ಪುತ್ತೂರು

ಅಕ್ಷಯ ಕಾಲೇಜಿನಲ್ಲಿ ಹೊಸ ಫ್ಯಾಶನ್ ಡಿಸೈನ್ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ಫ್ಯಾಶನ್ ಡಿಸೈನ್ ವಿಭಾಗ, “ಫಸೆರಾ” ಫ್ಯಾಶನ್ ಡಿಸೈನ್ ಅಸೋಸಿಯೇಶನ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಹೊಸದಾಗಿ ಪ್ರವೇಶ ಪಡೆದಿರುವ ಪ್ರಥಮ ಫ್ಯಾಶನ್ ಡಿಸೈನ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಗಾರ ಸೋಮವಾರ ನಡೆಯಿತು. ತರಬೇತುದಾರರಾಗಿ ಕೌಶಲ್ಯ ತರಬೇತುದಾರ, ಕಾಲೇಜಿನ ಫ್ಯಾಶನ್ ವಿಭಾಗದ ವಿಭಾಗ ಮುಖ್ಯಸ್ಥ ಕಿಶನ್ ಎನ್. ರಾವ್ ವಿದ್ಯಾರ್ಥಿಗಳಿಗೆ ಗೋಲ್ ಸೆಟ್ಟಿಂಗ್‍ ವಿಷಯದಲ್ಲಿ ಮಾಹಿತಿ ಕಾರ್ಯಗಾರ ನಡೆಸಿಕೊಟ್ಟು, ಶಿಕ್ಷಣದ ಜೊತೆಯಲ್ಲಿ ಕೌಶಲ್ಯ ಅಭಿವೃದ್ಧಿ ಕೂಡ ವಿದ್ಯಾರ್ಥಿಗಳನ್ನು ನಿರ್ಧರಿತ ಗುರಿ ತಲುಪಿಸುವಲ್ಲಿ ಪ್ರಮುಖ ಪಾತ್ರವನ್ನು […]

ಅಕ್ಷಯ ಕಾಲೇಜಿನಲ್ಲಿ ಹೊಸ ಫ್ಯಾಶನ್ ಡಿಸೈನ್ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ Read More »

ಮೈಸೂರು ಚಲೋ : ಪಾಲ್ತಾಡಿ ಗ್ರಾಮದಿಂದ ಹೊರಟ 58 ಕಾರ್ಯಕರ್ತರನ್ನು ಬೀಳ್ಕೊಟ್ಟ ನಳಿನ್ ಕುಮಾರ್ ಕಟೀಲ್

ಸವಣೂರು : ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪನವರು, ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧದ “ಮೈಸೂರು ಚಲೋ” ಪಾದಯಾತ್ರೆಯಲ್ಲಿ ಭಾಗವಹಿಸಲು ಹೊರಟ ಪಾಲ್ತಾಡಿ ಗ್ರಾಮದ 58 ಬಿಜೆಪಿ ಕಾರ್ಯಕರ್ತರನ್ನು ಬೀಳ್ಕೊಡಲಾಯಿತು. ನಿಕಟಪೂರ್ವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಜು.6ರಂದು ರಾತ್ರಿ ಕುಂಜಾಡಿಯಲ್ಲಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಜಗದೀಶ್ ಅಧಿಕಾರಿ ಮೂಡಬಿದಿರೆ, ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ., ಮಂಡಲ ಕಾರ್ಯದರ್ಶಿ

ಮೈಸೂರು ಚಲೋ : ಪಾಲ್ತಾಡಿ ಗ್ರಾಮದಿಂದ ಹೊರಟ 58 ಕಾರ್ಯಕರ್ತರನ್ನು ಬೀಳ್ಕೊಟ್ಟ ನಳಿನ್ ಕುಮಾರ್ ಕಟೀಲ್ Read More »

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಬೆಥನಿ ಆಂಗ್ಲ ಮಾದ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಪುತ್ತೂರು: ಕ್ಷೇತ್ರ ಶಿಕ್ಷಣ ಇಲಾಖೆ ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಸಹಯೋಗದಲ್ಲಿ ಆ. 5ರಂದು ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ 9ನೇ ತರಗತಿಯ ಸ್ವರೂಪ್ ಕೃಷ್ಣ ಪ್ರಥಮ ಸ್ಥಾನ ಹಾಗೂ 9ನೇ ತರಗತಿಯ ರಿಶೋನ್ ಲಸ್ರಾದೋ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸ್ವರೂಪ್ ಕೃಷ್ಣ  ಕೃಷ್ಣ ಗೌಡ ಕೆ ರಾಧಿಕಾ ಇಲೆಕ್ಟ್ರಿಕಲ್ಸ್ ಪುತ್ತೂರು

