ಪುತ್ತೂರು

ಕಬಕ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ | ನಾಯಿಯೊಂದನ್ನು ಎಳೆದೊಯ್ದ ಚಿರತೆ

ಪುತ್ತೂರು: ಕಬಕ ಪರಿಸರದಲ್ಲಿ ಚಿರತೆ ಪತ್ತೆಯಾಗಿದೆ ಎಂಬ ವದಂತಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಸಂದೇಶಗಳು ಹರಿದಾಡುತ್ತಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಕಬಕ ಪರಿಸರದ ಗ್ರಾಮಕರಣಿಕರ ಕಚೇರಿ ಕುಳ ಆಫೀಸ್ ನ ಬಳಿ ಬುಧವಾರ ರಾತ್ರಿ ಬಹಳ ದೊಡ್ಡಗಾತ್ರದ ಚಿರತೆ ಪ್ರತ್ಯಕ್ಷ ವಾಗಿದೆ. ಒಂದು ನಾಯಿಯನ್ನು ಕೊಂಡು ಹೋಗಿದ್ದು ಕೆಲದಿನಗಳಿಂದ ಈ ಪರಿಸರದಿಂದ ಕಾಣೆಯಾಗುತ್ತಿದ್ದ ನಾಯಿಗಳ ಬಗ್ಗೆ ಇದ್ದ ಅನುಮಾನಗಳಿಗೆ ಉತ್ತರ ಸಿಕ್ಕಿದೆ. ಕಣ್ಣಾರೇ ನೋಡಿದವರ ಪ್ರಕಾರ ಬಹಳ ದೊಡ್ಡ ಗಾತ್ರದ ಚಿರತೆ ಇದಾಗಿದೆ. ನಿನ್ನೆ ಮಳೆ […]

ಕಬಕ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ | ನಾಯಿಯೊಂದನ್ನು ಎಳೆದೊಯ್ದ ಚಿರತೆ Read More »

ಪುತ್ತೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ರಾಮನಗರ ಜಿಲ್ಲೆಗೆ ವರ್ಗಾವಣೆ

ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಗ್ರೂಪ್ ‘ಬಿ’ ಹುದ್ದೆಯಾದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸುಂದರ ಗೌಡರವರು ಇದೀಗ ಗ್ರೂಪ್ ‘ಎ’ ಹುದ್ದೆಯಾದ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಮುಂಭಡ್ತಿಗೊಂಡು ರಾಮನಗರ ಜಿಲ್ಲೆಗೆ ವರ್ಗಾವಣೆಗೊಂಡು ಆದೇಶ ಹೊರಡಿಸಲಾಗಿದೆ. ಸುಂದರ ಗೌಡರವರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ 10 ವರ್ಷ, ಶಿವರಾಮ ಕಾರಂತ ಪ್ರೌಢಶಾಲೆಯಲ್ಲಿ 11 ವರ್ಷ, ಅಜ್ಜಾವರ ಪ್ರೌಢಶಾಲೆಯಲ್ಲಿ 9 ವರ್ಷ ಸೇವೆ ಸಲ್ಲಿಸಿರುತ್ತಾರೆ. ಇವರು ತಮ್ಮ ಬಿಪಿಎಡ್ ಶಿಕ್ಷಣದಲ್ಲಿ ಮೂರನೇ, ಎಂಪಿಎಡ್ ಶಿಕ್ಷಣದಲ್ಲಿ ಎರಡನೇ ರ್ಯಾಂಕ್ ಗಳಿಸಿರುತ್ತಾರೆ. ಸುಂದರ

ಪುತ್ತೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ರಾಮನಗರ ಜಿಲ್ಲೆಗೆ ವರ್ಗಾವಣೆ Read More »

ಜು.13 : ಡಾ.ಎಲ್‍.ಎಚ್‍.ಮಂಜುನಾಥ್‍ ರಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಅಖಿಲ ಕರ್ನಾಟಕ ಜನಜಾಗೃತಿ ಜಿಲ್ಲಾ ವೇದಿಕೆ ಹಾಗೂ ಪುತ್ತೂರು ತಾಲೂಕು ಜನಜಾಗೃತಿ ವೇದಿಕೆ ಜಂಟಿ ಆಶ್ರಯದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕಳೆದ 23 ವರ್ಷಗಳ ಕಾಲ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ.ಎಲ್‍.ಎಚ್‍.ಮಂಜುನಾಥ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಜು.13 ಶನಿವಾರ ಸಾಲ್ಮರ ಕೊಟೇಚಾ ಹಾಲ್‍ ನಲ್ಲಿ ನಡೆಯಲಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ.ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,

