ಪುತ್ತೂರು

ಜಿಲ್ಲಾ ಮಟ್ಟದ ಈಜು ಸ್ಪರ್ಧೆ : ಅಂಬಿಕಾ ಕಾಲೇಜಿನ ವಿದ್ಯಾರ್ಥಿಗಳಿಗೆ 9 ಪದಕ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಪುತ್ತೂರಿನ ಬಾಲವನದಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾಥಿಗಳು ಚಿನ್ನ, ಬೆಳ್ಳಿ ಸೇರಿ 9 ಪದಕಗಳನ್ನು ಪಡೆದುಕೊಂಡು ಆ.20 ರಿಂದ ಸೆ.8 ರ ತನಕ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ಚಾಂಪಿಯನ್‌ ಶಿಪ್‌ ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾಲಯದ ಪ್ರಥಮ ಪಿಯು ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿನಿ ಪ್ರತೀಕ್ಷಾ ಎನ್. ಶೆಣೈ 50 ಮೀ., […]

ಜಿಲ್ಲಾ ಮಟ್ಟದ ಈಜು ಸ್ಪರ್ಧೆ : ಅಂಬಿಕಾ ಕಾಲೇಜಿನ ವಿದ್ಯಾರ್ಥಿಗಳಿಗೆ 9 ಪದಕ Read More »

ವಿವೇಕಾನಂದ ಕಾಲೇಜಿನಲ್ಲಿ ತುಳುನೆಂಪು ಕಾರ್ಯಕ್ರಮ

ಪುತ್ತೂರು: ಇಂದು ಗ್ರಾಮೀಣ ಭಾಗದಿಂದ ಅಂತರಾಷ್ಟೀಯ ಮಟ್ಟದವರೆಗೂ ಆಟಿ ತಿಂಗಳ ಆಚರಣೆಗಳನ್ನು ಆಚರಿಸುವುದು ವಾಡಿಕೆಯಾಗಿದೆ. ತುಳುನಾಡಿನಲ್ಲಿ ತುಳುವರು ಆಟಿ ತಿಂಗಳಿನ ಸಂದರ್ಭದಲ್ಲಿ ಯಾವುದೇ ಶುಭ ಕಾರ್ಯಕ್ರಮಗಳನ್ನು ಆಚರಿಸುವುದಿಲ್ಲ. ಆಟಿ ಕೆಲೆಂಜ ಮನೆಮನೆಗೆ ಬರುತ್ತಾನೆ. ಈ ಮೂಲಕ ಊರಿಗೆ ಬಂದು ಮಾರಿ ಕಳೆಯುತ್ತಾನೆ ಎಂಬುವುದು ಜನರ ನಂಬಿಕೆ ಎಂದು ವಕೀಲ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ ಹೇಳಿದರು. ಅವರು  ವಿವೇಕಾನಂದ  ಕಲಾ,ವಿಜ್ಞಾನ  ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಕಾಲೇಜಿನಲ್ಲಿ ತುಳು ಸಂಘ, ಪ್ರಾಚೀನ ವಸ್ತುಗಳ

ವಿವೇಕಾನಂದ ಕಾಲೇಜಿನಲ್ಲಿ ತುಳುನೆಂಪು ಕಾರ್ಯಕ್ರಮ Read More »

ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಪ್ರಕಟ

ಪುತ್ತೂರು: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದೆ. ಪುತ್ತೂರು ನಗರಸಭೆ ಅಧ್ಯಕ್ಷ ಸ್ಥಾನದಿಂದ ಎಸ್‍.ಸಿ. ಮಹಿಳೆ ಹಾಗೂ ಉಪಾಧ್ಯಕ್ಷತೆಗೆ ಜನರಲ್ ಪುರುಷ ಅಭ್ಯರ್ಥಿ ಸ್ಪರ್ಧಿಸಬಹುದು. ರಾಜ್ಯಾದ್ಯಂತ ಬಹುತೇಕ ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಅಧ್ಯಕ್ಷ-ಉಪಾಧ್ಯಕ್ಷತೆಗೆ ಮೀಸಲಾತಿ ಪ್ರಕಟಗೊಂಡಿದೆ.

ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಪ್ರಕಟ Read More »

