ಪುತ್ತೂರು

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‍ ದರೋಡೆ | ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಶೇಷ ತಂಡ ಮೂವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ರಫೀಕ್ ಯಾನೆ ಗೂಡಿನ ಬಳಿ ರಫೀಕ್, ಮೂಲತಃ ಸುಳ್ಯದ ಕೊಯಿಲ, ಕಾಸರಗೋಡಿನ ಚೌಕಿ ನಿವಾಸಿ ಖಲಂದರ್ ಹಾಗೂ ಬಾಯಾರು ನಿವಾಸಿ ದಯಾನಂದ ಬಂಧಿತ ಪ್ರಮುಖ ಆರೋಪಿಗಳು. ಫೆ. 7 ರಂದು ರಾತ್ರಿ ಬ್ಯಾಂಕ್ ಕಟ್ಟಡದ ಹಿಂಬದಿ ಕಿಟಕಿಯ ಸರಳುಗಳನ್ನು ತುಂಡರಿಸಿ ಒಳನುಗ್ಗಿದ ಆರೋಪಿಗಳು ಕೋಟ್ಯಾಂತರ ಮೌಲ್ಯದ ಚಿನ್ನಾಭರಣ […]

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‍ ದರೋಡೆ | ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ Read More »

ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ | ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗುಲಾಬಿ (55) ಮೃತಪಟ್ಟ ಮಹಿಳೆಯಾಗಿದ್ದಾರೆ. ಪತಿ ಕೃಷ್ಣಪ್ಪ ನಾಯ್ಕ ಗಂಭೀರ ಗಾಯಗೊಂಡಿದ್ದಾರೆ. ಘಟನೆ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದ್ದು, ಅಪಘಾತದಲ್ಲಿ ಗುಲಾಬಿ (55), ಕೃಷ್ಣಪ್ಪ ನಾಯ್ಕ (60) ಗಂಭೀರ ಗಾಯಗೊಂಡಿದ್ದು, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳಾಗಿವೆ. ಈ ಪೈಕಿ ಗುಲಾಬಿ

ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ | ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ನೇಮಕಾತಿ ಕೋಶದ ವತಿಯಿಂದ  ಯುನೈಟೆಡ್ ಸ್ಟೇಟ್ಸ್ ಮೂಲದ ಬಹುರಾಷ್ಟ್ರೀಯ ಹೆಲ್ತ್ ಕೇರ್ ಮತ್ತು ಇನ್ಶೂರೆನ್ಸ್ ಕಂಪನಿ ಓಪ್ಟಮ್ ನ ಮೆಡಿಕಲ್ ಕೋಡರ್ ಹುದ್ದೆಗಳಿಗಾಗಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ಆಯೋಜಿಸಲಾಯಿತು. ಲಿಖಿತ ಪರೀಕ್ಷೆ ನಡೆಸುವ ಮೊದಲು ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ-ಪ್ರಾಂಶುಪಾಲ  ಡಾ| ವಿಜಯ ಕುಮಾರ್ ಎಂ. ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಅವಕಾಶಗಳು ಬಂದೊದಗುತ್ತವೆ. ಅವಕಾಶಗಳ ಸದ್ಬಳಕೆಯಿಂದ ಯಶಸ್ಸನ್ನು ಸಾಧಿಸಬಹುದು, ಅಭ್ಯರ್ಥಿಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿರುವಾಗ ಆತ್ಮವಿಶ್ವಾಸ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ Read More »

ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ | ನಾಲ್ವರಿಗೆ ಗಂಭೀರ ಗಾಯ

ಪುತ್ತೂರು: ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ (60) ಇಬ್ಬರಿಗೆ ಗಂಭೀರ ಗಾಯಗೊಂಡಿದ್ದು, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ತಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಬೈಕಿಗೆ ಸೈಡ್ ಕೋಡುವ

ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ | ನಾಲ್ವರಿಗೆ ಗಂಭೀರ ಗಾಯ Read More »

