ಪುತ್ತೂರು

ಮೇ25 : ಎಸ್.ಆರ್.ಕೆ. ಲ್ಯಾಡರ್ಸ್‍ ಸಂಸ್ಥೆಯ ರಜತ ಸಂಭ್ರಮ ಸಮಾರೋಪ | ಕಲಾಯಿಗುತ್ತುವಿನಲ್ಲಿ ಭರದಿಂದ ಸಾಗುತ್ತಿದೆ ಮೈದಾನ ಸಮತಟ್ಟು ಕಾರ್ಯ

ಪುತ್ತೂರು: ಮೇ 25 ರಂದು ನಡೆಯಲಿರುವ ಪುತ್ತೂರಿನ ಎಸ್‍.ಆರ್‍.ಕೆ. ಲ್ಯಾಡರ್ಸ್‍ ಸಂಸ್ಥೆಯ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಪೂರ್ವಸಿದ್ಧತೆಗಾಗಿ 24 ಸಾವಿರ ಚದರ ಅಡಿ ವಿಸ್ತೀರ್ಣದ ಮೈದಾನ ಸಮತಟ್ಟು ಕೆಲಸ ಕಡಬ ತಾಲೂಕಿನ ಕೊಯಿಲ ಕಲಾಯಿಗುತ್ತುವಿನಲ್ಲಿ ಭರದಿಂದ ಸಾಗುತ್ತಿದೆ. ಸುಮಾರು 3600 ಚದರ ಅಡಿ ವಿಸ್ತೀರ್ಣದ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ ಸಮಾರೋಪ ನಡೆಯಲಿದೆ. ಒಟ್ಟಾರೆಯಾಗಿ ದಿನಪೂರ್ತಿ ಕಾರ್ಯಕ್ರಮಗಳು ನಡೆಯಲಿದ್ದು, ಈ ಹಿನ್ನಲೆಯಲ್ಲಿ ಜೆಸಿಬಿ ಮೂಲಕ ಕೆಲಸ ಕಾರ್ಯಗಳು ನಡೆಯುತ್ತಿವೆ.

ಮೇ25 : ಎಸ್.ಆರ್.ಕೆ. ಲ್ಯಾಡರ್ಸ್‍ ಸಂಸ್ಥೆಯ ರಜತ ಸಂಭ್ರಮ ಸಮಾರೋಪ | ಕಲಾಯಿಗುತ್ತುವಿನಲ್ಲಿ ಭರದಿಂದ ಸಾಗುತ್ತಿದೆ ಮೈದಾನ ಸಮತಟ್ಟು ಕಾರ್ಯ Read More »

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ | ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಬಹುಮಾನ ಘೋಷಣೆ

ವಿಟ್ಲ : ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ನಲ್ಲಿ ನಡೆದ ನಗದು ಹಾಗೂ ಕೋಟ್ಯಾಂತರ ರೂ. ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಆರೋಪಿಗಳನ್ನು ಬಂಧಿಸಿದ್ದು, ಈ ಕುರಿತು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಕಳ್ಳತನದ ಮಾಹಿತಿ ನೀಡಿ, ಬಂಟ್ವಾಳ ಗೂಡಿನ ಬಳಿ ನಿವಾಸಿ ಮಹಮ್ಮದ್ ರಫೀಕ್ ಯಾನೆ ಗೂಡಿನ ಬಳಿ ರಫೀಕ್ (35), ಮಂಜೇಶ್ವರ ಬಿಂಗಿನಾನಿ ನಿವಾಸಿ ಇಬ್ರಾಹಿಂ ಕಲಂದರ್ (41), ಮಂಜೇಶ್ವರ ಗಾಳಿಯಡ್ಕ ನಿವಾಸಿ

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ | ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಬಹುಮಾನ ಘೋಷಣೆ Read More »

ವಿಜ್ಞಾನ ಮಾದರಿ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಪುತ್ತೂರು: ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ, ಮಂಗಳೂರು ಇವರು ನಡೆಸಿದ ಇನ್ನೋವೇಶನ್ ಹಬ್ ವಿಜ್ಞಾನ ಮಾದರಿಗಳ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ದ್ವಿತೀಯ ಪ್ರಶಸ್ತಿ ಲಭಿಸಿದೆ. ಶಾಲೆಯ 9 ನೇ ತರಗತಿ ವಿದ್ಯಾರ್ಥಿಗಳಾದ ಚಿರಂತನ. ಕೆ. ವಿ. ಮತ್ತು ಸ್ಕಂದ ಬಳ್ಳಕ್ಕುರಾಯ ಸ್ಪರ್ಧೆಯನ್ನು ಪ್ರತಿನಿಧಿಸಿದ್ದು, ದ್ವಿತೀಯ ಬಹುಮಾನ ಪಡೆದುಕೊಂಡರು. ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದಿಸಿದೆ. 

