ಪುತ್ತೂರು

ಐರಾವತ ಬಸ್ಸಿಗೆ ಬೆಂಕಿ | ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ತಪ್ಪಿದ ಅನಾಹುತ

ಉಪ್ಪಿನಂಗಡಿ: ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಘಟನೆ ಇಂದು ಬೆಳಿಗ್ಗೆ ಉಪ್ಪಿನಂಗಡಿ ಹಳೆಗೇಟು ಎಂಬಲ್ಲಿ ನಡೆದಿದೆ. ಬೆಂಕಿ ಹತ್ತಿಕೊಂಡ ತಕ್ಷಣ ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದೆ. ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಆಗ ಅಲ್ಲಿದ್ದ ಉಪ್ಪಿನಂಗಡಿ ಗ್ರಾ.ಪಂ. ಸಿಬ್ಬಂದಿಯಾದ ಇಸಾಕ್, ಇನ್ಸಾಲ್, ಸ್ಥಳೀಯರಾದ ಜಾಯಿ, ಸ್ನೇಕ್ […]

ಐರಾವತ ಬಸ್ಸಿಗೆ ಬೆಂಕಿ | ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ತಪ್ಪಿದ ಅನಾಹುತ Read More »

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹೆತ್ತವರ ಸಭೆ

ಪುತ್ತೂರು: ಪ್ರತಿಯೊಂದು ವಿಷಯಗಳನ್ನು ಸಮಯಕ್ಕೆ ಸರಿಯಾಗಿ ನಿರ್ವಹಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಅಂತಹ ಜ್ಞಾನವನ್ನು ಶಿಕ್ಷಣ ಒದಗಿಸಿಕೊಡುತ್ತದೆ. ಶಿಕ್ಷಣ ಸಂಸ್ಥೆಗಳು ಮೌಖಿಕ ಸಂಗತಿಗಳೊಂದಿಗೆ ಪ್ರಾಯೋಗಿಕ ವಿಚಾರಗಳನ್ನೂ ತಿಳಿಸಿಕೊಟ್ಟಾಗ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವೆನಿಸುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ರಕ್ಷಕ – ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶಭಕ್ತಿಯನ್ನು

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹೆತ್ತವರ ಸಭೆ Read More »

ಇಂಡಿಯನ್ ನೇವಿ ನೇರ ಸಂದರ್ಶನಕ್ಕೆ ರಕ್ಷಿತಾ ಐ. ಆಯ್ಕೆ | ಒಕ್ಕಲಿಗ ಗೌಡ ಸೇವಾ ಸಂಘದಿಂದ ಧನ ಸಹಾಯ

ಪುತ್ತೂರು: ಜು.29 ರಂದು ಕೊಲ್ಕತ್ತಾದಲ್ಲಿ ನಡೆಯಲಿರುವ ಇಂಡಿಯನ್ ನೇವಿಯ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲಿರುವ ಪಡ್ನೂರು ಗ್ರಾಮದ ರಾಮನಗರ ನಿವಾಸಿ ಈಶ್ವರ ಗೌಡರ ಪುತ್ರಿ ರಕ್ಷಿತಾ ಐ ಅವರಿಗೆ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದಿಂದ ಸಹಾಯಧನ ವಿತರಿಸಲಾಯಿತು. ಈ ಕುರಿತು ರಕ್ಷಿತಾ ಐ ಅವರು ಕೊಲ್ಕತ್ತಾಕ್ಕೆ ವಿಮಾನದಲ್ಲಿ ಪ್ರಯಾಣ ಮಾಡಬೇಕಾಗಿರುವುದರಿಂದ ಅಂದಾಜು 20 ರಿಂದ 25 ಸಾವಿರ ಖರ್ಚು ಬೇಕಾಗಲಿದ್ದು, ಧನ ಸಹಾಯ ನೀಡುವಂತೆ ಒಕ್ಕಲಿಗ ಗೌಡ ಸೇವಾ ಸಂಘಕ್ಕೆ ಮನವಿ ಮಾಡಿದ್ದರು. ಈ ನಿಟ್ಟಿನಲ್ಲಿ ಸಂಘದ

