ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ
ಪುತ್ತೂರು: ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಲಿಸ್ಟ್ ಮಾಡಿ ಯಾವ್ಯಾವ ಹಂತದಲ್ಲಿದೆ, ಕಾನೂನು ತೊಡಕುಗಳು ಎಲ್ಲವನ್ನೂ ಸರಿಪಡಿಸಲು ವರದಿ ತಯಾರಿಸಲಾಗುವುದು. ಬಳಿಕ ಜಿಲ್ಲಾಧಿಕಾರಿಗಳ ಸಭೆ ಕರೆದು ಈ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು. […]










