ಪುತ್ತೂರು

ಟಿಪ್ಪರ್-ಸ್ಕೂಟರ್ ಡಿಕ್ಕಿ | ಸ್ಕೂಟರ್ ಸವಾರರಿಗೆ ಗಂಭೀರ ಗಾಯ

ಪುತ್ತೂರು: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮುರ ಸಮೀಪದ ಎಂಪಿಎಂ ಸ್ಕೂಲ್ ಬಳಿ ಗುರುವಾರ ನಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟರ್ ಪುತ್ತೂರಿನಿಂದ ಕಬಕ ಕಡೆಗೆ ವೇಗವಾಗಿ ಹೋಗುತ್ತಿದ್ದ ವೇಳೆ ಕಬಕದಿಂದ ಪುತ್ತೂರ ಕಡೆ ಬರುತ್ತಿದ್ದ ಟಿಪ್ಪ‌ರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಟಿಪ್ಪರ್-ಸ್ಕೂಟರ್ ಡಿಕ್ಕಿ | ಸ್ಕೂಟರ್ ಸವಾರರಿಗೆ ಗಂಭೀರ ಗಾಯ Read More »

ಬನ್ನೂರು ಗ್ರಾಮದ ದೈಯರ ಮಾಡ ನಡಿಮಾರುನಲ್ಲಿ ಶ್ರೀ ಇಷ್ಟದೇವತೆ, ಅಣ್ಣಪ್ಪ ಪಂಜುರ್ಲಿ, ರಕ್ತೇಶ್ವರಿ ಸಾನಿಧ್ಯದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಪುತ್ತೂರು: ಸಂತಾನ ಭಾಗ್ಯ ಸಹಿತ ಇಷ್ಟಾರ್ಥಗಳನ್ನು ಈಡೇರಿಸುವ ಶಕ್ತಿಯಾಗಿ ಗೋಚರಿಸಿದ ಬನ್ನೂರು ಗ್ರಾಮದ ದೈಯರ ಮಾಡ ನಡಿಮಾರು ಮತ್ತು ಆನೆಮಜಲು ನ್ಯಾಯಾಲಯದ ಸಂಕೀರ್ಣದಲ್ಲಿರುವ ಶ್ರೀ ಇಷ್ಟದೇವತೆ, ಅಣ್ಣಪ್ಪ ಪಂಜುರ್ಲಿ, ರಕ್ತೇಶ್ವರಿ ಸಾನಿಧ್ಯದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಕುಂಟಾರು ವಾಸುದೇವ ತಂತ್ರಿಯವರ ವೈದಿಕತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ನಡೆಯಿತು. ಗುರುವಾರ ಬೆಳಿಗ್ಗೆ ಗಣಪತಿ ಹವನ, ಬಾವುದ ಕೆರೆಯ ಬಳಿ ನಾಗತಂಬಿಲ, ದೈಯ್ಯೆರೆ ಮಾಡದಲ್ಲಿ ಬ್ರಹ್ಮಕಲಶಪೂಜೆ ಬಳಿಕ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ,

ಬನ್ನೂರು ಗ್ರಾಮದ ದೈಯರ ಮಾಡ ನಡಿಮಾರುನಲ್ಲಿ ಶ್ರೀ ಇಷ್ಟದೇವತೆ, ಅಣ್ಣಪ್ಪ ಪಂಜುರ್ಲಿ, ರಕ್ತೇಶ್ವರಿ ಸಾನಿಧ್ಯದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಪ್ರಜಾಪ್ರಭುತ್ವದ ಮೂಲ ಮತದಾನ: ಡಾ. ಭಾರತಿ ಪಿಲಾರ್ | ಮತದಾನ ಜಾಗೃತಿ ಅಭಿಯಾನ

ಪುತ್ತೂರು: ಮತದಾನ, ಕೇವಲ ನಮ್ಮ ಹಕ್ಕು ಮಾತ್ರ ಅಲ್ಲ ಅದು ನಮ್ಮ ಕರ್ತವ್ಯ. ಹಕ್ಕುಗಳ ಕುರಿತು ಮಾತನಾಡುವ ನಾವು ಕರ್ತವ್ಯವನ್ನು ಮೊದಲು ನಿಭಾಯಿಸಬೇಕು. ನಮ್ಮ ದೇಶಕ್ಕೆ ಪ್ರಜಾಪ್ರಭುತ್ವ ಬರಲು ಹಲವಾರು ಜನರ ಹೋರಾಟ, ತ್ಯಾಗ ಇದೆ. ಆದ್ದರಿಂದ ಪ್ರತಿಯೊಬ್ಬರ ಮತದಾನವು ಅತಿ ಅಮೂಲ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಗಣಕಶಾಸ್ತ್ರದ ಸಹಾಯಕ ಪ್ರಾಧ್ಯಾಪಕಿ, ಸ್ವೀಪ್ ನ ತರಬೇತುದಾರೆ ಡಾ. ಭಾರತಿ ಪಿಲಾರ್ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ

