ಪುತ್ತೂರು

ಪುತ್ತಿಲ ಭೇಟಿ ಬಳಿಕ ಅವರ ಮೇಲಿನ ಗೌರವ ಹೆಚ್ಚಾಗಿದೆ, ಅವರನ್ನು ವಿಧಾನಸೌಧದಲ್ಲಿ ಕಾಣಲು ಬಯಸುತ್ತೇನೆ | ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪ್ರತಾಪಸಿಂಹ

ಪುತ್ತೂರು: ಮಂಗಳವಾರ ಸ್ವಾಮಿ ಕಲಾ ಮಂದಿರದಲ್ಲಿ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಗೆ ಮೈಸೂರು ಕೊಡಗು ಸಂಸದ ಪ್ರತಾಪಸಿಂಹ ಅವರು ಅರುಣ್ ಕುಮಾರ್ ಪುತ್ತಿಲರನ್ನು ಕರೆದು ಬಳಿಯಲ್ಲಿ ಕೂರಿಸಿಕೊಂಡ ವೀಡಿಯೋ ವೈರಲ್ ಆಗಿತ್ತು. ಭಾಷಣದಲ್ಲೂ 2023ರ ವಿಧಾನಸಭಾ ಚುನಾವಣೆಯಲ್ಲಿ ಅರುಣ್ ಪುತ್ತಿಲರ ಪಕ್ಷೇತರ ಸ್ಪರ್ಧೆ ಬಗ್ಗೆ ಮಾತನಾಡಿದ ಪ್ರತಾಪ ಸಿಂಹ , ಒಬ್ಬ ವ್ಯಕ್ತಿಯ ಪರವಾಗಿ ನಿಂತು ನ್ಯಾಯ ಕೊಡಬೇಕು. ಕೇಳಿದ ಕ್ಷೇತ್ರ ಇದ್ದರೆ ಪುತ್ತೂರು ಎಂಬ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇದೀಗ […]

ಪುತ್ತಿಲ ಭೇಟಿ ಬಳಿಕ ಅವರ ಮೇಲಿನ ಗೌರವ ಹೆಚ್ಚಾಗಿದೆ, ಅವರನ್ನು ವಿಧಾನಸೌಧದಲ್ಲಿ ಕಾಣಲು ಬಯಸುತ್ತೇನೆ | ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪ್ರತಾಪಸಿಂಹ Read More »

ಸ್ವರ್ಣ ಸಾಧನಾ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಆಯ್ಕೆ

ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಮಾಡುವ ‘ಸ್ವರ್ಣ ಸಾಧನಾ ಪ್ರಶಸ್ತಿ’ಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿಯವರು ಆಯ್ಕೆಯಾಗಿದ್ದಾರೆ. ಸಂಘದ ವತಿಯಿಂದ 2022ರಲ್ಲಿ ಪ್ರಾರಂಭಗೊಂಡ ವಿವಿಧ ಕ್ಷೇತ್ರದ ಸಾಧಕರಿಗೆ ನೀಡುತ್ತಿರುವ ಪ್ರಶಸ್ತಿಗೆ ಈ ವರ್ಷ ಖ್ಯಾತ ಸಾಹಿತಿ, ಕವಿ ಸುಬ್ರಾಯ ಚೊಕ್ಕಾಡಿಯವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮೇ 4 ರಂದು ಪುತ್ತೂರಿನ ‘ಜೈನ ಭವನ’ದಲ್ಲಿ ಜರಗಲಿದ್ದು, ಪ್ರಶಸ್ತಿ 15,000 ರೂಪಾಯಿ ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆಯೆಂದು ಸಂಘದ ಅಧ್ಯಕ್ಷ

ಸ್ವರ್ಣ ಸಾಧನಾ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಆಯ್ಕೆ Read More »

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ಧ : ಸಂಸದ ನಳಿನ್ ಕುಮಾರ್ ಕಟೀಲ್‍ | ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆ

ಪುತ್ತೂರು: ಜಗತ್ತಿನಲ್ಲಿ ಶ್ರೇಷ್ಠ ಭಾರತವನ್ನು ನಿರ್ಮಾಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ನಾಯಕರಾಗಿ ಹೊರಹೊಮ್ಮಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400 ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಸಂಸದ, ರಾಜಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳವಾರ ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಸ್ವಾಮಿ ಕಲಾಮಂದಿರದಲ್ಲಿ ಪುತ್ತೂರು ಬಿಜೆಪಿ ವಿಧಾನಸಭಾ ವತಿಯಿಂದ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಪರಿವರ್ತನೆಯ ಗಾಳಿ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ಧ : ಸಂಸದ ನಳಿನ್ ಕುಮಾರ್ ಕಟೀಲ್‍ | ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆ Read More »

ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಸ್ವಾಗತಿಸಿದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು : ಬಿಜೆಪಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ಬೈಪಾಸ್ ಸ್ವಾಮಿ ಕಲಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ರನ್ನು ಮಾಜಿ ಶಾಸಕ ಸಂಜೀವ ಮಠಂದೂರು ಶಾಲು ಹಾಕಿ ಸ್ವಾಗತಿಸಿದರು. ಹಲವು ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಸ್ವಾಗತಿಸಿದ ಮಾಜಿ ಶಾಸಕ ಸಂಜೀವ ಮಠಂದೂರು Read More »

ಹರ್ಷ ಶೋ ರೂಂನ ಗೋದಾಮಿನಲ್ಲಿ ಬೆಂಕಿ | ಕೋಟ್ಯಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ

ಪುತ್ತೂರು: ದರ್ಬೇಯಲ್ಲಿ ಕಾರ್ಯಾಚರಿಸುತ್ತಿರುವ ಗೃಹೋಪಯೋಗಿ ಹಾಗೂ ಇಲೆಕ್ಟ್ರಾನಿಕ್ಸ್ ವಸ್ತುಗಳ ಮಳಿಗೆ  ಹರ್ಷ ಶೋ ರೂಂ, ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಕೋಟ್ಯಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಇಂದು ಮುಂಜಾನೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಅವಘಡಕ್ಕೆ ಕಾರಣಗಳು ತಿಳಿದು ಬರಬೇಕಿದೆ.

ಹರ್ಷ ಶೋ ರೂಂನ ಗೋದಾಮಿನಲ್ಲಿ ಬೆಂಕಿ | ಕೋಟ್ಯಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ Read More »

ನಿಷೇಧಿತ ಕೇರಳ ರಾಜ್ಯ ಲಾಟರಿ ಮಾರಾಟ | ಓರ್ವ ಪೊಲೀಸ್ ವಶಕ್ಕೆ

ಪುತ್ತೂರು: ನಿಷೇಧಿತ ಕೇರಳ ಲಾರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪಡ್ನೂರು ನಿವಾಸಿ ಲಕ್ಷ್ಮಣ ಬಂಧಿತ ವ್ಯಕ್ತಿ ಇಂದು ಮಧ್ಯಾಹ್ನ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಲಿನೆಟ್ ಜಂಕ್ಷನ್ ಬಳಿ ಪಾನ್‍ ಬೀಡ ಅಂಗಡಿಯಲ್ಲಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿದ ಪುತ್ತೂರು ನಗರ ಪೊಲೀಸ್ ಠಾಣಾ ಉಪನಿರೀಕ್ಷಕ ನಂದಕುಮಾರ್ ಎಂ.ಎಂ. ಹಾಗೂ ಸಿಬ್ಬಂದಿಗಳು ಲಕ್ಷ್ಮಣ ಎಂಬಾತನನ್ನು ವಿಚಾರಿಸಿ 1,550 ಮೌಲ್ಯದ 31 ಲಾಟರಿ ಹಾಗೂ ಮಾರಾಟ ಮಾಡಿದ ಹಣ 1100 ರೂ.

ನಿಷೇಧಿತ ಕೇರಳ ರಾಜ್ಯ ಲಾಟರಿ ಮಾರಾಟ | ಓರ್ವ ಪೊಲೀಸ್ ವಶಕ್ಕೆ Read More »

ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ | ವೈಭವದಿಂದ ನಡೆದ ಬ್ರಹ್ಮರಥೋತ್ಸವ

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ನೂತನವಾಗಿ ಸಮರ್ಪಣೆಗೊಂಡ ಬ್ರಹ್ಮರಥದ ರಥೋತ್ಸವ ಸಾವಿರಾರು ಭಕ್ತಾದಿಗಳ ಜಯಘೋಷದೊಂದಿಗೆ ಭಾನುವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ಭಾನುವಾರ ಬೆಳಿಗ್ಗೆ ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ನವಕ ಕಲಶ ಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಅಪ್ಪಂಗಾಯ, ನವಕ ಕಲಶಾಭಿಷೇಕ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 7 ರಿಂದ ಶ್ರೀ ದೇವರ ಬಲಿ ಹೊರಟು

ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ | ವೈಭವದಿಂದ ನಡೆದ ಬ್ರಹ್ಮರಥೋತ್ಸವ Read More »

ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿ ದರ್ಬೆ ಬೈಪಾಸ್ ಜಂಕ್ಷನಿನ ಆರ್.ಸಿ.ಬಿ. ಎನ್’ಕ್ಲೇವ್’ನಲ್ಲಿ ಉದ್ಘಾಟನೆಗೊಂಡಿತು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಅಶೋಕ್ ಕುಮಾರ್ ರೈ, ಅಭ್ಯರ್ಥಿ ಪದ್ಮರಾಜ್ ಆರ್. ಕಚೇರಿಯನ್ನು ಉದ್ಘಾಟಿಸಿದರು. ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ನೈಋತ್ಯ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ, ಡಾ. ರಾಜಾರಾಮ್,  ಎಂ.ಎಸ್. ಮಹಮ್ಮದ್, ಮಹಮ್ಮದ್ ಆಲಿ, ಮಹಮ್ಮದ್ ಬಡಗನ್ನೂರು, ಸೇವಾದಳದ ಜಿಲ್ಲಾಧ್ಯಕ್ಷ

ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ Read More »

ರಜಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಶಿಬಿರ ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳು |  ವಿದ್ಯಾರ್ಥಿವೇತನಗಳಿಗಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿಶಿಷ್ಟ ತರಬೇತಿ ಶಿಬಿರ

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು 5ನೇ ತರಗತಿ ವಿದ್ಯಾರ್ಥಿಗಳಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯಕೊಂದು ಅಡಿಗಲ್ಲು ಹಾಕುವ ನಿಟ್ಟಿನಲ್ಲಿ ವಿಶಿಷ್ಟವಾದ ತರಬೇತಿ ಶಿಬಿರವನ್ನು ಆಯೋಜಿಸುತ್ತಿದೆ. ನವೋದಯ /ಸೈನಿಕ್ / ಆದರ್ಶ / ಮೊರಾರ್ಜಿ / ಒಲಂಪಿಯಾಡ್ ಪ್ರವೇಶ ಪರೀಕ್ಷೆಗಳು ಮತ್ತು ಜೆಇಇ / ನೀಟ್ / ಎನ್ ಡಿ ಎ / ಕ್ಲಾಟ್ / ಎನ್.ಎಂ.ಎಂ.ಎಸ್ / ಕೆ.ಎ.ಎಸ್ / ಐ.ಎ.ಎಸ್ ವರೆಗಿನ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ರಿಲಯನ್ಸ್

ರಜಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಶಿಬಿರ ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳು |  ವಿದ್ಯಾರ್ಥಿವೇತನಗಳಿಗಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿಶಿಷ್ಟ ತರಬೇತಿ ಶಿಬಿರ Read More »

ಈ ಬಾರಿ ದ.ಕ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 3.50 ಲಕ್ಷ ಮತಗಳ ಅಂತರದಿಂದ ಗೆಲುವು | ಪುತ್ತೂರು ಬಿಜೆಪಿ ಚುನಾವಣಾ ಕಚೇರಿ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪುತ್ತೂರು ಚುನಾವಣಾ ಕಚೇರಿ ಪಕ್ಷದ ಕಚೇರಿ ಬಳಿ ಸೋಮವಾರ ಉದ್ಘಾಟನೆಗೊಂಡಿತು. ಸಂಸದ ಹಾಗೂ ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸುವ ಮೂಲಕ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರೂ `ನನ್ನ ಮತಗಟ್ಟೆಯಲ್ಲಿ ಅತಿ ಹೆಚ್ಚು ಮತ ಗಳಿಸಿಕೊಡುತ್ತೇನೆ ಎಂಬ ಸಂಕಲ್ಪ ಮಾಡಬೇಕು. ದೇಶದ ದಿಕ್ಕಿನ ಬದಲಾವಣೆ, ಜಗದ್ವಂದ್ಯ ಭಾರತ ನಿರ್ಮಾಣಕ್ಕಾಗಿ ಈ ಚುನಾವಣೆ ನಡೆಯುತ್ತಿದೆ. ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದ ಯುವ ನಾಯಕನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. 34

ಈ ಬಾರಿ ದ.ಕ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 3.50 ಲಕ್ಷ ಮತಗಳ ಅಂತರದಿಂದ ಗೆಲುವು | ಪುತ್ತೂರು ಬಿಜೆಪಿ ಚುನಾವಣಾ ಕಚೇರಿ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್ Read More »

error: Content is protected !!
Scroll to Top