ಪುತ್ತೂರು

ಕನ್ನಡ ವಿಷಯದಲ್ಲಿ 100% ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಪುತ್ತೂರು: 2023- 24 ನೇ ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿ ಕನ್ನಡ ವಿಷಯದಲ್ಲಿ 100% ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವರ್ಷಂಪ್ರತಿ ನೀಡುವ ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ಶಾಲು, ಪದಕ, ಪ್ರಮಾಣ ಪತ್ರ  ಹಾಗೂ ಪುಸ್ತಕ ಉಡುಗೊರೆಗಳನ್ನು ಗಣ್ಯ ವ್ಯಕ್ತಿಗಳ ಮೂಲಕ ನೀಡಿ ಗೌರವಿಸಲಾಗುವುದು. ಪುತ್ತೂರು ತಾಲೂಕಿನ ಸರಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ  ಶಾಲೆಗಳಲ್ಲಿ […]

ಕನ್ನಡ ವಿಷಯದಲ್ಲಿ 100% ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರಕ್ಕೆ ಅರ್ಜಿ ಆಹ್ವಾನ Read More »

ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಅಧಿಕಾರಿಗಳು 24*7 ನಂತೆ ಕೆಲಸ ಮಾಡಬೇಕು | ಪ್ರಾಕೃತಿಕ ವಿಕೋಪ ಕುರಿತು ಅಧಿಕಾರಿಗಳ ಸಭೆಯಲ್ಲಿ ಜುಬಿನ್ ಮೊಹಪಾತ್ರ

ಉಪ್ಪಿನಂಗಡಿ: ಎರಡು ನದಿಗಳ ಸಂಗಮ ತಾಣವಾಗಿರುವ ಉಪ್ಪಿನಂಗಡಿಯಲ್ಲಿ ಮಳೆಗಾಲದಲ್ಲಿ ಪ್ರವಾಹದ ಭೀತಿಯೂ ಇದ್ದು, ಮುಂಬರುವ ಮಳೆಗಾಲವನ್ನು ಸಮರ್ಥವಾಗಿ ಎದುರಿಸಲು ಅಧಿಕಾರಿಗಳ ತಂಡ ಸನ್ನದ್ಧರಾಗಬೇಕು. ಪ್ರಾಕೃತಿಕ ವಿಕೋಪಗಳು ಹೇಳಿ ಬರುವಂತದ್ದಲ್ಲ. ಅನಿರೀಕ್ಷಿತವಾಗಿ ಬಂದೊದಗುತ್ತವೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು 24*7 ನಂತೆ ಕೆಲಸ ಮಾಡುವ ಮೂಲಕ ಸಾರ್ವಜನಿಕರ ನೆರವಿಗೆ ತಕ್ಷಣ ಧಾವಿಸಿ ಬರಬೇಕು ಎಂದು ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮೊಹಪಾತ್ರ ತಿಳಿಸಿದರು. ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಾಲಯದ ಸಭಾಂಗಣದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರಾಕೃತಿಕ ವಿಕೋಪದ ಬಗ್ಗೆ ಅಧಿಕಾರಿಗಳೊಂದಿಗೆ

ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಅಧಿಕಾರಿಗಳು 24*7 ನಂತೆ ಕೆಲಸ ಮಾಡಬೇಕು | ಪ್ರಾಕೃತಿಕ ವಿಕೋಪ ಕುರಿತು ಅಧಿಕಾರಿಗಳ ಸಭೆಯಲ್ಲಿ ಜುಬಿನ್ ಮೊಹಪಾತ್ರ Read More »

ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಕೆನರಾ ವಲಯ ಕ್ರೀಡಾಕೂಟ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆನರಾ ವಲಯ ಕ್ರೀಡಾಕೂಟ, ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರೋಟ್ರಾಕ್ಟ್ ಕ್ಲಬ್ ಹಾಗೂ ಪುತ್ತೂರು ರೋಟ್ರಾಕ್ಟ್ ಕ್ಲಬ್  ಜಂಟಿ ಆಶ್ರಯದಲ್ಲಿ ಕೆನರಾ ವಲಯ ಮಟ್ಟದ ಕ್ರೀಡಾಕೂಟ ನಡೆಯಿತು. ಸಭಾ ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿ ಕೆ ಮಾತನಾಡಿ, ಕ್ರೀಡೆ ಪ್ರತಿಯೊಬ್ಬ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅಗತ್ಯ ಎಂದರು. ವಿದ್ಯಾರಶ್ಮಿ ರೋಟ್ರಾಕ್ಟ್ ಕ್ಲಬ್ ಅಧ್ಯಕ್ಷ ಶಮೀರ್ ಅಧ್ಯಕ್ಷತೆ ವಹಿಸಿದ್ದರು.

ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಕೆನರಾ ವಲಯ ಕ್ರೀಡಾಕೂಟ Read More »

ಅಕ್ಷಯ ಕಾಲೇಜಿನಲ್ಲಿ BCA with Artificial Intelligence & Cyber security ಕುರಿತು ಎರಡು ದಿನದ ಕಾರ್ಯಾಗಾರ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ  BCA with Artificial Intelligence & Cyber security ಕುರಿತು ವಿದ್ಯಾರ್ಥಿಗಳಿಗೆ ಎರಡು ದಿನದ ಕಾರ್ಯಾಗಾರ ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳಿಗೆ ನಿಯೋ ಇನ್ನೊವೇಶನ್ಸ್ & ಸ್ಕಿಲ್ಸ್ ಸಂಸ್ಥೆಯ ಸಹಯೋಗದೊಂದಿಗೆ ಅರ್ಟಿಫಿಷಿಯಲ್ ಇಂಟೆಲಿಜೆನ್ಸಿ ವಿದ್ಯಾರ್ಥಿಗಳಿಗೆ ’ಪೈತಾನ್ ‘ ಕುರಿತಾಗಿ ಡಾಟಾ ಅನಾಲಿಸ್ಟ್, ಸಂಶೋದಕ ಸ್ಯಾಮ್ ಸುಂದರ್ ಸಿಂಗ್ ಮಾಹಿತಿ ನೀಡಿದರು. ಕಾರ್ಯಗಾರದಲ್ಲಿ 60 ವಿದ್ಯಾರ್ಥಿಗಳು, ಹಾಗೂ  ಬಿ.ಸಿ.ಎ ವಿಭಾಗದ ಮುಖ್ಯಸ್ಥರು ಉಪನ್ಯಾಸಕರು ಪಾಲ್ಗೊಂಡಿದ್ದರು.

ಅಕ್ಷಯ ಕಾಲೇಜಿನಲ್ಲಿ BCA with Artificial Intelligence & Cyber security ಕುರಿತು ಎರಡು ದಿನದ ಕಾರ್ಯಾಗಾರ Read More »

ರೌಡಿಶೀಟರ್ ಗಳನ್ನು ಮಟ್ಟ ಹಾಕುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕು : ಸಂಜೀವ ಮಠಂದೂರು| ಸಂಜೀವ ಮಠಂದೂರು ಅವರ ಮೇಲೆ ಮಾಡಿದ ಮಾನಹಾನಿ ಬಿಜೆಪಿಗೆ ಮಾಡಿದ ಮಾನಹಾನಿ | ಶಾಸಕರ ಪಿಸ್ತೂಲ್ ಆಟ ಇಲ್ಲಿ ನಡೆಯುವುದಿಲ್ಲ : ಹರಿಕೃಷ್ಣ ಬಂಟ್ವಾಳ

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರ ವಿರುದ್ಧ ಅವಹೇಳನಕಾರಿಯಾಗಿ ವರ್ತಿಸಿ, ಜೀವ ಬೆದರಿಕೆ ಒಡ್ಡಿದ ಪುತ್ತೂರು ಶಾಸಕ ಆಪ್ತ, ರೌಡಿಶೀಟರ್ ಪ್ರಜ್ವಲ್ ರೈ ಯನ್ನು ಐಪಿಎಸ್ ಸೆಕ್ಷನ್ ಅಡಿ ಕೇಸು ದಾಖಲಿಸಿ ಮತ್ತೆ ಗಡಿಪಾರು ಮಾಡಬೇಕು, ಬಂಧಿಸಿ ಜೈಲಿಗಟ್ಟಬೇಕು ಎಂದು ಒತ್ತಾಯಿಸಿ ಪುತ್ತೂರು ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿ ಠಾಣಾಧಿಕಾರಿಗೆ ಶನಿವಾರ ಮನವಿ ನೀಡಲಾಯಿತು. ಮೊದಲಿಗೆ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿ ಬಳಿಕ ಮೆರವಣಿಗೆ