ಇಂಡಿಯನ್ ನೇವಿ ನೇರ ಸಂದರ್ಶನಕ್ಕೆ ರಕ್ಷಿತಾ ಐ. ಆಯ್ಕೆ | ಒಕ್ಕಲಿಗ ಗೌಡ ಸೇವಾ ಸಂಘದಿಂದ ಧನ ಸಹಾಯ Read More »

ಅಪಾಯದ ಮಟ್ಟ ತಲುಪಿದ ಕುಮಾರಧಾರ, ನೇತ್ರಾವತಿ ನದಿಗಳು

ಉಪ್ಪಿನಂಗಡಿ: ಪುತ್ತೂರು ತಾಲೂಕಿನಾದ್ಯಂತ ಮಳೆಯಬ್ಬರ ಮುಂದುವರಿದಿದ್ದು, ಜಿಲ್ಲೆಯ ಜೀವನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ಇದೀಗ ಮೈದುಂಬಿ ಹರಿಯುತ್ತಿದ್ದು ಅಪಾಯದ ಮಟ್ಟದತ್ತ ತಲುಪುತ್ತಿದೆ. ಕಳೆದ ಎರಡು ದಿನಗಳಿಂದ ನೀರಿನ ಮಟ್ಟ 20 ಮೀಟರ್ ದಾಖಲಾಗಿದ್ದು, ಬುಧವಾರ ಸಂಜೆಗೆ ಜೀವನದಿಗಳ ಸಂಗಮ ಸ್ಥಾನವಾದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳದ ಬಳಿ ನದಿ ನೀರಿನ ಮಟ್ಟ 28.5ಕ್ಕೆ ಏರಿದೆ. ದೇವಳದ ಅಂಗಣ ಪ್ರವೇಶಕ್ಕೆ ಕೇವಲ 10 ಮೆಟ್ಟಲುಗಳಷ್ಟೇ ಉಳಿದಿದೆ. ನೀರಿನ ಮಟ್ಟ 31.5 ಮೀಟರ್ ಗೆ ಏರಿದರೆ ಎರಡೂ ನದಿಗಳ ನೀರು ದೇವಳದ

ಅಪಾಯದ ಮಟ್ಟ ತಲುಪಿದ ಕುಮಾರಧಾರ, ನೇತ್ರಾವತಿ ನದಿಗಳು Read More »

ಸಮಾಜಕ್ಕೆ ಕೊಡುಗೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ | ಮಹಿಳಾ ಜಾಗೃತಿ ಕಾರ್ಯಕ್ರಮದಲ್ಲಿ ಕೃಷ್ಣನಾರಾಯಣ ಮುಳಿಯ

ಪುತ್ತೂರು: ಸ್ವರಕ್ಷಣೆಯ ವಿಚಾರದಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಗತ್ಯವಾಗಿದ್ದು, ಮುಂದಿನ ದಿನದಲ್ಲಿ ಕಾರ್ಯಾಗಾರಗಳನ್ನು ನಡೆಸಲಾಗುವುದು. ಸರ್ಕಾರದಿಂದ ಎಲ್ಲಾ ಸಿಗುತ್ತದೆ ಎಂದು ಕಾಯದೆ ನಮ್ಮಿಂದಾಗುವುದನ್ನು ಸಮಾಜಕ್ಕೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ. ಸಂಸ್ಥೆಯ ಸಿಬ್ಬಂದಿಗಳಿಗೆ ಸೇರಿ ಆಸುಪಾಸಿನ ಜನರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್‌ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಹೇಳಿದರು. ಬುಧವಾರ ಜೆಸಿಐ ಮುಳಿಯ ಟ್ರೈನಿಂಗ್ ಹಾಲ್ ನಲ್ಲಿ ಪುತ್ತೂರು ಮುಳಿಯ ಜ್ಯುವೆಲ್ಸ್,  ಪುತ್ತೂರು ಮಹಿಳಾ ಪೊಲೀಸ್ ಠಾಣೆ, ರೋಟರಿ

ಸಮಾಜಕ್ಕೆ ಕೊಡುಗೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ | ಮಹಿಳಾ ಜಾಗೃತಿ ಕಾರ್ಯಕ್ರಮದಲ್ಲಿ ಕೃಷ್ಣನಾರಾಯಣ ಮುಳಿಯ Read More »