ಪ್ರಜಾಪ್ರಭುತ್ವದ ಮೂಲ ಮತದಾನ: ಡಾ. ಭಾರತಿ ಪಿಲಾರ್ | ಮತದಾನ ಜಾಗೃತಿ ಅಭಿಯಾನ Read More »

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಂತನಾ ದಿನಾಚರಣೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್, ಗೈಡ್ ಚಳವಳಿಯ ಸಂಸ್ಥಾಪಕ ಲಾರ್ಡ್ ಬ್ಯಾಡನ್ ಪೊವೆಲ್ ಅವರ ಜನ್ಮ ದಿನಾಚರಣೆ “ಚಿಂತನಾ ದಿನ”ವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ. ಎಸ್. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಧ್ವಜ ವಂದನೆಯೊಂದಿಗೆ ಆಚರಿಸಲಾಯಿತು. ಬಳಿಕ ಶಾಲಾ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಲಾರ್ಡ್ ಬ್ಯಾಡನ್ ಪೊವೆಲ್ ರವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಸ್ಕೌಟ್ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಲಾರ್ಡ್ ಬ್ಯಾಡನ್ ಪೊವೆಲ್

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಂತನಾ ದಿನಾಚರಣೆ Read More »

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ. ವೀಣಾ ಸಂತೋಷ್ ರೈ ಅವರಿಂದ ಚಿನ್ನದ ಕವಚ ಸಮರ್ಪಣೆ ಮೂಲಕ ಪತಿಯ ಸಂಕಲ್ಪ ಈಡೇರಿಸಿದ ಪತ್ನಿ | ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ವೈಭವದ ಬ್ರಹ್ಮಕಲಶೋತ್ಸವ

ಪುತ್ತೂರು: ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಶ್ರೀ ದೇವರಿಗೆ ಚಿನ್ನದ ಕವಚವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಅವರ ಪತ್ನಿ ಡಾ. ವೀಣಾ ಸಂತೋಷ್ ರೈ ಸಮರ್ಪಿಸಿದ್ದಾರೆ.  ಪತಿಯ ಆಶಯದಂತೆ ಈ ಸೇವೆ ನೀಡಲಾಗಿದೆ. ಸೇವೆಯನ್ನು ಬುಧವಾರ ಸಂತೋಷ್ ಕುಮಾರ್ ರೈ ಅವರು ಪತ್ನಿ ಮಗಳು ಸಮೇತರಾಗಿ ಶ್ರೀ ದೇವರಿಗೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪತ್ನಿ ನಮ್ಮ ಮದುವೆಯಾದ ಸಂದರ್ಭದಲ್ಲಿ ಇದೊಂದು ಸಣ್ಣ ದೇವಸ್ಥಾನವಾಗಿತ್ತು.

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ. ವೀಣಾ ಸಂತೋಷ್ ರೈ ಅವರಿಂದ ಚಿನ್ನದ ಕವಚ ಸಮರ್ಪಣೆ ಮೂಲಕ ಪತಿಯ ಸಂಕಲ್ಪ ಈಡೇರಿಸಿದ ಪತ್ನಿ | ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ವೈಭವದ ಬ್ರಹ್ಮಕಲಶೋತ್ಸವ Read More »

ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ | ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಅನಿವಾಸಿ ಭಾರತೀಯರ ಜೀವನ ಭದ್ರತೆಯ ಜೊತೆಗೆ ಅವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲು ಹೊಸ ನಿಯಮವನ್ನು ರೂಪಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ. ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ ಮಾತನಾಡಿದ ಅವರು, ದೇಶದಲ್ಲಿ ಸುಮಾರು 140 ಕೋಟಿ ಜನಸಂಖ್ಯೆ ಇದ್ದು ಇದರಲ್ಲಿ 7 ಶೇ. ಮಂದಿ ಪಾಸ್‌ಪೋರ್ಟ್ ಹೊಂದಿದ್ದಾರೆ. 1.03 ಕೋಟಿ ಮಂದಿ ವಿವಿಧ ದೇಶದಲ್ಲಿ ಉದ್ಯೋಗ ನಿಮಿತ್ತ ತೆರಳಿದ್ದು ಅಲ್ಲಿ ವಿವಿಧ ಕಡೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಪೈಕಿ

ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ | ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಮನವಿ Read More »

ಬೈಕ್-ಟಿಪ್ಪರ್ ಅಪಘಾತ | ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಸಫ್ವಾನ್ ಮೃತ್ಯು