ರೌಡಿಶೀಟರ್ ಗಳನ್ನು ಮಟ್ಟ ಹಾಕುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕು : ಸಂಜೀವ ಮಠಂದೂರು| ಸಂಜೀವ ಮಠಂದೂರು ಅವರ ಮೇಲೆ ಮಾಡಿದ ಮಾನಹಾನಿ ಬಿಜೆಪಿಗೆ ಮಾಡಿದ ಮಾನಹಾನಿ | ಶಾಸಕರ ಪಿಸ್ತೂಲ್ ಆಟ ಇಲ್ಲಿ ನಡೆಯುವುದಿಲ್ಲ : ಹರಿಕೃಷ್ಣ ಬಂಟ್ವಾಳ Read More »

ಸಂತ ಫಿಲೋಮಿನಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ವಿದ್ಯಾರ್ಥಿಗಳು ಉತ್ಸಾಹದ ಚಿಲುಮೆಗಳಾಗಿರಬೇಕು. ದೇಶವನ್ನು ಮುಂದುವರಿಸುವ ಜವಾಬ್ದಾರಿ ವಿದ್ಯಾರ್ಥಿಗಳದ್ದು. ಈ ನಿಟ್ಟಿನಲ್ಲಿ ಕಠಿಣ ಪರಿಶ್ರಮ, ಪ್ರಾಮಾಣಿಕತೆ ಹಾಗೂ ನೈತಿಕತೆ ಇರಬೇಕು. ಯಶಸ್ಸು ಒಂದು ದಿನದಲ್ಲಿ ಬರುವಂತಹದ್ದಲ್ಲ. ಹಂತ ಹಂತವಾಗಿ ತಾಳ್ಮೆಯಿಂದ ಮುನ್ನಡೆದರೆ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಸಂತ ಫಿಲೋಮಿನಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕೆಥೋಲಿಕ್ ಶಿಕ್ಷಣ ಮಂಡಳಿ ಕಾರ್ಯದರ್ಶಿ ಅತಿ ವಂ. ಆ್ಯಂಟನಿ ಮೈಕೆಲ್ ಶೆರಾ ಅಧ್ಯಕ್ಷತೆ

ಸಂತ ಫಿಲೋಮಿನಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ Read More »

ಪತ್ರಿಕಾಗೋಷ್ಠಿ ವಿಚಾರ ಮುಂದಿಟ್ಟು ಮಾಜಿ ಶಾಸಕರಿಗೆ ಜೀವಬೆದರಿಕೆ | ಬಿಜೆಪಿ ವತಿಯಿಂದ ನಾಳೆ ತುರ್ತು ಸಭೆ

ಪುತ್ತೂರು: ಪತ್ರಿಕಾಗೋಷ್ಠಿ ವಿಚಾರವನ್ನು ಮುಂದಿಟ್ಟುಕೊಂಡು ಮಾಜಿ ಶಾಸಕರ ಕುರಿತು ಅವಹೇಳನಕಾರಿಯಾಗಿ ಸಾನಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಹಾಗೂ ಫೋನ್ ಮೂಲಕ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಲು ಮೇ 18 ರಂದು ಸಭೆ ಕರೆಯಲಾಗಿದೆ. ಬೆಳಿಗ್ಗೆ 10 ಗಂಟೆಗೆ ಪಕ್ಷದ ಕಚೇರಿಯಲ್ಲಿ ತುರ್ತು ಸಭೆ ಕರೆಯಲಾಗಿದ್ದು, ಪಕ್ಷದ ಪ್ರಮುಖರು, ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿರಬೇಕೆಂದು ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ಪ್ರಕಟಣೆಯಲ್ಲಿ ತಿಳಿಸಿದೆ. ಮೇ 17 ಶುಕ್ರವಾರ ಮಾಜಿ ಶಾಸಕ ಸಂಜೀವ ಮಠಂದೂರು

ಪತ್ರಿಕಾಗೋಷ್ಠಿ ವಿಚಾರ ಮುಂದಿಟ್ಟು ಮಾಜಿ ಶಾಸಕರಿಗೆ ಜೀವಬೆದರಿಕೆ | ಬಿಜೆಪಿ ವತಿಯಿಂದ ನಾಳೆ ತುರ್ತು ಸಭೆ Read More »