ವಿಜ್ಞಾನ ಮಾದರಿ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ Read More »

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ವೈಭವದ ಚಾಲನೆ | ಹೊರೆಕಾಣಿಕೆ ಸಮರ್ಪಣೆ, ಶ್ರೀ ಮಹಾಮೃತ್ಯುಂಜಯ ಹೋಮ

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ವೈಭವದ ಚಾಲನೆ ನೀಡಲಾಯಿತು. ಗುರುವಾರ ಬೆಳಿಗ್ಗೆ ಶ್ರೀ ದೇವರಿಗೆ ಹೊರೆಕಾಣಿಕೆ ಸಮರ್ಪಣೆಯಾಗಿ ಸಂಜೆ ಶ್ರೀ ಸತ್ಯನಾರಾಯಣ ಪೂಜೆ ಜರಗಿತು. ಶುಕ್ರವಾರ ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ಥಿ ಪುಣ್ಯಾಹವಾಚನ, ಶ್ರೀ ಮಹಾಗಣಪತಿ ಹೋಮ ನಡೆದು ಬಳಿಕ ಶ್ರೀ ಮಹಾಮೃತ್ಯುಂಜಯ ಹೋಮ ಆರಂಭಗೊಂಡು 11.30 ಕ್ಕೆ ಹೋಮದ ಪೂರ್ಣಾಹುತಿ ನಡೆಯಿತು. ಮಧ್ಯಾಹ್ನ 12.30 ಕ್ಕೆ ರಕ್ತೇಶ್ವರಿ, ಗುಳಿಗ ದೈವಗಳಿಗೆ ತಂಬಿಲ

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ವೈಭವದ ಚಾಲನೆ | ಹೊರೆಕಾಣಿಕೆ ಸಮರ್ಪಣೆ, ಶ್ರೀ ಮಹಾಮೃತ್ಯುಂಜಯ ಹೋಮ Read More »

ಮೋದಿ ನೇತೃತ್ವದ ಸದೃಢ ಸರಕಾರ ಆಡಳಿತಕ್ಕೆ ಬರಬೇಕು | ಬಿಜೆಪಿ ಮರು ಸೇರ್ಪಡೆ ಬಳಿಕ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯೆ

ಪುತ್ತೂರು: ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರನ್ನು ನಾಲ್ಕು ಲಕ್ಷ ಅಂತರಗಳಿಂದ ಈ ಬಾರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡುವ ಮೂಲಕ ಮೋದಿ ನೇತೃತ್ವದ ಸದೃಢ ಸರಕಾರ ಆಡಳಿತಕ್ಕೆ ಬರಬೇಕಾದ ಅವಶ್ಯಕತೆಯಿದೆ  ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಗುರುವಾರ ರಾತ್ರಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮರು ಸೇರ್ಪಡೆಗೊಂಡ ಬಳಿಕ ಪುತ್ತೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಇಂದು ಬೆಳಿಗ್ಗೆ ಮಾಧ್ಯಮದವರೊಂದಿಗೆ ಈ ವಿಷಯ ತಿಳಿಸಿದರು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಾವಿದ್ದು, ಈ ರಾಷ್ಟ್ರದಲ್ಲಿ

ಮೋದಿ ನೇತೃತ್ವದ ಸದೃಢ ಸರಕಾರ ಆಡಳಿತಕ್ಕೆ ಬರಬೇಕು | ಬಿಜೆಪಿ ಮರು ಸೇರ್ಪಡೆ ಬಳಿಕ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯೆ Read More »

ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ

ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ ಮಾಡಿ ಸರಕಾರ ಆದೇಶಿಸಿದೆ. ಅಧ್ಯಕ್ಷರಾಗಿ ನ್ಯಾಯವಾದಿ ಕೆ.ಭಾಸ್ಕರ ಕೋಡಿಂಬಾಳ, ಸದಸ್ಯರಾಗಿ ಉದ್ಯಮಿ ನಿಹಾಲ್ ಪಿ. ಶೆಟ್ಟಿ, , ಲ್ಯಾನ್ಸಿ ಮಸ್ಕರೇನಸ್, ಅನ್ವರ್ ಖಾಸಿಂ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಕುರಿತು ರಾಜ್ಯ ಸರಕಾರದ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಯೋಜನಾ ಸೇವೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಆದೇಶಿಸಿದ್ದಾರೆ.

ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ Read More »

ಬಿಜೆಪಿಗೆ ಮರು ಸೇರ್ಪಡೆಗೊಂಡ ಅರುಣ್ ಕುಮಾರ್ ಪುತ್ತಿಲ | ಕೊನೆಗೂ ಮಾತುಕತೆ ಫಲಪ್ರದ

ಪುತ್ತೂರು: ಕೊನೆಗೂ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ.ಜಗನ್ನಿವಾಸ ರಾವ್, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಬಿಜೆಪಿಗೆ ಮರು ಸೇರ್ಪಡೆಗೊಂಡ ಅರುಣ್ ಕುಮಾರ್ ಪುತ್ತಿಲ | ಕೊನೆಗೂ ಮಾತುಕತೆ ಫಲಪ್ರದ Read More »

ಮಾ.14-24:  ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರೋತ್ಸವ | ಧ್ವಜಾರೋಹಣದ ಮೂಲಕ ಜಾತ್ರೋತ್ಸವಕ್ಕೆ ವೈಭವದ ಚಾಲನೆ

ಪುತ್ತೂರು: ಕಡಬ ತಾಲೂಕು ಆಲಂಕಾರು ಗ್ರಾಮದ ಶರವೂರು ಶ್ರೀ ದೇವಿಯ ವರ್ಷಾವಧಿ ಉತ್ಸವ ಮಾ.14 ರಿಂದ ಆರಂಭಗೊಂಡಿದ್ದು, ಮಾ. 23 ರ ವರೆಗೆ ನಡೆಯಲಿದೆ. ಮಾ.14 ಬೆಳಗ್ಗೆ 8 ರಿಂದ ಸ್ವಸ್ತಿ ಪುಣ್ಯಾಹ ವಾಚನ, ನವಕ ಪ್ರಧಾನ, ಗಣಹೋಮ ಕಲಶಾಭಿಶೇಕ, ಗೊನೆ ಮುಹೂರ್ತ, ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ರಾತ್ರಿ 7 ಕ್ಕೆ ಧ್ವಜಾರೋಹಣ, ನಿತ್ಯಬಲಿ, ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಿತು. ಮಾ.15 ಮಧ್ಯಾಹ್ನ 12 ರಿಂದ ಮಹಾಪೂಜೆ, ನಿತ್ಯಬಲಿ ನಡೆದು ಪ್ರಸಾದ ವಿತರಣೆ. ರಾತ್ರಿ

ಮಾ.14-24:  ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರೋತ್ಸವ | ಧ್ವಜಾರೋಹಣದ ಮೂಲಕ ಜಾತ್ರೋತ್ಸವಕ್ಕೆ ವೈಭವದ ಚಾಲನೆ Read More »

ಕೆಲಸ ಕೊಡಿಸುವ ನೆಪದಲ್ಲಿ ಯುವತಿಯ ಅತ್ಯಾಚಾರ !

ಪುತ್ತೂರು: ಯುವತಿಯೋರ್ವಳನ್ನು ಇಬ್ಬರು ಯುವಕರು ಅತ್ಯಾಚಾರ ಮಾಡಿರುವ ಘಟನೆ ಕೆಮ್ಮಾಯಿಯ ಮನೆಯೊಂದರಲ್ಲಿ ನಡೆದಿದೆ. ವಾಮಂಜೂರು ಮೂಲಕ ಯುವತಿ ಎಂದು ಹೇಳಲಾಗಿದ್ದು, ಕರ್ವೇಲು ಹಾಗೂ ಕಡೇಶ್ವಾಲ್ಯದ ಇಬ್ಬರು ಯುವಕರು ಕೆಲಸ ಕೊಡಿಸುವ ನೆಪದಲ್ಲಿ ಅತ್ಯಾಚಾರ ಮಾಡಿರುವುದಾಗಿ ತಿಳಿದು ಬಂದಿದೆ. ಯುವಕರಿಬ್ಬರು ಪರಾರಿಯಾಗಿದ್ದು, ತಕ್ಷಣ ಶೋಧ ನಡೆಸಿದ ಪೊಲೀಸರ ವಶಕ್ಕೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಯುವತಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಕೆಲಸ ಕೊಡಿಸುವ ನೆಪದಲ್ಲಿ ಯುವತಿಯ ಅತ್ಯಾಚಾರ ! Read More »

ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಂಘಟನೆಯ ಆಧಾರದಲ್ಲಿ ಚುನಾವಣೆ ಪ್ರಚಾರ : ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಹಿರಿಯರು ರಕ್ತ ಮತ್ತು ಬೆವರನ್ನು ಒಂದು ಮಾಡಿ ಕಟ್ಟಿದ ಅಂತ್ಯಂತ ದೊಡ್ಡ ರಾಷ್ಟ್ರೀಯ ಪಕ್ಷ ಬಿಜೆಪಿ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬ ಸಂಕಲ್ಪದಂತೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೆಲಸ ಕಾರ್ಯಗಳನ್ನು ಮಾಡಲಿದ್ದೇನೆ ಎಂದು ಲೋಕಸಭೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು ಗುರುವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಚ್ಯುತಿ ಬಾರದಂತೆ ಸಂಘಟನೆಯ ಆಧಾರದಲ್ಲಿ

ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಂಘಟನೆಯ ಆಧಾರದಲ್ಲಿ ಚುನಾವಣೆ ಪ್ರಚಾರ : ಕ್ಯಾ.ಬ್ರಿಜೇಶ್ ಚೌಟ Read More »

error: Content is protected !!
Scroll to Top