ಪುತ್ತೂರು

ಸಾಮಾಜಿಕ ಜಾಲತಾಣದ ವಿಚಾರ | ಮನೆ ವಠಾರಕ್ಕೆ ಅಕ್ರಮವಾಗಿ ಪ್ರವೇಶಿಸಿ ಜೀವ ಬೆದರಿಕೆ | ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣದ ಬರವಣಿಗೆ ವಿಚಾರದಲ್ಲಿ 15 ಅಧಿಕ ಜನರು ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯವಾಗಿ ನಿಂಧಿಸಿ ಜೀವ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಜ್ವಲ್ ರೈ, ಸನತ್ ರೈ ಸಹಿತ 15 ಮಂದಿಯ ಮೇಲೆ ಪ್ರಕರಣದಾಖಲಾಗಿದೆ. ಬಿಜೆಪಿ ಸಾಮಾಜಿ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸದಸ್ಯ ತಾರಿಗುಣ್ಣ ನಿವಾಸಿ ಜಯಾನಂದ ಕೆ. (41) ದೂರು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಬರೆದಿರುವ ಬ್ಯಾನರ್ ಪ್ರದರ್ಶಿಸಿಕೊಂಡು ಚೆಂಡೆಗಳನ್ನು ಜೋರಾಗಿ ಬಡಿಯುತ್ತಾ ಅಕ್ರಮವಾಗಿ […]

ಸಾಮಾಜಿಕ ಜಾಲತಾಣದ ವಿಚಾರ | ಮನೆ ವಠಾರಕ್ಕೆ ಅಕ್ರಮವಾಗಿ ಪ್ರವೇಶಿಸಿ ಜೀವ ಬೆದರಿಕೆ | ಪ್ರಕರಣ ದಾಖಲು Read More »

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳೆಯರ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸಂತ ಫಿಲೋಮಿನಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಹಿಳೆಯರ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ತಂಡ ಪ್ರಥಮ, ಮೂಡಬಿದಿರೆ ಆಳ್ವಾಸ್ ಕಾಲೇಜಿನ ಕ್ರಿಕೆಟ್ ತಂಡ ದ್ವಿತೀಯ, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ತಂಡ ಹಾಗೂ ಯುನಿವರ್ಸಿಟಿ ಕಾಲೇಜು ತಂಡ ಕ್ರಮವಾಗಿ ತೃತೀಯ ಹಾಗೂ ಚತುರ್ಥ ಸ್ಥಾನಗಳನ್ನು ಪಡೆದುಕೊಂಡವು. ಸರ್ವಾಂಗೀಣ ಆಟಗಾರ್ತಿಯಾಗಿ ಬ್ರಹ್ಮಾವರ ಎಸ್ ಎಂ ಎಸ್ ಕಾಲೇಜಿನ ಲಕ್ಷ್ಮೀ, ಉತ್ತಮ ಬ್ಯಾಟರ್ ಆಗಿ ಬ್ರಹ್ಮಾವರ ಎಸ್ ಎಂ

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳೆಯರ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟ Read More »

ಲೋಕಸಭೆ ಚುನಾವಣೆ | ಪುತ್ತೂರಿನಲ್ಲಿ 9 ಮಾದರಿ ಮತಗಟ್ಟೆಗಳನ್ನು ಗುರುತಿಸಲಾಗಿದೆ | ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ

ಪುತ್ತೂರು : ಏ.26 ಹಾಗೂ ಮೇ7 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆ ಸೇರಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರ ಶಾಂತಿಯುತ ಮತದಾನ ನಡೆಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೂರ್ವ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ತಿಳಿಸಿದ್ದಾರೆ. ಭಾನುವಾರ ಆಡಳಿತ ಸೌಧದಲ್ಲಿರುವ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಚುನಾವಣೆ ಕುರಿತು ಮಾಹಿತಿ ನೀಡಿದರು. ಮಾ.28 ರಿಂದ ಏ.4 ರ ತನಕ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, ಏ.5

ಲೋಕಸಭೆ ಚುನಾವಣೆ | ಪುತ್ತೂರಿನಲ್ಲಿ 9 ಮಾದರಿ ಮತಗಟ್ಟೆಗಳನ್ನು ಗುರುತಿಸಲಾಗಿದೆ | ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ Read More »

ವೈವಾಹಿಕ ಜೀವನ ಪ್ರವೇಶಿಸಿದ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸುಶಾಂತ್ ಕೆ.

ಪುತ್ತೂರು: ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕರಾದ ಸುಶಾಂತ್ ಕೆ. ಅವರು ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಲ್ಲಾರೆ ನಿವಾಸಿ ಚಂದ್ರಾವತಿ ಹಾಗೂ ಸೀತಾರಾಮ ಗೌಡ ದಂಪತಿ ಪುತ್ರಿ ಕೃತಿಕಾ ಎ.ಎಸ್‍. ಅವರನ್ನು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ವಿವಾಹವಾಗುವ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಹಲವಾರು ಗಣ್ಯರು ವಿವಾಹ ಸಮಾರಂಭಕ್ಕೆ ಆಗಮಿಸಿ ವಧು-ವರರನ್ನು ಆಶೀರ್ವದಿಸಿದರು.