ಮಾಣಿಲ ಗ್ರಾಮ ಪಂಚಾಯಿತಿಯಿಂದ ಗ್ರಾಮಸಭೆ ವಿಳಂಬವಾಗಿ ನಡೆದ ಸಭೆ : ಗ್ರಾಮಸ್ಥರ ಆಕ್ರೋಶ

 ಮಾಣಿಲ : ಮಾಣಿಲ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಇಂದು ನಡೆಯಿತು. ನೋಡೆಲ್ ಅಧಿಕಾರಿಯಾಗಿ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಅಧಿಕಾರಿಯಾದ ಭಾಸ್ಕರ್ ಕಾರ್ಯನಿರ್ವಹಿಸಿದ್ದರು. ಬೆಳಿಗ್ಗೆ ಹತ್ತು ಮೂವತ್ತಕ್ಕೆ ಆರಂಭವಾಗಬೇಕಿದ್ದ ಸಭೆಯು ಹನ್ನೊಂದು ಕಾಲಕ್ಕೆ ಆರಂಭವಾಯಿತು.ಇದರಿಂದ ಗ್ರಾಮಸ್ಥರು ರೊಚ್ಚಿಗೆದ್ದರು. ಸಭೆಯಲ್ಲಿ ಕುಡಿಯುವ ನೀರಿನ ಅಪಾರ ವಿದ್ಯುತ್ ಬಿಲ್ಲಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು ಪರ್ಯಾಯ ಮಾರ್ಗದ ಬಗ್ಗೆ ಚಿಂತಿಸುವಂತೆ ಸೂಚಿಸಿದರು. ರಸ್ತೆಯಲ್ಲಿ ಹರಿಯುವ ನೀರು,

ಮಾಣಿಲ ಗ್ರಾಮ ಪಂಚಾಯಿತಿಯಿಂದ ಗ್ರಾಮಸಭೆ ವಿಳಂಬವಾಗಿ ನಡೆದ ಸಭೆ : ಗ್ರಾಮಸ್ಥರ ಆಕ್ರೋಶ Read More »

ಯೋಗಾಸನ ಸ್ಪರ್ಧೆ : ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಸಿದ್ಧಾಪುರ ಸರಸ್ವತಿ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ತರುಣರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಕಾಲೇಜಿನ ವಾಣಿಜ್ಯ ವಿಭಾಗದ ಸಾತ್ವಿಕ್ ಮತ್ತು ಲಿಖಿತ್ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆ ಆಗಿದ್ದಾರೆ. ಅವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದೆ.

ಯೋಗಾಸನ ಸ್ಪರ್ಧೆ : ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಅಕ್ಷಯ ಕಾಲೇಜಿನ ಸಂಚಾಲಕ ಜಯಂತ್ ನಡುಬೈಲು ಅವರ ಸಹೋದರ ಆನಂದ್ ಪೂಜಾರಿ ನಿಧನ

ಪುತ್ತೂರು : ಅಕ್ಷಯ ಕಾಲೇಜಿನ ಸಂಚಾಲಕ ಜಯಂತ್ ನಡುಬೈಲು ಅವರ ಸಹೋದರ, ನಡುಬೈಲು ನಿವಾಸಿ ಆನಂದ್ ಪೂಜಾರಿ (49) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮುಂಡೂರು ನಡುಬೈಲುಗುತ್ತು ನಾರಾಯಣ ಸಾಲಿಯಾನ್ ಮತ್ತು ದಿ.ಅಪ್ಪಿ ನಡುಬೈಲು ರವರ ಪುತ್ರ,ರಾಗಿರುವ ಆನಂದ್ ಪೂಜಾರಿ ಪ್ರಗತಿಪರ ಕೃಷಿಕರಾಗಿದ್ದು, ಕೊಡ್ತೀರು ಕರೆಮನೆಕಟ್ಟೆ ಹಾಲು ಉತ್ಪಾದಕರ ಸೊಸೈಟಿ ನಿರ್ದೇಶಕರಾಗಿದ್ದು, ಪುರುಷರಕಟ್ಟೆಯಲ್ಲಿ ಚಿಕನ್ ಸೆಂಟ‌ರ್ ನಡೆಸುತ್ತಿದ್ದರು. ಮೃತರು ತಂದೆ, ಪತ್ನಿ, ಮೂವರು ಮಕ್ಕಳು, ಸಹೋದರ, ಸಹೋದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಅಕ್ಷಯ ಕಾಲೇಜಿನ ಸಂಚಾಲಕ ಜಯಂತ್ ನಡುಬೈಲು ಅವರ ಸಹೋದರ ಆನಂದ್ ಪೂಜಾರಿ ನಿಧನ Read More »

ಮೈಸೂರು ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ತನುಜ ಕಾಯರ್ಗರಿಗೆ ಡಾಕ್ಟರೇಟ್ ಪದವಿ  

ಪುತ್ತೂರು: ಮೈಸೂರಿನ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ತನುಜ ಕಾಯರ್ಗ ಅವರಿಗೆ ದೇಶದ ಪ್ರತಿಷ್ಠಿತ ವಿವಿಗಳಲ್ಲಿ ಒಂದಾದ ತಮಿಳುನಾಡಿನ ವೆಲ್ಲೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಡಾಕ್ಟರೇಟ್ ಪದವಿ ನೀಡಿದೆ. ವಿಐಟಿ ಪ್ರೊಫೆಸರ್ ಆನಂದ್ ಕುಮಾರ್ ಅವರ ಮಾರ್ಗದರ್ಶನದಲ್ಲಿ  ಸಾದರಪಡಿಸಿದ, ‘ ಡಿಸೈನ್ ಆ್ಯಂಡ್ ಡೆವಲಪ್ ಸ್ವಾಮ್ ಇಂಟಲಿಜೆನ್ಸ್ ಬೇಸ್ಡ್ ಕ್ಲಸ್ಟರಿಂಗ್ ಅಲ್ಗೊರಿದಂ ಫಾರ್ ಎಫಿಸಿಯಂಟ್ ರೂಟಿಂಗ್ ಇನ್ ಇಂಟರ್ ನೆಟ್ ಆಫ್ ವೆಹಿಕಲ್ಸ್ ‘ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಲಭಿಸಿದೆ.

ಮೈಸೂರು ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ತನುಜ ಕಾಯರ್ಗರಿಗೆ ಡಾಕ್ಟರೇಟ್ ಪದವಿ   Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯ ಉಳುಮೆಗೆ ಇಂದು ಚಾಲನೆ ನೀಡಲಾಯಿತು. ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥನೆ ಮಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ತೆಂಗಿನ ಕಾಯಿ ಒಡೆದು ಟ್ಯಾಕ್ಟರ್ ಮೂಲಕ ಗದ್ದೆ ಉಲುಮೆಗೆ ಚಾಲನೆ ನೀಡಿ ಮಾತನಾಡಿ, ಪುಣ್ಯದ ಗದ್ದೆಯಲ್ಲಿ ಭಕ್ತಾಧಿಗಳ ಆಶಯದಂತೆ ಭತ್ತದ ಬೇಸಾಯ ಆರಂಭಿಸಿದ್ದೇವೆ. ಇಲ್ಲಿ ಕೇವಲ ಆರಂಭ ಮಾಡುವುದು ಮಾತ್ರವಲ್ಲ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ Read More »

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಮಹಾಸಭೆ | ಜಿಲ್ಲೆಯಲ್ಲಿ ಒಂದೇ ಸಂಘವಿದ್ದರೆ ನಮ್ಮ ಬೆಂಬಲ : ಮಹಾಸಭೆಯಲ್ಲಿ ನಿರ್ಣಯ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ಮಹಾಸಭೆ ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದಲ್ಲಿ ಸದಸ್ಯತ್ವ ಅಭಿಯಾನ ಆಗಬೇಕು, ಸಮಾಜದಲ್ಲಿ ಒಗ್ಗಟ್ಟು ಜತೆಗೆ ಜಿಲ್ಲೆಯಲ್ಲಿ ಎರಡು ಸಂಘಟನೆ ಇದ್ದರೆ ನಮ್ಮ ಬೆಂಬಲವಿಲ್ಲ. ಯಾವುದಾದರು ಒಂದೇ ಸಂಘ ಇರಬೇಕು. ಏನಾದರು ವ್ಯತ್ಯಾಸ ಇದ್ದರೆ ಅದನ್ನು ಸರಿದೂಗಿಸಿಕೊಂಡು ಹೋಗಬೇಕು. ಹಾಗಾಗಿ ಜಿಲ್ಲೆಯಲ್ಲಿ ಒಂದೇ ಸಂಘವಿದ್ದರೆ ಮಾತ್ರ ಪುತ್ತೂರು ಸಂಘ ಬೆಂಬಲ ನೀಡಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಮಹಾಸಭೆ | ಜಿಲ್ಲೆಯಲ್ಲಿ ಒಂದೇ ಸಂಘವಿದ್ದರೆ ನಮ್ಮ ಬೆಂಬಲ : ಮಹಾಸಭೆಯಲ್ಲಿ ನಿರ್ಣಯ Read More »

ಚಿಕಿತ್ಸೆಗೆ ಧನಸಹಾಯ ಹಸ್ತಾಂತರ

ವಿಟ್ಲ: ಚಂದಳಿಕೆ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಧನಸಹಾಯ ಹಸ್ತಾಂತರಿಸಲಾಯಿತು. ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ  ಕುರುಂಬಳ ನಿವಾಸಿ ತರೇಂದ್ರ ಡೆಪ್ಪಿನಿ ಅವರ ಚಿಕಿತ್ಸೆಗೆ ಧನಸಹಾಯವನ್ನು ಅವರ ಮನೆಯವರಿಗೆ ಹಸ್ತಾಂತರಿಸಲಾಯಿತು. ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಂಕರ ಭಟ್ ಬದನಾಜೆ. ಕಾರ್ಯಧ್ಯಕ್ಷ ಕೃಷ್ಣಯ್ಯ ಕೆ ಅರಮನೆ ಹಾಗೂ ಕ್ಲಬ್ ನ ಅಧ್ಯಕ್ಷ ಗಂಗಾಧರ ಚಂದಳಿಕೆ. ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಅಳಿಕೆ. ಕಾರ್ಯದರ್ಶಿ ಜಗದೀಶ ಗೌಡ ಎಂ., ಗೌರವಧ್ಯಕ್ಷ ಕೃಷ್ಣ ಮುದೂರು. ಮತ್ತು

ಚಿಕಿತ್ಸೆಗೆ ಧನಸಹಾಯ ಹಸ್ತಾಂತರ Read More »

error: Content is protected !!
Scroll to Top