ಪುತ್ತೂರು

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ ನ ಕಾರ್ಯಕಾರಿಣಿ ಸಭೆ | ಪ್ರತೀ ತಾಲೂಕಿನಲ್ಲಿ ಜಿಲ್ಲಾ ಸಮಿತಿಯ ಸಭೆ ನಡೆಸಲು ನಿರ್ಧಾರ

ಪುತ್ತೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿಣಿ ಸಮಿತಿ ಸಭೆ ಪುತ್ತೂರಿನ ದರ್ಬೆಯಲ್ಲಿರುವ ಶ್ರೀರಾಮ ಸೌಧದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯ ಆವರಣದಲ್ಲಿ ನಡೆಯಿತು. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಎಂ.ಪಿ.ಶ್ರೀನಾಥ್‍ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರತೀ ತಾಲೂಕುಗಳಲ್ಲಿ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಗಳನ್ನು ಸರದಿಯಂತೆ ನಡೆಸಲು ನಿರ್ಧರಿಸಲಾಯಿತು. . ಕಳೆದ ತಿಂಗಳು ಉಜಿರೆಯಲ್ಲಿ ನಡೆದ ಸಭೆಯ ನಿರ್ಣಯಗಳನ್ನು ಗೌರವ ಕಾರ್ಯದರ್ಶಿ ರಾಜೇಶ್ವರಿ ಸಭೆಗೆ ಓದಿ ಹೇಳಿದರು. ಗೌರವ ಕೋಶಾಧ್ಯಕ್ಷ ಐತಪ್ಪ ನಾಯ್ಕ್, ರಾಜ್ಯ […]

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ ನ ಕಾರ್ಯಕಾರಿಣಿ ಸಭೆ | ಪ್ರತೀ ತಾಲೂಕಿನಲ್ಲಿ ಜಿಲ್ಲಾ ಸಮಿತಿಯ ಸಭೆ ನಡೆಸಲು ನಿರ್ಧಾರ Read More »

ಜು 13 : ವಿಟ್ಲದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 10ನೇ ಶಾಖೆ ಉದ್ಘಾಟನೆ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಕಾವೂರು ಶಾಖೆಯ ಪರಮಪೂಜ್ಯ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ

ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ಪ್ರಾರಂಭಗೊಂಡ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 10ನೇ ಶಾಖೆ ವಿಟ್ಲ ಎಂಪೈರ್ ಮಹಲ್ ನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2002ರಲ್ಲಿ ಶ್ರೀ ಮಹಾಲಿಂಗೇಶ್ವರ ಸಭಾ ಭವನದ ಕಟ್ಟಡದಲ್ಲಿ ಪ್ರಾರಂಭಗೊಂಡ ಸಹಕಾರ ಸಂಘವು ಪುತ್ತೂರು ಎ.ಪಿ.ಎಂ.ಸಿ ಶಾಖೆ, ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಕುಂಬ್ರ, ಆಲಂಕಾರು ಪುತ್ತೂರು ಎಸ್.ಎಂ.ಟಿ ಶಾಖೆ, ಕಾಣಿಯೂರು ಮತ್ತು ಬೆಳ್ಳಾರೆ ಶಾಖೆಗಳಲ್ಲಿ

ಜು 13 : ವಿಟ್ಲದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 10ನೇ ಶಾಖೆ ಉದ್ಘಾಟನೆ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಕಾವೂರು ಶಾಖೆಯ ಪರಮಪೂಜ್ಯ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ Read More »

ಆಟೋಟ ಸ್ಪರ್ಧೆಗಳು ಕೇವಲ ಬಹುಮಾನಕ್ಕೆ ಸೀಮಿತವಾಗಿರಬಾರದು | ಸವಣೂರು ಯುವಕ ಮಂಡಲದಿಂದ ‘ಕೆಸರ್ ಡ್ ಒಂಜಿ ದಿನ’ ಕಾರ್ಯಕ್ರಮದಲ್ಲಿ ಕೆ.ಸೀತಾರಾಮ ರೈ ಸವಣೂರು

