ಪುತ್ತೂರು

ಜು.9: ಮಾಸ್ ಲಿಮಿಟೆಡ್ ನಿಂದ ಕಾವುನಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ | ಪತ್ರಿಕಾಗೋಷ್ಠಿಯಲ್ಲಿ ಕೆ.ಸೀತಾರಾಮ ರೈ ಸವಣೂರು

ಪುತ್ತೂರು: ಮಂಗಳೂರು ಕೃಷಿಕರ ಸಹಕಾರ ಸಂಘದ ವತಿಯಿಂದ ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ.ಎಂ.ಎನ್‍.ರಾಜೇಂದ್ರ ಕುಮಾರ್ ಅವರ ಸಹಕಾರದೊಂದಿಗೆ 10ನೇ ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ ಜು.9 ಮಂಗಳವಾರ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಯಲಿದೆ ಎಂದು ಮಂಗಳೂರು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಡಿಕೆ ಬೆಳೆಗಾರರಿಗೆ ಅಧಿಕ ದರ ಸಿಗಬೇಕು. ಈ ಕುರಿತು […]

ಜು.9: ಮಾಸ್ ಲಿಮಿಟೆಡ್ ನಿಂದ ಕಾವುನಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ | ಪತ್ರಿಕಾಗೋಷ್ಠಿಯಲ್ಲಿ ಕೆ.ಸೀತಾರಾಮ ರೈ ಸವಣೂರು Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಅನ್ ಬೌಂಡ್’ ತಾಂತ್ರಿಕ ಉತ್ಸವ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಅನ್ ಬೌಂಡ್ ಎನ್ನುವ 3 ದಿನಗಳ ತಾಂತ್ರಿಕ ಉತ್ಸವ ಕಾರ್ಯಕ್ರಮ ಆಯೋಜಿಸಲಾಯಿತು. ಬದಲಾದ ತಾಂತ್ರಿಕತೆಯೊಂದಿಗೆ ಹೆಜ್ಜೆ ಹಾಕುತ್ತಾ ತನ್ನಲ್ಲಿರುವ ತಾಂತ್ರಿಕ ಜ್ಞಾನವನ್ನು ಇತರರಿಗೆ ಹಂಚಿಕೊಳ್ಳುವುದಕ್ಕೆ ಸೂಕ್ತ ವೇದಿಕೆಯನ್ನು ನೀಡುವುದಕ್ಕಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರೀಸರ್ಚ್ ಎಂಡ್ ಪ್ರೆಸೆಂಟೇಶನ್, ಪ್ರಾಬ್ಲೆಮ್ ಸಾಲ್ವಿಂಗ್, ಮೆಷಿನ್ ಲರ್ನಿಂಗ್, ಡೇಟಾ ಪ್ರಾಸೆಸಿಂಗ್, ಸರ್ಕ್ಯೂಟ್ ಡಿಸೈನ್ ಎಂಡ್ ಡಿಬಗ್ಗಿಂಗ್, ಸರ್ವೆ, ಮಾಡೆಲಿಂಗ್, ಯುನಿಟ್ಸ್ ಎಂಡ್ ಮೆಶರ್‌ಮೆಂಟ್ಸ್ ಹೀಗೆ ಕಂಪ್ಯೂಟರ್ ವಿಭಾಗಕ್ಕೆ ಸಂಬಂಧಿಸಿದಂತೆ 4, ಇಲೆಕ್ಟ್ರಾನಿಕ್ಸ್

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಅನ್ ಬೌಂಡ್’ ತಾಂತ್ರಿಕ ಉತ್ಸವ Read More »

ಸಾಮೆತ್ತಡ್ಕ ಶಾಲೆಯಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮಕ್ಕೆ ಚಾಲನೆ

ಪುತ್ತೂರು: ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ನೇ ತರಗತಿಗೆ ಇಂಗ್ಲೀಷ್ ಮಾಧ್ಯಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಚಾಲನೆ ನೀಡಿ ಮಾತನಾಡಿ, ಇಲ್ಲಿನ ಪ್ರತೀಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು, ಕನ್ನಡದ ಜೊತೆ ಆಂಗ್ಲ ಭಷೆಯ ಜ್ಞಾನವೂ ಇಂದಿನ ಕಾಲದ ಅಗತ್ಯ ಬೇಡಿಕೆಯಾಗಿದೆ ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸರಕರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಯನ್ನು ಆರಂಭ ಮಾಡುತ್ತಿದೆ, ಹಳ್ಳಿಯ ಕಟ್ಟಕಡೇಯ ವ್ಯಕ್ತಿಯ ಮಕ್ಕಳೂ ಇಂಗ್ಲೀಷ್ ಕಲಿತರೆ ಮಾತ್ರ ಭಾರತ