ಮೇ 19 : ಕಾವುನಲ್ಲಿ ವಿಶ್ವಕರ್ಮ ಪೂಜೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಕಾವು ಶ್ರೀ ವಿಶ್ವಕರ್ಮ ಪೂಜಾ ಸಮಿತಿ ವತಿಯಿಂದ ಶ್ರೀ ವಿಶ್ವಕರ್ಮ ಪೂಜೆ ಮೇ 19 ಭಾನುವಾರ ಬೆಳಿಗ್ಗೆ 8.30 ರಿಂದ ಕಾವು ನನ್ಯ ಜನಮಂಗಲ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 8.30 ರಿಂದ ಭಜನೆ, 9.30 ರಿಂದ ಶ್ರೀ ವಿಶ್ವಕರ್ಮ ಪೂಜೆ ಆರಂಭಗೊಳ್ಳಲಿದೆ. ಬೆಳಿಗ್ಗೆ 11ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲದ ಅಧ್ಯಕ್ಷ ವಿ.ಪುರುಷೋತ್ತಮ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಪಡುಕುತ್ಯಾರು ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ವೇ|

ಮೇ 19 : ಕಾವುನಲ್ಲಿ ವಿಶ್ವಕರ್ಮ ಪೂಜೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೋರಿಗಳ ಕಳವು | ಬಲ್ನಾಡು ಉಳ್ಳಾಲ್ತಿ ಅಮ್ಮನ ಮೊರೆ ಹೋದ ಬಜರಂಗದಳ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ 1 ರಿಂದ ನಾಪತ್ತೆಯಾಗಿರುವ ಹೋರಿಗಳ ಪತ್ತೆಗಾಗಿ ಬಜರಂಗ ದಳದವರು ದೈವದ ಮೊರೆ ಹೋಗಿದ್ದಾರೆ. ದೇವಸ್ಥಾನದ ವಠಾರದಲ್ಲೇ ಸುತ್ತುತ್ತಿದ್ದ ಎರಡು ಹೋರಿಗಳು ಕಳ್ಳತನವಾಗಿರುವ ಶಂಕೆ ವ್ಯಕ್ತಪಡಿಸಿರುವ ಬಜರಂಗದಳ ಪುತ್ತೂರು ಘಟಕ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಹೋರಿ ಅಡ್ಯನಡ್ಕ ಸಮೀಪವಿರುವ ಸಾಧ್ಯತೆ ಕಂಡು ಬಂದಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಹೋರಿ ಬದುಕಿರುವ ಬಗ್ಗೆ ಮಾಹಿತಿ ದೊರಕಿದೆ. ಹೋರಿಯನ್ನು ಮಾಂಸಕ್ಕಾಗಿ ಕೊಂಡು ಹೋಗಿರುವ ಸಾಧ್ಯತೆ ಎಂದು ಪ್ರಶ್ನಾಚಿಂತನೆಯಲ್ಲಿ ಸೂಚನೆ ದೊರಕಿದೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೋರಿಗಳ ಕಳವು | ಬಲ್ನಾಡು ಉಳ್ಳಾಲ್ತಿ ಅಮ್ಮನ ಮೊರೆ ಹೋದ ಬಜರಂಗದಳ Read More »

ರಾಂಗ್ ಸೈಡ್ ನಲ್ಲಿ ಬಂದ ವಿದ್ಯಾರ್ಥಿಗಳ ಬೈಕ್ : ಕಾರಿಗೆ ಡಿಕ್ಕಿ

ಪುತ್ತೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ರಾಂಗ್ ಸೈಡ್ ನಿಂದ ಬಂದು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ದರ್ಬೆ ಸಮೀಪ ನಡೆದಿದೆ. ಆಕ್ಟಿವಾದಲ್ಲಿ ಮೂವರು ವಿದ್ಯಾರ್ಥಿಗಳು ಹೆಲ್ಮಟ್ ಧರಿಸದೆ ರಾಂಗ್ ಸೈಡ್ ನಿಂದ ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ರಾಂಗ್ ಸೈಡ್ ನಲ್ಲಿ ಬಂದ ವಿದ್ಯಾರ್ಥಿಗಳ ಬೈಕ್ : ಕಾರಿಗೆ ಡಿಕ್ಕಿ Read More »

error: Content is protected !!
Scroll to Top