ಸವಣೂರು: ಸವಣೂರು ಯುವಕ ಮಂಡಲದ ವತಿಯಿಂದ ಕೆಸರ್ ಡ್ ಒಂಜಿ ದಿನ ಕಾರ್ಯಕ್ರಮ ಭಾನುವಾರ ಸವಣೂರು ಬಸದಿ ವಠಾರದಲ್ಲಿರುವ ನಿರ್ಮಲ್ ಕುಮಾರ್ ಜೈನ್ ಅವರ ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ, ಸಹಕಾರಿ ರತ್ನ ಕೆ.ಸೀತಾರಾಮ ರೈ ಸವಣೂರು ಉದ್ಘಾಟಿಸಿ ಮಾತನಾಡಿ, ಆಟೋಟ ಸ್ಪರ್ಧೆಗಳಲ್ಲಿ ಬಹುಮಾನ ಪಡೆಯುವುದು ಮುಖ್ಯ ಅಲ್ಲ. ಬದಲಾಗಿ ಭಾಗವಹಿಸುವುದೇ ಮುಖ್ಯ. ಸವಣೂರು ಯುವಕ ಮಂಡಲದ ಒಳ್ಳೆಯ ಕಾರ್ಯಕ್ಕೆ ಪ್ರೋತ್ಸಾಹಿಸಬೇಕು ಎಂದ ಅವರು, ಕೆಸರಿನಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಔಷಧವಿದೆ. ಈ ನಿಟ್ಟಿನಲ್ಲಿ

ಆಟೋಟ ಸ್ಪರ್ಧೆಗಳು ಕೇವಲ ಬಹುಮಾನಕ್ಕೆ ಸೀಮಿತವಾಗಿರಬಾರದು | ಸವಣೂರು ಯುವಕ ಮಂಡಲದಿಂದ ‘ಕೆಸರ್ ಡ್ ಒಂಜಿ ದಿನ’ ಕಾರ್ಯಕ್ರಮದಲ್ಲಿ ಕೆ.ಸೀತಾರಾಮ ರೈ ಸವಣೂರು Read More »

ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ : ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಮಿತಿಯ ಅಧ್ಯಕ್ಷರಾಗಿ ಜಯಂತ್ ಕುಂಜೂರು ಪಂಜ, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ರೈ ಕಲ್ನೋಟೆ, ಕೋಶಾಧಿಕಾರಿಯಾಗಿ ಸುರೇಶ್ ನಾಯ್ಕ ದೇವಸ್ಯ, ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಬಂಗಾರಡ್ಕ, ಜೊತೆ ಕಾರ್ಯದರ್ಶಿಯಾಗಿ ನವೀನ್ ಪೂಜಾರಿ ಕುಂಜೂರು ಪಂಜ ಆಯ್ಕೆಯಾದರು. ಈ ಸಂಧರ್ಭದಲ್ಲಿ ಶ್ರೀ ದುರ್ಗಾ ಸೇವಾ ಸಮಿತಿಯ ಅಧ್ಯಕ್ಷ ಜಿ ರಾಧಾಕೃಷ್ಣ ಗೌಡ, ಕಾರ್ಯದರ್ಶಿ ಜಗದೀಶ್ ಒಳತ್ತಡ್ಕ, ಹಾಗೂ

ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ : ನೂತನ ಪದಾಧಿಕಾರಿಗಳ ಆಯ್ಕೆ Read More »

ದಿ.ಕುಂಬ್ಳೆ ಶ್ರೀಧರ್ ರಾವ್ ಸವ್ಯಸಾಚಿ ಕಲಾವಿದ –ಗಾಳಿಮನೆ ವಿನಾಯಕ ಭಟ್ | ಕುಂಬ್ಳೆ ಶ್ರೀಧರ ರಾವ್ ಗೆ ನುಡಿನಮನ

ಉಪ್ಪಿನಂಗಡಿ: ಯಕ್ಷಗಾನ ವೇಷಧಾರಿಯಾಗಿ, ಅರ್ಥಧಾರಿಯಾಗಿ ಕುಂಬ್ಳೆ ಶ್ರೀಧರ ರಾವ್ ನಿರ್ವಹಿಸಿದ ಪಾತ್ರಗಳು ಅತ್ಯಂತ ಪ್ರಬುದ್ಧವಾಗಿದ್ದು ಹಿರಿಯ ಕಲಾವಿದರೊಂದಿಗಿನ ದೀರ್ಘ ಒಡನಾಟದಲ್ಲಿ ಅವರು ಗಳಿಸಿದ ಜ್ಞಾನವನ್ನು ಅಭಿನಯ ಮತ್ತು ಮಾತುಗಲ್ಲಿ ಕೇಳುವ ಅವಕಾಶ ಇನ್ನಿಲ್ಲವೆನ್ನುವ ಕೊರಗು ಕಲಾವಲಯದಲ್ಲಿ ಮೂಡಿದೆ ಎಂದು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕ, ಕಲಾವಿದ ವಿದ್ವಾನ್ ಡಾ.ವಿನಾಯಕ ಭಟ್ ಗಾಳಿಮನೆ ಹೇಳಿದರು. ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿದ ಕುಂಬ್ಳೆ ಶ್ರೀಧರ್ ರಾವ್ ನುಡಿನಮನ ಕಾರ್ಯಕ್ರಮದಲ್ಲಿ