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ತಾಲೂಕಿನ ಶಾಂತಿಗೋಡು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಬೆಳಿಗ್ಗೆ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಏ.2 ಹಾಗೂ 3 ರಂದು ಎರಡು ದಿನಗಳ ಕಾಲ ಜಾತ್ರೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮುಕ್ತೇಸರ ಸುಬ್ರಹ್ಮಣ್ಯ ತೊಲ್ಪಾಡಿತ್ತಾಯ, ದೇವಸ್ಥಾನದ ಅರ್ಚಕ ರಾಮಕೃಷ್ಣ ಭಟ್, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಹೋನಪ್ಪ ಗೌಡ ಕೈಂದಾಡಿ, ನಾರಾಯಣ ಗೌಡ ಕೈಂದಾಡಿ, ಉದಯ ಶಂಕರ್ ಭಟ್, ಬಾಬು ಗೌಡ ಕೈಂದಾಡಿ, ವಿಶ್ವನಾಥ ಬಲ್ಯಾಯ ಮುಂಡೋಡಿ, ಬಾಲಕೃಷ್ಣ ಗೌಡ ತೋಟ,

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಭೇಟಿ | ದೇವಸ್ಥಾನದ ವತಿಯಿಂದ ಗೌರವಾರ್ಪಣೆ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭಾನುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಸಂಸದರನ್ನು ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪ್ರಸ್ತುತ ಧಾರ್ಮಿಕ ದತ್ತಿಯ ಕೆಲವೊಂದು ಕಾನೂನುಗಳಿಂದ ದೇವಸ್ಥಾನಗಳಿಗೆ ಬರುವ ಅನುದಾನ ಕಡಿಮೆಯಾಗಿದೆ. ಆದರೂ ಗ್ರಾಮಸ್ಥರ ಕೈಜೋಡಿಸುವಿಕೆಯಿಂದ ಕೆಲಸ ಕಾರ್ಯಗಳು ನಡೆಯುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನೂ ಶಾಲು

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಭೇಟಿ | ದೇವಸ್ಥಾನದ ವತಿಯಿಂದ ಗೌರವಾರ್ಪಣೆ Read More »

ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಮಹಾಶಿವರಾತ್ರಿ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವೀಣಾ ಸರಸ್ವತಿ

ಪುತ್ತೂರು: ಶಿವರಾತ್ರಿ ಎಂದರೆ ಇಡೀ ರಾತ್ರಿ ಶಿವನಾಮ ಸ್ಮರಣೆಯೊಂದಿಗೆ ಶಿವನ ಬಗ್ಗೆ ಚಿಂತಿಸುತ್ತಾ ಕತ್ತಲೊಳಗೆ ಬೆಳಕನ್ನು ಕಾಣುವ ದಿನ. ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಇದಾಗಿದೆ. ಈ ಹಬ್ಬದ ಆಚರಣೆಯಿಂದ ಮನುಷ್ಯನ ಮಾನಸಿಕ ಪರಿವರ್ತನೆ ಜೊತೆಗೆ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕಿ ವೀಣಾ ಸರಸ್ವತಿ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಶಿವರಾತ್ರಿ ಆಚರಣೆಯ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಗವಾನ್ ಶಿವ ಶಾಶ್ವತ

ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಮಹಾಶಿವರಾತ್ರಿ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವೀಣಾ ಸರಸ್ವತಿ Read More »

ಕೊಳ್ತಿಗೆ ಗ್ರಾಮದಲ್ಲಿ 1.31 ಕೋಟಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ

ಪುತ್ತೂರು: ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲೂ ಅಭಿವೃದ್ದಿ ಕಾರ್ಯಗಳು ನಡೆಯಲಿದ್ದು ಸಂಪೂರ್ಣವಾಗಿ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿ ಮಾಡಲಾಗುವುದು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಕೊಳ್ತಿಗೆ  ಗ್ರಾಮದಲ್ಲಿ 1.31 ಕೋಟಿ ರೂ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ‌ಅವರು ಮಾತನಾಡಿದರು. ಜನತೆಗೆ ಕಾಂಗ್ರೆಸ್ ಸರಕಾರ ಆಡಳಿತದಲ್ಲಿರಬೇಕು ಎಂಬ ಭಾವನೆ  ಉಂಟಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು. ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ,‌ ಮಾಜಿ ಜಿಪಂ‌ಸದಸ್ಯೆ ಅನಿತಾ

ಕೊಳ್ತಿಗೆ ಗ್ರಾಮದಲ್ಲಿ 1.31 ಕೋಟಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ Read More »

ಕರ್ನಾಟಕ ಪೊಲೀಸ್ ರನ್ -2024 ಚಾಲನೆ | ಮಾದಕ ದ್ರವ್ಯ ದುಷ್ಪರಿಣಾಮಗಳ ಕುರಿತು ಜಾಗೃತಿ

ಪುತ್ತೂರು: ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಪೊಲೀಸ್ ರನ್ – 2024 ಕಾರ್ಯಕ್ರಮಕ್ಕೆ ಇಂದು ಬೆಳಿಗ್ಗೆ ದರ್ಬೆ ಬೈಪಾಸ್ ವೃತ್ತದಲ್ಲಿ ಚಾಲನೆ ನೀಡಲಾಯಿತು. ದರ್ಬೆ ಬೈಪಾಸ್‌ ವೃತ್ತದಿಂದ ನಗರ ಪೊಲೀಸ್ ಠಾಣೆಯ ತನಕದ ನಡೆಯುವ ಪೊಲೀಸ್ ರನ್ ಗೆ ದ.ಕ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ

ಕರ್ನಾಟಕ ಪೊಲೀಸ್ ರನ್ -2024 ಚಾಲನೆ | ಮಾದಕ ದ್ರವ್ಯ ದುಷ್ಪರಿಣಾಮಗಳ ಕುರಿತು ಜಾಗೃತಿ Read More »

ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದಿಂದ ಕಾರ್ಯಗಾರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಬ್ಯುಸಿನೆಸ್‌ ಅಡ್ಮಿನಿಸ್ಟ್ರೇಶನ್‌ವಿಭಾಗ, ಮ್ಯಾನೇಜ್ಮೆಂಟ್‌ ಅನೋಸಿಯೇಶನ್‌ ಹಾಗೂ ಕಾಲೇಜಿನ ಇನ್ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ಗಳ ಸಂಯುಕ್ತ ಆಶ್ರಯದಲ್ಲಿ “ಇನ್ನೋವೇಟ್ ಫಾರ್ ಇಂಪ್ಯಾಕ್ಟ್: ಎ ಜರ್ನಿ ಇನ್ ಸೋಶಿಯಲ್ ಎಂಟರ್‌ಪ್ರೆನ್ಯೂರ್‌ಶಿಪ್” ಕುರಿತು ಒಂದು ದಿನದ ಕಾರ್ಯಾಗಾರ ಆಯೋಜಿಸಲಾಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿ ಜೆ.ಸಿ.ಕೃಷ್ಣ ಮೋಹನ್ ಪಿ.ಎಸ್, ದೀಪ ಬೆಳಗಿಸಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಭಾರತದಲ್ಲಿ ಸ್ಟಾರ್ಟಪ್ ಅವಕಾಶಗಳು ಮತ್ತು ಸಾಮಾಜಿಕ ಉದ್ಯಮಶೀಲತೆಗಾಗಿ ಲಭ್ಯವಿರುವ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದರು. ವಿದ್ಯಾರ್ಥಿಗಳಿಗಾಗಿ ವಿನೂತನ ಕೌಶಲ್ಯ ವರ್ಧಕ ಕಾರ್ಯಾಗಾರವನ್ನು

ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದಿಂದ ಕಾರ್ಯಗಾರ Read More »

error: Content is protected !!
Scroll to Top