ವೈವಾಹಿಕ ಜೀವನ ಪ್ರವೇಶಿಸಿದ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸುಶಾಂತ್ ಕೆ. Read More »

ಕಾರು-ಬೈಕ್ ಅಪಘಾತ : ಬೈಕ್ ಸವಾರ ಗಂಭೀರ

ವಿಟ್ಲ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಬದನಾಜೆಯಲ್ಲಿ ಭಾನುವಾರ ನಡೆದಿದೆ. ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ಆಲ್ಟೋ ಕಾರು ಹಾಗೂ ಎಬ್ಬಿ ಬೈಕ್ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ಕಾರು-ಬೈಕ್ ಅಪಘಾತ : ಬೈಕ್ ಸವಾರ ಗಂಭೀರ Read More »

ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೊದಿಲ್ಲ : ಅರುಣ್ ಕುಮಾ‌ರ್ ಪುತ್ತಿಲ

ಪುತ್ತೂರು: ಇವತ್ತು ನಾವೆಲ್ಲ ಕಾರ್ಯಾಲಯದಲ್ಲಿ ಭಾಗಿಯಾಗಿ ಮುಕ್ತ ಮನಸ್ಸಿನಿಂದ ಜೊತೆಯಾಗಿದ್ದೇವೆ. ಈ ರೀತಿಯ ವಾತಾವರಣ ಮುಂದಿನ ನೂರಾರು ವರ್ಷಗಳ ಕಾಲ ಇರಲಿ. ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೊದಿಲ್ಲ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಲಿ ಎಂದು ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದರು. ಅವರು ಇಂದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷದ ಸ್ವಾಗತ ಪಡೆದು ಮಾತನಾಡಿದರು. ಈ ಹಿಂದೆ ಒಂದಷ್ಟು ಗೊಂದಲ ಆಗಿರುವುದು ಸಹಜ. ನಾನಿದನ್ನು ಒಪ್ಪಿಕೊಳ್ಳುತ್ತೇನೆ. ಎರಡು ಭಾಗಗಳಿಂದಲೂ ನೋವು ಆಗಿರುವುದು ಸಹಜ. ಆದರೆ

ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೊದಿಲ್ಲ : ಅರುಣ್ ಕುಮಾ‌ರ್ ಪುತ್ತಿಲ Read More »

ಕಂದಾಯ ಹಾಗೂ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಸಮಸ್ಯೆ |  ಸರಿಪಡಿಸುವಂತೆ ಅಧಿವಕ್ತಾ ಪರಿಷತ್‍ ನಿಂದ ತಹಶೀಲ್ದಾರ್ ಗೆ ಮನವಿ

ಪುತ್ತೂರು: ಸರಕಾರಿ ಕೆಲಸಗಳಲ್ಲಿ ಸಾರ್ವಜನಿಕರಿಗೆ ಉಂಟಾಗುವ ತೊಂದರೆಗಳನ್ನು ಸರಿಪಡಿಸುವಂತೆ ಪುತ್ತೂರು ಅಧಿವಕ್ತಾ ಪರಿಷತ್‍ ವತಿಯಿಂದ ಪುತ್ತೂರು ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ಕಚೇರಿ ಮತ್ತು ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಗೆ ತಮ್ಮ ಕೆಲಸ ಕಾರ್ಯಗಳ ಜತೆ ತಾಲೂಕು ಕಚೇರಿಯ ಅಭಿಲೇಖಾಲಯದಲ್ಲಿ ನಕಲು ಪ್ರತಿಗಳನ್ನು ಪಡೆಯುವಲ್ಲಿ ಅವ್ಯವಸ್ಥೆ ಬಗ್ಗೆ, ರೆವೆನ್ಯೂ ಅದಾಲತ್ತುಗಳ ಸ್ಥಾಪನೆ ಮಾಡುವ ಕುರಿತಾಗಿ, ನಕ್ಷೆಗಳು ಮತ್ತು ಪ್ಲಾಟಿಂಗಿಗೆ ಸಂಬಂಧಿಸಿದ ಸಮಸ್ಯೆಗಳು, ಕಡತಗಳ ಮಂದಗತಿಯ ವಿಲೇವಾರಿಯ ಸಮಸ್ಯೆ, ಪ್ರತಿ ಗ್ರಾಮಕ್ಕೂ ಒಬ್ಬ ಗ್ರಾಮಕರಣಿಕರನ್ನು ನೇಮಿಸುವ ಕುರಿತಾಗಿ ಮತ್ತು ಸಿವಿಲ್