‘Pixel ‘ CREATIVES PUTTUR ಸಂಸ್ಥೆ 7 ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರು: ನೆಹರು ನಗರದಲ್ಲಿ ಕಾರ್ಯಾಚರಿಸುತ್ತಿರುವ ‘ಪಿಕ್ಸೆಲ್’ ಕ್ರಿಯೆಟಿವ್ಸ್ ಇಂದು 7ನೇ ವರ್ಷಕ್ಕೆ ಪಾದಾರ್ಪಣೆ ಮಾಡಿತು. ‘ಪಿಕ್ಸೆಲ್’ ಎಲ್‍ಇಡಿ ವೀಡಿಯೋ ವಾಲ್, ಟಿವಿ, ಪ್ರೊಜೆಕ್ಟರ್, ವೀಡಿಯೋಗ್ರಫಿ, ಲೈವ್ ವೀಡಿಯೋ ಮಿಕ್ಸಿಂಗ್‍ ಮುಂತಾದ ಸೇವೆಯನ್ನು ಒದಗಿಸುವ ಸಂಸ್ಥೆಯಾಗಿದೆ. 2017 ರಲ್ಲಿ ಆರಂಭಗೊಂಡ ಸಂಸ್ಥೆ ಗ್ರಾಹಕರ ವರ್ಗದಲ್ಲಿ ವಿಶ್ವಾಸಾರ್ಹ ಸೇವೆ ಸಲ್ಲಿಸುವಲ್ಲಿ ಯಶಸ್ವಿಯಾಗಿದೆ.

‘Pixel ‘ CREATIVES PUTTUR ಸಂಸ್ಥೆ 7 ನೇ ವರ್ಷಕ್ಕೆ ಪಾದಾರ್ಪಣೆ Read More »

‘ಪಿಕ್ಸೆಲ್’ ಲೈವ್ ವೀಡಿಯೋ ಮಿಕ್ಸಿಂಗ್ ಸೇವಾ ಸಂಸ್ಥೆ 7ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರು: ನೆಹರು ನಗರದಲ್ಲಿ ಕಾರ್ಯಾಚರಿಸುತ್ತಿರುವ ‘ಪಿಕ್ಸೆಲ್’ ಇಂದು 7ನೇ ವರ್ಷಕ್ಕೆ ಪಾದಾರ್ಪಣೆ ಮಾಡಿತು. ಪಿಕ್ಸೆಲ್ ಎಲ್ಇಡಿ ವೀಡಿಯೋ ವಾಲ್, ಟಿವಿ, ಪ್ರೊಜೆಕ್ಟರ್, ವೀಡಿಯೋಗ್ರಫಿ, ಲೈವ್ ವೀಡಿಯೋ ಮಿಕ್ಸಿಂಗ್ ಮುಂತಾದ ಸೇವೆಯನ್ನು ಒದಗಿಸುವ ಸಂಸ್ಥೆಯಾಗಿದೆ. 2017 ರಲ್ಲಿ ಆರಂಭಗೊಂಡ ಸಂಸ್ಥೆ ಗ್ರಾಹಕರ ವರ್ಗದಲ್ಲಿ ವಿಶ್ವಾಸಾರ್ಹ ಸೇವೆ ಸಲ್ಲಿಸುವಲ್ಲಿ ಯಶಸ್ವಿಯಾಗಿದೆ.

‘ಪಿಕ್ಸೆಲ್’ ಲೈವ್ ವೀಡಿಯೋ ಮಿಕ್ಸಿಂಗ್ ಸೇವಾ ಸಂಸ್ಥೆ 7ನೇ ವರ್ಷಕ್ಕೆ ಪಾದಾರ್ಪಣೆ Read More »

ಕಬಕ-ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಅಗತ್ಯ ಕಾಮಗಾರಿಗಳ ವ್ಯವಸ್ಥೆ ಮಾಡುವಂತೆ ರೈಲ್ವೆ ಸಚಿವರಿಗೆ ಮನವಿ | ಮನವಿ ನೀಡಿದ ಸಂಜೀವ ಮಠಂದೂರು