ಪುತ್ತೂರು: ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮುಕ್ವೆ ನಿವಾಸಿ ಸಫ್ವಾನ್ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಮೃತಪಟ್ಟಿದ್ದಾರೆ. ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಸಫ್ವಾನ್ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್-ಟಿಪ್ಪರ್ ಅಪಘಾತ | ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಸಫ್ವಾನ್ ಮೃತ್ಯು Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ದನ ಕಳ್ಳತನ | ತನಿಖೆ ನಡೆಸುವುದರ ಜತೆಗೆ ಭದ್ರತಾ ವ್ಯವಸ್ಥೆ ಸರಿಪಡಿಸುವಂತೆ ವಿಹಿಂಪ, ಬಜರಂಗದಳದಿಂದ ಮನವಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಾಲಯದ  ವಠಾರದಿಂದ ದನ ಕಳ್ಳತನ ಬಗ್ಗೆ ತನಿಖೆ ನಡೆಸಿ,ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಮನವಿ ಸಲ್ಲಿಸಲಾಯಿತು. ಪುತ್ತೂರು ಸೀಮಾಧಿಪತಿ ಶ್ರೀ ಮಹಾಲಿಂಗೇಶ್ವರ ದೇವರ ದೇವಮಾರು ಗದ್ದೆ ಹಾಗೂ ವಠಾರದಲ್ಲಿ ಈ ಹಿಂದಿನ ಒಂದು ವಾರದಿಂದ ಗೋ ಕಳ್ಳತನದ ಮಾಹಿತಿ ನಮ್ಮ ಸಂಘಟನೆಗೆ ಬಂದಿದ್ದು ದೇವಳದ ಭದ್ರತಾ ಸಿಬ್ಬಂದಿಗಳಿಗೆ ಮಾಹಿತಿ ಇದ್ದರೂ ಯಾವುದೇ ದೂರು ದಾಖಲಿಸದೆ ಇರುವುದರಿಂದ ಮುಂದಿನ ದಿನಗಳಲ್ಲಿ ಇಂತಹ ಗೋಕಳ್ಳತನ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ದನ ಕಳ್ಳತನ | ತನಿಖೆ ನಡೆಸುವುದರ ಜತೆಗೆ ಭದ್ರತಾ ವ್ಯವಸ್ಥೆ ಸರಿಪಡಿಸುವಂತೆ ವಿಹಿಂಪ, ಬಜರಂಗದಳದಿಂದ ಮನವಿ Read More »

ಬೈಕ್-ಟಿಪ್ಪರ್ ಅಪಘಾತ | ಬೈಕ್ ಸವಾರನಿಗೆ ಗಂಭೀರ ಗಾಯ

ಪುತ್ತೂರು: ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ನಡೆದಿದೆ.  ಮುಕ್ವೆ ನಿವಾಸಿ ಸಫ್ವಾನ್ ಗಂಭೀರ ಗಾಯಗೊಂಡವರು. ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಿಂದ ರಸ್ತೆ ಬದಿ ನಿಲ್ಲಿಸಲಾಗಿದ್ದ ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ ಎನ್ನಲಾಗಿದೆ.

ಬೈಕ್-ಟಿಪ್ಪರ್ ಅಪಘಾತ | ಬೈಕ್ ಸವಾರನಿಗೆ ಗಂಭೀರ ಗಾಯ Read More »

ವಿದೇಶದಿಂದ ಊರಿಗೆ ಬಂದಿದ್ದ ಯುವಕ ಅನಾರೋಗ್ಯದಿಂದ ಮೃತ್ಯು !

ವಿಟ್ಲ: ವಿದೇಶದಿಂದ ಮೂರು ದಿನಗಳ ಹಿಂದೆ ಬಂದಿದ್ದ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ವಿಟ್ಲ ಬಳಿಯ ಕೇಪು ಎಂಬಲ್ಲಿ ನಡೆದಿದೆ. ಕೇಪು ಗ್ರಾಮದ ಅಡ್ಯನಡ್ಕ ನಿವಾಸಿ ಅಶ್ರಫ್ (38) ಮೃತಪಟ್ಟ ಯುವಕ. ಅಬ್ದುಲ್ ರಹಿಮಾನ್ ಎಂಬವರ ಪುತ್ರರಾಗಿರುವ ಅಶ್ರಫ್‍ ಹಲವು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದರು. ಅನಾರೋಗ್ಯದ ಹಿನ್ನಲೆಯಲ್ಲಿ ಊರಿಗೆ ಬಂದಿದ್ದ ಅವರು ಕೇರಳದ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದರು, ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ತಾಯಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ವಿದೇಶದಿಂದ ಊರಿಗೆ ಬಂದಿದ್ದ ಯುವಕ ಅನಾರೋಗ್ಯದಿಂದ ಮೃತ್ಯು ! Read More »

error: Content is protected !!
Scroll to Top