ಸಾಮೆತ್ತಡ್ಕ ಶಾಲೆಯಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮಕ್ಕೆ ಚಾಲನೆ Read More »

ಬೀದಿ ಬದಿ ವ್ಯಾಪಾರಿಗಳಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ

ಪುತ್ತೂರು: ನಗರಸಭೆ ವತಿಯಿಂದ ಬೀದಿ ಬದಿ ವ್ಯಾಪಾರ ಮಾಡುವವರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಸ್ವ ನಿಧಿಯಿಂದ ಸಮೃದ್ಧಿ ಕಾರ್ಯಕ್ರಮ ನಗರಸಭೆ ಸಭಾಂಗಣದಲ್ಲಿ ನಡೆಯಿತು. ಯೋಜನೆಯ ಸೌಲಭ್ಯಗಳ ಬಗ್ಗೆ ಪೌರಾಯುಕ್ತ ಮಧು ಎಸ್‍. ಮನೋಹರ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಇಸುಬು, ಸಹಾಯಕ ಕಾರ್ಯಪಾಲಕ ಅಭಿಯಂತರ ಶಬರಿನಾಥ್, ಲೆಕ್ಕಾಧೀಕ್ಷಕ ಸಿ.ಆರ್.ದೇವಾಡಿಗ, ಸಹಾಯಕ ಅಭಿಯಂತರ ಕೃಷ್ಣಮೂರ್ತಿ ರೆಡ್ಡಿ, ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ವೇತಾಕಿರಣ್, ವರಲಕ್ಷ್ಮಿ, ಪ್ರೋಗ್ರಾಮರ್ ವಿನೋದ್ ಜೋಷಿ ಉಪಸ್ಥಿತರಿದ್ದರು. ಜಯಲಕ್ಷ್ಮಿ ಬೇಕಲ್ ಸ್ವಾಗತಿಸಿ, ವಂದಿಸಿದರು. ಸಮುದಾಯ ಸಂಘಟನಾಧಿಕಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ Read More »

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಉಂಗುರ, ಕಿವಿಯೋಲೆಗಳ ಮೇಳ | ಜುಲೈ 1 ರಿಂದ ಆರಂಭ

ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗೆ ಉಂಗುರ ಹಾಗೂ ಕಿವಿಯೋಲೆಗಳ ಮೇಳವನ್ನು ಪುತ್ತೂರು, ಮಡಬಿದ್ರೆ, ಸುಳ್ಯ ಹಾಸನ, ಮತ್ತು ಕುಶಾಲನಗರ ಮಳಿಗೆಗಳಲ್ಲಿ ಜು.1 ರಿಂದ ಆಯೋಜಿಸಿದೆ. ಚಿನ್ನವನ್ನು ಧರಿಸುವುದು ಸೌಂದರ್ಯದ ಸಂಕೇತವಾಗಿದೆ. ಹೂಡಿಕೆಯ ದೃಷ್ಟಿಯಿಂದ ಕೂಡಾ ಲಾಭದಾಯಕ. ಗ್ರಾಹಕರಿಗೆ ವಿವಿಧ ವಿನ್ಯಾಸಗಳ ಉಂಗುರ ಹಾಗೂ ಕಿವಿಯೋಲೆಗಳ ಅಪೂರ್ವ ಸಂಗ್ರಹ ಲಭ್ಯವಿದೆ. ಅದೇ ರೀತಿ Yellow Tag ಆಭರಣಗಳನ್ನು ಆಯ್ಕೆಮಾಡಿ ಅತ್ಯಂತ ಕಡಿಮೆ ತಯಾರಿಕಾ ವೆಚ್ಚದಲ್ಲಿ ಗ್ರಾಹಕರಿಗೆ ಲಭ್ಯವಿದೆ. 1957 ರಲ್ಲಿ ಆರಂಭಗೊಂಡ ಸಂಸ್ಥೆಯು

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಉಂಗುರ, ಕಿವಿಯೋಲೆಗಳ ಮೇಳ | ಜುಲೈ 1 ರಿಂದ ಆರಂಭ Read More »

