ಪುತ್ತೂರು

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ ಪುತ್ತೂರಿನ ಎಪಿಎಂಸಿ ರಸ್ತೆ ಶಾಖೆ 5ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರು: ಎಪಿಎಂಸಿ ರಸ್ತೆಯಲ್ಲಿರುವ ಮೋನಾರ್ಚ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರಧಾನ ಕಚೇರಿ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ 5ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಇದರ ಅಂಗವಾಗಿ ವಾರ್ಷಿಕ ಪೂಜಾ ಕಾರ್ಯಕ್ರಮ ಇಂದು ಬೆಳಿಗ್ಗೆ ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಸಂಘ ಬೆಳೆದು ಬಂದ ರೀತಿಯನ್ನು ವಿವರಿಸಿದರು. ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ಶುಭ ಹಾರೈಸಿದರು. ಸಂಘದ ನಿರ್ದೇಶಕರಾದ ರಾಮಕೃಷ್ಣ ಕರ್ಮಲ, ಜಿನ್ನಪ್ಪ ಮಳುವೇಲು, ಪ್ರವೀಣ್ ಕುಂಟ್ಯಾಣ, […]

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ ಪುತ್ತೂರಿನ ಎಪಿಎಂಸಿ ರಸ್ತೆ ಶಾಖೆ 5ನೇ ವರ್ಷಕ್ಕೆ ಪಾದಾರ್ಪಣೆ Read More »

ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ

ಪುತ್ತೂರು: ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸವನ್ನು ಉತ್ತಮ ಗುಣಮಟ್ಟದ ಶಿಕ್ಷಣದಿಂದ ಪಡೆಯಲು ಸಾಧ್ಯ. ವಿದ್ಯಾರ್ಥಿಗಳೆಲ್ಲರೂ ವಿದ್ಯೆಯ ಪ್ರಾಮುಖ್ಯತೆಯನ್ನುಅರಿತು ಅದರ ಸದುಪಯೋಗವನ್ನು ಪಡೆಯಬೇಕು ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ ಹೇಳಿದರು. ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದಲ್ಲಿ ಅವರು ಮಾತನಾಡಿದರು. ಪ್ರಾರಂಭೋತ್ಸವದ ಅಂಗವಾಗಿ ಗಣಹೋಮ ಮತ್ತು ಸರಸ್ವತಿ ಪೂಜೆ ಕಶೆಕೋಡಿ ಸೂರ್ಯನಾರಾಯಣ ಭಟ್, ಶಶಿಕಾಂತ ಭಟ್, ಪ್ರಕಾಶ್ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ

ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಮತ್ತೋರ್ವ ಆರೋಪಿ ಬಂಧನ

ಬೆಳ್ಳಾರೆ: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಎನ್‌ಐಎ ಇಂದು ಬಂಧಿಸಿದೆ. ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಒಟ್ಟು 19 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಮತ್ತೋರ್ವ ಆರೋಪಿ ಬಂಧನ Read More »

ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಮುಕುಂದ ಬಜತ್ತೂರು ಆಯ್ಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಕೃಷಿಕ ಮುಕುಂದ ಬಜತ್ತೂರು ಆಯ್ಕೆಯಾಗಿದ್ದಾರೆ. ಬೂತ್ ಅಧ್ಯಕ್ಷರಿಂದ ಮಂಡಲ ಮಟ್ಟದವರೆಗೆ ವಿವಿಧ ಜವಾಬ್ದಾರಿ ನಿರ್ವಹಿಸಿದ ಅವರು ಬೂತ್ ಅಧ್ಯಕ್ಷರಾಗಿ, ಬಜತ್ತೂರು ಗ್ರಾಮ ಬಿಜೆಪಿ ಕಾರ್ಯದರ್ಶಿಯಾಗಿ, ಪುತ್ತೂರು ಮಂಡಲ ಬಿಜೆಪಿ ಕಾರ್ಯದರ್ಶಿಯಾಗಿ, ಪುತ್ತೂರು ಬಿಜೆಪಿಯ ಉಪಾಧ್ಯಕ್ಷರಾಗಿ, ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಪ್ರಮುಖರಾಗಿ ಸೇವೆ ಸಲ್ಲಿಸಿದ್ದಾರೆ. ತಾಲೂಕು ಪಂಚಾಯಿತಿ ಸದಸ್ಯರಾಗಿ, ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದಾರೆ. ಸ್ಥಳಿಯ ಯುವಕಮಂಡಲ, ಭಜನಾ ಮಂಡಳಿ, ದೇವಸ್ಥಾನಗಳಲ್ಲಿ ಪ್ರಮುಖರಾಗಿ ಕೆಲಸ ಮಾಡಿದ್ದಾರೆ.

ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಮುಕುಂದ ಬಜತ್ತೂರು ಆಯ್ಕೆ Read More »

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು: ನರೇಂದ್ರ ಮೋದಿಯವರು 3 ನೇ ಬಾರಿಗೆ ಪ್ರಧಾನಿಯಾಗಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಲಾಯಿತು. ಕ್ಯಾಪ್ಟನ್ ಬ್ರಿಜೇಶ ಚೌಟರವರು ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವಂತೆ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಸರ್ವಸೇವೆ ಮಾಡಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಮತ್ತಿತರ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ವಿಧಾನಪರಿಷತ್ ಚುನಾವಣೆ ಶಾಂತಿಯುತ | ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪದವೀಧರರ ಕ್ಷೇತ್ರದಲ್ಲಿ ಶೇ.77.58, ಶಿಕ್ಷಕರ ಕ್ಷೇತ್ರದಲ್ಲಿ ಶೇ.77.24 ಮತದಾನ

ಪುತ್ತೂರು: ಕರ್ನಾಟಕ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಜೂ.3ರಂದು ಮತದಾನವ ಶಾಂತಿಯುತವಾಗಿ ನಡೆದಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಪದವೀಧರ ಕ್ಷೇತ್ರದಲ್ಲಿ ಶೇ.77.58 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಶೇ.77.24 ಮತದಾನವಾಗಿದೆ. ಪುತ್ತೂರು ವಿಧಾನ ಸಭಾ ಕ್ಷೇತ್ರದ ಪದವೀಧರರ ಕ್ಷೇತ್ರದಲ್ಲಿ ಒಟ್ಟು 2,520 ಮತದಾರರ ಪೈಕಿ 965 ಪುರುಷರು, 990 ಮಹಿಳೆಯರು ಸೇರಿದಂತೆ ಒಟ್ಟು 1955 ಮಂದಿ ಮತ ಚಲಾಯಿಸಿದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 804 ಮತದಾರರ ಪೈಕಿ 242 ಪುರುಷರು ಹಾಗೂ 379

ವಿಧಾನಪರಿಷತ್ ಚುನಾವಣೆ ಶಾಂತಿಯುತ | ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪದವೀಧರರ ಕ್ಷೇತ್ರದಲ್ಲಿ ಶೇ.77.58, ಶಿಕ್ಷಕರ ಕ್ಷೇತ್ರದಲ್ಲಿ ಶೇ.77.24 ಮತದಾನ Read More »

9/11 ಸಮಸ್ಯೆಗೆ ಮುಕ್ತಿ ನೀಡಿದ ಶಾಸಕ ಅಶೋಕ್ ರೈ | ಹತ್ತು ದಿನದೊಳಗೆ ಗ್ರಾಪಂ ನಲ್ಲೇ 9/11 ವ್ಯವಸ್ಥೆ

ಪುತ್ತೂರು: 9/11 ಸಮಸ್ಯೆಗೆ ಕೊನೆಗೂ ಮುಕ್ತಿ ದೊರಕಿದೆ, ಈ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತರುವ ಮೂಲಕ ಶಾಸಕ ಅಶೋಕ್ ರೈ ಯವರು ಜನ ಸಾಮಾನ್ಯರ ದ್ವನಿಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ 9/11 ಸಮಸ್ಯೆ ಸೃಷ್ಟಿಯಾಗಿದೆ. ಈ ಹಿಂದೆ ಗ್ರಾಪಂ ಮೂಲಕವೇ 9/11 ನೀಡಲಾಗುತ್ತಿತ್ತು. ಮನೆ ಕಟ್ಟುವವರು, ಸೈಟ್ ಗೆ ಲೋನ್ ಪಡೆಯುವಲ್ಲಿ 9/11 ಮಾಡಬೇಕಾಗಿದ್ದು  ಕಡ್ಡಾಯವಾಗಿದೆ. ಗ್ರಾಪಂ ಮೂಲಕ ನಡೆಯುತ್ತಿದ್ದ ಈ ವ್ಯವಸ್ಥೆಯನ್ನು ಕಳೆದ ಎರಡು ತಿಂಗಳ ಹಿಂದೆ ಹೈಕೋರ್ಟು ಆದೇಶದಂತೆ ಬದಲಾವಣೆ ಮಾಡಿದ್ದು 9/11 ಪಡೆಯಬೇಕಾದರೆ

9/11 ಸಮಸ್ಯೆಗೆ ಮುಕ್ತಿ ನೀಡಿದ ಶಾಸಕ ಅಶೋಕ್ ರೈ | ಹತ್ತು ದಿನದೊಳಗೆ ಗ್ರಾಪಂ ನಲ್ಲೇ 9/11 ವ್ಯವಸ್ಥೆ Read More »

