ಏ.20 : ಉಚಿತ ವಾಲಿಬಾಲ್ ಬೇಸಿಗೆ ಶಿಬಿರ ಉದ್ಘಾಟನೆ | ಮಿತ್ರವೃಂದ ವಾಲಿಬಾಲ್ ಅಕಾಡೆಮಿ, ರೋಟರಿ ಕ್ಲಬ್ ಬಿರುಮಲೆ ಹಿಲ್ಸ್, ಲಿಟ್ಲ್ ಫ್ಲವರ್ ಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ ಶಿಬಿರ
ಪುತ್ತೂರು: ಮಿತ್ರವೃಂದ ವಾಲಿಬಾಲ್ ಅಕಾಡೆಮಿ, ಪುತ್ತೂರು ರೋಟರಿ ಕ್ಲಬ್ ಬಿರಮಲೆ ಹಿಲ್ಸ್ ಹಾಗೂ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಸಂಯುಕ್ತ ಆಶ್ರಯದಲ್ಲಿ ಒಂದು ತಿಂಗಳ ಕಾಲ ನಡೆಯುವ ಉಚಿತ ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರ ಏ.20 ರಂದು ದರ್ಬೆ ಲಿಟ್ಲ್ ಫ್ಲವರ್ ಶಾಲಾ ಮೈದಾನದಲ್ಲಿ ಆರಂಭಗೊಳ್ಳಲಿದೆ ಎಂದು ಮಿತ್ರವೃಂದ ವಾಲಿಬಾಲ್ ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕೆಮ್ಮಿಂಜೆ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ 40 ವರ್ಷಗಳಿಂದ ಮಿತ್ರವೃಂದ ವಾಲಿಬಾಲ್ ಅಕಾಡೆಮಿ ಗ್ರಾಮೀಣ ಪ್ರದೇಶದ ಆಸಕ್ತರಿಗೆ […]










