ಪುತ್ತೂರು

ನಿಯಂತ್ರಣ ತಪ್ಪಿ ಗ್ಯಾರೇಜ್‍ ಗೆ ನುಗ್ಗಿದ ಕಾರು

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗ್ಯಾರೇಜ್ ಗೆ ನುಗ್ಗಿದ ಘಟನೆ ವಿಟ್ಲ ಸಮೀಪದ ಅಪ್ಪೆರಿಪಾದೆಯಲ್ಲಿ ನಡೆದಿದೆ. ವಿಟ್ಲ-ಕಾಸರಗೋಡು ರಸ್ತೆಯ ಅಪ್ಪೆರಿಪಾದೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗ್ಯಾರೇಜ್ ನ ಮೇಲ್ಛಾವಣಿಗೆ ಹಾನಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ನಿಯಂತ್ರಣ ತಪ್ಪಿ ಗ್ಯಾರೇಜ್‍ ಗೆ ನುಗ್ಗಿದ ಕಾರು Read More »

ಮಧುರಾ ಬೀಡಿ ಉದ್ಯಮಿ ಡಿ.ಎ.ಅಬ್ದುಲ್ ಖಾದರ್ ನಿಧನ

ಪುತ್ತೂರು: ಮಧುರಾ ಬೀಡಿ ಉದ್ಯಮಿ, ಮರಿಲ್ ನಿವಾಸಿ ಡಿ.ಎ ಅಬ್ದುಲ್ ಖಾದರ್ (81) ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೆಲವು ದಿನಗಳ ಹಿಂದೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರಳದಿದ್ದಾರೆ. ಮಧುರಾ ಗ್ರೂಪ್ ನ ಸ್ಥಾಪಕರಾಗಿರುವ ಡಿ ಎ ಅಬ್ದುಲ್ ಖಾದರ್ ಮಧುರಾ ಎಜ್ಯುಕೇಶನಲ್ ಟ್ರಸ್ಟ್ ನ ಟ್ರಸ್ಟಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಕೂರ್ನಡ್ಕ ಜುಮಾ ಮಸೀದಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ,ಪುತ್ರಿಯರು, ಇಬ್ಬರು ಗಂಡು

ಮಧುರಾ ಬೀಡಿ ಉದ್ಯಮಿ ಡಿ.ಎ.ಅಬ್ದುಲ್ ಖಾದರ್ ನಿಧನ Read More »

ರಾಮಕುಂಜದಲ್ಲಿ ಗೋಮಾಂಸ ಪತ್ತೆ : ಓರ್ವನ ಬಂಧನ

ಕಡಬ : ಗೋ,ಮಾಂಸ ಪತ್ತೆಯಾದ ಘಟನೆ ಕಡಬ ತಾಲೂಕಿನ ರಾಮಕುಂಜ ಆತೂರು ಸಮೀಪದ ಅಮೈ ಎಂಬಲ್ಲಿ ನಡೆದಿದೆ. ಆಟೋ ರಿಕ್ಷಾದಲ್ಲಿ ಸುಮಾರು 50 ಕೆಜಿ ಗೋ ಮಾಂಸ ಸಾಗುಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಕಡಬ ಪೋಲಿಸರು ಬೆನ್ನಟ್ಟಿ ಹಿಡಿಯುವಲ್ಲಿ ಸಫಲರಾಗಿದ್ದಾರೆ. ಈ ಸಂಬಂಧ ಅಬ್ದುಲ್‌ ಎಂಬಾತನನ್ನು ಬಂಧಿಸಿ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಾಗಿದೆ. ಕಡಬ ಎಸ್ ಐ ಅಭಿನಂದನ್ ಎಂ. ಎಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ ಎಂದು ತಿಳಿದು ಬಂದಿದೆ.

ರಾಮಕುಂಜದಲ್ಲಿ ಗೋಮಾಂಸ ಪತ್ತೆ : ಓರ್ವನ ಬಂಧನ Read More »

ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆ

ಉಪ್ಪಿನಂಗಡಿ : ಸಮುದಾಯ ಆರೋಗ್ಯ ಕೇಂದ್ರಗಳು ಜನ ಸ್ನೇಹಿಯಾಗುವ ಮೂಲಕ ಜನರಿಗೆ ಹತ್ತಿರವಾಗಬೇಕು, ಚಿಕಿತ್ಸೆಗೆ ಬರುವ ಪ್ರತೀಯೊಬ್ಬ ನಾಗರಿಕನಿಗೂ ಉತ್ತಮ ಸೇವೆ ಸಿಗಬೇಕು. ಯಾವುದೇ ಲೋಪ ದೋಷಗಳು ಬಾರದಂತೆ ಎಚ್ಚರವಹಿಸಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಆರೋಗ್ಯ ಕೇಂದ್ರದಲ್ಲಿನ ಸಿಬಂದಿಗಳಿಗೆ ರಕ್ಷಾ ಸಮಿತಿಗೆ ಮಹತ್ತರವಾದ ಜವಾಬ್ದಾರಿ ಇದೆ. ಕೇಂದ್ರಕ್ಕೆ ಬರುವ ಪ್ರತೀಯೊಬ್ಬ ರೋಗಿಗೂ ಸಾಂತ್ವನ ದೊರೆಯಬೇಕು. ಸೌಲಭ್ಯ ಇಲ್ಲ, ವೈದ್ಯರಿರಲಿಲ್ಲ ಎಂಬ

ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆ Read More »

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಕೊಡಿಪ್ಪಾಡಿ ಗ್ರಾಮ ಸಾಹಿತ್ಯ ಸಂಭ್ರಮ | ಸಾಹಿತ್ಯ ವೇದಿಕೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸಾಹಿತ್ಯ ಕ್ಷೇತ್ರದಲ್ಲಿ  ಬೆಳೆಯಲು ಗ್ರಾಮ ಸಾಹಿತ್ಯ ಸಂಭ್ರಮ ಪರಿಣಾಮಕಾರಿ- ಸೋಮಪ್ಪ ಪೂಜಾರಿ

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕೊಡಿಪ್ಪಾಡಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ ಗ್ರಾಮ ಸಾಹಿತ್ಯ ಸಂಭ್ರಮದ 14ನೇ ಸರಣಿ ಕಾರ್ಯಕ್ರಮ ಕೊಡಿಪ್ಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕೊಡಿಪ್ಪಾಡಿ ಗ್ರಾಪಂ ಅಧ್ಯಕ್ಷ ಸೋಮಪ್ಪ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮ ಮಟ್ಟದ ಸಾಹಿತಿಗಳನ್ನ ಗುರುತಿಸಿ, ಗ್ರಾಮೀಣ ಯುವ ಮತ್ತು ವಿದ್ಯಾರ್ಥಿಗಳಿಗೆ ಸಾಹಿತ್ಯದ

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಕೊಡಿಪ್ಪಾಡಿ ಗ್ರಾಮ ಸಾಹಿತ್ಯ ಸಂಭ್ರಮ | ಸಾಹಿತ್ಯ ವೇದಿಕೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸಾಹಿತ್ಯ ಕ್ಷೇತ್ರದಲ್ಲಿ  ಬೆಳೆಯಲು ಗ್ರಾಮ ಸಾಹಿತ್ಯ ಸಂಭ್ರಮ ಪರಿಣಾಮಕಾರಿ- ಸೋಮಪ್ಪ ಪೂಜಾರಿ Read More »

ಸಾಮಾಜಿಕ ಧುರೀಣ, ಮಾಜಿ ಕ್ಯಾಂಪ್ಕೋ ಅಧ್ಯಕ್ಷ ಎಲ್‍.ಎನ್‍.ಕುಡೂರು ನಿಧನ

ವಿಟ್ಲ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಎಲ್.ಎನ್.ಕೂಡೂರು (67) ಇಂದು ಮುಂಜಾನೆ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಎಲ್‍.ಎನ್‍.ಕುಡೂರು ಅವರು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಪ್ರಿಯ ಪಡೆದಿದ್ದರು. ಕ್ಯಾಂಪೊ ಅಧ್ಯಕ್ಷರಾಗಿ, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ವಿಟ್ಲ ಬಸವನಗುಡಿ ವಿಟ್ಟಲ್ ಜೇಸೀಸ್ ಎಜುಕೇಶನ್ ಸೊಸೈಟಿ ಅಧ್ಯಕ್ಷರಾಗಿ, ವಿಟ್ಟಲ ವಿದ್ಯಾ ಸಂಘದ ಸಂಚಾಲಕರಾಗಿ

ಸಾಮಾಜಿಕ ಧುರೀಣ, ಮಾಜಿ ಕ್ಯಾಂಪ್ಕೋ ಅಧ್ಯಕ್ಷ ಎಲ್‍.ಎನ್‍.ಕುಡೂರು ನಿಧನ Read More »

ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘ ಅಗತ್ಯ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಮಾಣವಚನ ಸಮಾರಂಭದಲ್ಲಿ ಚಿದಾನಂದ ಬೈಲಾಡಿ

