ಸವಾಲನ್ನು ಸ್ವೀಕರಿಸಲು ಪೂರಕ ಶಿಕ್ಷಣ ನಮಗೆ ದೊರಕಬೇಕು: ಮುರಳಿ ಕೃಷ್ಣ ಕೆ.ಎನ್. | ವಿವೇಕಾನಂದ ಮಹಾವಿದ್ಯಾಲಯದಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ
ಪುತ್ತೂರು: ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಂಕವನ್ನು ಗಳಿಸುವುದು ಮಾತ್ರವಲ್ಲದೇ ಜೀವನದಲ್ಲಿ ಒಳ್ಳೆಯ ಮೌಲ್ಯಗಳನ್ನು ಕಲಿತು ಪರಿಪೂರ್ಣರಾಗಿ ಇಲ್ಲಿಂದ ತೆರಳಬೇಕು ಎಂಬುವುದು ವಿವೇಕಾನಂದ ಕಾಲೇಜಿನ ಮುಖ್ಯ ಉದ್ದೇಶವಾಗಿದೆ. ಈಗಿನ ವಿದ್ಯಾರ್ಥಿಗಳು ಸಂಸ್ಕೃತಿ, ಸಂಸ್ಕಾರವನ್ನು ಕಲಿಯುವುದು ತುಂಬಾ ಮುಖ್ಯ. ಅದನ್ನು ನಾವು ವಿದ್ಯಾರ್ಥಿಗಳಿಗೆ ನಿರಂತರವಾಗಿ ನೀಡುತ್ತಿದ್ದೇವೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣ ಕೆ.ಎನ್. ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಶಿಕ್ಷಕ ರಕ್ಷಕ ಸಂಘ ಹಾಗೂ ಐಕ್ಯೂಎಸಿ ಘಟಕದ […]