ದಿ.ಕುಂಬ್ಳೆ ಶ್ರೀಧರ್ ರಾವ್ ಸವ್ಯಸಾಚಿ ಕಲಾವಿದ –ಗಾಳಿಮನೆ ವಿನಾಯಕ ಭಟ್ | ಕುಂಬ್ಳೆ ಶ್ರೀಧರ ರಾವ್ ಗೆ ನುಡಿನಮನ Read More »

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದಿಂದ ವನಮಹೋತ್ಸವ | ಮನೆಗೊಂದು ಗಿಡ, ಊರಿಗೊಂದು ವನ ಧ್ಯೇಯ ವಾಕ್ಯದೊಂದಿಗೆ ಆಚರಣೆ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ಸದಸ್ಯರಿಗೆ ಹಣ್ಣಿನ ಗಿಡ ಉಚಿತವಾಗಿ ನೀಡುವ ಮೂಲಕ ವನಮಹೋತ್ಸವವನ್ನು ಇಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಮನೆಗೊಂದು ಗಿಡ, ಊರಿಗೊಂದು ವನ ಧ್ಯೇಯ ವಾಕ್ಯದೊಂದಿಗೆ ನಡೆದ ಕಾರ್ಯಕ್ರಮವನ್ನು ಸಂಘದ ಸಲಹಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಸಂಜೀವ ಮಠಂದೂರು ಸಂಘದ ಪದಾಧಿಕಾರಿಗಳಿಗೆ ಗಿಡ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಸಂಘದ ಗೌರವಾಧ್ಯಕ್ಷ ಚಿ್ದಾನಂದ ಬೈಲಾಡಿ, ಅಧ್ಯಕ್ಷ ರವಿ ಮುಂಗ್ಲಿಮನೆ, ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಬೆಳ್ಯಪ್ಪ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದಿಂದ ವನಮಹೋತ್ಸವ | ಮನೆಗೊಂದು ಗಿಡ, ಊರಿಗೊಂದು ವನ ಧ್ಯೇಯ ವಾಕ್ಯದೊಂದಿಗೆ ಆಚರಣೆ Read More »

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ ಚಿತ್ತಾರ ಸ್ಟಾರ್ ಅವಾರ್ಡ್

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ ಚಿತ್ತಾರ ಸ್ಟಾರ್ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಾಯಿತು. ಅಯೋಧ್ಯೆಯ ಶ್ರೀರಾಮ ವಿಗ್ರಹದ ಶಿಲ್ಪಿ ಅರುಣಾ ಯೋಗಿರಾಜ್ ಅವರಿಂದ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್ ಕೆ., ಉಪಾಧ್ಯಕ್ಷ ಗಿರಿಧರ ಸ್ಕಂದ,, ಮುಖ್ಯ ಸಲಹೆಗಾರ ಯತೀಶ್ ಪ್ರಶಸ್ತಿ ಪಡೆದುಕೊಂಡರು

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ ಚಿತ್ತಾರ ಸ್ಟಾರ್ ಅವಾರ್ಡ್ Read More »

ಜು.27 : ತಾಲೂಕು ಒಕ್ಕಲಿಗ ಮಹಿಳಾ ಸಂಘದ ಆಶ್ರಯದಲ್ಲಿ ‘ಆಟಿ ಹಬ್ಬ-2024’, ಜು.16 : ವರಮಹಾಲಕ್ಷ್ಮೀ ಪೂಜೆ | ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ  ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಸಂಘ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಸಹಯೋಗದಲ್ಲಿ ಜು.27 ರಂದು ತೆಂಕಿಲ ಒಕ್ಕಲಿಗ ಸಮುದಾಯ ಭವನದಲ್ಲಿ ನಡೆಯುವ ಆಟಿ ಹಬ್ಬ-2024 ಹಾಗೂ ಆ.16 ರಂದು ನಡೆಯುವ ವರಮಹಾಲಕ್ಷ್ಮೀ ವೃತ ಪೂಜೆಯ ಆಮಂತ್ರಣ ಪತ್ರವನ್ನು ಇಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬಿಡುಗಡೆ ಮಾಡಲಾಯಿತು. ಒಕ್ಕಲಿಗ ಗೌಡ ಸಂಘದ ಸಲಹಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಸಂಜೀವ ಮಠಂದೂರು ಆಮಂತ್ರಣ

