿಯನ್ನು ಜಗತ್ತಿಗೆ ಕೊಟ್ಟ ಶ್ರೇಷ್ಠ ಪರಂಪರೆ ನಮ್ಮದಾಗಿದೆ. ನಮ್ಮ ಭಾರತೀಯ ಭವ್ಯ ಸಂಸ್ಕೃತಿಯನ್ನು ಹೆಮ್ಮೆಯಿಂದ ಗೌರವಿಸುವ ಮನಸ್ಸು ನಮ್ಮದಾಗಲಿ. ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಜೈನಕಾಶಿ ಮೂಡುಬಿದಿರೆಯ ಜೈನಮಠದ ಪರಮಪೂಜ್ಯ ಜಗದ್ಗುರು, ಭಾರತಭೂಷಣ, ಸ್ವಸ್ಥಿಶ್ರೀ ಡಾ. ಭಟ್ಟಾರಕ ಚಾರುಕೀರ್ತಿ  ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಹೇಳಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ 36ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ,

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನೂತನ ಸಭಾಂಗಣದ ಉದ್ಘಾಟನೆ, 36ನೇ ವಾರ್ಷಿಕೋತ್ಸವ | ಭಾರತೀಯ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆಯಿರಲಿ: ಡಾ. ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆ ಆಚರಣೆ

ಪುತ್ತೂರು: ಯಾವುದೇ ಓರ್ವ ವ್ಯಕ್ತಿ ಯಶಸ್ಸನ್ನು ಸಾಧಿಸಬೇಕೆಂದರೆ ಅವನ ಮುಂದೆ ಗುರಿ ಇರಬೇಕು, ಹಿಂದೆ ಗುರುವಿರಬೇಕು ಎನ್ನುವ ನಂಬಿಕೆಯಿದೆ. ಗುರುವಿಲ್ಲದೆ ಜೀವನಕ್ಕೆ ಅಥವಾ ಜ್ಞಾನಕ್ಕೆ ಯಾವುದೇ ರೀತಿಯ ಅರ್ಥವಿರುವುದಿಲ್ಲ. ನಮ್ಮ ಮೊದಲ ಗುರು ತಾಯಿ ನಮಗೆ ಜೀವನದ ಅರ್ಥವನ್ನು ನೀಡುತ್ತಾಳೆ  ಅದೇ ರೀತಿ ಜೀವನಕ್ಕೆ ಅಗತ್ಯವಾದ ಜ್ಞಾನವನ್ನು ಗುರು ನೀಡುತ್ತಾನೆ. ಎಂದು ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ ಸಂಸ್ಥೆಯ ಪ್ರಿನ್ಸಿಪಾಲ್ ಶೋಭಿತ ಸತೀಶ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆಯ ಆಚರಣೆಯ ಕಾರ್‍ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆ ಆಚರಣೆ Read More »

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕರಿಗೆ ಮನವಿ

ಪುತ್ತೂರು: ಬೆಂಗಳೂರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿಯೊಂದನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಇಂದು ನೀಡಲಾಯಿತು. ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಬೆಂಗಳೂರು ಚಲೋ ಹೋರಾಟದ ಪೂರ್ವಭಾವಿಯಾಗಿ ಈ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ತಾಲೂಕು ಘಟಕ ದ ಅಧ್ಯಕ್ಷ ನಾಗೇಶ್ ಪಾಟಾಳಿ ಪೆರುವಾಯಿ, ಪುತ್ತೂರು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ತನುಜಾ, ಅಶ್ರಫ್,

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕರಿಗೆ ಮನವಿ Read More »

ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವದ ವಿಗ್ರಹ ರಚನೆಗೆ ಚಾಲನೆ, ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಶ್ರೀ ದೇವತಾ ಸಮಿತಿ ವತಿಯಿಂದ  ಪುತ್ತೂರು ಕಿಲ್ಲೇ ಮೈದಾನದಲ್ಲಿ ನಡೆಯುವ 67ನೇ ವರ್ಷದ ಮಹಾಗಣೇಶೋತ್ಸವದ ವಿಗ್ರಹ ರಚನೆಗೆ ಚಾಲನೆ, ಆಮಂತ್ರಣ ಪತ್ರಿಕೆ ಬಿಡುಗಡೆ ಶನಿವಾರ ನಡೆಯಿತು. ವುತ್ತೂರು ಕೋರ್ಟ್ ರಸ್ತೆಯಲ್ಲಿರುವ ಹೈ ಕಾಂಪ್ಲೆಕ್ಸ್ನ ಸಭಾಂಗಣದಲ್ಲಿ ವೇದಮೂರ್ತಿ ನುಬ್ರಹ್ಮಣ್ಯ ಹೊಳ್ಳರ ನೇತೃತ್ವದಲ್ಲಿ, ದೇವತಾ ನಮಿತಿಯ ಅಧ್ಯಕ್ಷ ಅಭಿಜಿತ್ ಶೆಟ್ಟಿ ನೆಲ್ಲಿಕಟ್ಟೆ ಅವರ ಅಧ್ಯಕ್ಷತೆಯಲ್ಲಿ ವಿಗ್ರಹ ರಚನೆಗೆ ಮುಹೂರ್ತ ನಡೆಸಲಾಯಿತು. ಶಿಲ್ಪಿ ರಮೇಶ್ ಪೂಜಾರಿಯವರು ಶ್ರೀಗಣೇಶ ವಿಗ್ರಹ ರಚಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಪ್ರತಿವರ್ಷ ನಾಗರ ಪಂಚಮಿಯ

ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವದ ವಿಗ್ರಹ ರಚನೆಗೆ ಚಾಲನೆ, ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಆ.14 : ಅಖಂಡ ಭಾರತ ಸಂಕಲ್ಪ | ವಿಶ್ವ ಹಿಂದೂ ಪರಿಷದ್, ಬಜರಂಗದಳ ಹಿಂದು ಜಾಗರಣ ವೇದಿಕೆಯಿಂದ “ ಬೃಹತ್ ಪಂಜಿನ ಮೆರವಣಿಗೆ “

ಪುತ್ತೂರು: ವಿಶ್ವ ಹಿಂದೂ ಪರಿಷದ್, ಬಜರಂಗದಳ ಹಿಂದು ಜಾಗರಣ ವೇದಿಕೆ ಜಂಟಿ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ “ ಬೃಹತ್ ಪಂಜಿನ ಮೆರವಣಿಗೆ “ ಆ.14 ಬುಧವಾರ ಸಂಜೆ 7.00ಕ್ಕೆ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ,ಮುಂಭಾಗದಲ್ಲಿ ನಡೆಯಲಿದೆ. ಬೊಳುವಾರು ವೃತ್ತದಿಂದ ಪಂಜಿನ ಮೆರವಣಿಗೆ ಆರಂಭಗೊಂಡು ಮುಖ್ಯರಸ್ತೆಯ ಮೂಲಕ ಬಸ್ ನಿಲ್ದಾಣವಾಗಿ ಬಂದು ಕಿಲ್ಲೆ ಮೈದಾನದ ತನಕ ನಡೆಯಲಿದೆ. ರಾತ್ರಿ  8.00 ಗಂಟೆಗೆ ನಡೆಯುವ ಸಮಾರೋಪದಲ್ಲಿ ರವೀಶ ಪಡುಮಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು

ಆ.14 : ಅಖಂಡ ಭಾರತ ಸಂಕಲ್ಪ | ವಿಶ್ವ ಹಿಂದೂ ಪರಿಷದ್, ಬಜರಂಗದಳ ಹಿಂದು ಜಾಗರಣ ವೇದಿಕೆಯಿಂದ “ ಬೃಹತ್ ಪಂಜಿನ ಮೆರವಣಿಗೆ “ Read More »

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷರಾಗಿ ಉಮೇಶ್‍ ಕೊಡಿಬೈಲು ಪುನರಾಯ್ಕೆ

ಪುತ್ತೂರು: ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಿಶ್ವಸ್ಥ ಮಂಡಳಿ ನೂತನ ಅಧ್ಯಕ್ಷರಾಗಿ ಉಮೇಶ್‍ ಕೊಡಿಬೈಲು ಪುನರಾಯ್ಕೆಯಾಗಿದ್ದಾರೆ. ಶ್ರೀ ದೇವಸ್ಥಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಉಮೇಶ್ ಕೋಡಿಬೈಲು ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಮೇಶ್‍ ಅವರು ಪುತ್ತಿಲ ಪರಿವಾರ ಸಂಘಟನೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ.

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷರಾಗಿ ಉಮೇಶ್‍ ಕೊಡಿಬೈಲು ಪುನರಾಯ್ಕೆ Read More »

error: Content is protected !!
Scroll to Top