ಜು.13 : ಡಾ.ಎಲ್‍.ಎಚ್‍.ಮಂಜುನಾಥ್‍ ರಿಗೆ ಅಭಿನಂದನಾ ಕಾರ್ಯಕ್ರಮ Read More »

ರಾಜ್ಯ ಸರಕಾರ ಸುಳ್ಳನ್ನು ಸತ್ಯ ಎಂದು ಬಿಂಬಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿದೆ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು | ಡೆಂಗ್ಯೂ ಜ್ವರ ಹರಡದಂತೆ ತಡೆಗಟ್ಟುವಲ್ಲಿ ಸರಕಾರ ವಿಫಲವಾಗಿದೆ

ಪುತ್ತೂರು: ರಾಜ್ಯಸರಕಾರ, ಸಚಿವರು ಸೇರಿದಂತೆ ಶಾಸಕರು ಅಭಿವೃದ್ಧಿಯ ವಿಚಾರದಲ್ಲಿ ಸುಳ್ಳು ಹೇಳಿಕೊಂಡು ಸುಳ್ಳನ್ನು ಸತ್ಯ ಎಂದು ಬಿಂಬಿಸುತ್ತಿದ್ದು, ಜನತೆ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಿನ್ನೆ ಪುತ್ತೂರು ತಾಲೂಕಿನ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಪುತ್ತೂರು ಶಾಸಕರು, ಕಳೆದ ನಾಲ್ಕು ವರ್ಷಗಳಿಂದ ಒಂದೇ ಒಂದು ಮನೆ ಮಂಜೂರುಗೊಂಡಿಲ್ಲ ಎಂದು ಹೇಳಿಕೆ ನೀಡಿದ್ದು, ಈ ರೀತಿ ತಪ್ಪು ಸಂದೇಶ ನೀಡುವುದನ್ನು ಬಿಟ್ಟು

ರಾಜ್ಯ ಸರಕಾರ ಸುಳ್ಳನ್ನು ಸತ್ಯ ಎಂದು ಬಿಂಬಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿದೆ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು | ಡೆಂಗ್ಯೂ ಜ್ವರ ಹರಡದಂತೆ ತಡೆಗಟ್ಟುವಲ್ಲಿ ಸರಕಾರ ವಿಫಲವಾಗಿದೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಡೆವಲಪ್ ಮೆಂಟ್ ಕಾರ್ಯಕ್ರಮ

ಪುತ್ತೂರು: ಬದಲಾವಣೆ ನಮ್ಮ ಕೌಶಲ್ಯಗಳನ್ನು ಹೆಚ್ಚಿಸಲು, ಹೊಸ ಮತ್ತು ನಮ್ಮ ಅಭ್ಯಾಸಗಳನ್ನು ಸುಧಾರಿಸಲು ಅನುವು ಮಾಡಿಕೊಡುತ್ತದೆ.  ಬದಲಾವಣೆಗೆ ಧನಾತ್ಮಕವಾಗಿ ಸ್ಪಂದಿಸುವ ಮೂಲಕ ನಾವು ನಿರಂತರ ಸುಧಾರಣೆಯ ಸಂಸ್ಕೃತಿಯನ್ನು ಬೆಳೆಸಬಹುದು. ವಿಚಾರಗಳನ್ನು ಮುಕ್ತವಾಗಿ ಹಂಚಿಕೊಳ್ಳುವ ಮತ್ತು ಪ್ರತಿಕ್ರಿಯೆಯನ್ನು ರಚನಾತ್ಮಕವಾಗಿ ಸ್ವಾಗತಿಸುವ ವಾತಾವರಣವನ್ನು ನಾವು ಬೆಳೆಸಬೇಕಾಗಿದೆ. ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಹೇಳಿದರು. ಅವರು “ಅಂಗ ಸಂಸ್ಥೆಯಿಂದ ಸ್ವಾಯತ್ತ ಸಂಸ್ಥೆಯಾಗಿ ಪರಿವರ್ತನೆಗೆ ತಯಾರಿ” ಫ್ಯಾಕಲ್ಟಿ ಡೆವಲಪ್ ಮೆಂಟ್ ಸರಣಿ ಕಾರ್ಯಕ್ರಮದ ದ್ವಿತೀಯ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಡೆವಲಪ್ ಮೆಂಟ್ ಕಾರ್ಯಕ್ರಮ Read More »