ನಾಳೆ ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ? ಇಲ್ಲಿದೆ ಡಿಟೈಲ್ಸ್

ಪುತ್ತೂರು: ಪುತ್ತೂರು-ಹಾರಾಡಿ, ತಾರಿಗುಡ್ಡೆ ಪ್ರದೇಶದಲ್ಲಿ 33 ಕೆವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ ಹಾಗೂ ಪುತ್ತೂರು-ಸವಣೂರು-ನೆಲ್ಯಾಡಿ ಮಧ್ಯೆ ಇರುವ ಅಪಾಯಕಾರಿ ಮರಗಳ ತೆರವು ಕಾರ್ಯ ನಡೆಯುವುದರಿಂದ ಜು.2 ಮಂಗಳವಾರ ಬೆಳಿಗ್ಗೆ 10 ರಿಂದ ಸಂಜೆ 3 ರ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು. 33 ಕೆವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ ಹಾಗೂ 33 ಕೆವಿ ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11 ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಮತ್ತು

ನಾಳೆ ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ? ಇಲ್ಲಿದೆ ಡಿಟೈಲ್ಸ್ Read More »

ಪುತ್ತೂರಿನಲ್ಲಿ ನೈಜ, ಹಿರಿಯ ಕಾಂಗ್ರೆಸ್ಸಿಗರನ್ನು ಕಡೆಗಣನೆ ಮಾಡಲಾಗುತ್ತಿದೆ |  ಕಾಂಗ್ರೆಸ್ ಪುತ್ತೂರಿನಲ್ಲಿ ನೆಲಕಚ್ಚಲಿದೆಯಂತೆ | ಪತ್ರಿಕಾಗೋಷ್ಠಿಯಲ್ಲಿ ಪುರುಷೋತ್ತಮ ಬೂಡಿಯಾರ್

ಪುತ್ತೂರು: ಪುತ್ತೂರಿನ ಕಾಂಗ್ರೆಸ್‍ವಲಯದಲ್ಲಿ ನೈಜ ಕಾಂಗ್ರೆಸ್ಸಿಗರನ್ನು ಕಡೆಗಣನೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಈ ಬಾರಿ ಬ್ಲಾಕ್ ಅಧ್ಯಕ್ಷರನ್ನಾಗಿ ನೈಜ ಕಾಂಗ್ರೆಸ್ಸಿಗರನ್ನು ನೇಮಕ ಮಾಡಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪುರುಷೋತ್ತಮ ಬೂಡಿಯಾರ್ ಆಗ್ರಹಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುತ್ತೂರಿನ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರನ್ನು ಹೊರತುಪಡಿಸಿ ಉಳಿದ ನಾಯಕರು ಕಾಂಗ್ರೆಸ್ ಪಕ್ಷವನ್ನ ಮೇಲೆತ್ತಲು ಪ್ರಯತ್ನಿಸುತ್ತಿಲ್ಲ. ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪುತ್ತೂರಿನಲ್ಲಿ ನೆಲಕಚ್ಚಲಿದೆ ಎಂದರು. ವಿಧಾನಸಭಾ

ಪುತ್ತೂರಿನಲ್ಲಿ ನೈಜ, ಹಿರಿಯ ಕಾಂಗ್ರೆಸ್ಸಿಗರನ್ನು ಕಡೆಗಣನೆ ಮಾಡಲಾಗುತ್ತಿದೆ |  ಕಾಂಗ್ರೆಸ್ ಪುತ್ತೂರಿನಲ್ಲಿ ನೆಲಕಚ್ಚಲಿದೆಯಂತೆ | ಪತ್ರಿಕಾಗೋಷ್ಠಿಯಲ್ಲಿ ಪುರುಷೋತ್ತಮ ಬೂಡಿಯಾರ್ Read More »

ಲಿಫ್ಟ್ ನೊಳಗೆ ಸಿಲುಕಿದ ವಿದ್ಯಾರ್ಥಿಗಳು : ಸ್ಥಳೀಯರಿಂದ  ರಕ್ಷಣೆ

ವಿಟ್ಲ : ಸ್ವಿಫ್ಟ್ ಸ್ಪೇಸ್ ಎಲಿವೇಟರ್ ನಲ್ಲಿ ವಿದ್ಯಾರ್ಥಿಗಳು ಬಾಗಿಲು ಓಪನೆ ಆಗದೆ ಲಿಫ್ಟ್ ನೊಳಗೆ ಸಿಲುಕಿದ ಘಟನೆ ವಿಟ್ಲ ಪುತ್ತೂರು ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ನಡೆದಿದೆ. ವಿಟ್ಲ ಪುತ್ತೂರು ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಲಿಫ್ಟ್ ನಲ್ಲಿ ಚಲಿಸುತ್ತಿದ್ದ ವಿದ್ಯಾರ್ಥಿಗಳು, ಎಷ್ಟು ಹೊತ್ತಾದರೂ ಲಿಫ್ಟ್ ನ ಬಾಗಿಲು ತೆರೆಯದೇ ಅದರ ಒಳಗೆ ಸಿಲುಕಿದ್ದರು. ಈ ವೇಳೆ ವಿದ್ಯಾರ್ಥಿಗಳಲ್ಲಿ ಉಸಿರಾಟದ ತೊಂದರೆ ಕಂಡುಬಂದಿದ್ದು, ಕೂಡಲೇ ವಿದ್ಯಾರ್ಥಿಗಳು ತಮ್ಮ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ

ಲಿಫ್ಟ್ ನೊಳಗೆ ಸಿಲುಕಿದ ವಿದ್ಯಾರ್ಥಿಗಳು : ಸ್ಥಳೀಯರಿಂದ  ರಕ್ಷಣೆ Read More »

ಜು.4: ಎಸ್‍ಡಿಎಂಸಿ ಸಮನ್ವಯ ವೇದಿಕೆಯ ಜಿಲ್ಲಾ ಮಟ್ಟದ ಕಾರ್ಯಾಗಾರ

ಪುತ್ತೂರು: ದ.ಕ.ಜಿಲ್ಲಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ದ.ಕ.ಜಿಲ್ಲಾ ಸಮನ್ವಯ ವೇದಿಕೆಯ ಜಿಲ್ಲಾ ಮಟ್ಟದ ಮಹಾ ತರಬೇತಿ ಕಾರ್ಯಾಗಾರ ಜು.4 ಗುರುವಾರ ನೆಲ್ಲಿಕಟ್ಟೆ ಮಾತೃಛಾಯಾ ಸಭಾಂಗಣದಲ್ಲಿ ನಡೆಯಲಿದೆ ಎಂದು ವೇದಿಕೆಯ ಗೌರವ ಸಲಹೆಗಾರರಾದ ಕಸ್ತೂರಿ ಬೊಳುವಾರು ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಾಲಾ ಎಸ್‍ ಡಿಎಂಸಿ ಯವರನ್ನು ಅಭಿವೃದ್ಧಿ ಕಾರ್ಯದಲ್ಲಿ ಬೆಸೆಯುವ ವೇದಿಕೆ ಸಮನ್ವಯ ವೇದಿಕೆಯಾಗಿದ್ದು, ಯಾವುದೇ ಘಟನೆಗಳಾದಾಗ ಸ್ಥಳದಲ್ಲೇ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಸಮನ್ವಯ ವೇದಿಕೆ ಕಾರ್ಯಾಚರಿಸುತ್ತಿದೆ. ಜತೆಗೆ ಭೌತಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ

ಜು.4: ಎಸ್‍ಡಿಎಂಸಿ ಸಮನ್ವಯ ವೇದಿಕೆಯ ಜಿಲ್ಲಾ ಮಟ್ಟದ ಕಾರ್ಯಾಗಾರ Read More »

ಗೃಹರಕ್ಷಕ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ

ಪುತ್ತೂರು: ಗೃಹರಕ್ಷಕ ದಳ ಪುತ್ತೂರು ಘಟಕದ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ಪಿ.ಜಗನ್ನಾಥ ಮತ್ತು ಲಘು ಮತ್ತು ಪ್ರವಾಹ ರಕ್ಷಣಾ ತರಬೇತಿಯಲ್ಲಿ ಚಿನ್ನದ ಪದಕ ಪಡೆದ ಎಸ್.ಕೇಶವ ಅವರಿಗೆ ಸನ್ಮಾನ ಕಾರ್ಯಕ್ರಮ ನೇರವೇರಿಸಿದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಳಿಯ ಸಂಸ್ಥೆಯ ಕೃಷ್ಣವೇಣಿ ಮಾತನಾಡಿ, ನಿಷ್ಕಾಮ ಸೇವೆ ಮಾಡುವ ಸಿಬ್ಬಂದಿಗಳು ದೇವರಿಗೆ ಸಮಾನರು ಎಂದು ಹೇಳಿದರು. ಇಲಾಖಾ ಮುಖ್ಯಸ್ಥ ಡಾ ಮುರಳಿಮೋಹನ್ ಚೂಂತಾರು, ಮುಂದಿನ ದಿನಗಳಲ್ಲಿ ಇನ್ನಷ್ಟು ಯುವಕರು ನಿಷ್ಕಾಮ ಸೇವೆಗೆ

ಗೃಹರಕ್ಷಕ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ Read More »

error: Content is protected !!
Scroll to Top