ಜು.27 : ತಾಲೂಕು ಒಕ್ಕಲಿಗ ಮಹಿಳಾ ಸಂಘದ ಆಶ್ರಯದಲ್ಲಿ ‘ಆಟಿ ಹಬ್ಬ-2024’, ಜು.16 : ವರಮಹಾಲಕ್ಷ್ಮೀ ಪೂಜೆ | ಆಮಂತ್ರಣ ಪತ್ರ ಬಿಡುಗಡೆ Read More »

ವಿದ್ಯಾರ್ಥಿಗಳು ಮನಸ್ಸನ್ನು ನಿಯಂತ್ರಿಸುವ ಕಲೆ ಸಿದ್ಧಿಸಬೇಕು | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಬೋಧನಾ ಸಾಮರ್ಥ್ಯ ಉತ್ತೇಜನ ಕಾರ್ಯಕ್ರಮದಲ್ಲಿ ರಾಮಚಂದ್ರ ಗುರೂಜಿ

ಪುತ್ತೂರು: ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಪಾಠ ಮಾಡಬೇಕಾದರೆ ಮನಸ್ಸಿನ ಸ್ಥಿತಿಗಳನ್ನು ಮೊದಲಿಗೆ ಅರ್ಥಮಾಡಿಕೊಳ್ಳಬೇಕು. ನಮ್ಮೆದುರಿಗಿರುವ ಮಕ್ಕಳ ಮನಸ್ಸನ್ನು ಹತೋಟಿಗೆ ತೆಗೆದುಕೊಂಡರೆ ನಾವು ಬೋಧಿಸಿದ ಸಂಗತಿಗಳು ಸುಲಭ ಸಾಧ್ಯವಾಗಿ ಮಕ್ಕಳ ತಲೆಯೊಳಗೆ ಅಚ್ಚೊತ್ತಿಬಿಡುತ್ತವೆ. ಹಾಗಾಗಿ ಶಿಕ್ಷಕರಾದವರು ಮನಸ್ಸನ್ನು ಅರ್ಥ ಮಾಡಿಕೊಳ್ಳುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರಿನ ಸಮ್ಮೋಹಿನಿ ತಜ್ಞ, ಕುಂಡಲಿನಿ ಯೋಗಗುರು ಡಾ.ರಾಮಚಂದ್ರ ಗುರೂಜಿ ಹೇಳಿದರು.        ಅವರು ನಗರದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಅಂಬಿಕಾ ಹಾಗೂ ನರಿಮೊಗರಿನ ಸಾಂದೀಪನಿ ಶಿಕ್ಷಣ ಸಂಸ್ಥೆಗಳ ಬೋಧಕರಿಗಾಗಿ ಆಯೋಜಿಸಲಾದ ಎರಡು ದಿನಗಳ

ವಿದ್ಯಾರ್ಥಿಗಳು ಮನಸ್ಸನ್ನು ನಿಯಂತ್ರಿಸುವ ಕಲೆ ಸಿದ್ಧಿಸಬೇಕು | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಬೋಧನಾ ಸಾಮರ್ಥ್ಯ ಉತ್ತೇಜನ ಕಾರ್ಯಕ್ರಮದಲ್ಲಿ ರಾಮಚಂದ್ರ ಗುರೂಜಿ Read More »

ಯುವಕ ವಿಶ್ವನಾಥ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಯಾಪು ಗ್ರಾಮದ ಪಂಜಳದಿಂದ ವರದಿಯಾಗಿದೆ. ವಿಶ್ವನಾಥ ಅಲಿಯಾಸ್ ವೇಣು (32) ಆತ್ಮಹತ್ಯೆ ಮಾಡಿಕೊಂಡವರು. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವಿಶ್ವನಾಥ ಮನೆಯಲ್ಲಿ ನೈಲಾನ್‍ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ತಂದೆ ನೀಡಿದ ದೂರಿನಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕ ವಿಶ್ವನಾಥ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top