ಕಂದಾಯ ಹಾಗೂ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಸಮಸ್ಯೆ |  ಸರಿಪಡಿಸುವಂತೆ ಅಧಿವಕ್ತಾ ಪರಿಷತ್‍ ನಿಂದ ತಹಶೀಲ್ದಾರ್ ಗೆ ಮನವಿ Read More »

ಕಾರು-ಸ್ಕೂಟರ್ ಡಿಕ್ಕಿ : ಸ್ಕೂಟರ್ ಸವಾರನಿಗೆ ಗಾಯ

ಪುತ್ತೂರು: ನೆಹರೂನಗರದ ಮಾಸ್ಟರ್ ಪ್ಲಾನರಿ ಬಳಿ ಪೋರ್ಡ್‍ ಕಾರು ಹಾಗೂ ಆ್ಯಕ್ಸಿಸ್ ಡಿಕ್ಕಿ ಹೊಡೆದುಕೊಂಡು ಆ್ಯಕ್ಸಿಸ್ ಸವಾರ ಗಾಯಗೊಂಡ ಘಟನೆ ಇದೀಗ ನಡೆದಿದೆ. ಗಾಯಗೊಂಡ ಆ್ಯಕ್ಸಿಸ್ ಸವಾರನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಸ್ಟರ್ ಪ್ಲಾನರಿ ಎದುರು ಪೋರ್ಡ್ ಕಾರು ಆಕ್ಸಿಸ್‍ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನರೀಕ್ಷಿಸಲಾಗುತ್ತಿದೆ. ಈ ಪ್ರದೇಶ ಅಪಘಾತ ವಲಯಗಳಾಗಿದ್ದು, ಇಲ್ಲಿ ಅಪಘಾತಗಳು ಜಾಸ್ತಿಯಾಗುತ್ತಿವೆ. ಈ ನಿಟ್ಟಿನಲ್ಲಿ ಈ ಪ್ರದೇಶದಲ್ಲಿ ಎಚ್ಚರಿಕೆ ಫಲಕಗಳನ್ನು ಆಡಳಿತ ಅಳವಡಿಸಬೇಕಾಗಿದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

ಕಾರು-ಸ್ಕೂಟರ್ ಡಿಕ್ಕಿ : ಸ್ಕೂಟರ್ ಸವಾರನಿಗೆ ಗಾಯ Read More »

ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ | ಒಂದೂವರೆ ಕೋಟಿ ವೆಚ್ಚದ ಕಟ್ಟಡಕ್ಕೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥರಿಂದ ಶಿಲಾನ್ಯಾಸ

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ಕಾಣಿಯೂರು ಪ್ರಧಾನ ಕಚೇರಿ ಆವರಣದಲ್ಲಿ ನಡೆಯಿತು. ಸಂಘದ ಶತಮಾನೋತ್ಸವದ ನೆನಪಿಗಾಗಿ ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡಕ್ಕೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಗಳು ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್‍ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಉಪಾದ್ಯಕ್ಷ ಬಾಲಕೃಷ್ಣ

ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ | ಒಂದೂವರೆ ಕೋಟಿ ವೆಚ್ಚದ ಕಟ್ಟಡಕ್ಕೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥರಿಂದ ಶಿಲಾನ್ಯಾಸ Read More »

ಸೋಲೇ ಯಶಸ್ಸಿನ ಮೂಲ : ಬಿ.ವಿ.ಸೂರ್ಯನಾರಾಯಣ | ಅಂಬಿಕಾ ಪಿಯು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ

ಪುತ್ತೂರು: ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವನೆ ಹೊಂದುವುದು ಅತೀ ಅಗತ್ಯವಾಗಿದೆ. ಸೋಲೇ ಗೆಲುವಿಗೆ ಸೋಪಾನ ಎನ್ನುವಂತೆ, ಸೋಲನ್ನು ಎದುರಿಸಿ ಜೀವನದ ಒಂದು ಭಾಗ ಎಂದು ಸ್ವೀಕರಿಸಿದಾಗ ಯಶಸ್ಸು ಖಂಡಿತ ಸಾಧ್ಯ. ಕಠಿಣ ಪರಿಶ್ರಮದ ಜೊತೆಗೆ ಬುದ್ಧಿವಂತಿಕೆ ಉಪಯೋಗಿಸಿ ಕಾರ್ಯ ಸಾಧಿಸಿದಾಗ ಯಶಸ್ಸು ಲಭಿಸುತ್ತದೆ ಎಂದು ವಿಶ್ರಾಂತ ಪ್ರಾಚಾರ್ಯ ಬಿ. ವಿ. ಸೂರ್ಯನಾರಾಯಣ ಹೇಳಿದರು. ಅವರು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪಿಯು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಪ್ರಯತ್ನ ಅತೀ

ಸೋಲೇ ಯಶಸ್ಸಿನ ಮೂಲ : ಬಿ.ವಿ.ಸೂರ್ಯನಾರಾಯಣ | ಅಂಬಿಕಾ ಪಿಯು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ Read More »

error: Content is protected !!
Scroll to Top