ಗಂಭೀರವಾಗಿ ಪರಿಣಮಿಸಿರುವ ಡೆಂಗ್ಯೂ ಜ್ವರ ಬಾಧೆಗೆ ಮುಂಜಾಗ್ರತೆಯೇ ಪ್ರಮುಖ ಔಷಧ | ಮಲೇರಿಯಾ ಹಾಗೂ ಡೆಂಗ್ಯೂ ರೋಗಗಳ ನಿಯಂತ್ರಣ ಕುರಿತ ಕಾರ್ಯಾಗಾರದಲ್ಲಿ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ

ಪುತ್ತೂರು: ಪ್ರಸ್ತುತ ಗಂಭೀರವಾಗಿ ಪರಿಣಮಿಸಿರುವ ಡೆಂಗ್ಯೂ ಜ್ವರದ ಬಾಧೆಗೆ  ಮುಂಜಾಗ್ರತೆಯೇ ಪ್ರಮುಖ ಔಷಧ. ಮಹಾತ್ಮ ಗಾಂಧೀಜಿಯವ ಆಶಯದಂತೆ ಸ್ವಚ್ಛತೆಯೇ ದೇವರು ಎಂಬ ಮಾತು ಕಡ್ಡಾಯವಾಗಿ ಪಾಲನೆಯಾದರೆ ಮಾತ್ರ ಡೆಂಗ್ಯೂನಂತಹ ಜ್ವರ ಬಾಧೆಯನ್ನು ಶೇ.90 ನಿಯಂತ್ರಣ ಮಾಡಬಹುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಹೇಳಿದರು. ಪುತ್ತೂರು ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ನಗರಸಭೆಯ ಸಹಯೋಗದಲ್ಲಿ ಮಲೇರಿಯಾ ಹಾಗೂ ಡೆಂಗ್ಯೂ ರೋಗಗಳ ನಿಯಂತ್ರಣ ಕುರಿತು ಬುಧವಾರ ತಾ.ಪಂ. ಸಭಾಂಗಣದಲ್ಲಿ ಆಯೋಜಿಸಲಾದ ಮುಂಜಾಗ್ರತಾ ಸಭೆ ಹಾಗೂ ಕಾರ್ಯಾಗಾರದ ಅಧ್ಯಕ್ಷತೆ

ಗಂಭೀರವಾಗಿ ಪರಿಣಮಿಸಿರುವ ಡೆಂಗ್ಯೂ ಜ್ವರ ಬಾಧೆಗೆ ಮುಂಜಾಗ್ರತೆಯೇ ಪ್ರಮುಖ ಔಷಧ | ಮಲೇರಿಯಾ ಹಾಗೂ ಡೆಂಗ್ಯೂ ರೋಗಗಳ ನಿಯಂತ್ರಣ ಕುರಿತ ಕಾರ್ಯಾಗಾರದಲ್ಲಿ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ Read More »

ಕರಾವಳಿ ಪ್ರಾಧಿಕಾರದಿಂದ ಅನುದಾನ ನೀಡುವಂತೆ ಸಚಿವರಿಗೆ ಮನವಿ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ಕರಾವಳಿ ಪ್ರಾಧಿಕಾರದಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವ ಮೂಲಕ ಅಭಿವೃದ್ದಿಗೆ ಸಹಕಾರ ನೀಡುವಂತೆ ಸಾಂಘಿಕ ಮತ್ತು ಸಂಯೋಜನಾ ಸಚಿವ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ  ಡಿ ಸುಧಾಕರ್ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ದಿ ಕೆಲಸಗಳು ಆಗಬೇಕಾಗಿದ್ದು, ಕ್ಷೇತ್ರದ ಜನರಿಂದ ಬೇಡಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹಲವಾರು ವರ್ಷಗಳಿಂದ ಜನರು ಮನವಿ

ಕರಾವಳಿ ಪ್ರಾಧಿಕಾರದಿಂದ ಅನುದಾನ ನೀಡುವಂತೆ ಸಚಿವರಿಗೆ ಮನವಿ ನೀಡಿದ ಶಾಸಕ ಅಶೋಕ್ ರೈ Read More »

ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ

ಪುತ್ತೂರು: ರೋಟರಿ ಕ್ಲಬ್ ಯುವ ‌ಸಂಸ್ಥೆಯ ವತಿಯಿಂದ ಬೀದಿ ನಾಯಿಗಳು ಹಾಗೂ ಸಾಕು ನಾಯಿಗಳಿಗೆ ಸಂತಾನಹರಣ ಚಿಕಿತ್ಸಾ ಕಾರ್ಯಕ್ರಮ ಮುರದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಸಂತಾನ ಹರಣದಿಂದ ಬೀದಿ ನಾಯಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಬೀದಿ‌ನಾಯಿಗಳನ್ನು ಕೊಲ್ಲುವುದು ಕಾನೂನಿಗೆ ವಿರುದ್ದವಾಗಿದೆ. ಅವುಗಳ ನಿಯಂತ್ರಣ ಕೆಲಸ ನಡೆಯುತ್ತಿರುವುದು ಉತ್ತಮ ಕೆಲಸವಾಗಿದೆ. ಸಮಾಜದಲ್ಲಿ ಎಲ್ಲಾ ಸ್ಥರದಲ್ಲೂ ಕೆಲಸಗಳು ನಡೆಯಬೇಕು ಎಂದು ಹೇಳಿದರು. ವೇದಿಕೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಣೆ ಅಶ್ಬಿನಿ, ಕೃಷ್ಣನಾರಾಯಣ ಮುಳಿಯ, ಮದ್ವರಾಜ್

ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ Read More »

ಕಾಂಗ್ರೆಸ್ ಕಾರ್ಯಕರ್ತ ಚಂದ್ರಶೇಖರ ಬಪ್ಪಳಿಗೆ ನಿಧನ

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತ ಚಂದ್ರಶೇಖರ್ ಬಪ್ಪಳಿಗೆ ಅನಾರೋಗ್ಯಕ್ಕೊಳಗಾಗಿ ನಿಧನ ಹೊಂದಿದ್ದಾರೆ. ಕ್ರಿಕೆಟ್ ಪಟುವಾಗಿ ಗುರಿತಿಸಿಕೊಂಡಿದ್ದ ಅವರು, ನಿನ್ನೆ ಅಸೌಖ್ಯಕ್ಕೊಳಗಾಗಿದ್ದರು. ಬಳಿಕ ಪುತ್ತೂರಿನ ಸರ್ಕಾರಿ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ತಂದೆ ಹಾಗೂ ಇಬ್ಬರು ಸಹೋದರರನ್ನ ಅಗಲಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತ ಚಂದ್ರಶೇಖರ ಬಪ್ಪಳಿಗೆ ನಿಧನ Read More »

ಬನ್ನೂರಿನಲ್ಲಿ ಆರೋಗ್ಯ ಮತ್ತು ಕ್ಷೇಮ‌ ಕೇಂದ್ರ ಉದ್ಘಾಟನೆ

ಪುತ್ತೂರು: ಜನರ ಆರೋಗ್ಯಕ್ಕಾಗಿ ಸರಕಾರ ವಿವಿಧ ಯೋಜನೆಗಳನ್ನು ಜಾರಿಮಾಡುತ್ತಿದೆ. ಜನರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು‌, ಆರೋಗ್ಯದ ವಿಚಾರದಲ್ಲಿ ಹೆಚ್ಚು ಕಾಳಜಿ ವಹಿಸಬೇಕು ಎಂದು ಶಾಸಕ ಅಶೋಕ್ ಕುಮಾರ್  ರೈ ಹೇಳಿದರು. ಅವರು ಮಂಗಳವಾರ ಬನ್ನೂರು ಕಜೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಉದ್ಘಾಟಿಸಿ ‌ಮಾತನಾಡಿದರು. ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ‌ ಕರ್ನಾಟಕ ಸರಕಾರ ಸರಕಾರಿ ‌ಆಸ್ಪತ್ರೆ,  ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ‌ ಎಲ್ಲಾ ರೀತಿಯ ಸೌಲಭ್ಯವನ್ನು

ಬನ್ನೂರಿನಲ್ಲಿ ಆರೋಗ್ಯ ಮತ್ತು ಕ್ಷೇಮ‌ ಕೇಂದ್ರ ಉದ್ಘಾಟನೆ Read More »

error: Content is protected !!
Scroll to Top