ಪುತ್ತೂರು

ನಾಳೆ (ಜು.25) : ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರು ಪೂರ್ಣಿಮ’ ಕಾರ್ಯಕ್ರಮ

ಪುತ್ತೂರು : ಬನ್ನೂರಿನಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಗುರು ಪೂರ್ಣಿಮಾ’ ಕಾರ್ಯಕ್ರಮ ಜು.25 ಗುರುವಾರ ನಡೆಯಲಿದೆ. ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅಥಿಗಳಾಗಿ ಪೂರ್ಣಾತ್ಮರಾಮ ಪಾಲ್ಗೊಳ್ಳಲಿದ್ದಾರೆ. ಕೊಂಬೆಟ್ಟು ಜೂನಿಯರ್ ಕಾಲೇಜು ಉಪಪ್ರಾಂಶುಪಾಲೆ ಜಯಲಕ್ಷ್ಮೀ ಕೆ. ಗುರುವಂದನೆ ನಡೆಸಿಕೊಡುವರು. ಎವಿಜಿ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಎ.ವಿ.ನಾರಾಯಣ ಗೌರವ ಉಪಸ್ಥಿತರಿರುವರು ಎಂದು ಶಾಲೆ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ (ಜು.25) : ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರು ಪೂರ್ಣಿಮ’ ಕಾರ್ಯಕ್ರಮ Read More »

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಬಂಧನ

ಪುತ್ತೂರು : ಅಪ್ರಾಪ್ತಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಿಯೂರುಕಟ್ಟೆ ನಿವಾಸಿ ವಿವಾಹಿತ ಪ್ರಸಾದ್ ಬಂಧಿತ ಆರೋಪಿ. ಬೆಳಿಯೂರುಕಟ್ಟೆ ನಿವಾಸಿಯಾಗಿರುವ ಅಪ್ರಾಪ್ತ ಯುವತಿಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಬಂಧನ Read More »

ಮೊಟ್ಟೆತ್ತಡ್ಕ ಶ್ರೀ ಚಾಮುಂಡೇಶ್ವರಿ ಯುವಕ ಮಂಡಲದಿಂದ ಶ್ರಮದಾನ | ಸೋರುತ್ತಿರುವ ಮನೆಗೆ ಟರ್ಪಾಲ್ ಕೊಡುಗೆ

ಪುತ್ತೂರು: ಮೊಟ್ಟೆತ್ತಡ್ಕ ಆಶ್ರಯ ಕಾಲೋನಿಯ ನಿವಾಸಿ ನಾಗವೇಣಿಯವರ ಹಂಚಿನ ಮನೆಯು ಸೋರುತ್ತಿದ್ದು, ಈ ಹಿನ್ನಲೆಯಲ್ಲಿ ಮೊಟ್ಟೆತ್ತಡ್ಕ ಶ್ರೀ ಚಾಮುಂಡೇಶ್ವರಿ ಯುವಕ ಮಂಡಲದವರು ಮನೆಗೆ ಟಾರ್ಪಲ್ ಒದಗಿಸಿ ಕಟ್ಟಿಕೊಡುವ ವ್ಯವಸ್ಥೆ ಮಾಡಿದರು. ಜತೆಗೆ ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಯಿಂದ ಮಾರ್ಗದಲ್ಲಿ ಮಣ್ಣಿನ ರಾಶಿ ತುಂಬಿದ್ದು ಮಾತ್ರವಲ್ಲ ರಸ್ತೆ ಮಧ್ಯೆಯೇ ನೀರು ತುಂಬಿಕೊಂಡು ಪಾದಚಾರಿಗಳಿಗೆ ಹಾಗೂ ವಾಹನ ಸವಾರರಿಗೆ ಅಡಚಣೆ ಉಂಟಾಗಿತ್ತು. ಯುವಕ ಮಂಡಲದ ಯುವಕರು ಸೇರಿಕೊಂಡು ರಸ್ತೆಯಲ್ಲಿದ್ದ ಮಣ್ಣಿನ ರಾಶಿಯನ್ನು ತೆರವುಗೊಳಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಮೊಟ್ಟೆತ್ತಡ್ಕ ಶ್ರೀ ಚಾಮುಂಡೇಶ್ವರಿ ಯುವಕ ಮಂಡಲದಿಂದ ಶ್ರಮದಾನ | ಸೋರುತ್ತಿರುವ ಮನೆಗೆ ಟರ್ಪಾಲ್ ಕೊಡುಗೆ Read More »