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಬೆಥನಿ ಆಂಗ್ಲ ಮಾದ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ Read More »

ಶ್ರೀ ಮಹಾಭಾರತ ಸರಣಿತಾಳಮದ್ದಳೆ ಸನ್ಮಾನ ಕಾರ್ಯಕ್ರಮ

ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆಯಾಗಿ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಉಪ್ಪಿನಂಗಡಿ, ನಿತೀಶ್ ಕುಮಾರ್ ವೈ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರೀ ಗಣೇಶ ಭಟ್ ಸುರತ್ಕಲ್,ಶ್ರೀಯತಿ ಪುನರೂರು, ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ( ದೇವೇಂದ್ರ ಮತ್ತು ದ್ರೌಪದಿ)ಗೋಪಾಲ ಶೆಟ್ಟಿ ಕಳೆಂಜ,( ಚಿತ್ರಸೇನ )ದಿವಾಕರ ಆಚಾರ್ಯ ಗೇರುಕಟ್ಟೆ,( ಅರ್ಜುನ ) ಶ್ರೀಧರ

ಶ್ರೀ ಮಹಾಭಾರತ ಸರಣಿತಾಳಮದ್ದಳೆ ಸನ್ಮಾನ ಕಾರ್ಯಕ್ರಮ Read More »

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ

ಪುತ್ತೂರು: ಬಪ್ಪಳಿಗೆ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿನಿ ನಿಯತಿ ಭಟ್ ಆ.2 ರಂದು ಕುಂದಾಪುರ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಜುಲೈ 30 ರಂದು ಕಡಬದ, ಪಂಜ ಸರಸ್ವತಿ ವಿದ್ಯಾಮಂದಿರದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ರಿಧಮಿಕ್ ಯೋಗಾಸನ 17 ರ  ವಯೋಮಿತಿ ಒಳಗಿನ( ಕಿಶೋರ ವರ್ಗ)ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದರು. ಅವರು ಪ್ರವೀಣ ದೊಡ್ಡಮಾಣಿ ಹಾಗೂ

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ Read More »

ಪಿಕಪ್ –ಸ್ಕೂಟಿ ಡಿಕ್ಕಿ : ಸ್ಕೂಟಿ ಸವಾರನಿಗೆ ಗಾಯ

ಪುತ್ತೂರು: ಪಿಕಪ್ ಮತ್ತು ಸ್ಕೂಟಿ ಡಿಕ್ಕಿ ಹೊಡೆದುಕೊಂಡ ಘಟನೆ ಇದೀಗ ನೆಹರೂನಗರದ ಮಾಸ್ಟರ್ ಪ್ಲಾನರಿ ಬಳಿ ನಡೆದಿದೆ. ಪಿಕಪ್ ಚಾಲಕ ಟರ್ನ್‍ ಮಾಡುವ ಸಂದರ್ಭ  ಸ್ಕೂಟಿ ಸವಾರ ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಸ್ಕೂಟಿ ಸವಾರನಿಗೆ ಗಾಯವಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಇದೇಸ್ಥಳದಲ್ಲಿ ಹಲವಾರು ಆಕ್ಸಿಡೆಂಟ್ ಗಳು ಈ ಹಿಂದೆ ನಡೆದಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಾ ಬಂದಿದ್ದಾರೆ. ಆದರೆ ಇದುವರೆಗೆ ಸಂಬಂಧ ಪಟ್ಟ ಇಲಾಖೆ ಯಾವುದೇ

ಪಿಕಪ್ –ಸ್ಕೂಟಿ ಡಿಕ್ಕಿ : ಸ್ಕೂಟಿ ಸವಾರನಿಗೆ ಗಾಯ Read More »

ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ

ಪುತ್ತೂರು: ಆಟೋ ಚಾಲಕರೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ  ಘಟನೆ ಮಂಗಳವಾರ ಮಧ್ಯಾಹ್ನ ಸಂಪ್ಯದಲ್ಲಿ ನಡೆದಿದೆ. ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆಟೋ ಚಾಲಕ ಮಹಮ್ಮದ್ (48) ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ಪುರುಷರಕಟ್ಟೆಯ ಪಾಪೆತ್ತಡ್ಕ ನಿವಾಸಿಯಾಗಿರುವ ಮಹಮ್ಮದ್ ಕಳೆದ ಕೆಲ ಸಮಯಗಳಿಂದ ಸಂಪ್ಯದಲ್ಲಿ ವಾಸ್ತವ್ಯ ಹೊಂದಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.

ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ ವನ ಮಹೋತ್ಸವ ಆಚರಣೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವನ ಮಹೋತ್ಸವದ ಅಗತ್ಯತೆ, ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು ಚೆಲ್ಲಿದರು. ವೇದಿಕೆಯಲ್ಲಿ ಸ್ಕೌಟ್ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್, ಗೈಡ್  ಶಿಕ್ಷಕಿಯರಾದ ವಿಲ್ಮಾ ಫೆರ್ನಾಂಡಿಸ್, ನಳಿನಾಕ್ಷಿ, ಸ್ಕೌಟ್ ಶಿಕ್ಷಕಿ

ಲಿಟ್ಲ್ ಫ್ಲವರ್ ಶಾಲೆಯಲ್ಲಿ ವನ ಮಹೋತ್ಸವ ಆಚರಣೆ Read More »

ಉಜ್ರುಪಾದೆ ಶ್ರೀ ಕೃಷ್ಣ ಜನ್ಮಾಷ್ಟಮಿಗೆ 25 ವರ್ಷ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆಯುವ 25ನೇ ವರ್ಷದ ಮೊಸರು ಕುಡಿಕೆ ಉತ್ಸವದ  ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ  ಮಂಗಳವಾರ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಸಮಿತಿ ಪದಾಧಿಕಾರಿಗಳು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಬಾಲಸುಬ್ರಮಣ್ಯ ಕೋಟ್ಯಾನ್,  ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ಪ್ರಕಾಶ್ ಕೆಲ್ಲಾಡಿ, ಕೋಶಾಧಿಕಾರಿ ಅಶೋಕ್ ಕುಮಾರ್ ಪದವು, ಹೇಮಚಂದ್ರ ಮುದಲಾಜೆ, ಬಲ್ನಾಡು ಕಟ್ಟೆ

ಉಜ್ರುಪಾದೆ ಶ್ರೀ ಕೃಷ್ಣ ಜನ್ಮಾಷ್ಟಮಿಗೆ 25 ವರ್ಷ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ | ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಎನ್.ಎಸ್.ಎಸ್ ಶಿಬಿರ ದಾರಿದೀಪ: ಡಾ. ದೀಪಕ್ ರೈ

ಪುತ್ತೂರು: ವಿದ್ಯಾರ್ಥಿ ಜೀವನ ಅಮೂಲ್ಯವಾದುದಾಗಿದ್ದು, ಶಿಕ್ಷಣದ ಜೊತೆಗೆ ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡುವತ್ತ ಇಂದಿನ ಯುವಜನತೆ ಮುಂದಾಗಬೇಕಿದೆ. ಅದಕ್ಕಾಗಿ ರಾಷ್ಟ್ರೀಯ ಸೇವಾ ಯೋಜನೆಯಂತಹ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನವನ್ನು ನೀಡುತ್ತಿದೆ ಎಂದು ಪುತ್ತೂರು ತಾಲೂಕು ಅರೋಗ್ಯಧಿಕಾರಿ ಡಾ. ದೀಪಕ್ ರೈ ಹೇಳಿದರು. ಅವರು ಒಡ್ಯದ ಸ. ಉ. ಹಿ. ಪ್ರಾಥಮಿಕ ಶಾಲೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ-2023-24ನ್ನು ದೀಪ ಬೆಳಗಿಸಿ ಉದ್ಘಾಟಿಸಿ

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ | ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಎನ್.ಎಸ್.ಎಸ್ ಶಿಬಿರ ದಾರಿದೀಪ: ಡಾ. ದೀಪಕ್ ರೈ Read More »

error: Content is protected !!
Scroll to Top