ಭಾರೀ ಮಳೆ | ನೀರಿನಿಂದ ಆವೃತವಾದ ರಸ್ತೆ

ಪುತ್ತೂರು: ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ನಗರದಲ್ಲಿ ರಸ್ತೆಯೆಲ್ಲಾ ನೀರಿನಿಂದ ಆವೃತವಾಗಿತ್ತು. ಮಳೆಯ ಪರಿಣಾಮ ಕೋರ್ಟ್ ರಸ್ತೆಯಲ್ಲಿರುವ ವಿಜಿತ್ ಜ್ಯುವೆಲ್ಲರ್ಸ್ ಅಂಗಡಿಗೆ ನೀರು ನುಗ್ಗಿದೆ. ದರ್ಬೆ ಪರಿಸರದಲ್ಲಿ ರಸ್ತೆಯೆಲ್ಲಾ ನೀರಿನಿಂದ ಆವೃತವಾಗಿ ನದಿಯಂತಾಗಿತ್ತು. ಮಳೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಯಿತು.

ಭಾರೀ ಮಳೆ | ನೀರಿನಿಂದ ಆವೃತವಾದ ರಸ್ತೆ Read More »

ಪುತ್ತೂರು ಸರಕಾರಿ ಆಸ್ಪತ್ರೆಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಭೇಟಿ | ಸ್ಕ್ಯಾನ್ ಆ್ಯಂಡ್ ಶೇರ್ ವ್ಯವಸ್ಥೆ ಜಾರಿಗೆ ತರುವಂತೆ ಸೂಚನೆ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸೋಮವಾರ ಭೇಟಿ ನೀಡಿದರು. ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆಯ ಹೆಚ್ಚಳ ನೀಡಿ ತಕ್ಷಣ ಸ್ಕ್ಯಾನ್ ಆ್ಯಂಡ್ ಶೇರ್ ವ್ಯವಸ್ಥೆ ಜಾರಿಗೆ ತರುವಂತೆ ಸೂಚನೆ ನೀಡಿದರು. ರೋಗಿಗಳು ಸ್ಕ್ಯಾನ್ ಮಾಡಿ ಟೋಕನ್ ವ್ಯವಸ್ಥೆ ಪಡೆದುಕೊಳ್ಳಬಹುದು. ಇದರಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕಾಯುವ ಪರಿಸ್ಥಿತಿ ತಪ್ಪಲಿದೆ. ಈಗಾಗಲೇ ಆಸ್ಪತ್ರೆಯಲ್ಲಿ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿರುವ ಕುರಿತು ಅವರ ಗಮನಕ್ಕೆ ತರಲಾಯಿತು. ಬಳಿಕ ಆಸ್ಪತ್ರೆ, ಓಪಿಡಿ,

ಪುತ್ತೂರು ಸರಕಾರಿ ಆಸ್ಪತ್ರೆಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಭೇಟಿ | ಸ್ಕ್ಯಾನ್ ಆ್ಯಂಡ್ ಶೇರ್ ವ್ಯವಸ್ಥೆ ಜಾರಿಗೆ ತರುವಂತೆ ಸೂಚನೆ Read More »

ಪುತ್ತೂರು ಸರಕಾರಿ ಆಸ್ಪತ್ರೆಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಭೇಟಿ | ಸ್ಕ್ಯಾನ್ ಆ್ಯಂಡ್ ಶೇರ್ ವ್ಯವಸ್ಥೆ ಜಾರಿಗೆ ತರುವಂತೆ ಸೂಚನೆ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸೋಮವಾರ ಭೇಟಿ ನೀಡಿದರು. ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆಯ ಹೆಚ್ಚಳ ನೀಡಿ ತಕ್ಷಣ ಸ್ಕ್ಯಾನ್ ಆ್ಯಂಡ್ ಶೇರ್ ವ್ಯವಸ್ಥೆ ಜಾರಿಗೆ ತರುವಂತೆ ಸೂಚನೆ ನೀಡಿದರು. ರೋಗಿಗಳು ಸ್ಕ್ಯಾನ್ ಮಾಡಿ ಟೋಕನ್ ವ್ಯವಸ್ಥೆ ಪಡೆದುಕೊಳ್ಳಬಹುದು. ಇದರಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕಾಯುವ ಪರಿಸ್ಥಿತಿ ತಪ್ಪಲಿದೆ. ಈಗಾಗಲೇ ಆಸ್ಪತ್ರೆಯಲ್ಲಿ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿರುವ ಕುರಿತು ಅವರ ಗಮನಕ್ಕೆ ತರಲಾಯಿತು. ಬಳಿಕ ಆಸ್ಪತ್ರೆ, ಓಪಿಡಿ,

ಪುತ್ತೂರು ಸರಕಾರಿ ಆಸ್ಪತ್ರೆಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಭೇಟಿ | ಸ್ಕ್ಯಾನ್ ಆ್ಯಂಡ್ ಶೇರ್ ವ್ಯವಸ್ಥೆ ಜಾರಿಗೆ ತರುವಂತೆ ಸೂಚನೆ Read More »

error: Content is protected !!
Scroll to Top