ಟ್ಯಾಂಕರ್-ತ್ರಿವೀಲರ್ ಸ್ಕೂಟರ್ ಅಪಘಾತ : ವಿಕಲಚೇತನ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ಟ್ಯಾಂಕರ್ ಮತ್ತು ತ್ರಿವೀಲರ್ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ವಿಕಲ ಚೇತನ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನೆಹರುನಗರ ಮಂಜಲಪಡ್ಡು ಬಳಿಯ ಪೆಟ್ರೋಲ್ ಪಂಪ್ ಮುಂಭಾಗ ನಿನ್ನೆ ರಾತ್ರಿ ಸಂಭವಿಸಿದೆ. ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50) ಮೃತಪಟ್ಟವರು. ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ‌ರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವು ಗಾಯಗೊಂಡ ಅವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.

ಟ್ಯಾಂಕರ್-ತ್ರಿವೀಲರ್ ಸ್ಕೂಟರ್ ಅಪಘಾತ : ವಿಕಲಚೇತನ ಶಿವರಾಮ ನಾಯ್ಕ ಮೃತ್ಯು Read More »

ಆ.10: ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ “ಆಟಿಡೊಂಜಿ ಬಂಟೆರೆ ಸೇರಿಗೆ” ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು:ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಆ. 10 ರಂದು ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಲಿರುವ “ಆಟಿಡೊಂಜಿ ಬಂಟೆರೆ ಸೇರಿಗೆ” ಸಾಧಕರಿಗೆ ಸನ್ಮಾನ, ವಿವಿಧ ಕ್ಷೇತ್ರಗಳ ಸಾಧಕರಿಗೆ ಚಿನ್ನದ ಪದಕದೊಂದಿಗೆ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಪ್ರಾರಂಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ,

ಆ.10: ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ “ಆಟಿಡೊಂಜಿ ಬಂಟೆರೆ ಸೇರಿಗೆ” ಆಮಂತ್ರಣ ಪತ್ರ ಬಿಡುಗಡೆ Read More »

ಆ.16 ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ವರಮಹಾಲಕ್ಷ್ಮೀ ವೃತಪೂಜೆ |ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿ ಇದರ ವತಿಯಿಂದ ಆ.16ರಂದು ಪುತ್ತೂರಿನ ಸುಭದ್ರ ಕಲಾಮಂದಿರದಲ್ಲಿ ವರಮಹಾಲಕ್ಷ್ಮೀ ವೃತಪೂಜೆ ನಡೆಯಲಿದ್ದು ಅದರ ಆಮಂತ್ರಣ ಪತ್ರ ಬಿಡುಗಡೆ  ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಯಲ್ಲಿ ಜು.23ರಂದು ನಡೆಯಿತು. ಆ.16ರಂದು ಬೆಳಿಗ್ಗೆಯಿಂದ ವರಮಹಾಲಕ್ಷ್ಮೀ ಪೂಜೆ ನಡೆದು ಧಾರ್ಮಿಕ ಸಭಾಕಾರ್ಯಕ್ರಮ  ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.  ಆಮಂತ್ರಣ ಪತ್ರ ಬಿಡುಗಡೆ ಸಮಾರಂಭದಲ್ಲಿ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ

ಆ.16 ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ವರಮಹಾಲಕ್ಷ್ಮೀ ವೃತಪೂಜೆ |ಆಮಂತ್ರಣ ಪತ್ರ ಬಿಡುಗಡೆ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಗತಿ ಉದ್ಘಾಟನೆ

ಪುತ್ತೂರು : ಬನ್ನೂರು ಕೃಷ್ಣನಗರದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಯೋಗ ತರಗತಿ ಜು 22 ರಂದು ಪ್ರಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ  ಶಿಕ್ಷಣ ಸಂಸ್ಥೆಯ ಶಿಕ್ಷಕಿಯಾಗಿರುವ ಶ್ರೀಮತಿ ಲಲಿತಾರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯೋಗದ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಹಾಗೂ ವಿವಿಧ ರೀತಿಯ ಯೋಗಾಸನಗಳನ್ನು ಹೇಳಿಕೊಟ್ಟರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾಗಿರುವಂತಹ ಶ್ರೀಯುತ ವೆಂಕಟರಮಣಗೌಡ ಕಳುವಾಜೆ ವಹಿಸಿದ್ದು ಶಾಲೆಯಲ್ಲಿ ಯೋಗದ ಮಹತ್ವವನ್ನು ಹೇಳಿದರು. ವೇದಿಕೆಯಲ್ಲಿ ಸಂಸ್ಥೆಯ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಗತಿ ಉದ್ಘಾಟನೆ Read More »

ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿ ಕಾರ್ಮಿಕ ಗಂಭೀರ ಗಾಯ

ಪುತ್ತೂರು: ಲಾರಿಯೊಂದಕ್ಕೆ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಕರಾಯ ಜನತಾ ಕಾಲೋನಿ ನಿವಾಸಿ ರಶೀದ್ ಗಂಭೀರ ಗಾಯಗೊಂಡವರು. ಲಾರಿಯೊಂದು ಟಯರ್ ಪಂಚರ್ ಆದ ಪರಿಣಾಮ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚರ್ ಮಾಡಿಸಿಕೊಂಡು ಆಟೋರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ

ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿ ಕಾರ್ಮಿಕ ಗಂಭೀರ ಗಾಯ Read More »

ಕ್ಯಾಂಪ್ಕೋ ಸಂಸ್ಥೆಯ ಸಾಂತ್ವನ ಯೋಜನೆಯ ಚೆಕ್ ಹಸ್ತಾಂತರ

ಪುತ್ತೂರು ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿ ಕ್ಯಾಂಪ್ಕೊ ಸುಳ್ಯ ಶಾಖೆಯ ಸಕ್ರಿಯ ಸದಸ್ಯ  ಪ್ರದ್ಯುಮ್ನ ಅವರ ಕೃಷಿ ಸ್ಥಳದಲ್ಲಿ ಕೆಲಸಗಾರರಾಗಿದ್ದ ಯೋಗೀಶ್ ಪಿ. ಅವರ ಆಕಸ್ಮಿಕ ಮರಣ ಪರಿಹಾರವಾಗಿ  ಸಹಾಯಧನದ ಮೊತ್ತ 50,000 ರೂ. ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ ಯೋಗೀಶ್ ಪಿ. ಅವರ ತಾಯಿ  ಮೀನಾಕ್ಷಿ  ಅವರಿಗೆ ಹಸ್ತಾಂತರಿಸಿದರು. ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ ಮಾತನಾಡಿ, ಕ್ಯಾಂಪ್ಕೊ ಸುಳ್ಯ ಶಾಖೆಯಲ್ಲಿ  ಪ್ರಪ್ರಥಮವಾಗಿ ಸದಸ್ಯರ ಕೃಷಿ ಸ್ಥಳದಲ್ಲಿ ಆಕಸ್ಮಿಕ ಮರಣ ಹೊಂದಿದ ಕೆಲಸಗಾರರಿಗೆ  ಪರಿಹಾರ ನೀಡಲಾಗಿದೆ.

ಕ್ಯಾಂಪ್ಕೋ ಸಂಸ್ಥೆಯ ಸಾಂತ್ವನ ಯೋಜನೆಯ ಚೆಕ್ ಹಸ್ತಾಂತರ Read More »

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಸಾಂಪ್ರದಾಯಿಕ ಭತ್ತದ ಸಸಿ ನಾಟಿ ಕಾರ್ಯಕ್ರಮ

ಕಬಕ: ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಪುತ್ತೂರು ಪ್ರಾಯೋಜಕತ್ವದಲ್ಲಿ, ಒಕ್ಕಲಿಗ ಸ್ವ-ಸಹಾಯ ಸಂಘಗಳ ಒಕ್ಕೂಟ ಕಬಕ, ಒಕ್ಕಲಿಗ ಸೇವಾ ಸಂಘ ಕಬಕ, ಒಕ್ಕಲಿಗ ಯುವ ಸಂಘ ಕಬಕ, ಒಕ್ಕಲಿಗ ಮಹಿಳಾ ಸಂಘ ಕಬಕ ಇವರ ಸಹಕಾರದೊಂದಿಗೆ ಸಾಂಪ್ರದಾಯಿಕ ಭತ್ತದ ಸಸಿ ನಾಟಿ ಪ್ರಾತ್ಯಕ್ಷಿತೆ ಕಾರ್ಯಕ್ರಮ ಕಬಕ ತಿಮ್ಮಪ್ಪ ಗೌಡ ಶೇವಿರೆ ಅವರ ಕೃಷಿ ಗದ್ದೆಯಲ್ಲಿ ನಡೆಯಿತು. ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವದ ಕಾರ್ಯಕ್ರಮ ಅಂಗವಾಗಿ  ಈ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಸಾಂಪ್ರದಾಯಿಕ ಭತ್ತದ ಸಸಿ ನಾಟಿ ಕಾರ್ಯಕ್ರಮ Read More »

error: Content is protected !!
Scroll to Top