ಪುತ್ತೂರು ಕಬಕ-ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಆಗಬೇಕಾದ ಕೆಲವೊಂದು ಅಗತ್ಯ ಕಾಮಗಾರಿಗಳ ಕುರಿತು ಮನವಿಯನ್ನು ಮಾಜಿ ಶಾಸಕ ಸಂಜೀವ ಮಠಂದೂರು ರಾಜ್ಯ ರೈಲ್ವೇ ಸಚಿವ ವಿ.ಸೋಮಣ್ಣ ಅವರಿಗೆ ಸಲ್ಲಿಸಿದರು. ರೈಲ್ವೆ ನಿಲ್ದಾಣ ಹಾಗೂ ರೈಲ್ವೆ ಮಾರ್ಗದ ಅಗತ್ಯ ಕೆಲಸಗಳ ಬಗ್ಗೆ ಈ ಕೆಳಗಿನ ಅಗತ್ಯ ಕೆಲಸಗಳ ಬಗ್ಗೆ ವಿವರಗಳನ್ನು ನೀಡಲಾಗಿದೆ. ಕಬಕ ಪುತ್ತೂರು ಆದರ್ಶ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂಗೆ ಮಳೆ ಹಾಗೂ ಬಿಸಿಲಿಗೆ ರಕ್ಷಣೆ ನೀಡಲು ಶೆಲ್ಮರ್ ವ್ಯವಸ್ಥೆ, ಸಿ ಸಿ ಟಿವಿ ವ್ಯವಸ್ಥೆ, ವಿದ್ಯುತ್ ಹೋದಾಗ

ಕಬಕ-ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಅಗತ್ಯ ಕಾಮಗಾರಿಗಳ ವ್ಯವಸ್ಥೆ ಮಾಡುವಂತೆ ರೈಲ್ವೆ ಸಚಿವರಿಗೆ ಮನವಿ | ಮನವಿ ನೀಡಿದ ಸಂಜೀವ ಮಠಂದೂರು Read More »

ಜು.21 : ಸವಣೂರು ಯುವ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸವಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ, ಸುಳ್ಯ ಕೆ.ವಿ.ಜಿ.ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಆಶ್ರಯದಲ್ಲಿ ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಸವಣೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸವಣೂರು ಯುವಕ ಮಂಡಲ ಹಾಗೂ ಪುಣ್ಚಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಜು.21 ಭಾನುವಾರ ಸವಣೂರು ಯುವ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2

ಜು.21 : ಸವಣೂರು ಯುವ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಮಹಿಳೆಯ‌ ಸರ ಎಗರಿಸಿ ಪರಾರಿಗೆ‌ ಯತ್ನ l ಇಬ್ಬರು ಯುವಕರ ಬಂಧನ

ಪುತ್ತೂರು: ಬೆಂಗಳೂರು ಮೂಲದ ಇಬ್ಬರು ಯುವಕರು ಹೆದ್ದಾರಿ ಬದಿಯ ಅಂಗಡಿಯಲ್ಲಿದ್ದ ವೃದ್ದೆಯ ಚಿನ್ನದ ಸರ ಸೆಳೆದು ಪರಾರಿಯಾಗಲು ಯತ್ನಿಸಿ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಬಳಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ನೆಲ್ಯಾಡಿ ಬಳಿಯ ಅಡ್ಡಹೊಳೆಯ ಹೆದ್ದಾರಿ ಬದಿಯ ಡ್ರೈ ಫ್ರುಟ್ಸ್ ಅಂಗಡಿಯಲ್ಲಿ ಒಂಟಿಯಾಗಿದ್ದ ವೃದ್ಧ ಮಹಿಳೆ ತೇಸ್ಯಮ್ಮ (60) ಎಂಬುವವರ ಕುತ್ತಿಗೆಯಲ್ಲಿದ್ದ ಸರವನ್ನು ಎಳೆದು ಯುವಕರು ಪರಾರಿಯಾಗಲು ಯತ್ನಿಸಿದ್ದು, ತಕ್ಷಣ ಮಹಿಳೆಯ ಬೊಬ್ಬೆ ಕೇಳಿ ಸ್ಥಳೀಯರು ಸೇರಿ ಯುವಕರನ್ನು ಹಿಡಿದು ಥಳಿಸಿದ್ದಾರೆ. ಕೃತ್ಯದ ಆರೋಪಿಗಳಾದ

ಮಹಿಳೆಯ‌ ಸರ ಎಗರಿಸಿ ಪರಾರಿಗೆ‌ ಯತ್ನ l ಇಬ್ಬರು ಯುವಕರ ಬಂಧನ Read More »

error: Content is protected !!
Scroll to Top