ಪುತ್ತೂರು: ಕಾಲೇಜಿಗೆ ಸಹಕಾರ ಕೊಡಲು ವಿದ್ಯಾರ್ಥಿ ಸಂಘ ಅತ್ಯಾವಶ್ಯಕ ಎಂಬುದರ ಜತೆಗೆ ಸಂಘಜೀವಿಯಾಗಿ ನಾವು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಸಾಧ್ಯ ಎನ್ನುವುದು ಗಮನಾರ್ಹ ವಿಚಾರ.  ಹಾಗಾಗಿಯೇ ಕಾಲೇಜಿನ ಬೆಳವಣಿಗೆಗೆ ವಿದ್ಯಾರ್ಥಿ ಸಂಘ ಪೂರಕ ಎಂದು ನ್ಯಾಯವಾದಿ ಚಿದಾನಂದ ಬೈಲಾಡಿ ಹೇಳಿದರು. ಅವರು ನಗರದ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ, ವಿದ್ಯಾರ್ಥಿ ನಾಯಕರಿಗೆ ಶಾಲಾ ಧ್ವಜವನ್ನು ಹಸ್ತಾಂತರಿಸಿ ಮಾತನಾಡಿದರು. ಮಾನವನಿಗೆ ಸಮಸ್ಯೆಗಳಿರುವುದು ಸಾಮಾನ್ಯ. ಚಿತೆಗೆ

ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘ ಅಗತ್ಯ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಮಾಣವಚನ ಸಮಾರಂಭದಲ್ಲಿ ಚಿದಾನಂದ ಬೈಲಾಡಿ Read More »

ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ

ಪುತ್ತೂರು : ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ ನಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಗೂಡ್ಸ್ ಹೊತ್ತ ಟೆಂಪೋ, ಐರಾವತ ಬಸ್, ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ನ್ನು ಗೂಡ್ಸ್ ಹೊತ್ತ ಟೆಂಪೋ ಓವರ್ ಟೇಕ್ ಮಾಡುವ ಭರದಲ್ಲಿ ದುರ್ಘಟನೆ ಸಂಭವಿಸಿತು. ಓವರ್ ಟೇಕ್ ಮಾಡುವ ಸಂದರ್ಭ ಎದುರಿನಿಂದ ರಾಜಹಂಸ ಬಸ್ ಬರುತ್ತಿದ್ದು, ಟೆಂಪೋ ಚಾಲಕ ನಿಯಂತ್ರಣ

ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ Read More »

ಚೆಲ್ಯಡ್ಯ ಮುಳುಗು ಸೇತುವೆ ಸಂಚಾರ ಸ್ಥಗಿತ ಜಿಲ್ಲಾಧಿಕಾರಿ ಮುನ್ನೈ ಮುಗಿಲನ್ ಆದೇಶ

ಪುತ್ತೂರು: ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಮುನ್ನೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಈ ಬಾರಿಯ ಮಳೆಗೂ ಚೆಲ್ಯಡ್ಕ ಮುಳುಗು ಸೇತುವೆ ನೀರಿನಿಂದ ಮುಳುಗಿ, ಸಂಚಾರ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ಸಂಚಾರ ಸೂಚಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪುತ್ತೂರಿನಿಂದ ಪಾಣಾಜೆ – ಬೆಟ್ಟಂಪಾಡಿ ಭಾಗಕ್ಕೆ ತೆರಳುವವರು ಸಂಟ್ಯಾರ್ ರಸ್ತೆಯಾಗಿ ತೆರಳಬಹುದು. ದೇವಸ್ಯ ಕಡೆಯಿಂದ ತೆರಳುವವರು ಚೆಲ್ಯಡ್ಕದವರೆಗೆ ಮಾತ್ರ ತೆರಳಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಚೆಲ್ಯಡ್ಯ ಮುಳುಗು ಸೇತುವೆ ಸಂಚಾರ ಸ್ಥಗಿತ ಜಿಲ್ಲಾಧಿಕಾರಿ ಮುನ್ನೈ ಮುಗಿಲನ್ ಆದೇಶ Read More »

ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳ’ ಕುರಿತು ಕಾರ್ಯಗಾರ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲ ರಕ್ಷಣಾ ಹಾಗೂ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳು’ ಕುರಿತು ಕಾರ್ಯಗಾರವು ಜೂನ್ 27ರಂದು ಫಿಲೋಮಿನಾ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯದ ಮನಶಾಸ್ತ್ರಜ್ಞರು ಮತ್ತು ಜೀವನ ಕೌಶಲ್ಯ ತರಬೇತುದಾರರು ಆಗಿರುವ ಮೀನಾ ಕುಮಾರಿ.ಕೆ  ಅವರು ಮಾತನಾಡಿ  ಹದಿಹರೆಯದ ಮಕ್ಕಳಲ್ಲಿ ಹೆಚ್ಚಾಗಿ ಶಾರೀರಿಕ ಬದಲಾವಣೆ, ಆತ್ಮ ವಿಶ್ವಾಸದ ಕೊರತೆ, ಸಿಟ್ಟು, ಹಠಮಾರಿತನ, ಖಿನ್ನತೆಗೆ ಒಳಗಾಗುವ ಗುಣ ಮತ್ತು ಒತ್ತಡಗಳು

ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳ’ ಕುರಿತು ಕಾರ್ಯಗಾರ Read More »

error: Content is protected !!
Scroll to Top